Breaking News

ರಾಷ್ಟ್ರೀಯ

ಬಿಡದಿಗೆ ‘ನಮ್ಮ ಮೆಟ್ರೋ’ : ಡಿಸಿಎಂ ಡಿಕೆ ಶಿವಕುಮಾರ್​ ಘೋಷಣೆ

ರಾಮನಗರ: ಬಿಡದಿಯು ಕೈಗಾರಿಕಾ ಪ್ರದೇಶವಾಗಿದ್ದು, ಇಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಉದ್ಯೋಗ ಮಾಡುತ್ತಿದ್ದಾರೆ. ಅವರ ಓಡಾಟಕ್ಕೆ ಅನುಕೂಲವಾಗಲಿ ಎಂಬ ದೃಷ್ಠಿಯಿಂದ ಬಿಡದಿಗೆ ನಮ್ಮ ಮೆಟ್ರೋ ಘೋಷಣೆ ಮಾಡಲಾಗಿದೆ. ಹಾಗೆಯೇ ಇನ್ನು ಮುಂದೆ ಬಿಡದಿ ಪ್ರಾಧಿಕಾರ ಹೆಸರಿಗೆ ಬದಲಾಗಿ ಗ್ರೇಟರ್ ಬೆಂಗಳೂರು ಎಂಬ ಹೊಸ ನಾಮಕರಣ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ನಮ್ಮ ಮೆಟ್ರೋ ಮಾಡುವ ಬಗ್ಗೆ ಇಲ್ಲಿನ ಎಂಎಲ್‌ಎ …

Read More »

ಬೌರಿಂಗ್ ಆಸ್ಪತ್ರೆಯ ಡಾ ಶ್ರೀಕಾಂತ್ ಅಮಾನತುಗೊಳಿಸಿ: ಸಚಿವ ಡಾ ಶರಣ ಪ್ರಕಾಶ್ ಪಾಟೀಲ್​ಗೆ ದೂರು

ಬೆಂಗಳೂರು : ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಡುವೆ ವೈದ್ಯಸೇವೆ ಬಿಟ್ಟು ಡಿ ದರ್ಜೆ ನೌಕರನಂತೆ ಕೆಲಸ ನಿರ್ವಹಣೆ ಮಾಡುತ್ತಿರುವ ಬೌರಿಂಗ್ ಸಂಸ್ಥೆಯ ಡಾ. ಹೆಚ್. ಎಂ ಶ್ರೀಕಾಂತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ದೂರು ಸಲ್ಲಿಕೆ ಮಾಡಲಾಗಿದೆ. ನಗರದಲ್ಲಿಂದು ಜನತಾ ಪಕ್ಷದ ಕರ್ನಾಟಕ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್. ನಾಗೇಶ್ ಅವರು ದೂರು ಸಲ್ಲಿಕೆ ಮಾಡಿದ್ದು, ರಾಜಧಾನಿ …

Read More »

ಅಂಗಾಂಗ ದಾನ ಮಾಡದ ವ್ಯಕ್ತಿಗೆ ಸರ್ಕಾರಿ ಗೌರವ ಸಲ್ಲಿಸಿದ ತಮಿಳುನಾಡು ಸರ್ಕಾರ

ಚೆನ್ನೈ (ತಮಿಳುನಾಡು): ರಸ್ತೆ ಅಪಘಾತದಿಂದ ಮೃತಪಟ್ಟ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ ಆತನ ಕುಟುಂಬಸ್ಥರು ಸಾರ್ಥಕತೆ ಮೆರೆದಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ತಿರುಪತಿಯ ಚಿತ್ತೂರು ರಾಘವೇಂದ್ರ ನಗರದ ನಿವಾಸಿಯಾದ ಯುವರಾಜುಲು ನಾಯ್ಡು (61) ಅವರು, ನವೆಂಬರ್ 3 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಾಶತ್​ ಅವರು ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 7ರ ಸಂಜೆ 5.52ಕ್ಕೆ ನಿಧನರಾಗಿದ್ದರು. ನಂತರ ಯುವರಾಜುಲು ನಾಯ್ಡು …

Read More »

ಬೆಳಗಾವಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ

ಬೆಳಗಾವಿ : ಚಳಿಗಾಲ ಅಧಿವೇಶನಕ್ಕಿಂತ ಮುಂಚೆ ತುಘಲಕ್ ದರ್ಬಾರ್​​ನ ರೈತ ವಿರೋಧಿ ಆದೇಶಗಳನ್ನು ವಾಪಸ್​ ಪಡೆದು ಮುಖ್ಯಮಂತ್ರಿಗಳು ಬೆಳಗಾವಿಗೆ ಬರಬೇಕು. ಇಲ್ಲದಿದ್ದರೆ ರೈತರು ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ. ಅಲ್ಲದೇ ವಿದ್ಯುತ್ ಖಾತೆ ಬಗ್ಗೆ ಜ್ಞಾನವಿಲ್ಲದ ಕೆ. ಜೆ ಜಾರ್ಜ್ ಅವರನ್ನು ಸಂಪುಟದಿಂದ ಕೈ ಬಿಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಬಿಜೆಪಿ …

Read More »

ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್​​ನ​ನ್ನು ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡ ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಿದ್ದಾರೆ.

ಕಲಬುರಗಿ: ಕೆಇಎ ನಡೆಸಿರೋ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸೆಗಿರುವ ಆರೋಪ ಎದುರಿಸುತ್ತಿರುವ ಪ್ರಕರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್​ನ್ನು ಕೊನೆಗೂ ಬಂಧನ ಮಾಡಲಾಗಿದೆ. ಮಹಾರಾಷ್ಟ್ರ ಗಡಿಯಲ್ಲಿ ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡದಿಂದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ನನ್ನು ಅರೆಸ್ಟ್​ ಮಾಡಲಾಗಿದೆ. ಆರ್‌ಡಿಪಿಯನ್ನು ಬಂಧಿಸಿದ್ದು, ಕಲಬುರಗಿಗೆ ಕರೆತರುವ ಸಾಧ್ಯತೆ ಇದೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್, ನವೆಂಬರ್​ 6 ರಂದು ಕಲಬುರಗಿ ನಗರದ …

Read More »

ಹಾಡಹಗಲೇ ರಸ್ತೆಯಲ್ಲಿ ಮಹಿಳೆ ಅಟ್ಟಾಡಿಸಿ ಹಿಗ್ಗಾಮುಗ್ಗಾ ಥಳಿತ

ಹುಬ್ಬಳ್ಳಿ: ಹಾಡಹಗಲೇ ಮಹಿಳೆಯೊಬ್ಬಳನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಇಟ್ಟಿಗೆ, ಚಪ್ಪಲಿಯಿಂದ ಥಳಿಸಿದ ಘಟನೆ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಗುರುವಾರ ನಡೆದಿದೆ. ಹಲ್ಲೆಗೊಳಗಾದ ಮಹಿಳೆ ಸುಮಾರು 10 ವರ್ಷಗಳಿಂದ ಕಿಮ್ಸ್​ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮಹಿಳೆ ಮೇಲೆ ವ್ಯಕ್ತಿ ಸೇರಿದಂತೆ ಕೆಲ ಮಹಿಳೆಯರು ಹಲ್ಲೆ ನಡೆಸಿದ್ದು, ಕಾರಣ ಏನೆಂಬುದು ತಿಳಿದು ಬಂದಿಲ್ಲ. ವ್ಯಕ್ತಿಯ ಕುಟುಂಬಸ್ಥರೂ ಸೇರಿಕೊಂಡು ಮಹಿಳೆಗೆ ನಡುರಸ್ತೆಯಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಮಹಿಳೆಯ ಸಹೋದರಿ ಮಧ್ಯ …

Read More »

ಹೊಸ ಸಂಸತ್​ ಭವನದಲ್ಲಿ ಡಿಸೆಂಬರ್​ 4 ರಿಂದ ಚಳಿಗಾಲದ ಅಧಿವೇಶನ

ನವದೆಹಲಿ: ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಚಳಿಗಾಲದ ಸಂಸತ್​ ಅಧಿವೇಶನ ಡಿಸೆಂಬರ್​ 4 ರಿಂದ ಆರಂಭವಾಗಲಿದೆ. ಡಿಸೆಂಬರ್ 22 ರವರೆಗೆ ಅಂದರೆ 19 ದಿನಗಳ ಕಾಲ ನಡೆಯಲಿದೆ. ಇಷ್ಟು ದಿನಗಳಲ್ಲಿ 15 ಕಲಾಪಗಳನ್ನು ನಡೆಸಲು ಕೇಂದ್ರ ಸರ್ಕಾರ ಯೋಜಿಸಿದೆ.     ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ (ಟ್ವಿಟರ್​) ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ಅವರು, ಅಮೃತ ಕಾಲದ ಅಧಿವೇಶನದಲ್ಲಿ ಸರ್ಕಾರದ ಕಾರ್ಯಗಳು …

Read More »

ಬರ ಪರಿಹಾರದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಕಳವಳ: ಹೆಚ್​ ಕೆ ಪಾಟೀಲ್

ಬೆಂಗಳೂರು: ಬರ ಪರಿಹಾರಕ್ಕೆ ಕೇಂದ್ರದಿಂದ ಸ್ಪಂದಿಸದೇ ಇರುವ ಬಗ್ಗೆ ಸಚಿವ ಸಂಪುಟದಲ್ಲಿ ಕಳವಳ ವ್ಯಕ್ತವಾಗಿದ್ದು, ಸಚಿವರು ಎಲ್ಲ ತಾಲೂಕು, ಜಿಲ್ಲಾ ಕೇಂದ್ರಗಳಿಗೆ ತೆರಳಿ ಬರ ಪರಿಸ್ಥಿತಿ, ನಿರ್ವಹಣೆ ಬಗ್ಗೆ ಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಇಂದಿನವರೆಗೆ ಕೇಂದ್ರ ಸರ್ಕಾರದಿಂದ ನಯಾ ಪೈಸೆ ಬರ ಪರಿಹಾರ ಬಂದಿಲ್ಲ. ಸಂಪುಟ ಸಭೆಯಲ್ಲಿ ಬರದ ಬಗ್ಗೆ ಸುದೀರ್ಘ …

Read More »

ಸತೀಶ್ ಜಾರಕಿಹೊಳಿ ಹೆಗಲಿಗೆ ಕೈ ಹಾಕಿಕೊಂಡು ಸಂಪುಟ ಸಭೆಗೆ ಬಂದ ಡಿಕೆಶಿ

ಬೆಂಗಳೂರು: ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಕೆಂಗಲ್ ಗೇಟ್ ಮೂಲಕ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಹೆಗಲಿಗೆ ಕೈ ಹಾಕುತ್ತಾ ಬಂದು ಗಮನ ಸೆಳೆದರು. ಇತ್ತೀಚೆಗೆ ಕೆ.ಎನ್.ರಾಜಣ್ಣ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ರಾಜ್ಯದಲ್ಲಿ ಮೂರು ಡಿಸಿಎಂ ಆಗಬೇಕು ಎಂದು ಹೈಕಮಾಂಡ್ ನಾಯಕರನ್ನು ಒತ್ತಾಯಿಸಿದ್ದರು. ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕೆಂಬ ಅಪೇಕ್ಷೆ ಇದೆ ಎಂದಿದ್ದರು. ಸಿಎಂ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ …

Read More »

ಹಳೆ ಜಾತಿ ಗಣತಿ ವರದಿ ಕೈಬಿಡಿ, ಹೊಸದಾಗಿ ಸಮೀಕ್ಷೆ ನಡೆಸಿ: ವೀರಶೈವ ಮಹಾಸಭೆ ಆಗ್ರಹ

ಬೆಂಗಳೂರು: ಹಲವು ಲೋಪದೋಷಗಳಿಂದ ಕೂಡಿರುವ ಜಾತಿ ಗಣತಿ ಸಮೀಕ್ಷಾ ವರದಿಯನ್ನು ಸ್ವೀಕರಿಸದೆ ಹೊಸದಾಗಿ ವೈಜ್ಞಾನಿಕತೆಯಿಂದ ಕೂಡಿದ ಜಾತಿ ಗಣತಿ ಸಮೀಕ್ಷೆ ನಡೆಸಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭೆಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಈ ತಿಂಗಳ ಅಂತ್ಯದೊಳಗೆ ಸಲ್ಲಿಕೆಯಾಗುತ್ತಿರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಗುರುವಾರ ಅಖಿಲ ಭಾರತ ವೀರಶೈವ ಮಹಾಸಭೆ ಪದಾಧಿಕಾರಿಗಳು ಸಭೆ ನಡೆಸಿದರು. ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷರಾದ ಮಾಜಿ ಸಚಿವ …

Read More »