ಬಳ್ಳಾರಿ: ಇಲ್ಲಿನಟ್ರಾಮಾ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ತಮ್ಮ ವಿರುದ್ಧ ಮಾಡಿರುವ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ನಿರ್ದೇಶಕ ಗಂಗಾಧರಗೌಡ, ಇದರಲ್ಲಿ ಯಾವುದೇ ಸತ್ಯಾಸತ್ಯತೆ ಇಲ್ಲ. ಕಾನೂನು ಪ್ರಕಾರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ನಾನು ಪೊಲೀಸ್ ತನಿಖೆಗೆ ಸಂಪೂರ್ಣ ಸಹಕರಿಸಲು ಸಿದ್ಧ ಎಂದು ತಿಳಿಸಿದ್ದಾರೆ. ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ …
Read More »ಆರೋಗ್ಯ ಸೇವೆಗೆ 262 ಆಂಬ್ಯುಲೆನ್ಸ್ ಸೇರ್ಪಡೆ:ದಿನೇಶ್ ಗುಂಡೂರಾವ್
ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಪೂರೈಸಿದೆ. ಆರೋಗ್ಯ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಬಳಿಕ ಈ ಆರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರಿಗೆ ತುರ್ತಾಗಿ ಆಗಬೇಕಾದ ಆರೋಗ್ಯ ಸೇವೆಗಳನ್ನು ಸುಧಾರಣೆಯತ್ತ ತರುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಿದ್ದೇನೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ನಡೆದ ಸದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಂಬ್ಯುಲೆನ್ಸ್ ಮತ್ತು ಡಯಾಲಿಸಿಸ್. ಈ ಎರಡು ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ನಾನು …
Read More »ರಾಜ್ಯ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಅಧಿವೇಶನದಲ್ಲಿ ಮಾಡುತ್ತೇವೆ: ವಿಜಯೇಂದ್ರ
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರ ರೈತರು ಮತ್ತು ಬಡವರ ವಿರೋಧಿಯಾಗಿದೆ. ಈ ಎಲ್ಲಾ ವಿಚಾರಗಳನ್ನು ಅಧಿವೇಶನದಲ್ಲಿ ಮುಂದಿಟ್ಟು ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮಕ್ಕೆ ಇಂದು ಆಗಮಿಸಿದ ವಿಜಯೇಂದ್ರ ಅವರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು. ಬೃಹತ್ ಆಕಾರದ ಹೂವಿನ ಹಾರ ಹಾಕಿ, ಘೋಷಣೆಗಳನ್ನು ಕೂಗಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, …
Read More »ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂಪಾಯಿಪೊಲೀಸರ ವಶಕ್ಕೆ
ಚಿತ್ರದುರ್ಗ: ಇನ್ನೋವಾ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ನಗದನ್ನು ಹೊಳಲ್ಕೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರನ್ನು ಮಲ್ಲಾಡಿಹಳ್ಳಿ ಸಮೀಪ ಪರಿಶೀಲಿಸಿದಾಗ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ಕಾರು ಚಾಲಕ ಸಚಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದು ಚಿತ್ರದುರ್ಗದ ಅಡಿಕೆ ವರ್ತಕರೊಬ್ಬರ ಹಣವಾಗಿದ್ದು, ಶಿವಮೊಗ್ಗದ ಇನ್ನೋರ್ವ ಅಡಿಕೆ ವರ್ತಕರಿಗೆ ನೀಡಲು ಹೊರಟಿದ್ದಾಗಿ ಎಂದು ಚಾಲಕ ಪೊಲೀಸರಿಗೆ ತಿಳಿಸಿದ್ದಾರೆ. ಹಣದ ಬಗ್ಗೆ …
Read More »ಸ್ಮಾರ್ಟ್‌ಸಿಟಿ-2ನಲ್ಲಿ ಆಯ್ಕೆಗಾಗಿ ಬೆಳಗಾವಿ ಕಸರತ್ತು
ಬೆಳಗಾವಿ: ಬೆಳಗಾವಿ ಸೇರಿದಂತೆ ದೇಶದ 100 ಸ್ಮಾರ್ಟ್‌ಸಿಟಿಗಳ ಪೈಕಿ 18 ನಗರಗಳನ್ನು ಸ್ಮಾರ್ಟ್ ಸಿಟಿ-2ರ ಯೋಜನೆಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಎರಡನೇ ಹಂತದಲ್ಲಿಯೂ ಬೆಳಗಾವಿ ಸ್ಥಾನ ಪಡೆದುಕೊಳ್ಳಲು ಹಲವು ಕಸರತ್ತು ನಡೆಸಿದೆ. ಸೂಕ್ತ ಪ್ರಸ್ತಾವನೆ ಸಲ್ಲಿಸಿದರೆ 2024 ಜನೇವರಿ 20ರಂದು ಆಯ್ಕೆ ಪಟ್ಟಿಯಲ್ಲಿ ಬೆಳಗಾವಿಯ ಹೆಸರು ಭದ್ರವಾಗುವುದರಲ್ಲಿ ಸಂದೇಹವೇ ಇಲ್ಲ. 18 ನಗರಗಳನ್ನು ಸ್ಮಾರ್ಟ್‌ಸಿಟಿ-2 ಯೋಜನೆಗೆ ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಬಗ್ಗೆ ಇತ್ತೀಚೆಗೆ ದೆಹಲಿಯಲ್ಲಿ ದೇಶದ 100 …
Read More »60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ
ಬೆಳಗಾವಿ: ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಲು 60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌ಕೆ ಗ್ರಾಮದ ರವಿ ಅಜ್ಜಿ, ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಬೆಳಗಾವಿ …
Read More »ಅಂಕ ಗಳಿಕೆಗೆ ಓದುವುದಕ್ಕಿಂತ ಜ್ಞಾನ ಗಳಿಕೆಗೆ ಓದಿ- ಶೆಟ್ಟರ್
ಹಿರೇಬಾಗೇವಾಡಿ: ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಗಳಿಸಲು ತಂದೆ-ತಾಯಿ ಮತ್ತು ಶಿಕ್ಷಕರ ಮಾರ್ಗದರ್ಶನ ಅವಶ್ಯ ಎಂದು ರಾಣೇಬೆನ್ನೂರಿನ ನಂದೀಶ್ವರ ನೈಪುಣ್ಯ ಕೌಶಲ್ಯ ಸಂಸ್ಥೆ ಅಧ್ಯಕ್ಷ ಹಾಗೂ ಜೀವನ ಕೌಶಲ್ಯ ತರಬೇತುದಾರ ನಂದೀಶ ಬಿ ಶೆಟ್ಟರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಬೆಳಗಾವಿ ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ರಾಣೇಬೆನ್ನೂರು …
Read More »ಪ್ರತಿಭೆಗಳು ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲಿ-ಸಚಿವ ಸತೀಶ ಜಾರಕಿಹೊಳಿ
ಯಮಕನಮರಡಿ: ಸತೀಶ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸಿದ್ದ ಕೆಲವು ಮಕ್ಕಳು ಗೆದ್ದಿರಬಹುದು, ಕೆಲವರು ಸೋತಿರಬಹುದು. ಆದರೆ ಸೋತ ಮಕ್ಕಳು ಚಿಂತಿಸುವ ಅವಶ್ಯಕತೆ ಇಲ್ಲ. ಮುಂದಿನ ವರ್ಷ ಮತ್ತೆ ನಿಮಗೆ ಗೆಲ್ಲುವ ಅವಕಾಶ ಸಿಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು ರವಿವಾರ ಯಮಕನಮರಡಿ ಎನ್ ಎಸ್‌ಎಫ್ ಶಾಲಾ ಆವರಣದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 10ನೇ ಸತೀಶ್ ಪ್ರತಿಭಾ …
Read More »ಹಲವು ಯುದ್ಧ ಗೆದ್ದವ ಕನಕ. ಬದುಕಿನಲ್ಲೂ ಕೂಡ. ಮೊದಲೇ ಪಾಳೇಗಾರ ಮನೆತನ.
ಹಲವು ಯುದ್ಧ ಗೆದ್ದವ ಕನಕ. ಬದುಕಿನಲ್ಲೂ ಕೂಡ. ಮೊದಲೇ ಪಾಳೇಗಾರ ಮನೆತನ. ಆದರೂ ಕನಕ ಎಳವೆಯಲ್ಲೇ ತಂದೆ ತಾಯಿ ಕಳೆದುಕೊಂಡ. ಇದ್ದ ಸಂಪತ್ತು ನಷ್ಟ ಆಯ್ತು. ಬಾಡದಲ್ಲಿ ಹುಟ್ಟಿದ್ದರು ತಿಮ್ಮಪ್ಪ ಬಡವನಾಗಲಿಲ್ಲ. ಊರವರು ಸಂಬಂಧಿಗಳ ಸಹಾಯದಲ್ಲಿ ಬದುಕು ಕಟ್ಟಿಕೊಂಡ. ಶತ್ರುಪಡೆಯ ಕಾರಣವೋ ಇನ್ನೇನೋ ಮನೆಯಲ್ಲೇ ಹುದಿಗಿಸಿಟ್ಟ ಆಪತ್ ನಿಧಿ ತಿಮ್ಮಪ್ಪನ ವಶ ಆಯ್ತು. ಇದ್ದಕ್ಕಿದ್ದಂತೆ ಕನಕ ನಾಯಕನಾದ. ಬಂಕಾಪುರ ವಿಜಯನಗರ ಅರಸರ ಅಧೀನ ಪ್ರಾಂತ. ಕದಂಬರ ಬನವಾಸಿಗೆ ಸೇರಿದ ಕಾಗಿನೆಲೆಗಾಗಿ …
Read More »ಹೆಸರಿಗಷ್ಟೇ ಬೆಳಗಾವಿ 2ನೇ ರಾಜಧಾನಿ : ಅಶೋಕ ಚಂದರಗಿ
ಬೆಳಗಾವಿ : ಚಳಿಗಾಲ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ಉತ್ತರ ಕರ್ನಾಟಕದ ಜನ ಈ ಅಧಿವೇಶನದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ರಾಜಕೀಯ ಸಂಘರ್ಷಕ್ಕೆ ಈ ಅಧಿವೇಶನ ಬಲಿ ಆಗಬಾರದು ಎಂದು ಎಚ್ಚರಿಸಿದ್ದಾರೆ. ಇನ್ನು ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರು ಈಟಿವಿ ಭಾರತ ಜೊತೆ ಮಾತನಾಡಿ, ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯ ಮಟ್ಟದ ಕಚೇರಿಗಳ ಸ್ಥಳಾಂತರ ಮತ್ತು ಅಧಿಕೃತವಾಗಿ ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಿಸುವ ಬಗ್ಗೆ …
Read More »