Breaking News
Home / ರಾಷ್ಟ್ರೀಯ (page 311)

ರಾಷ್ಟ್ರೀಯ

ಶೀಘ್ರದಲ್ಲೇ ಸಿಬಿಐ ನಿರ್ದೇಶಕನಾಗಿ ಅಧಿಕಾರ ವಹಿಸಿಕೊಳ್ಳುವೆ: ಪ್ರವೀಣ್ ಸೂದ್ ಟ್ವೀಟ್​

ಬೆಂಗಳೂರ: ಸಿಬಿಐನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳಲಿರುವ ಕರ್ನಾಟಕ ರಾಜ್ಯ ಪೊಲೀಸ್ ಡಿಜಿ ಆಯಂಡ್​ ಐಜಿಪಿ ಪ್ರವೀಣ್ ಸೂದ್ ಟ್ವಿಟ್ ಮಾಡಿ ತಮ್ಮ ಅಧಿಕಾರವನ್ನು ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ. ಒಟ್ಟು ಮೂರು ಟ್ವೀಟ್​ಗಳ ಮೂಲಕ ಮಾಹಿತಿ ನೀಡಿರುವ ಪ್ರವೀಣ್ ಸೂದ್, ಅಧಿಕಾರವನ್ನು ಶೀಘ್ರದಲ್ಲಿಯೇ ಹಸ್ತಾಂತರ ಮಾಡುತ್ತೇನೆ. ಕರ್ನಾಟಕ ಡಿಜಿ, ಐಜಿಪಿ ಅಧಿಕೃತ ಟ್ವಿಟ್ಟರ್ ಖಾತೆ ನಿರ್ವಹಣೆಯಿಂದ ಹೊರಬರುತ್ತಿದ್ದೇನೆ. ಇವು ಕರ್ನಾಟಕ ಡಿಜಿ ಆಯಂಡ್​ ಐಜಿಪಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಇದು ಕೊನೆಯ ಟ್ವೀಟ್​ ಆಗಿವೆ …

Read More »

ಕತ್ತು ಹಿಸುಕಿ ಪತ್ನಿ ಕೊಲೆ ; ಅನೈತಿಕ ಸಂಬಂಧ ಶಂಕೆ

ಯಾದಗಿರಿ: ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಮಲಗಿದ್ದಾಗ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಶಹಾಪುರ ಪೊಲೀಸ್‌ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ. ತಾಲೂಕಿನ ದೋರನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮಿ ನಿಂಗಪ್ಪ ಕ್ವಾಣಿ (38) ಕೊಲೆಯಾದ ಮಹಿಳೆ. ಕೊಲೆ ಆರೋಪಿ ನಿಂಗಪ್ಪ ಮಲ್ಲಪ್ಪ ಕ್ವಾಣಿ(43) ಪೊಲೀಸ್‌ ಠಾಣೆಗೆ ಬಂದು ಶರಣಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆ ಎರಡು ವರ್ಷಗಳಿಂದ ಪತಿ ಪತ್ನಿ …

Read More »

ನನ್ನ ಸೋಲಿಗೆ ಪಕ್ಷದ ಕೆಲ ನಾಯಕರೇ ಕಾರಣ : ವಿ ಸೋಮಣ್ಣ

ಚಾಮರಾಜನಗರ : ನನ್ನ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಮಾಜಿ ಸಚಿವ ವಿ ಸೋಮಣ್ಣ ಆರೋಪಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಚಾಮರಾಜನಗರಕ್ಕೆ ಆಗಮಿಸಿ ಕಾರ್ಯಕರ್ತರ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನ್ನ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ. ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ. ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಎಂದು ಕಿಡಿಕಾರಿದರು. ಕೆಲವರು ಮಾತ್ರ ಇಂತಹ …

Read More »

ಹೈಕಮಾಂಡ್ ಮೂರನೇ ಆಯ್ಕೆ ಬಯಸಿದರೆ ಸಿಎಂ ಆಗಲು ನಾನು ಸಿದ್ಧ: ಪರಮೇಶ್ವರ್

ಬೆಂಗಳೂರು: ಹೈಕಮಾಂಡ್​​ನಿಂದ ಮೂರನೇ ಆಯ್ಕೆ ಬಂದರೆ ನಾನು ಸಿದ್ದ ಎಂದು ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಯಾವಾಗಲೂ ಸಿದ್ದವಾಗಿದ್ದೇನೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಇಂದು ಆಗಬಹುದು ಎಂಬ ನಿರೀಕ್ಷೆ ಹೊಂದಿದ್ದೇನೆ. ದಿಲ್ಲಿಗೆ ಬರುವಂತೆ ನನಗೆ ಬುಲಾವ್ ಬಂದಿಲ್ಲ, ಕೆಲವರು ಕರೆ‌ ಮಾತನಾಡಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿಪ್ರಾಯ ಪಡೆದು ಹೋಗಿದ್ದಾರೆ. ಇವತ್ತು …

Read More »

ತ್ರಯಂಬಕೇಶ್ವರ ದೇವಾಲಯಕ್ಕೆ ಯಾರೂ ಬಲವಂತವಾಗಿ ಪ್ರವೇಶಿಸಲು ಯತ್ನಿಸಿಲ್ಲ : ಸಂಜಯ್​ ರಾವತ್

ನಾಸಿಕ್​(ಮಹಾರಾಷ್ಟ್ರ) : ಇಲ್ಲಿನ ಪ್ರಸಿದ್ಧ ತೀರ್ಥ ಕ್ಷೇತ್ರ ಹಾಗೂ ಪವಿತ್ರ ಜ್ಯೋತಿರ್ಲಿಂಗಳಲ್ಲಿ ಒಂದಾದ ತ್ರಯಂಬಕೇಶ್ವರ ದೇವಾಲಯಕ್ಕೆ ಯಾರೂ ಬಲವಂತವಾಗಿ ಪ್ರವೇಶಿಸಲು ಯತ್ನಿಸಿಲ್ಲ ಎಂದು ಸಂಸದ ಸಂಜಯ್​ ರಾವತ್​ ಹೇಳಿದ್ದಾರೆ. ಥಾಣೆಯಲ್ಲಿರುವ ತ್ರಿಯಂಬಕೇಶ್ವರ ದೇವಾಲಯದ ಶಿಷ್ಟಾಚಾರಕ್ಕೆ ವಿರುದ್ಧವಾಗಿ ಒಂದು ಸಮುದಾಯದ ಕೆಲ ಜನರು ದೇವಾಲಯದ ಒಳಗೆ ಪ್ರವೇಶಿಸಲು ಯತ್ನಿಸಿದ್ದು, ಈ ವೇಳೆ ಭದ್ರತಾ ಸಿಬ್ಬಂದಿಗಳು ಅವರನ್ನು ತಡೆದಿದ್ದರು. ಈ ಸಂಬಂಧ ನಾಸಿಕ್​ನಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ನಾಸಿಕ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ …

Read More »

ನಕಲಿ ಅಂಕಪಟ್ಟಿ ನೀಡಿದ 51 ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ವಿಟಿಯು

ಬೆಳಗಾವಿ: ನಕಲಿ ಅಂಕಪಟ್ಟಿ ನೀಡಿದ ಹಿನ್ನೆಲೆಯಲ್ಲಿ 51 ವಿದ್ಯಾರ್ಥಿಗಳ ಇಂಜಿನಿಯರಿಂಗ್ ಪ್ರವೇಶಾತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಿರಸ್ಕರಿಸಿದೆ. ಮೊದಲ ವರ್ಷದ ಇಂಜಿನಿಯರಿಂಗ್‌ನ ವಿವಿಧ ವಿಭಾಗಗಳಿಗೆ ಈ ವಿದ್ಯಾರ್ಥಿಗಳು ಪ್ರವೇಶ ಬಯಸಿದ್ದರು. ಎಲ್ಲ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಅಂಕಪಟ್ಟಿ ನಕಲಿ ಎಂದು ಸಾಬೀತಾಗಿದ್ದು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನೀಡಿದ ಈ ಪ್ರಮಾಣ ಪತ್ರಗಳು ನಕಲಿ ಎಂದು ತಿಳಿದುಬಂದಿದೆ. ದಾಖಲೆಗಳ ಪರಿಶೀಲನೆಯಲ್ಲಿ ‌ಕ್ಯೂ‌ಆರ್ ಕೋಡ್ ಸ್ಕ್ಯಾನ್ ನಡೆಸಿದಾಗ …

Read More »

ಹೈಕಮಾಂಡ್ ಮನವೊಲಿಕೆಗೆ ಒಪ್ಪದ ಡಿ.ಕೆ.ಶಿ ತಮಗೆ ಸಿಎಂ ಸ್ಥಾನ ಬೇಕು ಎಂದು ಹಠ

ನವದೆಹಲಿ; ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಇನ್ನೇನು ಸಿಎಂ ಆಯ್ಕೆ ಫೈನಲ್ ಎನ್ನುವಷ್ಟರಲ್ಲಿ ಕೊನೇ ಕ್ಷಣದಲ್ಲಿ ರಾಜಕೀಯ ಚಿತ್ರಣವೇ ಬದಲಾಗುತ್ತಿದೆ. ಒಂದೆಡೆ ಸಿಎಂ ಹುದ್ದೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗಿ ಪಟ್ಟು ಹಿಡಿದಿದ್ದರೆ, ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ತಮಗೆ ಸಿಎಂ ಸ್ಥಾನ ಬೇಕು ಎಂದು ಹಠ ಸಾಧಿಸಿದ್ದಾರೆ. ಅಧಿಕಾರ ಹಂಚಿಕೆ ನಿಟ್ಟಿನಲ್ಲಿ ಹೈಮಾಂಡ್ ಹೆಣೆದ ಸೂತ್ರಕ್ಕೆ ಡಿ.ಕೆ.ಶಿವಕುಮಾರ್ ಒಪ್ಪಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, …

Read More »

ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ:ಸುರ್ಜೇವಾಲ

ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಈವರೆಗೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ, ಸುಳ್ಳು ಸಿದ್ದಿಗಳಿಗೆ ಕಿವಿಗೊಡಬೆಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸುರ್ಜೆವಾಲಾ, ಇಂದು ಸಂಜೆ ಅಥವಾ ನಾಳೆ ಸಿಎಂ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಘೋಷಣೆ ಮಾಡಲಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. …

Read More »

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ : ಹುಟ್ಟೂರಿನಲ್ಲಿ ಸಂಭ್ರಮ

ಮೈಸೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ವಿಚಾರ ಬಹುತೇಕ ಕೊನೆಗೊಂಡಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವುದು ಖಚಿತಗೊಳ್ಳುತ್ತಿದ್ದಂತೆ ಹುಟ್ಟೂರು ವರುಣ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಅಧಿಕೃತ ಘೋಷಣೆಗೂ ಮುನ್ನ ಸಿದ್ದರಾಮಯ್ಯನವರ ಫ್ಲೆಕ್ಸ್​ಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಇತ್ತ ಮೈಸೂರಿನ ಟಿ ಕೆ.ಲೇಔಟ್​ನಲ್ಲಿರುವ ಸಿದ್ದರಾಮಯ್ಯನವರ ಮನೆಗೆ ಅಭಿಮಾನಿಗಳ ದಂಡೇ ಆಗಮಿಸಿದ್ದು, ಮನೆಯ ಸುತ್ತ ಫ್ಲೆಕ್ಸ್​ಗಳನ್ನು ಅಳವಡಿಸಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಜಾಥಾ ನಡೆಸಿ ಸಂಭ್ರಮಾಚರಣೆ ಮಾಡಿದರು. ಕಾಂಗ್ರೆಸ್​ …

Read More »

ನವಲಗುಂದ: ಗುಡಿಯೊಳಗಿನ ಕತ್ತಲ ಸಾಗರಕೆ ಬೇಕು ದೀವಿಗೆ

ನವಲಗುಂದ: ಕ್ಷೇತ್ರದಲ್ಲಿ ಚುನಾವಣೆ ಕಾವು ಮುಗಿದಿದ್ದು, ಹಸಿರಾಗುವ ಸಮಸ್ಯೆಗಳತ್ತ ಮುಖ ಮಾಡಬೇಕಿದೆ. ದಶಕಗಳಿಂದ ಜನರು ಅನುಭವಿಸುತ್ತಿರುವ ತೊಂದರೆಗಳಿಗೆ ಇತಿಶ್ರೀ ಹಾಡುವ ಜರೂರತ್ತು ಹೆಚ್ಚಿದೆ. ತಾಲೂಕಿನ ಗುಡಿಸಾಗರ ಗ್ರಾಮ ನೆರೆಹಾವಳಿಗೆ ಒಳಗಾಗಿತ್ತು. ಅಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಲ್ಲಿನವರನ್ನೆಲ್ಲ ಬೇರೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರು. ಸ್ಥಳಾಂತರಗೊಂಡ ನಿರಾಶ್ರಿತರ ಮನೆಗಳಿಗೆ ವಿದ್ಯುತ್‌ ದೊರೆತರೂ, ಪಕ್ಕಕ್ಕೆ ಹೊಂದಿಕೊಂಡು ಮನೆ ನಿರ್ಮಿಸಿಕೊಂಡ 10-15 ರೈತರ ಕುಟುಂಬಗಳ ಮನೆಗಳಿಗೆ ವಿದ್ಯುತ್‌ ಸಂಪರ್ಕ ದೊರೆತಿಲ್ಲ. ಸರಕಾರದ ನಿಯಮಾವಳಿಗಳಂತೆ ಪರವಾನಗಿ ಪಡೆದು …

Read More »