Home / ರಾಷ್ಟ್ರೀಯ (page 317)

ರಾಷ್ಟ್ರೀಯ

ಶಿವಸೇನೆ ಪಕ್ಷದ ಹೆಸರು, ಚಿಹ್ನೆ ಹಂಚಿಕೆ ಕೇಸ್​: ನಾಳೆ ಸುಪ್ರೀಂಕೋರ್ಟ್​ನಿಂದ ಮಹತ್ವದ ತೀರ್ಪು

ನವದೆಹಲಿ: ಕಳೆದ ವರ್ಷ ಉಂಟಾದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ತೀರ್ಪು ಹೊರ ಬೀಳಲಿದೆ. ಕೇಂದ್ರ ಚುನಾವಣಾ ಆಯೋಗವು ಶಿವಸೇನೆಯ ಬಿಲ್ಲು ಮತ್ತು ಬಾಣದ ಪಕ್ಷದ ಚಿಹ್ನೆ ಮತ್ತು ಪಕ್ಷದ ಹೆಸರಿಗೆ ಸರ್ವೋಚ್ಛ ನ್ಯಾಯಾಲಯ ತನ್ನ ಆದೇಶ ನೀಡಲಿದೆ. ಇದರಿಂದ ಉದ್ಧವ್​ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣದಲ್ಲಿ ಯಾವುದು ನಿಜವಾದ ಶಿವಸೇನೆ ಎಂಬುವುದು ಇತ್ಯರ್ಥವಾಗಲಿದೆ. ಕಳೆದ ವರ್ಷ ಶಿವಸೇನೆ ನಾಯಕ ಏಕನಾಥ್​ ಶಿಂಧೆ ಬಂಡಾಯದ ಬಾವುಟ …

Read More »

ನಾಡಿದ್ದು ಚುನಾವಣಾ ತೀರ್ಪು.. ಸಿದ್ದರಾಮಯ್ಯ- ಸುರ್ಜೇವಾಲಾ ಮಹತ್ವದ ಮಾತುಕತೆ

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲಾ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇಂದು ಶಿವಾನಂದವೃತ್ತ ಸಮೀಪ ಇರುವ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ್ದ ಸುರ್ಜೇವಾಲಾ ಅವರು ಮಾತುಕತೆ ನಡೆಸಿದರು. ಮತದಾನೋತ್ತರ ಸಮೀಕ್ಷೆ ಕಾಂಗ್ರೆಸ್​ ಪರವಾಗಿದ್ದು, ಮುಂದಿನ‌ ತಂತ್ರಗಾರಿಕೆ ಸಂಬಂಧ ಉಭಯ ನಾಯಕರು ಚರ್ಚಿಸಿದರು. ಬುಧವಾರ ರಾತ್ರಿಯೇ ಮೈಸೂರಿನಿಂದ ಸಿದ್ದರಾಮಯ್ಯ ವಾಪಸಾಗಿದ್ದು, ಖಾಸಗಿ ಹೋಟೆಲ್​ನಲ್ಲಿ ಸುರ್ಜೇವಾಲಾ ಜತೆ ಚರ್ಚಿಸಿದ್ದಾರೆ ಎಂಬ ಮಾಹಿತಿ ಇದೆ. …

Read More »

2615 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರ: ಸಣ್ಣಪುಟ್ಟ ಗಲಾಟೆ ಹೊರತುಪಡಿಸಿ ಶಾಂತಿಯುತ ಮತದಾನ; ಫಲಿತಾಂಶದತ್ತ ಎಲ್ಲರ ಚಿತ್ತ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿ ನೆರವೇರಿತು. ಕೆಲವೆಡೆ ಮತಯಂತ್ರ ದೋಷ, ವಿ.ವಿ.ಪ್ಯಾಟ್ ಸಮಸ್ಯೆಗಳು ಎದುರಾದವಾದರೂ ಅಧಿಕಾರಿಗಳು ಕೂಡಲೇ ಪರ್ಯಾಯ ಕ್ರಮ ಕೈಗೊಂಡರು. 5,30,85,566 ಸಾಮಾನ್ಯ, 47,488 ಸೇವಾ ಮತದಾರರು ಸೇರಿ ಒಟ್ಟು 5,31,33,054 ಮಂದಿ ಮತದಾನದ ಹಕ್ಕು ಹೊಂದಿದ್ದು, ಶೇ.73 ಮತದಾನವಾಗಿದೆ. 2615 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿವೆ. ಬೆಳಗ್ಗೆ ಮತದಾನ ನೀರಸವಾಗಿತ್ತು. ಹೊತ್ತು ಏರುತ್ತಿದ್ದಂತೆ ಮತಗಟ್ಟೆ ಬಳಿ ಮತದಾರರು ಸರತಿ ಸಾಲಿನಲ್ಲಿ ನಿಂತಿದ್ದು …

Read More »

ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ

ಕಲಬುರಗಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ಘಟನೆ ನಡೆದಿದೆ. ರಾಮು ರಾಠೋಡ್ (45) ಮೃತ. ಈತ ಬಿಜೆಪಿ ಕಾರ್ಯಕರ್ತನಾಗಿದ್ದ. ರಾಮು ರಾಠೋಡ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಾಮು ಅವರು ಸಲಗರ ಬಸಂತಪುರ ತಾಂಡಾ ನಿನಾಸಿಯಾಗಿದ್ದಾರೆ. ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿದ್ದರು. ನಿನ್ನೆ ಸಂಜೆವರಗೆ ಪೋಲಿಂಗ್ ಬೂತ್ ಏಜೆಂಟ್ …

Read More »

ಸೇಬು ಬೆಳೆಯುವ ಬೆಳೆಗಾರರಿಗೆ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡಿದೆ.

ಹೊಸದಿಲ್ಲಿ: ವಿದೇಶಿ ಸೇಬುಗಳ ಆಮದಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ದೇಶೀಯವಾಗಿ ಸೇಬು ಬೆಳೆಯುವ ಬೆಳೆಗಾರರಿಗೆ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡಿದೆ. ಸೇಬುಗಳ ಆಮದು ನೀತಿಯಲ್ಲಿ ತಿದ್ದುಪಡಿ ತರುವ ಮೂಲಕ ಅಧಿಸೂಚನೆ ಹೊರಡಿಸಿರುವ ವಿದೇಶಿ ವ್ಯಾಪಾರ ನಿರ್ದೇಶನಾಲಯ ಉತ್ಪಾದನಾ ವೆಚ್ಚ, ಬೆಳೆ ವಿಮೆ, ಸರಕು ಸಾಗಣೆ ವೆಚ್ಚ ಸೇರಿ ಒಂದು ಕಿಲೋ ಸೇಬಿನ ಬೆಲೆ ಕೆಜಿಗೆ 50 ರೂ.ಗಿಂತ ಕಡಿಮೆ ಇದ್ದರೆ ಅದನ್ನು ಆಮದು ಮಾಡಿಕೊಳ್ಳುವಂತಿಲ್ಲ ಎಂದು ಅಧಿಸೂಚನೆಯಲ್ಲಿ …

Read More »

ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ಚಿತ್ರದುರ್ಗ‌: ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ, ರಘುರಾಮ ರೆಡ್ಡಿ ಹಾಗೂ ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ವಿರುದ್ಧ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರ ಮತದಾನ ಪ್ರಕ್ರಿಯೆ ಮುಕ್ತಾಯವಾಗುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪಾರೆಡ್ಡಿ ಕಾರಿನಲ್ಲಿ ಮತದಾನ ಕೇಂದ್ರದ ಕಾಂಪೌಂಡ್ ಒಳಗೆ ಬಂದಿದ್ದರು. ಇದಕ್ಕೆ ಕಾಂಗ್ರೆಸ್​ ಅಭ್ಯರ್ಥಿ ವೀರೇಂದ್ರ ಪಪ್ಪಿ ಆಕ್ಷೇಪಿಸಿದ್ದರು. ಈ ಸಂಬಂಧ …

Read More »

ಬಾವಮೈದುನನ್ನು ಕೊಲೆಗೈದ ಬಾವ.!

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದುನರ ನಡುವಿನ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.     ಮೃತರು ಜಮಾಲ್ ಎಂದು ತಿಳಿದುಬಂದಿದೆ. ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ. ಸದ್ಯ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಬ್ಬರ ಮನೆಗಳು ಅಕ್ಕಪಕ್ಕದಲ್ಲಿದ್ದು ಸಣ್ಣ ಮಕ್ಕಳೊಳಗಿನ ವೈಮನಸ್ಸಿನ ವಿಚಾರವಾಗಿ ಇಂದು ಬೆಳಗ್ಗೆ ಜಮಾಲ್ ಮತ್ತು ಸುಹೈಬ್ ನಡುವೆ …

Read More »

ಬೆಳಗಾವಿಯಲ್ಲಿ ಇಂದು ಮುಂಜಾನೆ ಸುರಿದ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಬೆಳಗಾವಿ: ಇಂದು ಬೆಳಗಿನ ಜಾವ ಸುರಿದ ಧಾರಾಕಾರ ಮಳೆಯಿಂದಾಗಿ ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕುರುಳಿ, ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಘಟನೆ ತಾಲೂಕಿನ ಕುರಿಹಾಳ ಗ್ರಾಮದಲ್ಲಿ ನಡೆದಿದೆ. ವೀರಭದ್ರೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ನೆರಳಿನ‌ ವ್ಯವಸ್ಥೆ ಕಲ್ಪಿಸಲು ನಿರ್ಮಿಸಿದ್ದ ತಗಡಿನ ಶೆಡ್ ಕೂಡ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಳಗಾವಿ ನಗರ ಸೇರಿ ಜಿಲ್ಲೆ ವಿವಿಧೆಡೆ ಬೆಳಗ್ಗೆಯಿಂದ ತುಂತುರು ಮಳೆ ಸುರಿಯುತ್ತಿದೆ. ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಮುರಿದು …

Read More »

ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಳ್ಳುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಳ್ಳುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ ಚುನಾವಣೆ ಕಣಕ್ಕಿಳಿದಿರುವ ಕುಮಾರಸ್ವಾಮಿ ಅವರ ಆರೋಗ್ಯ ಕೈಕೊಟ್ಟಿದ್ದು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯಲಿರುವ ಅವರ ಅಲ್ಲಿ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ. ಕಳೆದ ಮೂರು ತಿಂಗಳುಗಳಿಂದ ಚುನಾವಣೆ ಪ್ರಚಾರ ಕಾರ್ಯದಲ್ಲಿ ಎಡೆಬಿಡದೆ ನಿರತರಾಗಿದ್ದ ಕುಮಾರಸ್ವಾಮಿ ಅವರು ಅನಾರೋಗ್ಯದಿಂದಾಗಿ 20 ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಅಲ್ಲಿಂದಲೇ …

Read More »

ಗಾಲಿ ಜನಾರ್ದನ ರೆಡ್ಡಿ ವಿರುದ್ಧ FIR ದಾಖಲ

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ FIR ದಾಖಲಿಸಲಾಗಿದೆ. ರಾಜ್ಯ ವಿಧಾನಸಭೆಗೆ ಬುಧವಾರ ನಡೆದ ಚುನಾವಣೆಯ ಮತದಾನದ ವೇಳೆ ಜನಾರ್ದನ ರೆಡ್ಡಿಯವರು ಮತಗಟ್ಟೆ ಬಳಿ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ಅವರ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಂಗಾವತಿ ಕ್ಷೇತ್ರದ ಲಕ್ಷ್ಮೀ ಕ್ಯಾಂಪ್ ನ ನಿಷೇಧಿತ ಪ್ರದೇಶದಲ್ಲಿ ಜನಾರ್ದನ ರೆಡ್ಡಿ ಅವರು ನೀತಿ ಸಂಹಿತೆ ಉಲ್ಲಂಘಿಸಿ ತಮ್ಮ …

Read More »