Breaking News
Home / ರಾಷ್ಟ್ರೀಯ (page 318)

ರಾಷ್ಟ್ರೀಯ

CBSE 12ನೇ ತರಗತಿ ಫಲಿತಾಂಶ ಪ್ರಕಟ: ಶೇ.87.33 ವಿದ್ಯಾರ್ಥಿಗಳು ಉತ್ತೀರ್ಣ

ಹೊಸದಿಲ್ಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಶುಕ್ರವಾರ 12ನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇಕಡಾ 87.33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಿಬಿಎಸ್‌ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.   ಈ ವರ್ಷದ ಜನವರಿ 2 14 ರ ನಡುವೆ 10 …

Read More »

ಹಾಡಹಗಲೇ ಅಟ್ಟಾಡಿಸಿ ಬಸ್ ಡ್ರೈವರ್ ಭೀಕರ ಹತ್ಯೆ

ಕಲಬುರಗಿ: ಹಾಡಹಗಲೇ ಬಸ್ ನಿಲ್ದಾಣದಲ್ಲಿ ಚಾಲಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೆಕೆಆರ್‌ಟಿಸಿ ಬಸ್ ಚಾಲಕ ನಾಗಯ್ಯಸ್ವಾಮಿ (45) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೂಲತಃ ಅಫಜಲಪುರ ತಾಲೂಕಿನ‌ ಮದರಿ ಗ್ರಾಮದ ನಾಗಯ್ಯಸ್ವಾಮಿ, ಸದ್ಯ ಕಲಬುರಗಿಯ ಮಹಾದೇವ ನಗರದಲ್ಲಿ ವಾಸವಿದ್ದರು. ಕಳೆದ 20 ವರ್ಷಗಳಿಂದ ಬಸ್ ಚಾಲಕನಾಗಿ‌ ಸೇವೆ ಸಲ್ಲಿಸುತ್ತಿದ್ದ ನಾಗಯ್ಯಸ್ವಾಮಿ ಅವರು ಕಲಬುರಗಿ ಡಿಪೋ ಸಂಖ್ಯೆ 3ರಲ್ಲಿ ಸೂಪರ್ ಮಾರ್ಕೆಟ್​ನಿಂದ …

Read More »

2024ರ ಚುನಾವಣೆಗೆ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಮಂತ್ರ: ಶರದ್ ಪವಾರ್, ಉದ್ಧವ್ ಠಾಕ್ರೆ ಭೇಟಿಯಾದ ನಿತೀಶ್ ಕುಮಾರ್

ಮುಂಬೈ: ಮುಂದಿನ ವರ್ಷದ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಹಾಗೂ ಬಲಪಡಿಸುವ ಕುರಿತಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್​ಕುಮಾರ್ ಡಿಸಿಎಂ ತೇಜಸ್ವಿ ಯಾದವ್​ರೊಂದಿಗೆ ಗುರುವಾರ ಮುಂಬೈನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಎನ್​​ಸಿಪಿ ರಾಷ್ಟ್ರೀಯ ನಾಯಕ ಶರದ್ ಪವಾರ್ ಅವರ ದಕ್ಷಿಣ ಮುಂಬೈನ ನಿವಾಸದಲ್ಲಿ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಆಡಳಿತ ದೇಶದ ಹಿತಾಸಕ್ತಿಗೆ ತಕ್ಕಂತೆ ಕೆಲಸ …

Read More »

ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಬಾಕಿಯಿದ್ದು, ರಾಜ್ಯಾದ್ಯಂತ ಬೆಟ್ಟಿಂಗ್ ಭರಾಟೆ ಜೋರ

ತುಮಕೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಬಾಕಿಯಿದ್ದು, ರಾಜ್ಯಾದ್ಯಂತ ಬೆಟ್ಟಿಂಗ್ ಭರಾಟೆ ಜೋರಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ಪರ ಬೆಟ್ಟಿಂಗ್ ಕಟ್ಟಲು ಕಾಂಗ್ರೆಸ್ ಕಾರ್ಯಕರ್ತರು ಮುಕ್ತ ಆಹ್ವಾನ ನೀಡಿದ್ದಾರೆ. ಮಧುಗಿರಿ ತಾಲೂಕಿನ ಚೀಲನಹಳ್ಳಿಯಲ್ಲಿ ಜೆಡಿಎಸ್ ಪರ ದುಡ್ಡು ಕೊಟ್ಟೋರಿಗೆ ಕಾಂಗ್ರೆಸ್ ಕಾರ್ಯಕರ್ತರು 80 ಸಾವಿರಕ್ಕೆ 1 ಲಕ್ಷದಂತೆ ಬಾಜಿ ಕಟ್ಟಲು ಕಾರ್ಯಕರ್ತರು ಆಹ್ವಾನ ನೀಡಿದ್ದಾರೆ. ಕೆ ಎನ್ ರಾಜಣ್ಣ ಗೆದ್ದರೆ 80 ಸಾವಿರ, …

Read More »

ನೀವಿದ್ದಲ್ಲಿಂದಲೇ ಚುನಾವಣೆ ಫಲಿತಾಂಶ ವೀಕ್ಷಿಸಿ

ಬೆಂಗಳೂರು: ಕರ್ನಾಟಕ ವಿಧಾನ ಸಭೆಗೆ ಬುಧವಾರ ನಡೆದ ಚುನಾವಣೆಯ ಮತ ಎಣಿಕೆ ಶನಿವಾರ ನಡೆಯಲಿದೆ. 224 ಕ್ಷೇತ್ರಗಳಿಗೂ ಚುನಾವಣೆ ನಡೆದಿದ್ದು, ಪ್ರಮುಖ ರಾಜಕೀಯ ಪಕ್ಷಗಳೊಂದಿಗೆ ಹಲವು ಪಕ್ಷೇತರರೂ ಕಣದಲ್ಲಿದ್ದಾರೆ. ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಚುನಾವಣೆ ಫಲಿತಾಂಶಕ್ಕಾಗಿ ರಾಜ್ಯದ 7 ಕೋಟಿ ಜನರೂ ಖಾತರಿಂದ ಕಾಯುತ್ತಿದ್ದಾರೆ. ಆದರೆ ಕೆಲವರು ಪ್ರಯಾಣದಲ್ಲಿರುತ್ತಾರೆ. ಕೆಲವರು ಬೇರೆ ಬೇರೆ ಕೆಲಸದಲ್ಲಿರುತ್ತಾರೆ. ಅಂತವರು ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಯನ್ನು ಇದ್ದಲ್ಲಿಂದಲೇ ಪಡೆಯಲು …

Read More »

ಬಾವಿಗೆ ಬಿದ್ದು ಮೂವರ ಸಾವು

ಶಿರಸಿ: ಬಾವಿಗೆ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನ ಕಟ್ಟ ಗ್ರಾಮದಲ್ಲಿ ಘಟನೆ. ಗೋವಿಂದ ಸೋಮಯ್ಯ ಪೂಜಾರಿ, ಗಣೇಶ್ ರಾಮದಾಸ್ ಶೇಟ್, ಸುರೇಶ್ ನಾಯರ್ ಮೃತರು. ಬಾವಿಯಲ್ಲಿ ಬಿದ್ದ ಪಂಪ್ ಸೆಟ್ ತೆಗೆಯಲು ಬಾವಿಗೆ ಒಬ್ಬರು ಇಳಿದಿದ್ದರು ಆದರೆ, ವ್ಯಕ್ತಿ ಮೇಲಕ್ಕೆ ಬರದ ಕಾರಣ ರಕ್ಷಣೆಗೆ ಇಳಿದಿದ್ದ ಇಬ್ಬರು ಸೇರಿ ಮೂವರೂ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Read More »

ಹೈದರಾಬಾದ್​ನಲ್ಲಿ ಐಪಿಎಲ್ ಕ್ರಿಕೆಟ್​ ಟೂರ್ನಿ ಸಂದರ್ಭದಲ್ಲಿ ಆನ್‌ಲೈನ್ ಬೆಟ್ಟಿಂಗ್​ ನಡೆಸುತ್ತಿದ್ದ ಮೂರು ಅಂತಾರಾಜ್ಯ ಕ್ರಿಕೆಟ್ ಬೆಟ್ಟಿಂಗ್ ಜಾಲ​ಗಳನ್ನು ಪತ್ತೆ ಹಚ್ಚಲಾಗಿದೆ.

ಹೈದರಾಬಾದ್ (ತೆಲಂಗಾಣ): ತೆಲಂಗಾಣದ ಸೈಬರಾಬಾದ್ ಪೊಲೀಸರು ಏಕಕಾಲಕ್ಕೆ ಮೂರು ಅಂತಾರಾಜ್ಯ ಕ್ರಿಕೆಟ್ ಬೆಟ್ಟಿಂಗ್ ಜಾಲ​ಗಳನ್ನು ಬೇಧಿಸಿದ್ದಾರೆ. ಐಪಿಎಲ್ ಕ್ರಿಕೆಟ್​ ಟೂರ್ನಿ ಸಂದರ್ಭದಲ್ಲಿ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಆನ್‌ಲೈನ್ ಬೆಟ್ಟಿಂಗ್​ ನಡೆಸುತ್ತಿದ್ದ ಮೂರು ಗ್ಯಾಂಗ್‌ಗಳ ಏಳು ಜನರನ್ನು ಬಂಧಿಸಲಾಗಿದ್ದು, ಇನ್ನೂ ಮೂವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೈಬರಾಬಾದ್ ಪೊಲೀಸ್​ ಕಮಿಷನರ್​ ಸ್ಟೀಫನ್ ರವೀಂದ್ರ ಅವರೊಂದಿಗೆ ಶಂಶಾಬಾದ್ ಮತ್ತು ರಾಜೇಂದ್ರನಗರ ಡಿಸಿಪಿಗಳಾದ ನಾರಾಯಣ ರೆಡ್ಡಿ, ಜಗದೀಶ್ವರರೆಡ್ಡಿ, ಎಸ್‌ಒಟಿ ಡಿಸಿಪಿ …

Read More »

ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸುಳಿವು, ದಿಢೀರ್​ನೆ ವಿದೇಶಕ್ಕೆ ತೆರಳಿದ ಜೆಡಿಎಸ್ ನಾಯಕ ಕುಮಾರಸ್ವಾಮಿ, ಬಹುಮತದ ಸರ್ಕಾರ ರಚನೆ ವಿಶ್ವಾಸದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು.

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಮತದಾನ ಪೂರ್ಣವಾಗುತ್ತಿದ್ದಂತೆಯೇ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯಗಳಲ್ಲಿ ಅಧಿಕಾರ ಪಡೆಯುವ ಲೆಕ್ಕಾಚಾರ ಶುರುವಾಗಿದ್ದು,ಈ ನಡುವೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದಿಢೀರ್​​ ವಿದೇಶಕ್ಕೆ ತೆರಳಿರುವುದು ವ್ಯಾಪಕ ಕುತೂಹಲಕ್ಕೆ ಕಾರಣವಾಗಿದೆ.   ಈ ಬಾರಿ ಕರ್ನಾಟಕದಲ್ಲಿ ಮರಳಿ ಅಧಿಕಾರ ಹಿಡಿಯುವ ಲೆಕ್ಕಾಚಾರ ರಾಜ್ಯದ ಕೆಲ ಬಿಜೆಪಿ ನಾಯಕರಲ್ಲಿದ್ದರೂ,ಅತಂತ್ರ ವಿಧಾನಸಭೆಯ ಸಾಧ್ಯತೆಯನ್ನು ಕಂಡಿರುವ ಬಿಜೆಪಿ ವರಿಷ್ಠರು ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಕಸರತ್ತು ಆರಂಭಿಸಿದ್ದು, ಇದರ ಭಾಗವಾಗಿ ಕುಮಾರಸ್ವಾಮಿ …

Read More »

ಶಿವಸೇನೆ ಪಕ್ಷದ ಹೆಸರು, ಚಿಹ್ನೆ ಹಂಚಿಕೆ ಕೇಸ್​: ನಾಳೆ ಸುಪ್ರೀಂಕೋರ್ಟ್​ನಿಂದ ಮಹತ್ವದ ತೀರ್ಪು

ನವದೆಹಲಿ: ಕಳೆದ ವರ್ಷ ಉಂಟಾದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ತೀರ್ಪು ಹೊರ ಬೀಳಲಿದೆ. ಕೇಂದ್ರ ಚುನಾವಣಾ ಆಯೋಗವು ಶಿವಸೇನೆಯ ಬಿಲ್ಲು ಮತ್ತು ಬಾಣದ ಪಕ್ಷದ ಚಿಹ್ನೆ ಮತ್ತು ಪಕ್ಷದ ಹೆಸರಿಗೆ ಸರ್ವೋಚ್ಛ ನ್ಯಾಯಾಲಯ ತನ್ನ ಆದೇಶ ನೀಡಲಿದೆ. ಇದರಿಂದ ಉದ್ಧವ್​ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣದಲ್ಲಿ ಯಾವುದು ನಿಜವಾದ ಶಿವಸೇನೆ ಎಂಬುವುದು ಇತ್ಯರ್ಥವಾಗಲಿದೆ. ಕಳೆದ ವರ್ಷ ಶಿವಸೇನೆ ನಾಯಕ ಏಕನಾಥ್​ ಶಿಂಧೆ ಬಂಡಾಯದ ಬಾವುಟ …

Read More »

ನಾಡಿದ್ದು ಚುನಾವಣಾ ತೀರ್ಪು.. ಸಿದ್ದರಾಮಯ್ಯ- ಸುರ್ಜೇವಾಲಾ ಮಹತ್ವದ ಮಾತುಕತೆ

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲಾ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇಂದು ಶಿವಾನಂದವೃತ್ತ ಸಮೀಪ ಇರುವ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ್ದ ಸುರ್ಜೇವಾಲಾ ಅವರು ಮಾತುಕತೆ ನಡೆಸಿದರು. ಮತದಾನೋತ್ತರ ಸಮೀಕ್ಷೆ ಕಾಂಗ್ರೆಸ್​ ಪರವಾಗಿದ್ದು, ಮುಂದಿನ‌ ತಂತ್ರಗಾರಿಕೆ ಸಂಬಂಧ ಉಭಯ ನಾಯಕರು ಚರ್ಚಿಸಿದರು. ಬುಧವಾರ ರಾತ್ರಿಯೇ ಮೈಸೂರಿನಿಂದ ಸಿದ್ದರಾಮಯ್ಯ ವಾಪಸಾಗಿದ್ದು, ಖಾಸಗಿ ಹೋಟೆಲ್​ನಲ್ಲಿ ಸುರ್ಜೇವಾಲಾ ಜತೆ ಚರ್ಚಿಸಿದ್ದಾರೆ ಎಂಬ ಮಾಹಿತಿ ಇದೆ. …

Read More »