ತೆಲಂಗಾಣ : 2024 ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿಗೊಳಿಸಲಾಗುತ್ತದೆ ಹಾಗೂ ಯುವಜನರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಭಾನುವಾರ ತೆಲಂಗಾಣಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು. . ಕರ್ನಾಟಕ ರಾಜ್ಯದ ಜನತೆಗೆ ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ..ಯುವ ನಿಧಿ ಯೋಜನೆಯನ್ನು ಜಾರಿಗೆ ಮಾಡಿದರೆ ನಾವು ಘೋಷಣೆ ಮಾಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೆ ಜಾರಿಗೊಳಿಸಿದಂತಾಗುತ್ತದೆ …
Read More »ನಮ್ಮ ದೇಶದ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಸಂಗನಕೇರಿ ಪಟ್ಟಣದ ಹನಮಂತ ದೇವರ ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ : ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವ ವಿಶ್ವದ ಏಕಮೇವ ರಾಷ್ಟ್ರವಾಗಿದೆ. ನೂರಾರು ಜಾತಿ-ಧರ್ಮಗಳಿದ್ದರೂ ಆಚರಣೆಗಳು ಮಾತ್ರ ಒಂದೇ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಗೆ ಸಮೀಪದ ಸಂಗನಕೇರಿ ಪಟ್ಟಣದ ಹನಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಭಾರತೀಯ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ …
Read More »ಗುಜರಾತ್ ಕ್ಯಾಪ್ಟನ್ಸಿ ಬಿಟ್ಟು ಮತ್ತೆ ಮುಂಬೈ ಪಾಲಾಗ್ತಾರಾ ಹಾರ್ದಿಕ್ ಪಾಂಡ್ಯ?
ಮುಂಬೈ, ಮಹಾರಾಷ್ಟ್ರ: ಟೀಂ ಇಂಡಿಯಾ ಟಿ 20 ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ಮುಂಬೈ ತಂಡಕ್ಕೆ ಮರಳುತ್ತಾರಾ?, ಗುಜರಾತ್ ಟೈಟಾನ್ಸ್ ನಾಯಕತ್ವವನ್ನು ಬಿಟ್ಟುಕೊಡಲು ಅವರು ಸಿದ್ಧರಿದ್ದೀರಾ?, ಮೊದಲ ಸೀಸನಲ್ಲೇ ಟ್ರೋಫಿ ತಂದುಕೊಟ್ಟಿದ್ದ ನಾಯಕನನ್ನು ಕೈಬಿಡಲು ಗುಜರಾತ್ ಒಪ್ಪಿಕೊಂಡಿದೆಯೇ? ಐಪಿಎಲ್ ಫ್ರಾಂಚೈಸಿಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳುವ ಟ್ರೇಡಿಂಗ್ ವಿಂಡೋ ಮುಗಿಯಲು ಇನ್ನೊಂದು ದಿನ ಬಾಕಿ ಇರುವಂತೆಯೇ ಹಾರ್ದಿಕ್ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ಗೆ ಮರಳಲಿದ್ದಾರೆ ಎಂಬ ವರದಿಗಳಿವೆ. ಆದರೆ …
Read More »ಪಿಎಚ್‌ಡಿ ಪಡೆದ ಬುಡಕಟ್ಟು ಸಮುದಾಯದ ಮೊದಲ ಯುವತಿ ಈ ಎಸ್.ಆರ್. ದಿವ್ಯ
ಮೈಸೂರು: ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ವಾಸಿಸುತ್ತಿರುವ ಪಣಿಯನ್ ಬುಡಕಟ್ಟಿನ ಸಮುದಾಯದ ಯುವತಿಯೊಬ್ಬರು ಮೊದಲ ಬಾರಿಗೆ ಡಾಕ್ಟರೇಟ್ ಪದವಿ ಪಡೆದು ಹಿರಿಮೆಗೆ ಪಾತ್ರರಾಗಿದ್ದಾರೆ. ಎಚ್.ಡಿ. ಕೋಟೆ ತಾಲೂಕಿನ ಡಿ.ಬಿ. ಕುಪ್ಪೆ ಗ್ರಾಪಂ ವ್ಯಾಪ್ತಿಯ ಸೇಬಿನಕೊಲ್ಲಿ ಹಾಡಿ ಪ್ರದೇಶದಲ್ಲಿ ನೆಲೆಸಿರುವ ರಾಜು ಮತ್ತು ಲಕ್ಷ್ಮಿ ದಂಪತಿ ಪುತ್ರಿ ಎಸ್.ಆರ್. ದಿವ್ಯ ಅವರು ತಮ್ಮ ಸಮುದಾಯದಲ್ಲಿಯೇ ಪ್ರಥಮ ಬಾರಿಗೆ ಪಿಎಚ್‌ಡಿ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ.ಕೆ.ಎಂ. …
Read More »ಮಗಳಿಗೆ 50 ಕೋಟಿ ಮೌಲ್ಯದ ಬಂಗಲೆ ಉಡುಗೊರೆಯಾಗಿ ಕೊಟ್ಟ ಬಿಗ್ ಬಿ
ಜನಪ್ರಿಯ ನಟ ಅಮಿತಾಭ್ ಬಚ್ಚನ್ ತಮ್ಮ ಹೆಸರಿನಲ್ಲಿದ್ದ ಬಂಗಲೆಯನ್ನು ಮಗಳ ಹೆಸರಿಗೆ ಮಾಡಿಸಿದ್ದಾರೆ. ಭಾರತೀಯ ಚಿತ್ರರಂಗದ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ಪುತ್ರಿ ಶ್ವೇತಾ ನಂದಾ ಅವರಿಗೆ ಅಪಾರ ಬೆಲೆಬಾಳುವ ಆಸ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ತಮ್ಮ ಹೆಸರಿನಲ್ಲಿದ್ದ ಬಂಗಲೆಯನ್ನು ಮಗಳ ಹೆಸರಿಗೆ ಮಾಡಿಸಿದ್ದಾರೆ. ಈಗಾಗಲೇ ನೋಂದಣಿ ಕಾರ್ಯ ಕೂಡ ಮುಗಿದಿದೆ ಎಂಬ ಮಾತು ಕೇಳಿ ಬರುತ್ತಿವೆ. ಅಲ್ಲದೇ ಬಂಗಲೆಯ ಮೌಲ್ಯ ತಿಳಿದ ಅಭಿಮಾನಿಗಳು ಹುಬ್ಬೇರಿಸಿದ್ದಾರೆ ಪ್ರಸಿದ್ಧ ನಟ …
Read More »ಸಾವಿನಲ್ಲೂ ಸಾರ್ಥಕತೆ ಮೆರೆದ ಶುಶ್ರೂಷಕ: ಅಂಗಾಂಗ ದಾನ ಮಾಡಿ 6 ಜನರಿಗೆ ಜೀವ ತುಂಬಿದ ಶೇಖರ್!
ಎರ್ನಾಕುಲಂ (ಕೇರಳ): ಮೆದುಳು ನಿಷ್ಕ್ರಿಯಗೊಂಡು ಸಾವಿಗೀಡಾದ ತಮಿಳುನಾಡಿನ ಶುಶ್ರೂಷಕರೊಬ್ಬರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರ ಬಾಳಿಗೆ ಹೊಸ ಬೆಳಕು ನೀಡಲಿದ್ದಾರೆ. ಇದರಲ್ಲಿ ಕೊಚ್ಚಿಯ ವ್ಯಕ್ತಿಯೊಬ್ಬರಿಗೆ ಹೃದಯ ಕಸಿ ಮಾಡಲಾಗಿದೆ. ಇನ್ನೂ ಐವರಿಗೆ ವಿವಿಧ ಅಂಗಗಳನ್ನು ವೈದ್ಯರು ಜೋಡಿಸಲಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಶುಶ್ರೂಷಕ ಆಗಿದ್ದ ಸೆಲ್ವಿನ್ ಶೇಖರ್ (36) ಮೆದುಳು ನಿಷ್ಕ್ರಿಯದಿಂದ ಸಾವಿಗೀಡಾದವರು. ಪತ್ನಿಯೂ ನರ್ಸ್ ಆಗಿದ್ದು, ಪತಿಯ ಅಂಗಾಂಗ ದಾನ ಮಾಡಲು …
Read More »ಕುಟುಂಬ ಪಿಂಚಣಿ ಪಡೆಯಲು ಎರಡನೇ ಪತ್ನಿ ಅರ್ಹರಲ್ಲ: ಹೈಕೋರ್ಟ್
ಬೆಂಗಳೂರು: ಕುಟುಂಬ ಪಿಂಚಣಿಯಂತ ಸೌಲಭ್ಯಗಳನ್ನು ನೀಡುವ ಸಂದರ್ಭದಲ್ಲಿ ಎರಡನೇ ಪತ್ನಿಯ ಸಂಬಂಧವನ್ನು ಗುರುತಿಸುವುದು ಸಾರ್ವಜನಿಕ ಹಿತಾಸಕ್ತಿಗೆ ಹಾನಿಕಾರಕ. ಈ ಪ್ರಕ್ರಿಯೆ ಸರ್ಕಾರಿ ಉದ್ಯೋಗಿಗಳಿಗೆ ಎರಡನೇ ಮದುವೆಗೆ ಒಪ್ಪಿಗೆ ನೀಡಿದಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್, ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಪಡೆಯುವ ಅಧಿಕಾರ ಹೊಂದಿದೆ ಎಂದು ತಿಳಿಸಿದೆ. ಪತಿಯ ಕುಟುಂಬ ಪಿಂಚಣಿ ನೀಡಲು ನಿರಾಕರಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎರಡನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು …
Read More »ಹಾವೇರಿಯಲ್ಲಿ ಸಕ್ಕರೆ ಗೊಂಬೆ ತಯಾರಿ
ಹಾವೇರಿ: ಗೌರಿ ಹುಣ್ಣಿಮೆ ಬಂದರೆ ಸಾಕು ಉತ್ತರ ಕರ್ನಾಟಕದಲ್ಲಿ ಸಂಭ್ರಮ ಮನೆಮಾಡುತ್ತದೆ. ಅದರಲ್ಲೂ ಹೆಂಗಳೆಯರಂತೂ ಈ ಹಬ್ಬದ ಆಚರಣೆಗೆ ತುದಿಗಾಲಲ್ಲಿ ನಿಂತಿರುತ್ತಾರೆ. ಗೌರಿ ಹುಣ್ಣಿಮೆಯೆಂದರೆ ಸಕ್ಕರೆ ಗೊಂಬೆಗಳು ಇರಲೇಬೇಕು. ಹಿಂದೂಗಳು ಆಚರಿಸುವ ಈ ಹಬ್ಬಕ್ಕೆ ಹಾವೇರಿಯ ಹಲವು ಮುಸ್ಲಿಂ ಕುಟುಂಬಗಳೂ ಕೂಡಾ ಸಕ್ಕರೆ ಗೊಂಬೆಗಳನ್ನು ತಯಾರಿಸುತ್ತವೆ. ಕಳೆದ ಮೂವತ್ತು ವರ್ಷಗಳಿಂದ ಇಲ್ಲಿನ ಹಲವು ಕುಟುಂಬಗಳು ಸಕ್ಕರೆ ಗೊಂಬೆಗಳನ್ನು ತಯಾರಿಸುತ್ತಿದ್ದಾರೆ. ಇಂತಹ ಕುಟುಂಬಗಳಲ್ಲಿ ಬಾಬಣ್ಣ ವೀರಾಪುರ ಕುಟುಂಬವೂ ಒಂದು. ಇವರು ಗೌರಿ ಹುಣ್ಣಿಮೆ …
Read More »ಡಾ.ರಾಜ್ ಕಪ್ ಕ್ರಿಕೆಟ್ ಸೀಸನ್ 6ಕ್ಕೆ ಮುಹೂರ್ತ ಫಿಕ್ಸ್
ಬೆಂಗಳೂರು: ಡಾ.ರಾಜ್ ಕಪ್ ಕ್ರಿಕೆಟ್ ಸೀಸನ್ 6ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಚಂದನವನದ ತಾರೆಯರು ತಯಾರಿ ಆರಂಭಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಸ್ಮಾರಣಾರ್ಥವಾಗಿ ಟೂರ್ನಿ ಆಯೋಜಿಸಲಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜರ್ಸಿ ಬಿಡುಗಡೆಗೊಳಿಸಿದರು. ಡಾ.ರಾಜ್ ಕಪ್ ಸೀಸನ್ 6ಆಯೋಜಕರಾದ ರಾಜೇಶ್ ಬ್ರಹ್ಮಾವರ ಮಾತನಾಡಿ, “ರಾಜ್ ಕಪ್ ಆರನೇ ಸೀಸನ್ ಅನ್ನು ವಿದೇಶದಲ್ಲಿ ಮಾಡುತ್ತಿರುವುದು ಕಷ್ಟವಾಗುತ್ತಿಲ್ಲ. ನನಗೆ ಚಿನ್ನದಂತಹ ನಾಯಕರು, ಮಾಲಕರು ಹಾಗೂ …
Read More »ಕಸ್ತೂರಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ. ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು- ಶಾಸಕ ಬಾಲಚಂದ್ರ ಜಾರಕಿಹೊಳಿ
ಕನ್ನಡದ ವೈಭವ, ಸಂಭ್ರಮಕ್ಕೆ ಸಾಕ್ಷಿಯಾದ ಮೂಡಲಗಿಯ ಸುವರ್ಣ ಕನ್ನಡ ರಾಜ್ಯೋತ್ಸವ ಕಸ್ತೂರಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ. ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿಂದು ಅದ್ದೂರಿಯಾಗಿ ನಡೆದ ಸುವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಮೂಡಲಗಿ: ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗಾಗಿ ಎಲ್ಲ ಕನ್ನಡ ಪರ ಸಂಘಟನೆಗಳು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಬೇಕು, ಈ ಮೂಲಕ ನಮ್ಮ ಕಸ್ತೂರಿ ಕನ್ನಡ ಭಾಷೆಯನ್ನು …
Read More »