ಬೆಳಗಾವಿ/ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಕಳೆ ಹೆಚ್ಚಾಗುತ್ತಿರುವುದರಿಂದ ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತಿದ್ದು, ಕಳೆ ತೆರವು ಮಾಡಿ ವನ್ಯಜೀವಿಗಳ ಸಂಚಾರ ಮತ್ತು ಆಹಾರ ಲಭ್ಯತೆ ಹೆಚ್ಚಿಸಲು ಬೇಕಾದ ಎಲ್ಲ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ. ಅದೇ ರೀತಿ ಆನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಶಾಶ್ವತ ಪರಿಹಾರವಾಗಿದ್ದು, ಅಗತ್ಯವಿರುವ ಕಡೆ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಕ್ರಮವಹಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಪ್ರಶ್ನೆಗೆ …
Read More »ಭವಾನಿ ಸಿಟ್ಟಿನಿಂದ ಮಾತನಾಡಿದ್ದಾರೆ, ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ: ಹೆಚ್ ಡಿ ರೇವಣ್ಣ
ಬೆಳಗಾವಿ : ಭವಾನಿ ಅವರ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ. ತಾವಿದ್ದ ಕಾರಿಗೆ ಗುದ್ದಿದ ಬೈಕ್ ಸವಾರನಿಗೆ ಭವಾನಿ ರೇವಣ್ಣ ಬೈದಿರುವ ಬಗ್ಗೆ ಪ್ರತಿಕ್ರಿಯಿಸಿ, ಬೈಕ್ ಸವಾರನೇ ಒಂದು ಬದಿಯಿಂದ ಬಂದು ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಾಗುತ್ತಿತ್ತು?. ಅವರು ಏನೂ ಅಹಂಕಾರದಿಂದ ಮಾತಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು. ಹೀಗಾಗಿ ಅವರು ಸಿಟ್ಟಲ್ಲಿ ಮಾತನಾಡಿದ್ದಾರೆ. …
Read More »ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ
ಬೆಳಗಾವಿ/ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ (ಬಿಎಸಿ)ಯಲ್ಲಿ ಚರ್ಚೆ ನಡೆಸಲಾಯಿತು. ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 18 ಮಸೂದೆ ಮಂಡನೆ ಸಂಬಂಧ ಚರ್ಚೆ ನಡೆಸಲಾಯಿತು. ಮುಂದಿನ ವಾರದಿಂದ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಮಧ್ಯಾಹ್ನದ ಬಳಿಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬರ ನಿರ್ವಹಣೆ ಸಂಬಂಧ ಸದನಕ್ಕೆ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿಪಕ್ಷಗಳು …
Read More »ನಿಷೇಧದ ನಡುವೆ ಎಂಇಎಸ್ ಮುಖಂಡರ ಪ್ರತಿಭಟನೆ
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಈ ನಡುವೆ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಘೋಷಣೆ ಕೂಗುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿನ ಹುತಾತ್ಮ ಸ್ಮಾರಕಕ್ಕೆ ಭೇಟಿ ನೀಡಿದ ಎಂಇಎಸ್ ನಾಯಕರು, ಗೌರವ ಸಲ್ಲಿಸಿದರು. ನಿಷೇಧಾಜ್ಞೆ ಹೇರಿದ್ದರಿಂದ ಕರ್ನಾಟಕದಲ್ಲಿ ಅನುಮತಿ ಸಿಗದ ಹಿನ್ನೆಲೆ ಮಹಾರಾಷ್ಟ್ರದ ಶಿನೊಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಶಿನೊಳ್ಳಿಗೆ ತೆರಳುವ ಮುನ್ನ ಹುತಾತ್ಮರ ಸ್ಮಾರಕಕ್ಕೆ ಎಂಇಎಸ್ ನಾಯಕರು …
Read More »ಚಳಿಗಾಲದ ಅಧಿವೇಶನ ಪ್ರಾರಂಭ ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಚರ್ಚೆಯಾಗಲಿ
ಬೆಳಗಾವಿ: ಇವತ್ತಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಈ ಭಾಗವನ್ನು ಕೇಂದ್ರಸ್ಥಳವಾಗಿ ಇಟ್ಟುಕೊಂಡು ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಚರ್ಚೆಯಾಗಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ಹಿನ್ನಡೆ: ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದಕ್ಕೆ ಸಂತೋಷವಾಗಿದೆ. ಮೂರು ರಾಜ್ಯಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ನಾವು ಈ ರೀತಿ ಆಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಹಿಂದಿ ಭಾಷೆಯ ಪ್ರಾಂತ್ಯದಲ್ಲಿ ನಮಗೆ …
Read More »ಬಿಎಂಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಸುಟ್ಟು ಕರಕಲು
ಬೆಂಗಳೂರು: ವೇಗವಾಗಿ ಬಂದ ಕಾರು ಬಿಎಂಟಿಸಿ ಬಸ್‌ಗೆ ಡಿಕ್ಕಿಯಾಗಿ ಅಗ್ನಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ ಬಳಿ ನಡೆಯಿತು. ಯಶವಂತಪುರದಿಂದ ನಾಯಂಡಹಳ್ಳಿಗೆ ತೆರಳುತ್ತಿದ್ದ ಬಸ್ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪ್ರಯಾಣಿಕರನ್ನು ಇಳಿಸಲು ಹಾಗೂ ಹತ್ತಿಸಿಕೊಳ್ಳಲು ಚಂದ್ರಾಲೇಔಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಉಂಟಾದ ಘರ್ಷಣೆಯಿಂದ ಬೆಂಕಿ ಹತ್ತಿಕೊಂಡಿದ್ದು, ಕಾರು ಪೂರ್ತಿಯಾಗಿ …
Read More »ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ: ಯತ್ನಾಳ್
ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿಂದು ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಭಾಗದವರಿಗೆ ನಾಯಕತ್ವ ನೀಡಿಲ್ಲ. ನಾವು ದ.ಕರ್ನಾಟಕ ಭಾಗದ ನಾಯಕರ ಗುಲಾಮರಲ್ಲ ಎಂದು ಅಸಮಾಧಾನ ಹೊರಹಾಕಿದರು. ದೇಶಕ್ಕೆ ನರೇಂದ್ರ ಮೋದಿಯೇ ಗ್ಯಾರಂಟಿ ಇರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿದೆ. ಈ ಗೆಲುವಿಗೆ ಕಾರಣ ಹಿಂದುತ್ವ, ಅಭಿವೃದ್ಧಿ, ಹೊಂದಾಣಿಕೆ ಇಲ್ಲದ …
Read More »ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ
ಚಿಕ್ಕಮಗಳೂರು ವಕೀಲರ ಮೇಲೆ ಪೋಲಿಸರ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ ಪ್ರತಿಭಟನೆ ವೇಳೆ ಚಿಕ್ಕೋಡಿ ಎಸಿ. ಹಾಗೂ ವಕೀಲರ ನಡುವೆ ಜಟಾಪಟಿ ಪ್ರತಿಭಟನೆ ವೇಳೆ ಎಸಿ.ವಾಹನ ಒಳಗಡೆ ಬಂದ ಹಿನ್ನಲೆ ರೊಚ್ಚಿಗೆದ್ದ ವಕೀಲರು ಪ್ರತಿಭಟನಾ ಸ್ಥಳದಲ್ಲಿ ಎಸಿ ಜೋತೆಗೆ ವಾಗ್ವಾದ ಎ.ಸಿ.ಯನ್ನ ಕೆಳಗೆ ಇಳಿಸಿ ನಡೆದುಕೊಂಡು ಕಳಿಸಿದ ವಕೀಲರು ವಕೀಲರ ವರ್ತನೆಗೆ ಸ್ಥಳದಲ್ಲಿ ವಾಹನ ಬಿಟ್ಟು ತೆರಳಿದ ಚಿಕ್ಕೋಡಿ ಎ.ಸಿ ಸಂಪಗಾವಿ
Read More »ಚಳಿಗಾಲದ ಅಧಿವೇಶನ ಈ ಭಾಗದ ರೈತರಿಗೆ, ಬಡವರಿಗೆ ಅನೂಕೂಲವಾಗಲಿ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಳಗಾವಿ :ಉತ್ತರ ಕರ್ನಾಟಕದ ಹೆಬ್ಬಾಗಿಲು ಬೆಳಗಾವಿ (Belagavi) ಜಿಲ್ಲೆ. ಈ ಭಾಗದ ಬಡವರಿಗೆ, ರೈತರಿಗೆ ಅನುಕೂಲವಾಗಲಿ ಎನ್ನುವ ನಿಟ್ಟಿನಲ್ಲಿ ಸುವರ್ಣಸೌಧ (Suvarna soudha) ಚಿಂತನೆ ಮಾಡಿದ್ದು ಮಾಜಿ ಸಿಎಂ ಯಡಿಯೂರಪ್ಪನವರು (B S Yediyurappa). ಚಳಿಗಾಲದ ಅಧಿವೇಶನ ಈ ಭಾಗದ ರೈತರಿಗೆ, ಬಡವರಿಗೆ ಅನೂಕೂಲವಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಹೇಳಿದರು. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಜನತೆ …
Read More »ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಹತೆ, ಅರ್ಜಿ ಸಲ್ಲಿಕೆ, ವೇತನದ ವಿವರ
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಒಟ್ಟು 540 ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇವು ಗ್ರೂಪ್ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಧಿಸೂಚನೆಹುದ್ದೆಗಳು- ಎಲ್ಲಿ, ಎಷ್ಟು?: ಬೆಂಗಳೂರು 49 ಬೆಳಗಾವಿ 12 ಬಳ್ಳಾರಿ 29 ಚಾಮರಾಜನಗರ 83 ಚಿಕ್ಕಮಗಳೂರು 52 ಧಾರವಾಡ 5 ಹಾಸನ 18 ಕಲಬುರಗಿ 58 ಕೆನಾರ 33 ಕೊಡಗು 26 ಮಂಗಳೂರು 62 ಮೈಸೂರು 47 ಶಿವಮೊಗ್ಗ 66 ವಿದ್ಯಾರ್ಹತೆ: ಅಧಿಕೃತ …
Read More »