Breaking News

ರಾಷ್ಟ್ರೀಯ

ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ:ಬಿಸಿ ಪಾಟೀಲ್

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. “ವಿಜಯೇಂದ್ರ …

Read More »

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸಂತ್ರಸ್ತೆ ಭೇಟಿಯಾದ ಡಿಐಜಿ ಸುನೀಲ್ ಕುಮಾರ್ ಮೀನಾ

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲ್ ಕುಮಾರ್ ಮೀನಾ ಅವರು ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಮಾತುಕತೆ ನಡೆಸಿ ಧೈರ್ಯ ತುಂಬಿದರು. ನಗರದ ಬಿಮ್ಸ್ ಆಸ್ಪತ್ರೆಯ ಆವರಣದ ಸಖಿ ಒನ್ ಸ್ಟಾಪ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿಯಾದ ಸುನೀಲ್ ಕುಮಾರ್ ಮೀನಾ ಸತತ ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಏನೆಲ್ಲಾ ಘಟನೆ ನಡೆಯಿತು..? ಯಾರೆಲ್ಲಾ …

Read More »

ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ

ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಡಿ. 19 ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರೊಡನೆ ಚರ್ಚಿಸಲಿದ್ದಾರೆ.   ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಇಬ್ಬರೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಇದೇ ವೇಳೆ …

Read More »

ಬೇರೆ ಪಕ್ಷದವಧಿಯಲ್ಲಿ ಭದ್ರತಾ ಲೋಪ ಆಗಿದ್ದರೆ ಬಿಜೆಪಿ ಸುಮ್ಮನಿರುತ್ತಿರಲಿಲ್ಲ: ರಾವತ್‌

ನವದೆಹಲಿ: ಒಂದು ವೇಳೆ ಬೇರೆ ಪಕ್ಷ ಅಧಿಕಾರದಲ್ಲಿದ್ದ ವೇಳೆ ಸಂಸತ್‌ ಭದ್ರತಾ ಲೋಪ ನಡೆದಿದ್ದರೆ ಬಿಜೆಪಿ ಪಕ್ಷ ಇಡೀ ದೆಹಲಿಯನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತಿತ್ತು ಎಂದು ಶಿವಸೇನಾ ಸಂಸದ ಸಂಜಯ್‌ ರಾವತ್‌ ಕಿಡಿ ಕಾರಿದ್ದಾರೆ. ಈಚೆಗೆ ಸಂಸತ್‌ ಭವನದಲ್ಲಿ ನಡೆದ ಭದ್ರತಾ ಲೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು. …

Read More »

ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಗೃಹ ಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರು : ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.   ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಬಗ್ಗೆ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೆ ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ …

Read More »

ಮಹಿಳೆ ಮೇಲಿನ ಅಮಾನವೀಯ ಹಲ್ಲೆ ಮಾಡಿದ ಬೆಳಗಾವಿ ಘಟನೆ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು.

ನವದೆಹಲಿ: ಮಹಿಳೆ ಮೇಲಿನ ಅಮಾನವೀಯ ಹಲ್ಲೆ ಮಾಡಿದ ಬೆಳಗಾವಿ ಘಟನೆ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ಈ ಅಮಾನವೀಯ ಪ್ರಕರಣದ ಬಗ್ಗೆ ಉತ್ತರಪ್ರದೇಶದ ಬಿಜೆಪಿ ಸಂಸದೆ ಕಾಂತಾ ಕರ್​ದಮ್​ ಅವರು ಸದನಕ್ಕೆ ಗಮನಕ್ಕೆ ತಂದರು. ಕರ್ನಾಟಕದಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ರಕ್ಷಣೆ ನೀಡಬೇಕಾದ ಪೊಲೀಸರೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು. ಇದಕ್ಕೆ ಸದನದಲ್ಲಿ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ ಗದ್ದಲ ಶುರು ಮಾಡಿದರು. ಇದರ ಮಧ್ಯೆಯೂ ಸಂಸದೆ ಮಹಿಳೆಯ ಪರವಾಗಿ ಮಾತನಾಡಿ, ಮಹಿಳೆಯ …

Read More »

ಮಲ್ಟಿ ಬ್ರ್ಯಾಂಡ್ ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಗೆ ಸಚಿವ ಚಲುವರಾಯಸ್ವಾಮಿ ಚಾಲನೆ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ನಗರದಲ್ಲಿ ನೂತನವಾಗಿ ಪ್ರಾರಂಭಿಸಲಾದ ಮಲ್ಟಿ ಬ್ರ್ಯಾಂಡ್ ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಗೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಬುಧವಾರ ಚಾಲನೆ ನೀಡಿದರು. ಕೃಷಿ ಉತ್ಪನ್ನಗಳ ಮಳಿಗೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರಿಗೆ ದಿನ ನಿತ್ಯ ಬಳಕೆಗೆ ಬೇಕಾಗುವ ವಸ್ತುಗಳು ಒಂದೇ ಕಡೆ ಸಿಗಲು ಮಾಡಿರುವಂತ ಸೂಪರ್ ಮಾರ್ಕೆಟ್ ತರಹ ಕೃಷಿ ಮಾರ್ಕೆಟ್​ ರೈತರಿಗೆ ಉಪಯೋಗವಾಗಲಿದೆ. ಈ ತರಹದ ಮಳಿಗೆಯನ್ನು ರಾಜ್ಯದಲ್ಲಿ 150 ಕ್ಕೂ ಹೆಚ್ಚು …

Read More »

ಹುಕ್ಕೇರಿ: ಸಮಾಜದ ಮುಖ್ಯ ವಾಹಿನಿಗೆ ಬರಲು ಮಹಿಳೆಯರಿಗೆ ಸಲಹೆ

ಹುಕ್ಕೇರಿ: ಧರ್ಮಸ್ಥಳ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾದ ಜ್ಞಾನ ವಿಕಾಸ ಕಾರ್ಯಕ್ರಮ ಅರಿತುಕೊಂಡು ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಧಾರವಾಡ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಅಭಿಮತ ವ್ಯಕ್ತಪಡಿಸಿದರು. ತಾಲ್ಲೂಕಿನ ಸಂಕೇಶ್ವರದಲ್ಲಿ ಶನಿವಾರ ಹಮ್ಮಿಕೊಂಡ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಟಿ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು.   ಯೋಜನೆಯ ಪರಿಣಾಮ ಮತ್ತು ಅನುಷ್ಠಾನ ಕುರಿತು ಮಾಹಿತಿ ಮತ್ತು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ, ಸ್ವ ಉದ್ಯೋಗಗಳಿಗೆ ಪೂರಕವಾಗಿ ಯೋಜನೆಯಲ್ಲಿ ಇರುವಂತಹ …

Read More »

ಅಂಚೆ ಕಚೇರಿಯಲ್ಲಿ ಬಂದಿದೆ ಭರ್ಜರಿ ಲಾಭ ತರುವ ಹೊಸ ಸ್ಕೀಮ್ : ಯಾವುದದು.?

ಅಂಚೆ ಕಛೇರಿಯ ಮೂಲಕ ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಲು ಉತ್ತಮ ಮಾರ್ಗವಾಗಿದೆ. ಇಲ್ಲಿ ಹಲವಾರು ರೀತಿಯ ಸಣ್ಣ ಉಳಿತಾಯ ಯೋಜನೆಗಳು ಮತ್ತು FD ಗಳನ್ನು ಹೊಂದಿದೆ. ಮುಖ್ಯವಾಗಿ ಎಸ್‌ಬಿಐಗಿಂತ ಹೆಚ್ಚಿನ ಬಡ್ಡಿಯನ್ನು ನೀಡುವ ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಸ್ಕೀಮ್ ಅಂತಹ ಒಂದು ಯೋಜನೆ ಇದೆ. ಇಲ್ಲಿ ಹೂಡಿಕೆದಾರರು ಈ ಯೋಜನೆಯಲ್ಲಿ 1 ವರ್ಷ, 2 ವರ್ಷ, 3 ವರ್ಷ ಮತ್ತು 5 ವರ್ಷಗಳವರೆಗೆ ಹಣವನ್ನು ಠೇವಣಿ ಮಾಡಬಹುದು. ಪೋಸ್ಟ್ ಆಫೀಸ್ …

Read More »

ಕನ್ನಡಿಗರಿಂದ 4 ಲಕ್ಷ ಕೋಟಿ ತೆರಿಗೆ, ಕೇಂದ್ರದಿಂದ ಕೇವಲ 50 ಸಾವಿರ ಕೋಟಿ ಮಾತ್ರ ವಾಪಸ್ : ಸಿಎಂ

ಹುಬ್ಬಳ್ಳಿ:, ರಾಜ್ಯದ ಜನರು 4 ಲಕ್ಷ ಕೋಟಿ ತೆರಿಗೆ ಪಾವತಿಸುತ್ತಿದ್ದರೂ ಕರ್ನಾಟಕಕ್ಕೆ ಕೇಂದ್ರದಿಂದ ಕೇವಲ 50,000 ಕೋಟಿ ರೂ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್‌ಎಫ್) ಕೇಂದ್ರ ಸರ್ಕಾರದ ಹಣವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ನಮ್ಮ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. ಅದರಲ್ಲಿ ನಾವು 37,000 ಕೋಟಿ ರೂ.ಗಳ ತೆರಿಗೆ ಪಾಲನ್ನು ಪಡೆಯುತ್ತಿದ್ದೇವೆ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗೆ 13,000 ಕೋಟಿ ರೂ. ಇದು …

Read More »