Breaking News

ರಾಷ್ಟ್ರೀಯ

ಬ್ರಹ್ಮಾವರದ ಅಂಬೇಡ್ಕರ್ ಭವನದಲ್ಲಿ ಎಣ್ಣೆ ಪಾರ್ಟಿ

ಉಡುಪಿ, ನ.7: ಡಿಎಸ್​ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಸೇರಿದಂತೆ ಮತ್ತಿತರರು ಯಾವುದೇ ಅನುಮತಿ ಪಡೆಯದೆ ಅಂಬೇಡ್ಕರ್ ಭವನದಲ್ಲಿ (Ambedkar Bhavan) ಮದ್ಯ ಸೇವಿಸಿ ಪಾರ್ಟಿ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತೆಂಕಭಿರ್ತಿಯಲ್ಲಿ ನಡೆದಿದೆ.   ಡಿಎಸ್ ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಅವರ ಮಗ ಕ್ರೀಡಾಕೂಟಕ್ಕೆ ಆಯ್ಕೆಯಾದ ಸಂಭ್ರಮಕ್ಕೆ ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಗ್ರಂಥಾಲಯವನ್ನು ಒಳಗೊಂಡಿರುವ ಅಂಬೇಡ್ಕರ್ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಯಾವುದೇ ಪೂರ್ವಾನುಮತಿ …

Read More »

ನಾನು ಭ್ರಷ್ಟನಲ್ಲ‌, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಳ್ಳುವ ಮೂಲಕ ಪ್ರಾಮಾಣಿಕತೆ ಮೆರೆದ ಸರ್ಕಾರಿ ಅಧಿಕಾರಿ

ನವೆಂಬರ್ 7: ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ‌ ಎಂದು ಬೋರ್ಡ್ ಹಾಕಿಕೊಂಡ ಸರ್ಕಾರಿ ಅಧಿಕಾರಿಯೊಬ್ಬರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಎಲ್ಲೆಡೆ ಲಂಚ, 30 %, 40 % , 45 % ಲಂಚ, ಕಮೀಷನ್ (Corruption)​​​ ಎಂಬ ಆರೋಪ-ಪ್ರತ್ಯಾರೋಪಗಳೇ ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ಮತ್ತು ಅನಾದಿ ಕಾಲದಿಂದಲೂ ಸರ್ಕಾರಿ ಕಛೇರಿಗಳಲ್ಲಿ ಲಂಚ (Bribe) ಇಲ್ಲದೆ ಏನೂ ಕೆಲಸ ಆಗಲ್ಲ, ಒಂದೇ ಒಂದು ಕಡತ ಅಲುಗಾಡಲ್ಲ ಎನ್ನೋ ನೋವು …

Read More »

ಮಹಾರಾಷ್ಟ್ರ ಪಂಚಾಯತ್ ಚುನಾವಣೆ ಫಲಿತಾಂಶ: ಮರಾಠಾ vs ಒಬಿಸಿ ಧ್ರುವೀಕರಣ ಸ್ಪಷ್ಟ ಎಂದ ವಿಶ್ಲೇಷಕರು

ನವೆಂಬರ್ 7: ಮಹಾರಾಷ್ಟ್ರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಡಳಿತಾರೂಢ ಮೈತ್ರಿಕೂಟ ಉತ್ತಮ ಫಲಿತಾಂಶ ಕಂಡುಕೊಂಡಿರುವುದು ಜಾತಿ ಆಧಾರದಲ್ಲಿ ಧ್ರುವೀಕರಣದತ್ತ ಬೊಟ್ಟು ಮಾಡಿದೆ. ಮರಾಠಾ (Maratha) ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಚಳವಳಿಗಾರರನ್ನು ನಿಭಾಯಿಸುವಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂಬ ಭಾವನೆ ಮೂಡಿರುವಾಗಲೇ ಈ ಫಲಿತಾಂಶ ಹೊರಬಿದ್ದಿದೆ. 2359 ಗ್ರಾಮ ಪಂಚಾಯಿತಿಗಳಿಗೆ ಭಾನುವಾರ ಚುನಾವಣೆ ನಡೆದಿತ್ತು. ಸೋಮವಾರ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಖುಷಿಗೆ ಕಾರಣವಾಗಿದೆ. ಬಿಜೆಪಿ 724 ಗ್ರಾಮ ಪಂಚಾಯತಿಗಳಲ್ಲಿ, ಎನ್‌ಸಿಪಿ …

Read More »

ಸತೀಶ್ ಜಾರಕಿಹೊಳಿ ಬೆಂಗಳೂರು ಸರ್ಕಾರಿ ನಿವಾಸಕ್ಕೆ ತೆರಳಿದ ಡಿ.ಕೆ .ಶಿ.:

ಬೆಂಗಳೂರು: ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಎಂದು ಆರೋಪಿಸಿ ಸಚಿವ ಸತೀಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಮುನಿಸಿಕೊಂಡಿದ್ದರು. ಇದರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಈ ಮಧ್ಯೆ ಡಿಕೆ ಶಿವಕುಮಾರ್ ಸಚಿವ ಸತೀಶ್ ಜಾರಕಿಹೊಳಿರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರ ಸತೀಶ್ ಜಾರಕಿಹೊಳಿ ಬೆಂಗಳೂರು ಸರ್ಕಾರಿ ನಿವಾಸಕ್ಕೆ ತೆರಳಿದ ಡಿಕೆ ಶಿವಕುಮಾರ್, ಕೆಲ ಹೊತ್ತು ಮಾತುಕತೆ ನಡೆಸಿದರು. ಇಬ್ಬರ ನಡುವಿನ ವೈಮನಸ್ಸು ಮಧ್ಯೆ ಪರಸ್ಪರ ಭೇಟಿ ಮಹತ್ವ ಪಡೆದುಕೊಂಡಿದೆ. ಆ …

Read More »

ವಿಶ್ವಕಪ್​ ಕ್ರಿಕೆಟ್​: ಕಮರಿದ ಶ್ರೀಲಂಕಾ ಸೆಮೀಸ್​ ಕನಸು.. ಬಾಂಗ್ಲಾಕ್ಕೆ 3 ವಿಕೆಟ್​ ಜಯ​

ನವದೆಹಲಿ: ಲಂಕಾಗೆ ದೆಹಲಿಯ ಫಿರೋಜ್​ ಶಾ ಕೋಟ್ಲಾ ಮೈದಾನದಲ್ಲಿ ಬಾಂಗ್ಲಾ ವಿರುದ್ಧದ ಪಂದ್ಯವನ್ನು ಗೆದ್ದಿದ್ದರೆ, ಅದೃಷ್ಟವಶಾತ್ ಸೆಮೀಸ್​ಗೆ ನಾಲ್ಕನೇ ತಂಡವಾಗಿ ಪ್ರವೇಶಿಸುವ ಅವಕಾಶ ಇತ್ತು. ಆದರೆ, ಬಾಂಗ್ಲಾ ಟೈಗರ್ಸ್​ ಸಿಂಹಳೀಯರ ಈ ಕನಸನ್ನು ಭಗ್ನ ಮಾಡಿದ್ದಾರೆ. ಶ್ರೀಲಂಕಾ ನೀಡಿದ್ದ 279 ರನ್​ಗಳ ಗುರಿಯನ್ನು ಬಾಂಗ್ಲಾದೇಶ 41.1 ಓವರ್​ಗೆ 3 ವಿಕೆಟ್​ ಉಳಿಸಿಕೊಂಡು ಜಯ ದಾಖಲಿಸಿದೆ. ವಿಶ್ವಕಪ್​​ನಲ್ಲಿ ಕೇವಲ ಒಂದು ಗೆಲುವು ಸಾಧಿಸಿದ್ದ ಬಾಂಗ್ಲಾದೇಶ ಟೂರ್ನಿಯಿಂದ ಹೊರಬಿದ್ದಿತ್ತು. ಈಗ ಶ್ರೀಲಂಕಾವನ್ನು ಮಣಿಸಿ ಅವರನ್ನು …

Read More »

ಹಿರಿಯ ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಪ್ರಕರಣ: ಮಾಜಿ ಕಾರು ಚಾಲಕನ ಬಂಧನ

ಬೆಂಗಳೂರು: ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್. (45) ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಾಪುರ್ ಅವರು ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಆರೋಪಿ ಕಿರಣ್ ಕಳೆದ ಎಂಟು ವರ್ಷಗಳಿಂದ ಗಣಿ ಇಲಾಖೆ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇರೆಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ‌ನಾಲ್ಕು …

Read More »

ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್​ ಮಾಡುತ್ತೇನೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್​ ಮಾಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ …

Read More »

ಒಂದೂವರೆ ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ವಿಚಾರಣೆಗೆ ಬರಲು ಕೋರ್ಟ್​ ನೋಟಿಸ್​:

ಬೆಹ್ರೋರ್ (ರಾಜಸ್ಥಾನ): ಇಂತಹ ಘಟನೆಗಳಿಂದ ನಮ್ಮ ನ್ಯಾಯಾಲಯಗಳು ಮತ್ತು ಪೊಲೀಸ್​ ವ್ಯವಸ್ಥೆಯ ಮೇಲೆ ಅನುಮಾನ ಮತ್ತು ಬೇಸರ ಉಂಟಾಗುತ್ತದೆ. ಒಂದೂವರೆ ವರ್ಷಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿಗೆ ಚುನಾವಣಾ ಪ್ರಕ್ರಿಯೆಗೆ ಅಡ್ಡಿ ಆರೋಪದ ಮೇಲೆ ಕೋರ್ಟ್​ ಈಗ ನೋಟಿಸ್​ ನೀಡಿದೆ. ಕಂಡು ಕುಟುಂಬಸ್ಥರು ಅಚ್ಚರಿಗೆ ಒಳಗಾಗಿದ್ದಾರೆ. ಈ ಘಟನೆ ಬೆಳಕಿಗೆ ಬಂದಿದ್ದು ರಾಜಸ್ಥಾನದಲ್ಲಿ. ರಾಜ್ಯದಲ್ಲಿ ನವೆಂಬರ್ 25 ರಂದು ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಸೂಕ್ಷ್ಮ ಪ್ರದೇಶಗಳಾದ ಬೆಹ್ರೋರ್, ನೀಮ್ರಾನಾ ಮತ್ತು ಮಂದನ್‌ನಲ್ಲಿ ಕೆಲವರನ್ನು …

Read More »

5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷ ಕಠಿಣ ಶಿಕ್ಷೆ

ಚಾಮರಾಜನಗರ: ಹೆಂಡತಿ ಹೊರ ಹೋದ ವೇಳೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಮೈಸೂರಿನ ಗೌಸಿಯ ನಗರದ ನಿವಾಸಿ ಸೈಯದ್ ಮುಜಾಮಿಲ್(45) ಶಿಕ್ಷೆಗೊಳಗಾದ ಅಪರಾಧಿ. ಈತ ಮೂರು ಮದುವೆ ಯಾಗಿದ್ದು, ಮೊದಲ ಹೆಂಡತಿ ದೂರವಾಗಿದ್ದರೆ, ಎರಡನೇ ಹೆಂಡತಿ ಮೃತಪಟ್ಟಿದ್ದಳು. ಚಾಮರಾಜನಗರದ ಮೂಲದ ಮಹಿಳೆಯೊಬ್ಬರ ಜೊತೆ ಮೂರನೇ ವಿವಾಹವಾಗಿತ್ತು. 2022ರ ಜನವರಿ 4 ರಂದು ಅಪರಾಧಿ ಪತ್ನಿ …

Read More »

ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ರೈಲ್ವೆ ಹೆಡ್​ಕಾನ್ಸ್​ಟೇಬಲ್​

ಬೆಂಗಳೂರು : ಬೇಲಿಯೇ ಎದ್ದು ಹೊಲ ಮೇಯ್ದಂತೆ ಖದೀಮರನ್ನ ಸದೆ ಬಡಿಯಬೇಕಾದ ರೈಲ್ವೇ ಹೆಡ್​ಕಾನ್ಸ್​ಟೇಬಲ್​ ಬಬ್ಬರನ್ನು ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನವೆಸಗುತ್ತಿದ್ದ ಜಾಲವನ್ನ ಬೆಂಗಳೂರು ದಂಡು ರೈಲ್ವೇ ಪೊಲೀಸರು ಪತ್ತೆ ಹಚ್ಚಿದ್ದಾರೆ.   ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಠಾಣೆಯಲ್ಲಿ ಹೆಡ್​ಕಾನ್ಸ್​ಟೇಬಲ್ ಆಗಿರುವ ಸಿದ್ದರಾಮರೆಡ್ಡಿ ಹಾಗೂ ಖದೀಮ ಸಾಬಣ್ಣ ಎಂಬುವರನ್ನ ಬಂಧಿಸಿ, ಪೊಲೀಸ್ ಕಸ್ಟಡಿ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. 2011ರ ಬ್ಯಾಚ್ ಸಿಬ್ಬಂದಿಯಾಗಿದ್ದ ಸಿದ್ದರಾಮರೆಡ್ಡಿ, ರೈಲ್ವೇ ಹೆಡ್​ಕಾನ್ಸ್​ಟೇಬಲ್ ಆಗಿ ರಾಯಚೂರಿನಲ್ಲಿ ಸೇವೆಗೆ …

Read More »