Breaking News

ರಾಷ್ಟ್ರೀಯ

ನಾಗರಹೊಳೆ ಅಭಯಾರಣ್ಯದಲ್ಲಿ ಕಳ್ಳ ಬೇಟೆಗಾರರ ಮೇಲೆ ಹದ್ದಿನ ಕಣ್ಣಿಡಲಿವೆ ಗರುಡ ಸಿಸಿಟಿವಿ ಕ್ಯಾಮೆರಾ

ಮೈಸೂರು: ನಾಗರಹೊಳೆ ಅಭಯಾರಣ್ಯ ವ್ಯಾಪ್ತಿ ಕಳ್ಳ ಬೇಟೆಗಾರರ ಚಲನವಲನ ಅರಿಯಲು ಹಾಗೂ ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಅತ್ಯಾಧುನಿಕ ತಂತ್ರಜ್ಞಾನದ ಗರುಡ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗುತ್ತಿದೆ.   ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ನಾಗರಹೊಳೆ ಅಭಯಾರಣ್ಯದಲ್ಲಿ ಸಿಸಿಟಿವಿ ಕ್ಯಾಮೆರಾ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ. ಸುಮಾರು 32 ಲಕ್ಷ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕ್ಯಾಮೆರಾ ಟವರ್ ​ನಿರ್ಮಿಸಲಾಗುತ್ತಿದ್ದು, ಈ ಗರುಡ ಸಿಸಿಟಿವಿ ಕ್ಯಾಮೆರಾದ ವಿಶೇಷತೆ, ಕಾರ್ಯವೈಖರಿ ಕುರಿತು …

Read More »

ಎಣ್ಣೆ ಪಾರ್ಟಿ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು: ಬೆಳಗಾವಿ ಎಸ್ಪಿ ಆದೇಶ

ಬೆಳಗಾವಿ: ಕರ್ತವ್ಯದ ವೇಳೆ ಎಣ್ಣೆ ಪಾರ್ಟಿ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದ ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು, 112 ಪೆಟ್ರೋಲಿಂಗ್ ವಾಹನದಲ್ಲಿ ಎಣ್ಣೆ, ಮಾಂಸದೂಟ ಮಾಡಿದ್ದ ಸಿಬ್ಬಂದಿ ಎಚ್.ಎಮ್‌. ಕಮತೆ ಮತ್ತು ದುಮಾಳ ಅವರನ್ನು ಎಸ್ಪಿ ಅಮಾನತು ಮಾಡಿದ್ದಾರೆ. ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಎಸ್ಪಿ ಡಾ. ಭೀಮಾಶಂಕರ ಗುಳೇದ …

Read More »

‘ಪಾಪಿ’ಗಳಿಂದಾಗಿ ಭಾರತ ತಂಡಕ್ಕೆ ವಿಶ್ವಕಪ್​ ಸೋಲಾಗಿದೆ: ಮೋದಿ ಟೀಕಿಸಿದ ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ್ತಾ (ಪಶ್ಚಿಮಬಂಗಾಳ): ಟೀಂ ಇಂಡಿಯಾ ಸೋಲಿಗೆ ಅಪಶಕುನ (ಪನೌತಿ)ಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿಯನ್ನು ಹೀಯಾಳಿಸಿದ್ದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಬಳಿಕ, ಇದೀಗ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಸರದಿಯಾಗಿದೆ. ‘ಪಾಪಿಗಳು’ ಭಾಗಿಯಾಗಿದ್ದ ಪಂದ್ಯ ಬಿಟ್ಟು ಉಳಿದೆಲ್ಲಾ ಮ್ಯಾಚ್​ಗಳಲ್ಲಿ ಭಾರತ ತಂಡ ಗೆದ್ದಿದೆ. ಅಹಮದಾಬಾದ್​ ಬದಲಿಗೆ, ಈಡನ್​ ಗಾರ್ಡನ್ಸ್​​ ಅಥವಾ ವಾಂಖೆಡೆಯಲ್ಲಿ ಪಂದ್ಯ ಆಯೋಜಿಸಿದ್ದರೆ ನಾವು ವಿಶ್ವಕಪ್​ ಗೆಲ್ಲುತ್ತಿದ್ದೆವು ಎಂದು ಟೀಕಿಸಿದ್ದಾರೆ. ಇಲ್ಲಿನ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ …

Read More »

ಸಿದ್ದಗಂಗಾ ಮಠದ ಕಾರ್ಯಕ್ರಮಕ್ಕೆ ಸೋಮಣ್ಣರಿಂದ ಆಹ್ವಾನ: ನಾನು, ರಾಜಣ್ಣ ಹೋಗುತ್ತಿದ್ದೇವೆ ಎಂದ ಸಚಿವ ಪರಮೇಶ್ವರ್

ತುಮಕೂರು: ಡಿಸೆಂಬರ್ 6ರಂದು ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿರುವ ಮಠದ ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿ. ಸೋಮಣ್ಣ ನಮ್ಮನ್ನು ಆಹ್ವಾನ ಮಾಡಿದ್ದಾರೆ, ನಾನು ಮತ್ತು ರಾಜಣ್ಣ ಹೋಗುತ್ತಿದ್ದೇವೆ ಎಂದು ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.   ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಮಣ್ಣ, ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಅನ್ನೋ ವಿಚಾರವು ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ನಡೆಯುತ್ತೆ. ನಮ್ಮ ಹಂತದಲ್ಲಿ ನಡೆಯೋದಿಲ್ಲ ಎಂದರು. ಬಳಿಕ ತುಮಕೂರು ಲೋಕಸಭಾ ಚುನಾವಣೆ ಕುರಿತ ಪಕ್ಷದ ಸಭೆ …

Read More »

ಕ್ರಿಕೆಟ್ ಮ್ಯಾಚ್​ನಲ್ಲಿ ಜಗಳ; ಗಲಾಟೆ ಬಿಡಿಸಲು ಹೋದವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ದೊಡ್ಡಬಳ್ಳಾಪುರ : ಕ್ರಿಕೆಟ್ ಮ್ಯಾಚ್​ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದು, ಈ ಗಲಾಟೆಯನ್ನು ಬಿಡಿಸಲು ಹೋದ ಯುವಕನ ಮೇಲೆಯೇ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಬಳಿ ನಿನ್ನೆ (ಬುಧವಾರ) ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಅರವನಹಳ್ಳಿ ಗುಡ್ಡದಹಳ್ಳಿಯ ಪೃಥ್ವಿರಾಜ್ (26) ಗಂಭೀರವಾಗಿ ಗಾಯಗೊಂಡಿದ್ದಾನೆ. ಕರೇನಹಳ್ಳಿಯ ಉಲ್ಲಾಸ್ ಎಂಬ ಯುವಕ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಭಾನುವಾರ ಉಲ್ಲಾಸ್ ಮತ್ತು …

Read More »

ಆಸೀಸ್​ನ ‘ಜೋಶ್’​ ​ಬ್ಯಾಟಿಂಗ್​​, ಟೀಮ್​ ಇಂಡಿಯಾಗೆ 209 ರನ್​ಗಳ ಗುರಿ

ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಟಿ20 ಸರಣಿಯ ಮೊದಲ ಪಂದ್ಯದ ಫಸ್ಟ್​ ಇನ್ನಿಂಗ್ಸ್​ ಮುಕ್ತಾಯಗೊಂಡಿದ್ದು, ಟಾಸ್​ ಸೋತು ಮೊದಲು ಬ್ಯಾಟ್​ ಮಾಡಿದ ಆಸೀಸ್ ಜೋಶ್​ ಇಂಗ್ಲಿಸ್​ ಅವರ ಶತಕದ ನೆರವಿನಿಂದ​ ನಿಗದಿತ ಓವರ್​ಗಳ ಅಂತ್ಯಕೆ 3 ವಿಕೆಟ್ ನಷ್ಟಕ್ಕೆ 208 ರನ್​ಗಳ ಕಲೆ ಹಾಕಿದ್ದು, ಭಾರತಕ್ಕೆ 209 ​ರನ್​ ಗುರಿ ನೀಡಿದೆ.   ವಿಶಾಖಪಟ್ಟಣದ ಡಾ. ವೈ.ಎಸ್. ರಾಜಶೇಖರ್ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ …

Read More »

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಇಡಿ ಸಮನ್ಸ್

ಚೆನ್ನೈ (ತಮಿಳುನಾಡು): ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ತಮಿಳುನಾಡಿನ ತಿರುಚಿರಾಪಳ್ಳಿ ಮೂಲದ ಆಭರಣ ಸಮೂಹವೊಂದರ ವಿರುದ್ಧ 100 ಕೋಟಿ ರೂಪಾಯಿ ಪೋಂಜಿ ಮತ್ತು ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪ್ರಕಾಶ್ ರಾಜ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ತಿರುಚಿರಾಪಳ್ಳಿ ಮೂಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್ ಜ್ಯುವೆಲ್ಲರ್ಸ್ ವಿರುದ್ಧ ಇಡಿ ತನಿಖೆ ನಡೆಸುತ್ತಿದೆ. ನವೆಂಬರ್ …

Read More »

ದೇಶದಲ್ಲಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ- ಅರವಿಂದ​ ಲಿಂಬಾವಳಿ

ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆ ಪ್ರವಾಸ ಮಾಡಲಿದ್ದಾರೆ. ಇನ್ನೊಂದೆಡೆ, ಬರ ಬರಿಹಾರ ವಿಚಾರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಇಂದು ದೆಹಲಿಗೆ ತೆರಳಿ ಕೇಂದ್ರದ ನಾಯಕರನ್ನು ಭೇಟಿಯಾಗಲಿದ್ದಾರೆ. ಇದರೊಂದಿಗೆ ರಾಜ್ಯದ ಪ್ರಮುಖ ಸುದ್ದಿಗಳ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್​​ ಲೈವ್ ಫಾಲೋ ಮಾಡಿ.Karnataka News Live : ನಿಗಮ ಮಂಡಳಿಗೆ ನೇಮಕಾತಿ ಪ್ರಕ್ರಿಯೆ ಸಂಬಂಧ …

Read More »

ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್​ ಸದಸ್ಯನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಹಾವೇರಿ: ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್​ ಸದಸ್ಯನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸವಣೂರು ತಾಲೂಕಿನ ಕಾರಡಗಿ ಗ್ರಾಮದ ಗ್ರಾಮ ಪಂಚಾಯತ್​ ಸದಸ್ಯ ಮಹಮ್ಮದ್ ಜಾಪರ್​ ಸಂಶಿ ಬಂಧಿತ ಆರೋಪಿ. ದಾದಾಪೀರ್​ ಲೋಹರ್​ ಎಂಬವರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಮನೆ ಮಂಜೂರಾಗಿತ್ತು. ಈ ಮನೆಗೆ ಜಿಪಿಎಸ್ ಮಾಡಿಸಲು ಮಹಮ್ಮದ್ ಜಾಪರ್​ ಸಂಶಿ 40 ಸಾವಿರ ರೂಪಾಯಿ ಲಂಚ ಬೇಡಿಕೆಯಿಟ್ಟದ್ದ‌ರು. 20 ಸಾವಿರ ರೂಪಾಯಿ ಲಂಚ …

Read More »

ಪೊಲೀಸ್ ಇನ್​ಸ್ಪೆಕ್ಟರ್ ಬ್ಯಾಂಕ್‌​ ಖಾತೆಗೆ ಆನ್​ಲೈನ್ ವಂಚಕರ ಕನ್ನ: ₹8.25 ಲಕ್ಷ ವರ್ಗಾವಣೆ

ಹುಬ್ಬಳ್ಳಿ: ಪೊಲೀಸ್ ಇನ್​ಸ್ಪೆಕ್ಟರ್​ ಒಬ್ಬರ ಖಾತೆಗೆ ಆನ್​ಲೈನ್ ವಂಚಕರು ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಧಾರವಾಡ ಉಪನಗರ ಠಾಣೆ ಇನ್​ಸ್ಪೆಕ್ಟರ್ ದಯಾನಂದ ಶೇಗುಣಿಸಿ ಅವರ ಬ್ಯಾಂಕ್ ಖಾತೆಯಲ್ಲಿದ್ದ 8.25 ಲಕ್ಷ ಹಣವನ್ನು ಅಪರಿಚಿತರು ವರ್ಗಾವಣೆ ಮಾಡಿಕೊಂಡಿದ್ದು, ಈ ಕುರಿತಂತೆ ಅವರು ಹುಬ್ಬಳ್ಳಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಯಾನಂದ ಯಾರೊಂದಿಗೂ ಮಾಹಿತಿ ಹಂಚಿಕೊಂಡಿಲ್ಲ. ಆದರೂ ಅವರ ಹಣ ವರ್ಗಾವಣೆಯಾಗಿದೆ. ಬ್ಯಾಂಕಿನವರು ನೆಟ್ ಸೆಕ್ಯೂರಿಟಿ ಬಳಸದೆ ನಿಷ್ಕಾಳಜಿಯಿಂದಲೋ‌ ಅಥವಾ …

Read More »