Breaking News
Home / ರಾಷ್ಟ್ರೀಯ (page 322)

ರಾಷ್ಟ್ರೀಯ

ಬುಧವಾರ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ

ಬೆಳಗಾವಿ:  ಬುಧವಾರ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. 1951 ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷೆನ್ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3 (ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ …

Read More »

AI ಸೃಷ್ಟಿ: ಭಾರತದ ಕ್ರಿಕೆಟಿಗರು ಪ್ರಾಯಸ್ಥರಾದಾಗ ಹೀಗಿರ್ತಾರೆ ನೋಡಿ..!

ಮುಂಬೈ: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌ ಇತ್ತೀಚಿನ ಕೆಲ ದಿನಗಳಿಂದ ವಿಶ್ವದಾದ್ಯಂತ ಸುದ್ದಿಯಲ್ಲಿದೆ. ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಹೊಸ ಹೊಸ ಕ್ರಿಯೆಟಿವ್‌ ಪೋಸ್ಟ್‌ಗಳು ವೈರಲ್‌ ಆಗುತ್ತಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ವಿಶ್ವದ ಶ್ರೀಮಂತ ವ್ಯಕ್ತಿಗಳು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುತ್ತಿರುವ ಚಿತ್ರಗಳು ವೈರಲ್‌ ಆಗಿದ್ದವು. ಅದರಲ್ಲಿ ಎಲಾನ್‌ ಮಸ್ಕ್‌ನಿಂದ ಹಿಡಿದು ಭಾರತದ ಮುಖೇಶ್‌ ಅಂಬಾನಿ, ರತನ್‌ ಟಾಟಾ ಅವರೆಲ್ಲ ಜಿಮ್‌ನಲ್ಲಿರುವಂತೆ ಸೃಷ್ಟಿಸಲಾಗಿತ್ತು. ಆದರೆ ಈಗ ಭಾರತೀಯ ಕ್ರಿಕೆಟ್‌ ತಂಟದ ಆಟಗಾರರು …

Read More »

ಮುಖ್ಯಮಂತ್ರಿ ಏಕನಾಥ ಶಿಂಧೆ ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸೋಮವಾರ ಭೇಟಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ ಅವರು ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಬೆಳ್ತಂಗಡಿ ಕ್ಷೇತ್ರದ ಜನತೆಯ ಪರವಾಗಿ ಶಾಸಕ ಹರೀಶ್‌ ಪೂಂಜ ಸ್ವಾಗತಿಸಿದರು. ಧರ್ಮಸ್ಥಳ ಕ್ಷೇತ್ರದ ಪರವಾಗಿ ಡಿ.ಹರ್ಷೇಂದ್ರ ಕುಮಾರ್‌ ಸ್ವಾಗತಿಸಿದರು. …

Read More »

ಶ್ರೀನಿವಾಸ್‌ ಬಿ.ವಿ FIR ವಜಾ ಕೋರಿ ಸುಪ್ರೀಂಗೆ ಮೊರೆ

ನವದೆಹಲಿ: ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ಬಿ.ವಿ. ಅವರು ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ಎಫ್‌ಐಆರ್‌ ವಜಾ ಮಾಡಬೇಕೆಂದು ಅವರು ನ್ಯಾಯವಾದಿ ದೇವದತ್ತ ಕಾಮತ್‌ ಅವರ ಮೂಲಕ ಅರಿಕೆ ಮಾಡಿಕೊಂಡಿದ್ದಾರೆ.   ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠದ ಮುಂದೆ ಪ್ರಕರಣ ವಿಚಾರಣೆಗೆ ಬಂದಿದೆ. ಪ್ರತಿಪಕ್ಷದ ಪ್ರಮುಖ ನಾಯಕರೊಬ್ಬರಿಗೆ ಅಸ್ಸಾಂನಲ್ಲಿ ವಿನಾ ಕಾರಣ ಕಿರುಕುಳ ನೀಡಲಾಗುತ್ತಿದೆ ಎಂದು ಕಾಮತ್‌ ನ್ಯಾಯಪೀಠದ ಮುಂದೆ …

Read More »

ಸೋಲು-ಗೆಲುವಿಗೆ ಒಂದೊಂದು ಮತವೂ ನಿರ್ಣಾಯಕ

ಬೆಂಗಳೂರು: ಕೇವಲ ಒಂದು ಓಟಿನಿಂದ ಒಬ್ಬರು ಗೆದ್ದು, ಇನ್ನೊಬ್ಬರು ಸೋತಿರುವ ರೋಚಕ ಇತಿಹಾಸ ರಾಜ್ಯ ಹಾಗೂ ದೇಶದಲ್ಲಿದೆ. ಕೇವಲ ಒಂದು ಮತದಿಂದ ಸೋತವರು, ಅತಿ ಕಡಿಮೆ ಅಂತರದಿಂದ ಗೆದ್ದವರ ಕಥೆ ಮತ್ತು ವ್ಯಥೆಗೆ ಸುದೀರ್ಘ‌ ಇತಿಹಾಸವಿದೆ. ಪ್ರಜಾಪ್ರಭುತ್ವ ಎಂಬ ಭವ್ಯ ಬಂಗಲೆಗೆ ಮತಗಳೇ ಅಡಿಪಾಯ. ಕಟ್ಟಡ ಗಟ್ಟಿಯಾಗಿರಲು ಒಂದೊಂದು ಇಟ್ಟಿಗೆಯೂ ಮುಖ್ಯ. ಅದರಂತೆ ಪ್ರಜಾಪ್ರಭುತ್ವ ಗಟ್ಟಿಗೊಳ್ಳಬೇಕಾದರೆ ಒಂದೊಂದು ಮತವೂ ನಿರ್ಣಾಯಕವಾಗುತ್ತದೆ. ಜನತಂತ್ರ ವ್ಯವಸ್ಥೆಯಲ್ಲಿ ಒಂದೊಂದು ಮತಕ್ಕೂ ಮೌಲ್ಯವಿದೆ. ಅಭ್ಯರ್ಥಿಗಳ ಸೋಲು-ಗೆಲುವು …

Read More »

ಎಲೆಕ್ಷನ್ ಫೈಟ್: ಬಿಜೆಪಿ ಅಭ್ಯರ್ಥಿ,ಕಾಂಗ್ರೆಸ್ ಶಾಸಕನ ಪತ್ನಿ ಮೆಲೆ ದಾಳಿಯ ಆರೋಪ-ಪ್ರತ್ಯಾರೋಪ

ವಿಜಯಪುರ: ವಿಧಾನಸಭೆ ಚುನಾವಣೆಯ ಮತದಾನಕ್ಕೆ ಒಂದು ದಿನ ಬಾಕಿ ಇರುವಂತೆ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಕಾಂಗ್ರೆಸ್ ಅಭ್ಯರ್ಥಿಯ ಸೊಸೆ-ಶಾಸಕರೊಬ್ಬರ ಪತ್ನಿಯ ಮೆಲೆ ದಾಳಿ ನಡೆದಿರುವ ಆರೋಪ ಕೇಳಿ ಬಂದಿವೆ. ಎರಡೂ ಪ್ರಕರಣದಲ್ಲಿ ಪೊಲೀಸ್ ಠಾಣೆಗೆ ಯಾರೂ ದೂರು ನೀಡಿಲ್ಲ. ಆದರೆ ಎರಡೂ ಪ್ರಕರಣಗಳಲ್ಲಿ ಬಾಧಿತ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಸದರಿ ಘಟನೆಯ ಕುರಿತು ಮಾಹಿತಿ ನೀಡಲು ಎಂ.ಬಿ.ಪಾಟೀಲ ಮಂಗಳವಾರ ಬೆಳಿಗ್ಗೆ 9-15 ಕ್ಕೆ ನಗರದಲ್ಲಿರುವ …

Read More »

ಅಭ್ಯರ್ಥಿಗಳೂ ಕಾವಲು ಕಾಯಬಹುದು..’: ಈ ಬಾರಿ ಮತಯಂತ್ರ ಸುರಕ್ಷತೆಗೆ ಹೊಸ ವ್ಯವಸ್ಥೆ

ಮತದಾನ ನಡೆದ ಬಳಿಕ ಮತ ಯಂತ್ರಗಳನ್ನು ಹಿಂದಕ್ಕೆ ತಂದು ಭದ್ರತಾ ಕೊಠಡಿಗಳಲ್ಲಿ ಇರಿಸಲಾಗುತ್ತದೆ, ಆ ಬಳಿಕ ಮತ ಎಣಿಕೆಯಂದು ಅವುಗಳನ್ನು ಹೊರತೆಗೆದು ಎಣಿಕೆ ಮಾಡಲಾಗುತ್ತದೆ. ಡಿಮಸ್ಟರಿಂಗ್‌ ಕೇಂದ್ರಗಳಿಂದ ಭದ್ರತಾ ಕೊಠಡಿಗೆ ಮತಯಂತ್ರ ತರುವಾಗ ಹಾಗೂ ಭದ್ರತಾ ಕೊಠಡಿಗಳಲ್ಲಿ ಇರಿಸಿರುವಾಗ ಕೇವಲ ಕೇಂದ್ರೀಯ ಅರೆ ಮಿಲಿಟರಿ ಪೊಲೀಸ್‌ ಪಡೆ (ಸಿಪಿಎಂಎಫ್)‌ ಭದ್ರತೆ ಕೊಡುವುದು ಸಹಜ. ಈ ಬಾರಿ ಚುನಾವಣಾ ಆಯೋಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರತೆ ನೀಡುವುದು ಹಾಗೂ …

Read More »

ಚಿಕ್ಕೋಡಿ ಚೆಕ್ ಪೋಸ್ಟ್ ನಲ್ಲಿ 15 ಲಕ್ಷ ರೂಗಳನ್ನು ವಶ

ಬೆಳಗಾವಿ : ಚುನಾವಣೆ ಕರ್ತವ್ಯ ನಿರತ ಸಿಬ್ಬಂದಿ ಮತ್ತು ಪೊಲೀಸರು ಚಿಕ್ಕೋಡಿ ಚೆಕ್ ಪೋಸ್ಟ್ ನಲ್ಲಿ 15 ಲಕ್ಷ ರೂಗಳನ್ನು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದಿಂದ ಮಾಂಜರಿಗೆ ಬರುತ್ತಿದ್ದ ವ್ಯಕ್ತಿಯ ಬಳಿಯಿಂದ ಈ ಹಣ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Read More »

ಮುಸ್ಲಿಂ ಕೋಟಾ ಬಗ್ಗೆ ರಾಜಕೀಯ ಹೇಳಿಕೆ ನೀಡದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ಮೀಸಲಾತಿ ಕೋಟಾ ರದ್ದುಪಡಿಸಿರುವ ವಿಷಯ ಸದ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಕೆಲವರು ಈ ವಿಚಾರದಲ್ಲಿ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿರುವ ವಿಚಾರವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದಲ್ಲಿ ಶೇಕಡಾ ನಾಲ್ಕರಷ್ಟು ಮುಸ್ಲಿಂ ಕೋಟಾವನ್ನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತು. ಒಂದು ವಿಷಯದಲ್ಲಿ ನ್ಯಾಯಾಲಯದ ಆದೇಶವಿದ್ದಾಗ ಅದರ ಬಗ್ಗೆ ಒಂದಿಷ್ಟು ಪಾವಿತ್ರ್ಯತೆ ಕಾಯ್ದುಕೊಳ್ಳಬೇಕು ಎಂದು ಕೋರ್ಟ್ …

Read More »

ಕಾರ್‌ನ ಡಿಕ್ಕಿಯಲ್ಲಿತ್ತು 3 ಕೋಟಿ ರೂಪಾಯಿ, ಹಣ ಎಣಿಕೆ ಯಂತ್ರ: ಪುಣೆ ಪೊಲೀಸರಿಂದ ಜಪ್ತಿ

ಪುಣೆ (ಮಹಾರಾಷ್ಟ್ರ): ಪುಣೆ-ಸೊಲ್ಲಾಪುರ ಹೆದ್ದಾರಿಯ ಹಡಪ್ಸರ್ ಪ್ರದೇಶದಲ್ಲಿ 3 ಕೋಟಿ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಮಹತ್ವ ಪಡೆದಿದೆ. ಹಡಪ್ಸರ್ ಪ್ರದೇಶದ ದ್ರಾಕ್ಷಿ ಸಂಶೋಧನಾ ಕೇಂದ್ರದ ಬಳಿ ಅಪರಾಧ ವಿಭಾಗದ ಸಹಾಯದಿಂದ ಪೊಲೀಸರು 3 ಕೋಟಿ 42 ಲಕ್ಷಕ್ಕೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಹಣ ಎಣಿಕೆ ಯಂತ್ರಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಕಾರ್ ಚಾಲಕ ಪ್ರಶಾಂತ ಧನಪಾಲ್ ಗಾಂಧಿ …

Read More »