ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಇತರೆ ನಗರಗಳಲ್ಲಿ ಸೈಬರ್ ಕ್ರೈಂ ಮತ್ತು ಹನಿಟ್ರ್ಯಾಪ್ನಂತಹ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ದೆಹಲಿಯಲ್ಲಿ ಸೈಬರ್ ಅಪರಾಧ ಪ್ರಕರಣವೊಂದರಲ್ಲಿ ಸಿಲುಕಿದ್ದ ವೃದ್ಧರೊಬ್ಬರನ್ನು ಪೊಲೀಸರು ರಕ್ಷಿಸಿದ್ದಾರೆ. ಅಷ್ಟೇ ಅಲ್ಲ, ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಸಂಪೂರ್ಣ ವಿವರ: ಶಾಹದಾರಾ ಜಿಲ್ಲೆಯ ಸೈಬರ್ ಸೆಲ್ ಠಾಣೆ ಪೊಲೀಸರು ರಾಜಸ್ಥಾನದ ವಂಚಕ ತಂಡದ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ರಾಜಸ್ಥಾನ ನಿವಾಸಿಗಳಾದ ಬರ್ಖತ್ ಖಾನ್ (32) …
Read More »ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ:B.S.Y.
ಬೆಂಗಳೂರು/ಶಿವಮೊಗ್ಗ: ವಿರೋಧ ಪಕ್ಷದ ನಾಯಕರನ್ನು ಹೈಕಮಾಂಡ್ ಆದಷ್ಟು ಬೇಗ ನೇಮಿಸುತ್ತದೆ ಎಂಬ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲರೂ ವಿರೋಧ ಪಕ್ಷದ ನಾಯಕರನ್ನು ಯಾವಾಗ ಆಯ್ಕೆ ಮಾಡುತ್ತೀರಾ ಎಂದು ಕೇಳುತ್ತಿದ್ದಾರೆ. ಈಗಾಗಲೇ ಪ್ರಕ್ರಿಯೆ ತಡವಾಗಿದೆ. ಆದಷ್ಟು ಬೇಗ ಆಯ್ಕೆ ಮಾಡಲಾಗುವುದು ಎಂದರು. ನಮ್ಮ ಪಕ್ಷದ ವತಿಯಿಂದ ಇಂದಿನಿಂದ ಹತ್ತಾರು ತಂಡಗಳು ಬರ ಅಧ್ಯಯನಕ್ಕಾಗಿ ರಾಜ್ಯದಲ್ಲಿ ಪ್ರವಾಸ ಮಾಡಲಿವೆ. ನಾನು …
Read More »ರಾಜ್ಯೋತ್ಸವದಂದು ಕರಾಳ ದಿನಾಚರಣೆ ಮೆರವಣಿಗೆ, ಆಕ್ಷೇಪಾರ್ಹ ಘೋಷಣೆ; ಎಂಇಎಸ್ನ 18 ಜನರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಿಸಿ, ನಾಡದ್ರೋಹಿ ಘೋಷಣೆಗಳನ್ನು ಕೂಗಿದ ಮಹಾರಾಷ್ಟ್ರ ಏಕೀಕಕರಣ ಸಮಿತಿಯ (ಎಂಇಎಸ್) 18 ಸದಸ್ಯರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದಿಂದ ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಲಾಗಿತ್ತು. ಅನುಮತಿ ಇಲ್ಲದೇ ಇದ್ದರೂ ಕೂಡ ನಗರದಲ್ಲಿ ಕರಾಳ ದಿನ ಹೆಸರಲ್ಲಿ ಮೆರವಣಿಗೆ ಮಾಡಿ ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದರು. ಎಂಇಎಸ್ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದ …
Read More »ಮೈಸೂರು: ಹಸಿರು ಪಟಾಕಿ ಹೊರತುಪಡಿಸಿ ಇತರೆ ಪಟಾಕಿಗಳ ಬಳಕೆ ನಿಷೇಧ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನವೆಂಬರ್ 11 ರಿಂದ 15ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಹಾಗೂ ವಾಯು ಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ. ತಡೆಗಟ್ಟಲು ಸರ್ವೋಚ್ಛ ನ್ಯಾಯಾಲಯವು ಹೊರಡಿಸಿರುವ ಆದೇಶಗಳನ್ನು ತಪ್ಪದೇ ಪಾಲಿಸುವುದು ಸಾರ್ವಜನಿಕರ ಜವಾಬ್ದಾರಿಯಾಗಿರುತ್ತದೆ. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಫೋಟಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ …
Read More »ಐದು ವರ್ಷ ನಮ್ಮದೇ ಸರ್ಕಾರ , ನಾನೇ C.M.: ಸಿದ್ದರಾಮಯ್ಯ
ವಿಜಯನಗರ: ಐದು ವರ್ಷ ನಮ್ಮದೇ ಸರ್ಕಾರ ಇರಲಿದ್ದು, ನಾನೇ ಮುಂದುವರೆಯುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಂಪಿಯಲ್ಲಿ ಕರ್ನಾಟಕ ಸಂಭ್ರಮ 50ಕ್ಕೆ ಚಾಲನೆ ಹಾಗೂ ಇತರ ಕಾರ್ಯಗಳಿಗೆ ಹೊಸಪೇಟೆಗೆ ಸಿಎಂ ಆಗಮಿಸಿದ್ದರು. ಈ ವೇಳೆ ಬದಲಾವಣೆ ವಿಚಾರದ ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಅವರು, “ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ” ಎಂದು ಉತ್ತರಿಸಿದ್ದಲ್ಲದೇ, 5 ವರ್ಷ ನೀವೇ ಸಿಎಂ ಆಗಿರುತ್ತೀರಾ ಎನ್ನುವ ಪ್ರಶ್ನೆಗೆ “ನಾನೇ ಮುಂದುವರೆಯುವೆ, ಡಿಸಿಎಂ …
Read More »ಕಲಬುರಗಿ ಜಿಲ್ಲೆಯಲ್ಲಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಒಂದೇ ಕುಟುಂಬದಐವರ ಸಾವು
ಕಲಬುರಗಿ: ಅಫಜಲಪುರ ಮತ್ತು ಬಳ್ಳೂರಗಿ ನಡುವಿನ ರಸ್ತೆಯ ಹಳ್ಳೋರಿ ಕ್ರಾಸ್ ಬಳಿ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ನವವಿವಾಹಿತೆ ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ನೇಪಾಳ ದೇಶದ ಸುರಕೇತ ಮೂಲದ ಹಾಗೂ ಸದ್ಯ ನಾಲ್ಕು ವರ್ಷಗಳಿಂದ ಅಫಜಲಪುರ ಪಟ್ಟಣದಲ್ಲಿ ವಾಸವಾಗಿದ್ದ ರತನ್ (25), ಇವರ ಪತ್ನಿ ಅಸ್ಮಿತ್ (21), ಇವರ ಮಕ್ಕಳಾದ ಮಿಲನ್ (5), ಧರಕನ್ (2) ಹಾಗೂ ಅಸ್ಮಿತ್ ಅವರ …
Read More »ಹಾವಿನ ಜತೆ ಕೀಟಲೇ ,ಹಾವು ಕಚ್ಚಿ ಸಾವನ್ನಪ್ಪಿದ್ದ ಯುವ ರೈತ;
ಹಾಸನ: ಹಾವಿನ ದ್ವೇಷ 12 ವರ್ಷ ಎಂಬ ಮಾತಿದೆ. ಆದರೆ, ಈ ಒಂದು ಪ್ರಕರಣದಲ್ಲಿ 12 ದಿನಗಳ ಬಳಿಕ ದ್ವೇಷ ಸಾಧಿಸಿತಾ ಎಂಬ ಅನುಮಾನ ಕಾಡುತ್ತಿದೆ ಎಂಬ ಮಾತು ಸ್ಥಳೀಯರ ಬಾಯಿಂದ ಕೇಳಿ ಬರುತ್ತಿದೆ. ಇದಕ್ಕೆ ಇಂಬು ನೀಡುವಂತೆ ವಿಡಿಯೋವೊಂದು ವೈರಲ್ ಕೂಡಾ ಆಗಿದೆ. ಅದು ಅ.29 ರಂದು ಹೊಳೆನರಸೀಪುರ ತಾಲೂಕಿನ ದೇವರಗುಡ್ಡೆನ ಹಳ್ಳಿಯಲ್ಲಿ ಯುವ ರೈತನೋರ್ವನಿಗೆ ವಿಷಪೂರಿತ ಹಾವು ಕಚ್ಚಿ ಮೃತಪಟ್ಟಿದ್ದ ಸುದ್ದಿ ಪ್ರಕಟವಾಗಿತ್ತು. ಆದರೆ ಕೃಷಿ ಕೆಲಸ ಮಾಡುವಾಗ …
Read More »ಹಂಪಿ ದೇವಾಲಯ ಬಳಿಯ ಭೂಸ್ವಾಧೀನ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು : ಹಂಪಿಯಲ್ಲಿರುವ ಉಗ್ರ ನರಸಿಂಹ ಮತ್ತು ಬಡವಿಲಿಂಗ ದೇವಾಲಯಗಳ ಸಂರಕ್ಷಿತ ಸ್ಮಾರಕಗಳಿರುವ ಜಾಗದಲ್ಲಿ ಮೂಲಸೌಕರ್ಯ ಸುಧಾರಣೆಗೆ ಸುಮಾರು ಏಳು ಎಕರೆ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಂಡಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೊಸಪೇಟೆ ತಾಲೂಕಿನ ಕೃಷ್ಣಾಪುರ ಮತ್ತು ಕಮಲಾಪುರ ಗ್ರಾಮಗಳ ವಿವಿಧ ಸರ್ವೆ ನಂಬರ್‌ಗಳಲ್ಲಿ ಭೂಮಿ ಸ್ವಾಧೀನ ಪಡಿಸಿಕೊಂಡಿರುವುದನ್ನು ಪ್ರಶ್ನಿಸಿ, 2007ರಲ್ಲಿ ನಿಡಶೇಷಿ ವೀರಣ್ಣ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ …
Read More »ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿಳಂಬ; ಸರ್ಕಾರಿ ಬಸ್ ಜಪ್ತಿ
ಕೊಪ್ಪಳ: ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಒದಗಿಸಲು ವಿಳಂಬ ಮಾಡಿದ ಕಾರಣಕ್ಕೆ ಸ್ಥಳೀಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ಆದೇಶದ ಮೇರೆಗೆ ಗುರುವಾರ, ಹಾವೇರಿ ಸಾರಿಗೆ ವಿಭಾಗದ ಬ್ಯಾಡಗಿ ಘಟಕದ ಸರ್ಕಾರಿ ಬಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕುಷ್ಟಗಿ ತಾಲೂಕಿನ ಹನುಮಸಾಗರದ ದಾವಲ್‌ಬಿ ಅಬ್ದುಲ್‌ಸಾಬ್ ಹೊಸಮನಿ ಎಂಬವರು ಗ್ರಾಮದ ಇಳಕಲ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಬ್ಯಾಡಗಿ ಘಟಕದ ಬಸ್ ಡಿಕ್ಕಿಯಾಗಿ ಮೃತಪಟ್ಟಿದ್ದರು. 2016ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಹನುಮಸಾಗರ ಠಾಣೆಯಲ್ಲಿ ಪ್ರಕರಣ …
Read More »ಉನ್ನತ ಹುದ್ದೆಗಳನ್ನು ಅಲಕಂರಿಸಿರುವವರು ಅತ್ಯಂತ ಇತಿಮಿತಿಯಲ್ಲಿ ಮಾತನಾಡಬೇಕು: ಹೈಕೋರ್ಟ್
ಬೆಂಗಳೂರು: ಪ್ರಾದೇಶಿಕ ಭಾಷೆ ಮತ್ತು ರಾಜ್ಯ ಭಾಷೆಗಳಲ್ಲಿ ಶಿಕ್ಷಣ ಪಡೆಯುವವರು ಅಸಮರ್ಥರು ಎಂದು ಭಾವಿಸಬಾರದು. ಪ್ರಾದೇಶಿ ಭಾಷೆಯಲ್ಲಿ ಶಿಕ್ಷಣ ಪಡೆದವರೂ ಯಶಸ್ವಿಯಾಗಬಹುದು. ಆದರೆ, ಈ ಸಮಸ್ಯೆಗಳನ್ನು ಕಾನೂನು ಅಂಶಗಳಲ್ಲಿ ಪರಿಗಣಿಸಬೇಕು ಎಂದಿರುವ ಹೈಕೋರ್ಟ್, ಈ ವಿಚಾರದಲ್ಲಿ ಉನ್ನತ ಸ್ಥಾನದಲ್ಲಿರುವವರು ಇತಿಮಿತಿಯಲ್ಲಿ ಮಾತನಾಡಬೇಕು ಎಂದು ತಿಳಿಸಿದೆ. ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಗೆ ಪಠ್ಯ ಕ್ರಮಕ್ಕೆ ಕನ್ನಡ ಭಾಷೆ ಬೋಧನೆ ಕಡ್ಡಾಯ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಎಂಟು ಮಂದಿ ವಿದ್ಯಾರ್ಥಿಗಳ ಪೋಷಕರು ಹೈಕೋರ್ಟ್‌ಗೆ ಅರ್ಜಿ …
Read More »