Breaking News

ರಾಷ್ಟ್ರೀಯ

ನನ್ನ ರಾಜಕೀಯ ಜೀವನದಲ್ಲಿ ಹಣಕ್ಕಾಗಿ ಒಂದೇ ಒಂದು ವರ್ಗಾವಣೆಯನ್ನು ಮಾಡಿರುವುದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ- ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ನನ್ನ ರಾಜಕೀಯ ಜೀವನದಲ್ಲಿ ಹಣಕ್ಕಾಗಿ ಒಂದೇ ಒಂದು ವರ್ಗಾವಣೆಯನ್ನು ಮಾಡಿರುವುದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಕುರಿತಂತೆ ಸಿಎಂ ಪ್ರತಿಕ್ರಿಯೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಶಾಲಾ ಕಟ್ಟಡಗಳನ್ನು ಸಿ.ಎಸ್.ಆರ್. ನಿಧಿಯಿಂದ ನಿರ್ಮಿಸಲಾಗುತ್ತಿದೆ. ಸಚಿವ ಹೆಚ್.ಸಿ.ಮಹದೇವಪ್ಪ ಅವರು ಅದನ್ನು ಪಟ್ಟಿಯಲ್ಲಿ ನೀಡಿದ್ದಾರೆ. ಪಟ್ಟಿಯಲ್ಲಿ ಐದು ಹೆಸರು ಇದ್ದರೆ ಅದು ವರ್ಗಾವಣೆಯಾಗುತ್ತದೆಯೇ ಎಂದು …

Read More »

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷದ ಡಿಸೆಂಬರ್​ನಿಂದ ಶ್ರೀಗಳು ಚಿತ್ರದುರ್ಗಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ನವೆಂಬರ್ 8ರಂದು ಒಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ನೀಡಿದ್ದರೂ, ಇನ್ನೊಂದು ಪ್ರಕರಣದ ವಿಚಾರಣೆ ಬಾಕಿ ಉಳಿದಿದ್ದ ಕಾರಣ ಮುರುಘಾ ಶರಣರ ಬಿಡುಗಡೆಯಾಗಿರಲಿಲ್ಲ. ಇದೀಗ ಚಿತ್ರದುರ್ಗದ …

Read More »

ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಜಾತಿನಿಂದನೆ ದೂರು ದಾಖಲ

ಬಿಗ್ ಬಾಸ್ (Bigg Boss Kannada 10) ಸ್ಪರ್ಧಿ ತನಿಷಾ (Tanisha Kuppanda) ವಿರುದ್ಧ ಜಾತಿನಿಂದನೆ ದೂರು ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ ಸ್ಟುಡಿಯೋಗೆ ಕುಂಬಳಗೋಡು ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ತನಿಷಾ ಕುಪ್ಪಂಡ- ಪ್ರತಾಪ್ ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ ಸೆಟ್‌ಗೆ ತೆರಳಿ ಕುಂಬಳಗೋಡು ಪೊಲೀಸರಿಂದ ವಿಚಾರಣೆ ಮಾಡಲಾಗಿದ್ದು, ತನಿಷಾ ಧ್ವನಿ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ. …

Read More »

ಆಹಾರ ಉದ್ಯಮಗಳ ಮೇಲೆ ಐಟಿ ದಾಳಿ

ಬೆಂಗಳೂರು: ಜ್ಯುವೆಲ್ಲರಿ‌ ಅಂಗಡಿ ಮಾಲೀಕರು, ಗುತ್ತಿಗೆದಾರರ ಮನೆ-ಕಚೇರಿಗಳ‌ ಮೇಲೆ‌ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ನಡೆಸಿತ್ತು. ಇಂದು ಆಹಾರ ಉದ್ಯಮಗಳ‌ ಮೇಲೆ ದಾಳಿ‌ ನಡೆಸಿ‌, ಕಡತಗಳ ಪರಿಶೀಲನೆ ನಡೆಸುತ್ತಿದೆ. ರಾಜಾಜಿನಗರದ ಇಂಡಸ್ಟ್ರಿಯಲ್‌ ಎಸ್ಟೇಟ್ ಬಳಿಯಿರುವ ಪಿ.ಎಸ್.ಆಗ್ರೋ ಫುಡ್ ಎಲ್​ಎಲ್​ಪಿ ಕಾರ್ಖಾನೆ, ಬಿ.ವಿ.ಕೆ.ಅಯ್ಯಂಗಾರ್ ರಸ್ತೆಯಲ್ಲಿರುವ ಮಾಣಿಕ್ ಮೇವಾ ಸ್ಟೋರ್ ಮೇಲೆ ದಾಳಿ ನಡೆದಿದೆ. ಈ ಎರಡು ಆಹಾರ ಕಂಪನಿಗಳು ಒಣ ಹಣ್ಣುಗಳ ವ್ಯಾಪಾರ ನಡೆಸುತ್ತಿವೆ‌. ಆದಾಯಕ್ಕೆ ಪ್ರತಿಯಾಗಿ ತೆರಿಗೆ ಪಾವತಿಸದ …

Read More »

ಆಸ್ತಿಗಾಗಿ ಪತ್ನಿಯನ್ನೇ ಕೊಲೆಗೈದ ಪತಿ,

ಮಂಡ್ಯ: ಪತ್ನಿ ಹೆಸರಿನಲ್ಲಿದ್ದ ಕೋಟ್ಯಂತರ ರೂ. ವೌಲ್ಯದ ಆಸ್ತಿಗಾಗಿ ಮಲಗಿದ್ದ ಸಮಯದಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಪತಿಯೇ ಹತ್ಯೆಗೈದಿರುವ ಘಟನೆ ನಗರದ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಎಸ್. ಶೃತಿ (32) ಕೊಲೆಯಾದವರು. ಟಿ.ಎನ್. ಸೋಮಶೇಖರ್ (41) ಕೊಲೆ ಮಾಡಿದ ಪತಿ. ಕೊಲೆಯಾದ ಎಸ್ ಶೃತಿ ಹೆಸರಿನಲ್ಲಿ ಮೈಸೂರಿನಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಸ್ತಿ ಇದ್ದು, ಈ ಆಸ್ತಿಯಲ್ಲಿ ಒಂದನ್ನು ಮಾರಾಟ ಮಾಡಲು ಅವರು ಪ್ರಯತ್ನಿಸುತ್ತಿದ್ದರು. ಒಪ್ಪದ ಪತಿ ಸೋಮಶೇಖರ್ ಎಲ್ಲಾ ಆಸ್ತಿಯನ್ನು …

Read More »

ತುಮಕೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಆಸೆ ಇದೆ: ಸಚಿವ ರಾಜಣ್ಣ

ತುಮಕೂರು: “ನನಗೆ ತುಮಕೂರು ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಆಸೆ ಇದೆ. ಹೈಕಮಾಂಡ್​ನವರು ಸ್ಪರ್ಧೆಗೆ ಅವಕಾಶ ನೀಡಿದರೆ ನಿಲ್ಲುತ್ತೇನೆ. ಇಲ್ಲ ಎಂದರೆ ಸುಮ್ಮನ್ನೇ ಇರ್ತೇನಿ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ಮುಂದೆ ರಾಜ್ಯ ವಿಧಾನಸಭೆ ಸೇರಿದಂತೆ ಯಾವ ಚುನಾವಣೆಗೂ ನಿಲ್ಲಲ್ಲ, ಈಗ ಲೋಕಸಭೆಯ ಅನುಭವಕ್ಕಾಗಿ ಚುನಾವಣೆ ಸ್ಪರ್ಧಿಸಲು ಬಯಸಿದ್ದೇನೆ” ಎಂದು ತಿಳಿಸಿದರು. “ರಾಜ್ಯದಲ್ಲಿ ಬಹಳ ದಿನದಿಂದ ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು …

Read More »

ಬೀದಿ ನಾಯಿ ದಾಳಿಗೆ ತುತ್ತಾದವರಿಗೆ 5 ಸಾವಿರ, ಸಾವನ್ನಪ್ಪಿದವರಿಗೆ 5 ಲಕ್ಷ ಪರಿಹಾರ: ಸರ್ಕಾರದಿಂದ ಮಾಹಿತಿ

ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ 5 ಸಾವಿರ ರೂ. ಹಾಗೂ ಜೀವ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ವಿವರಿಸಿದೆ. ಪ್ರಾಣಿಗಳ ಜನ ನಿಯಂತ್ರಣ (ನಾಯಿ) ಅಧಿನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಎಲ್. ರಮೇಶ್ ನಾಯ್ಕ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು …

Read More »

ನ್ಯೂಜಿಲೆಂಡ್​ ತಂಡವನ್ನು ಮಣಿಸಿ ಫೈನಲ್​ಗೆ ಪ್ರವೇಶ ಪಡೆದುಕೊಂಡಿದೆ. INDIA

ಮುಂಬೈ (ಮಹಾರಾಷ್ಟ್ರ): 2019ರ ವಿಶ್ವಕಪ್​ ಸೆಮೀಸ್​ ಸೇಡನ್ನು ರೋಹಿತ್​ ಪಡೆ ತೀರಿಸಿಕೊಂಡಿದ್ದು, 70 ರನ್​ನಿಂದ ನ್ಯೂಜಿಲೆಂಡ್​ ತಂಡವನ್ನು ಮಣಿಸಿ ಫೈನಲ್​ಗೆ ಪ್ರವೇಶ ಪಡೆದುಕೊಂಡಿದೆ. ಅಲ್ಲದೇ ಟೀಮ್​ ಇಂಡಿಯಾ 2023ರ ವಿಶ್ವಕಪ್​ನಲ್ಲಿ 10ನೇ ಜಯ ದಾಖಲಿಸಿದೆ. ಚಾಂಪಿಯನ್​ ಪಟ್ಟವನ್ನು ಅಲಂಕರಿಸಲು, ಇನ್ನು ಒಂದು ಹೆಜ್ಜೆ ಮಾತ್ರ ಹಿಂದಿದೆ.     ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ತಂಡಕ್ಕೆ ನೆರವಾಗಿದ್ದು ಮೊಹಮ್ಮದ್​ ಶಮಿ. ಸೋಲಿನ ಆತಂಕದಲ್ಲಿದ್ದ ಭಾರತಕ್ಕೆ ಶಮಿ 7 ವಿಕೆಟ್​ ಪಡೆದು ಜಯಕ್ಕೆ …

Read More »

ಸಗಣಿಯಲ್ಲಿ ಹೊಡೆದಾಡಿಕೊಂಡ ಜನ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗಡಿ ಅಂಚಿನಲ್ಲಿರುವ ತಮಿಳುನಾಡಿನ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯಿತು. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷತೆ. ಗೊರೆ ಹಬ್ಬ ಅಚ್ಚ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷ ಇಲ್ಲಿ ಬಲಿಪಾಡ್ಯಮಿಯ ಮಾರನೇ ದಿನ ಗೊರೆ ಹಬ್ಬ ಆಚರಿಸಲಾಗುತ್ತದೆ. ಅದರಂತೆ ಹಬ್ಬದ ದಿನ ಬೆಳಿಗ್ಗೆ ಗ್ರಾಮದ ಎಲ್ಲರ ಮನೆಯ ಕೊಟ್ಟಿಗೆಗಳಿಂದ ಸಗಣಿಯನ್ನು ಎತ್ತಿನ …

Read More »

ಜನರಿಗೆ ಹೊರೆಯಾದ ಆಸ್ತಿ ನೋಂದಣಿ ಶುಲ್ಕ ಹೆಚ್ಚಳ

ಬೆಳಗಾವಿ: ರಾಜ್ಯ ಸರ್ಕಾರ ಅಕ್ಟೋಬರ್‌ 1ರಿಂದ ಸ್ಥಿರಾಸ್ತಿಗಳ ನೋಂದಣಿ ಶುಲ್ಕವನ್ನು ಶೇ.25 ರಿಂದ 30ರವರೆಗೂ ಹೆಚ್ಚಳ ಮಾಡಿದ್ದು, ಜಿಲ್ಲೆಯ ಮಧ್ಯಮ ವರ್ಗ ತೊಂದರೆ ಅನುಭವಿಸುವಂತೆ ಮಾಡಿದೆ. ಅಲ್ಲದೇ ಆಸ್ತಿ ಖರೀದಿಸಲು ಜನ ಪರದಾಡುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಭೀಕರ ಬರಗಾಲದಿಂದ ಕಂಗೆಟ್ಟಿರುವ ಜನರಿಗೆ ಸರ್ಕಾರ ಈ ಶುಲ್ಕ ಹೆಚ್ಚಿಸಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಸ್ವಂತ ಮನೆ ಹೊಂದಬೇಕು ಎಂಬ ಮಧ್ಯಮ ವರ್ಗ, ಕೂಲಿಕಾರರ ಕನಸು ಕನಸಾಗಿಯೇ ಉಳಿಯುವಂತೆ ಮಾಡಿದೆ‌ …

Read More »