Breaking News

ರಾಷ್ಟ್ರೀಯ

ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ವಂಚನೆ ಪ್ರಕರಣ: ಜೈಲಿನಿಂದ ಚೈತ್ರಾ, ಶ್ರೀಕಾಂತ್​ ಬಿಡುಗಡೆ

ಆನೇಕಲ್(ಬೆಂಗಳೂರು): ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್​ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದ್ದ ಆರೋಪಿಗಳಾದ ಚೈತ್ರಾ ಹಾಗೂ ಶ್ರೀಕಾಂತ್​ ಇಂದು ಬಿಡುಗಡೆಯಾದರು. ಇದಕ್ಕೂ ಮೊದಲು ಚೈತ್ರಾ ಸೇರಿ ಇಬ್ಬರಿಗೆ ಮೂರನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಇವರು ಜೈಲು ಪಾಲಾಗಿದ್ದರು. ಆರೋಪಿಗಳಾದ ಚೈತ್ರಾ ಹಾಗೂ ಶ್ರೀಕಾಂತ್​ಗೆ …

Read More »

ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗಾಗಿ 100 ಹೊಸ ಹಾಸ್ಟೆಲ್‌ಗಳನ್ನು ತೆರೆಯಲು ಸರ್ಕಾರ ಚಿಂತನೆ

ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಕೇಂದ್ರಗಳಾದ ಮಂಗಳೂರು, ಉಡುಪಿ, ಧಾರವಾಡ ಮತ್ತು ಇತರ ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್ಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಬೆಂಗಳೂರು: ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್ಗಳನ್ನು …

Read More »

ನನ್ನನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದಿರುವ “ಭ್ರಷ್ಟಾಚಾರ ಆರೋಪಿ” ಮೊದಲು “ನಾರಾಯಣ ಹೃದಯಾಲಯದಲ್ಲಿ” ಬೆಡ್ ಬುಕ್ ಮಾಡಿಕೊಳ್ಳಲಿ.

ನನ್ನನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದಿರುವ “ಭ್ರಷ್ಟಾಚಾರ ಆರೋಪಿ” ಮೊದಲು “ನಾರಾಯಣ ಹೃದಯಾಲಯದಲ್ಲಿ” ಬೆಡ್ ಬುಕ್ ಮಾಡಿಕೊಳ್ಳಲಿ. ಮತ್ತೆ ಜಾಮೀನು ಪಡೆಯೋಕ್ಕೆ ಇನ್ನೊಂದು ನಾಟಕ ಮಾಡಬೇಕಾಗುತ್ತೆ. ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದು ಸರ್ಕಾರ ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದಲ್ಲಿ ರಿಟ್​ …

Read More »

ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ.. ಇಬ್ಬರು ಸಜೀವ ದಹನ

ಬೆಳಗಾವಿ: ಟಿಪ್ಪರ್ ಮತ್ತು ಕಾರಿನ ಮಧ್ಯೆ ಅಪಘಾತದಲ್ಲಿ ಟಿಪ್ಪರ್​​​​ನ ಡೀಸೆಲ್​​​ ಟ್ಯಾಂಕರ್​​​​​​ ಸ್ಫೋಟಿಸಿ ಹೊತ್ತಿಕೊಂಡ ಬೆಂಕಿಯಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ-ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್ (24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್ (12) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮದುವೆ ಮುಗಿಸಿಕೊಂಡು ರಾತ್ರಿ ಬಂಬರಗಾ ಗ್ರಾಮಕ್ಕೆ ಬರುವಾಗ ಕಾರು ಮತ್ತು ಟಿಪ್ಪರ್​ ನಡುವೆ ಅಪಘಾತ ಸಂಭವಿಸಿದೆ. ಬಂಬರಗಾ …

Read More »

ಐಸಿಸ್‌ ಸಂಪರ್ಕವಿರುವ ವ್ಯಕ್ತಿ ವಿಜಯಪುರದಲ್ಲೇ ಇದ್ದಾನೆ..!- ಯತ್ನಾಳ್‌ ಗಂಭೀರ ಆರೋಪ

ಬೆಳಗಾವಿ : ಮುಸ್ಲಿಂ ಸಮಾವೇಶದಲ್ಲಿ ಐಸಿಸ್(ISIS) ಸಂಪರ್ಕ ಹೊಂದಿರುವ , ಇಸ್ಲಾಂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ವ್ಯಕ್ತಿ ಭಾಗಿಯಾಗಿದ್ದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌(Basanagowda patil yatnal) ಆರೋಪ ಮಾಡಿದ್ದರು. ಈ ಬಗ್ಗೆ ಸುವರ್ಣ ವಿಧಾನಸೌಧದ ಎದುರು ಮತ್ತಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.   ವಿಜಯಪುರದಲ್ಲಿರುವ ದರ್ಗಾಗಳಲ್ಲಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕವಿರುವ ಮೌಲ್ವಿಗಳಿದ್ದಾರೆ . ಮುಸ್ಲಿಂ ಸಮಾವೇಶದಲ್ಲಿ ಭಾಗಿಯಾಗಿದ್ದ ಒಬ್ಬ ಕಳೆದ 25 ವರ್ಷಗಳಿಂದ ವಿಜಯಪುರದಲ್ಲಿ ನೆಲೆಸಿದ್ದಾನೆ …

Read More »

ಗೂಳಿಹಟ್ಟಿಗೆ ಆರ್​ಎಸ್‌ಎಸ್ ಕಚೇರಿ ಪ್ರವೇಶ ನಿರಾಕರಣೆ?ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಳಗಾವಿ: ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್ ವಿಚಾರ ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಅವರು, ತಿಳಿದುಕೊಂಡು ಮಾತಾಡ್ತೀನಿ ಎಂದರು. ಈ ಮೂಲಕ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್​ಗೆ ಆರ್‌ಎಸ್‌ಎಸ್‌ ವಸ್ತು ಸಂಗ್ರಹಾಲಯದಲ್ಲಿ ಪ್ರವೇಶ ನಿರಾಕರಣೆ ವಿಚಾರವಾಗಿ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. ಸತ್ಯಕ್ಕೆ ದೂರವಾದ ಆರೋಪ : ಇದೇ ವೇಳೆ ಮಾತನಾಡಿದ ಬಿಜೆಪಿ ಪರಿಷತ್ ಸದಸ್ಯ ಎನ್.ರವಿಕುಮಾರ್, ಆರ್​ಎಸ್​ಎಸ್ ನಾಯಕರು ಆ ರೀತಿ ಹೇಳಲು ಸಾಧ್ಯವಿಲ್ಲ. …

Read More »

ಕಾಂಗ್ರೆಸ್ ಸರ್ಕಾರದ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​​ನಲ್ಲಿ ಇಂದು ಪ್ರತಿಭಟನೆ ನಡೆಸಿದರು. ದಲಿತರಿಗೆ ಮೀಸಲಿಟ್ಟ ಅನುದಾನ ನಮ್ಮ ಮಕ್ಕಳ ಶಿಕ್ಷಣ, ಸಮಾಜದ ಅಭಿವೃದ್ಧಿಗೆ ಮೀಸಲಿಡಬೇಕು. ನಮಗೆ ಮೀಸಲಿದ್ದ ಅನುದಾನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ …

Read More »

ಆಯುಷ್ಮಾನ್‌ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ, ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್​ಗಳನ್ನಾಗಿ ನವೀಕರಿಸಲಾಗಿದೆ

ಬೆಳಗಾವಿ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್​ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಿಡುಗಡೆಗೊಳಿಸಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್​ಗಳನ್ನು ಆಯುಷ್ಮಾನ್‌ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ, ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಎಂದು ನವೀಕರಿಸಲಾಗಿದೆ. ಸುವರ್ಣಸೌಧದಲ್ಲಿ ನಡೆದ ಹೆಲ್ತ್​ ಕಾರ್ಡ್​ ಬಿಡುಗಡೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್​ನಲ್ಲಿ ಕೆಲ …

Read More »

ಶೂನ್ಯ ವೇಳೆಯಲ್ಲಿ ಶಾಸಕ ಶಿವಲಿಂಗೇಗೌಡ, ಎಚ್.ಡಿ.ರೇವಣ್ಣ ಸೇರಿದಂತೆ ವಿವಿಧ ಶಾಸಕರು ಕೊಬ್ಬರಿ ಪ್ರೊತ್ಸಾಹಧನ ಹೆಚ್ಚಳಕ್ಕೆ ಕ್ರಮ

ಬೆಳಗಾವಿ/ಬೆಂಗಳೂರು: ರಾಜ್ಯ ಸರಕಾರ ತೆಂಗು ಬೆಳೆಗಾರರಿಗೆ ಸಹಾಯ ಮಾಡಲು, ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ನೀಡುವ ದರದೊಂದಿಗೆ ಕೊಬ್ಬರಿ ಖರೀದಿಗೆ ಈಗಾಗಲೇ 1,225 ರೂ.ಗಳನ್ನು ಪ್ರೊತ್ಸಾಹಧನ ನೀಡುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದರು.   ಶೂನ್ಯ ವೇಳೆಯಲ್ಲಿ ಶಾಸಕ ಶಿವಲಿಂಗೇಗೌಡ, ಎಚ್.ಡಿ.ರೇವಣ್ಣ ಸೇರಿದಂತೆ ವಿವಿಧ ಶಾಸಕರು ಕೊಬ್ಬರಿ ಖರೀದಿ ಬೆಲೆ ಬಹಳಷ್ಟು ಕಡಿಮೆ ಆಗಿರುವುದರಿಂದ ಸರಕಾರಗಳು ರೈತರ ನೆರವಿಗೆ ಬರಬೇಕೆಂದು ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ …

Read More »

ಬೀದರ್ : ನಕಲಿ ಕ್ಲಿನಿಕ್​ಗಳ ಮೇಲೆ ವೈದ್ಯಾಧಿಕಾರಿಗಳಿಂದ ದಿಢೀರ್ ದಾಳಿ, ಪರಿಶೀಲನೆ

ಬೀದರ್ : ಗಡಿ ಜಿಲ್ಲೆ ಬೀದರ್‌ನಲ್ಲಿ ನಕಲಿ ವೈದ್ಯರ ಹಾವಳಿ ಹಿನ್ನೆಲೆ ಇಂದು ಕಮಲನಗರ ತಾಲೂಕಿನ ಒಟ್ಟು 6 ನಕಲಿ ಕ್ಲಿನಿಕ್‌ಗಳ ಮೇಲೆ ದಿಢೀರ್ ದಾಳಿ ಮಾಡಿದ ವೈದ್ಯಾಧಿಕಾರಿಗಳು ನಕಲಿ ವೈದ್ಯರಿಗೆ ಶಾಕ್ ನೀಡಿದ್ದಾರೆ.   ನಕಲಿ ಕ್ಲಿನಿಕ್‌ಗಳಾದ ಡಾ. ಬಿಹಾರಿ ಕ್ಲಿನಿಕ್, ಲಕ್ಷ್ಮೀ ಕ್ಲಿನಿಕ್ ಸೇರಿದಂತೆ ಒಟ್ಟು 6 ಕ್ಲಿನಿಕ್‌ಗಳ ಮೇಲೆ ತಾಲೂಕಿನ ಆರೋಗ್ಯಾಧಿಕಾರಿ ಡಾ ಗಾಯತ್ರಿ ವಿಜಯಕುಮಾರ್ ಮತ್ತು ತಂಡದಿಂದ ದಾಳಿ ಮಾಡಲಾಗಿದೆ. ದಾಳಿ ಮಾಡಿ ನಕಲಿ ವೈದ್ಯರ …

Read More »