ಚಾಮರಾಜನಗರ: ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಬಾವಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಸುಶೀಲ (30) ಮತ್ತು 8 ವರ್ಷದ ಮಗ, 11 ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಡುಹೊಲ ಗ್ರಾಮದ ಸುಶೀಲ ಅವರ ಮನೆಗೆ ಸುಶೀಲರ ತಮ್ಮ ಮಾದೇವ ಆಗಮಿಸಿ …
Read More »ಇದು ಜಾತಿ ಗಣತಿ ಅಲ್ಲ; ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವಿಚಾರ ತಿಳಿಯಲು ಮಾಡಿದ ಸಮೀಕ್ಷೆ- ಬಸವರಾಜ ರಾಯರೆಡ್ಡಿ
ಕೊಪ್ಪಳ: ರಾಜ್ಯ ಸರ್ಕಾರ ಏಪ್ರಿಲ್ 17ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಬೇಕೆಂದಿರುವುದು ಜಾತಿ ಗಣತಿಯ ಕುರಿತಲ್ಲ. ಇದು ಜಾತಿಗಣತಿ ಅಲ್ಲ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವಿಚಾರ ತಿಳಿಯಲು ಮಾಡಿದ ಸಮೀಕ್ಷೆ. ಅದರಲ್ಲಿ ಜಾತಿ ಕಾಲಂ ಸೇರಿಸಲಾಗಿದೆ ಅಷ್ಟೇ. ಇದು ಕೂಡ ಸ್ವಾಗತಾರ್ಹ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು. ಕೊಪ್ಪಳದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಅತ್ಯಂತ ವೈಜ್ಞಾನಿಕವಾಗಿದೆ. ಶಿಕ್ಷಕರು ಮನೆ ಮನೆಗೆ ಹೋಗಿ ಗಣತಿ ಮಾಡಿದ್ದಾರೆ. …
Read More »ಶಿವರಾಮ್ ಹೆಬ್ಬಾರ್ ಅವರನ್ನು ನಾವು ಕೈ ಬಿಟ್ಟಿದ್ದೇವೆ: ಆರ್.ಅಶೋಕ್
ಬೆಂಗಳೂರು: ಶಾಸಕ ಶಿವರಾಮ್ ಹೆಬ್ಬಾರ್‌ಗೂ ನಮ್ಮ ಪಕ್ಷಕ್ಕೂ ಮುಗಿದ ಅಧ್ಯಾಯ. ಅವರು ಈಗ ನಮ್ಮ ಪಕ್ಷದವರಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೆ, ಹೆಬ್ಬಾರ್ ಅವರು ಕುಳಿತೇ ಇರುತ್ತಾರೆ. ಅವರನ್ನು ನಾವು ಕೈ ಬಿಟ್ಟಿದ್ದೇವೆ. ಶಿವರಾಮ್ ಹೆಬ್ಬಾರ್‌ಗೂ, ಬಿಜೆಪಿಗೂ ಸಂಬಂಧವಿಲ್ಲ ಎಂದರು. ಜಾತಿ ಗಣತಿ ವರದಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯನವರು ಟೋಪಿ ಹಾಕಿಕೊಂಡು ಏಕೆ …
Read More »ಪಿಯು ಪರೀಕ್ಷೆಯಲ್ಲಿ ಫೇಲ್, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
ಬಾಗಲಕೋಟೆ : ಪಿಯು ಪರೀಕ್ಷೆಯಲ್ಲಿ ಫೇಲ್, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಪಿಯುಸಿ ವಾಣಿಜ್ಯ ವಿಭಾಗದ ಅಕೌಂಟೆನ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದು ಅದಕ್ಕಾಗಿ ಮನನೊಂದು ವಿದ್ಯಾರ್ಥಿ ಮಹೇಶ ಬಸಪ್ಪ ತೇಲಿ ಲೋಕಾಪುರದಲ್ಲಿರುವ ಅಕ್ಕ ಸಾವಿತ್ರಿ ಅವರ ಮನೆಯ ಮಹಡಿ ಮೇಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ
Read More »ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು, ಇದರ ಜಾರಿಯನ್ನು ವಿರೋಧಿಸಿದ್ದವರೇ ಇವರು: ಸಿ.ಎಂ ಸಿದ್ದರಾಮಯ್ಯ ವ್ಯಂಗ್ಯ
ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು, ಇದರ ಜಾರಿಯನ್ನು ವಿರೋಧಿಸಿದ್ದವರೇ ಇವರು: ಸಿ.ಎಂ ಸಿದ್ದರಾಮಯ್ಯ ವ್ಯಂಗ್ಯ ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿ.ಎಂ ಸಿದ್ದರಾಮಯ್ಯ ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಅಪಪ್ರಚಾರ ಮಾಡುತ್ತಿದ್ದಾರೆ: ಸಿಎಂ 8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ: ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ …
Read More »ಬಳ್ಳಾರಿ: ಮಲಗಿರುವಾಗ ನಾಗರ ಹಾವು ಕಡಿದು 10ನೇ ತರಗತಿ ಬಾಲಕಿ ಸಾವು
ಬಳ್ಳಾರಿ: ಮಲಗಿದ್ದಾಗ ನಾಗರ ಹಾವು ಕಡಿದು 10ನೇ ತರಗತಿ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಬಳ್ಳಾರಿ ತಾಲೂಕಿನ ಹೊಸ ಮೋಕಾ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. 15 ವರ್ಷದ ಬಾಲಕಿ ಶ್ರಾವಣಿ ಹಾವು ಕಡಿತದಿಂದ ಮೃತಪಟ್ಟವಳು. ಬಾಲಕಿಯು ಹೊಸ ಮೋಕಾ ಗ್ರಾಮದ ಲಕ್ಷ್ಮಣ ಹಾಗೂ ಶೇಕಮ್ಮ ದಂಪತಿಯ ಮಗಳಾಗಿದ್ದಳು. ಶ್ರಾವಣಿ ಮೋಕಾ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ರಾತ್ರಿ ಮಲಗಿರುವಾಗ ಬಾಲಕಿಗೆ ಮೂರು ಸಲ ನಾಗರ ಹಾವು ಕಚ್ಚಿದೆ. …
Read More »ಕಮಿಷನ್ ಕೊಟ್ಟರೂ ಅಧಿಕಾರಿಗಳು ಬಾಕಿ ಹಣ ಬಿಡುಗಡೆ ಮಾಡ್ತಿಲ್ಲ:ಗುತ್ತಿಗೆದಾರರ ಸಂಘ ಆಕ್ರೋಶ
ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ 60% ಕಮಿಷನ್ ಕೊಡದೇ ಯಾವುದೇ ಕೆಲಸ ಆಗಲ್ಲ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಬೆನ್ನಲ್ಲೇ ಹಾವೇರಿ ಗುತ್ತಿಗೆದಾರರ ಸಂಘ ಸಹ ಆಕ್ರೋಶ ಹೊರಹಾಕಿದೆ. “ಹಾವೇರಿ ಗುತ್ತಿಗೆದಾರರಿಗೆ ಬರಬೇಕಿದ್ದ ಕಾಮಗಾರಿಗಳ ನೂರಾರು ಕೋಟಿ ಹಣ ಪಾವತಿಸದೇ ಸರ್ಕಾರ ಸತಾಯಿಸುತ್ತಿದೆ. ಅಲ್ಲದೆ ಕೆಲವೊಂದು ಇಲಾಖೆಗಳಲ್ಲಿ 10 ರಿಂದ 13 ಪರ್ಸೆಂಟ್ ಕಮಿಷನ್ ಕೊಟ್ಟರೂ ಬಾಕಿ ಹಣ ಬಿಡುಗಡೆ ಮಾಡಿಸದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆ” ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ …
Read More »ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ: ‘ಘಟನೆ ಬಗ್ಗೆ ಕೇಳಿ ಮೈ ಜುಮ್ ಅಂತು’- ಸಚಿವ ಜಮೀರ್
ಧಾರವಾಡ: ಹುಬ್ಬಳ್ಳಿಯಲ್ಲಿ ನಡೆದ ಪುಟ್ಟ ಕಂದಮ್ಮನ ಮೇಲಿನ ಅತ್ಯಾಚಾರ ಯತ್ನ ಮತ್ತು ಕೊಲೆ ದುಷ್ಕೃತ್ಯಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. “ಈ ಘಟನೆಯ ಬಗ್ಗೆ ಕೇಳಿ ಮೈಯಲ್ಲ ಜುಮ್ ಅಂದಿದೆ. ನಾಲ್ಕು ವರ್ಷದ ಮಗುರೀ ಅದು. ಆ ಸಿಸಿಟಿವಿ ವಿಡಿಯೋ ನೋಡಲು ಆಗಲಿಲ್ಲ” ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಘಟನೆಯನ್ನು ಖಂಡಿಸಿದರು.”ಅಪರಾಧಿಗೆ ಕಾನೂನಿನಡಿ ಸರಿಯಾದ ಶಿಕ್ಷೆಯಾಗಬೇಕು. ನ್ಯಾಯಾಲಯದ ಆದೇಶಕ್ಕೆ ಕಾಯುತ್ತಾ ಕುಳಿತುಕೊಳ್ಳುವಂತೆ ಆಗಬಾರದು. ಕಾಯುತ್ತಾ ಕುಳಿತಂತೆ ಇಂತಹ ಘಟನೆಗಳು ನಡೆಯುತ್ತಿರುತ್ತವೆ. …
Read More »ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆಗೆ ಹೋದ ಯೋಧನು ನೀರುಪಾಲು: ಬಾಗಲಕೋಟೆಯಲ್ಲಿ ಇಬ್ಬರು ಸಾವು
ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಮುಳುಗಿ ಭಾರತೀಯ ಸೇನೆಯ ಯೋಧ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಣ್ಣೇರಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತರನ್ನು ಬಾಲಕ ಶೇಖಪ್ಪ (15) ಮತ್ತು ಯೋಧ ಮಹಾಂತೇಶ (25) ಎಂದು ಗುರುತಿಸಲಾಗಿದೆ. ಆಗಿದ್ದೇನು ? ನದಿಯಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋಗಿ ಯೋಧ ಸಹ ನೀರುಪಾಲಾಗಿದ್ದಾರೆ. ಹಂಸನೂರು ಗ್ರಾಮದ ಶೇಖಪ್ಪ, ಗದಗ ಜಿಲ್ಲೆಯ ಬೇನಾಳ ಗ್ರಾಮದ ಯೋಧ ಮಹಾಂತೇಶ ಮೃತ ದುರ್ದೈವಿಗಳು. ಸ್ನಾನ ಮಾಡಲು ಮೊದಲು ನದಿಗೆ …
Read More »ಹಾವೇರಿ: ವಂದೇ ಭಾರತ್ ರೈಲು ಟಿಕೆಟ್ ಬುಕ್ಕಿಂಗ್‌ಗೆ ಪ್ರಯಾಣಿಕರ ಪರದಾಟ
ಹಾವೇರಿ: ಹಾವೇರಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಕೇಂದ್ರ ಸಚಿವ ಸೋಮಣ್ಣ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ ತೋರಿಸಿದ್ದು, ಆರಂಭದಲ್ಲೇ ಟಿಕೆಟ್ ಬುಕ್ಕಿಂಗ್ನಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡಿವೆ. ಹಾವೇರಿಗೆ ಆನ್ಲೈನ್ನಲ್ಲಿ ಟಿಕೆಟ್ ಬುಕ್ ಆಗುತ್ತಿಲ್ಲ. ಹಾವೇರಿಯಲ್ಲಿ ರೈಲು ನಿಲುಗಡೆ ಇದ್ದರೂ, ಹತ್ತಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಮತ್ತೊಂದೆಡೆ, ಬೆಂಗಳೂರಿನ ಕೆಆರ್ಎಸ್ ರೈಲು ನಿಲ್ದಾಣದಿಂದ ಹಾವೇರಿಗೂ ಟಿಕೆಟ್ ಬುಕ್ಕಿಂಗ್ ಆಗುತ್ತಿಲ್ಲ. ಬದಲಾಗಿ, ಯಶವಂತಪುರದಿಂದ ಹಾವೇರಿಗೆ …
Read More »