Breaking News
Home / ರಾಷ್ಟ್ರೀಯ (page 338)

ರಾಷ್ಟ್ರೀಯ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವವರಿಗೂ ಸಿಇಟಿ ಪರೀಕ್ಷೆಗೆ ಅವಕಾಶ..!

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಮೇ 20 ಹಾಗೂ 21ರಂದು ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ನಡೆಯಲಿದ್ದು, ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರು ಕೂಡ ಸಿಇಟಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸಿಇಟಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ಮೇ 20 ಮತ್ತು …

Read More »

‘ಶಿವಾಜಿ ಸುರತ್ಕಲ್ 2’ಗೆ ಐಪಿಎಸ್ ಅಧಿಕಾರಿಗಳಿಂದ ಬಹುಪರಾಕ್

ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್ 2 ಸಿನಿಮಾ ವೀಕ್ಷಿಸಿದ ರಾಜ್ಯದ ಗಣ್ಯ ವ್ಯಕ್ತಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟ ರಮೇಶ್ ಅರವಿಂದ್ ಡಿಟೆಕ್ಟಿವ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಶಿವಾಜಿ ಸುರತ್ಕಲ್ 2 ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಚಲನಚಿತ್ರವು ಎರಡು ವಾರಗಳ ಯಶಸ್ವಿ ಓಟದ ನಂತರ ಭರದಿಂದ ಮೂರನೇ ವಾರಕ್ಕೆ ಕಾಲಿಡುತ್ತಿದೆ. ಸಂಭ್ರಮದ ವಿಚಾರ ಏನೆಂದರೆ ಹಲವು ಉನ್ನತ ಮಟ್ಟದ ಸಾಧಕರು ಚಿತ್ರವನ್ನು ನೋಡಿ ಅಪಾರ ಮೆಚ್ಚುಗೆ …

Read More »

ಹು-ಧಾ ಮಹಾನಗರ ಪಾಲಿಕೆ ಮಾಜಿ ಮೇಯರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

ಹುಬ್ಬಳ್ಳಿ : ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದ ಆಯಾ ಪಕ್ಷಗಳ ಮುಖಂಡರ ಪಕ್ಷಾಂತರ ಪರ್ವ ಜೋರಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಜಗದೀಶ್​ ಶೆಟ್ಟರ್​ ಅವರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದರು. ಇದರ ಬೆನ್ನಲ್ಲೇಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾಜಿ ಮೇಯರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಪ್ರಕಾಶ ಕ್ಯಾರಕಟ್ಟಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನಗರದ ಕುಸುಗಲ್ ರಸ್ತೆಯಲ್ಲಿನ ಶ್ರೀನಿವಾಸ್ ಗಾರ್ಡನ್​ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …

Read More »

ಜಸ್ಟ್ 25 ಸಾವಿರ‌ ರೂ. ಕೊಡಿ : ಮತದಾರರ ಡಿಟೈಲ್ಸ್ ಕೊಡ್ತೇವೆ ಎಂದಿದ್ದ ಅನಾಮಧೇಯ ಕಂಪನಿ ವಿರುದ್ಧ ಕೇಸ್

ಬೆಂಗಳೂರು : ಮತದಾರರ ವೈಯಕ್ತಿಕ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಚಿಲುಮೆ ಸಂಸ್ಥೆಯ ಅವ್ಯವಹಾರ ಮರೆಯಾಗುವ‌ ಮುನ್ನವೇ ಮತ್ತೊಂದು ಕಂಪೆನಿಯು ಇದೇ‌ ಮಾದರಿಯಲ್ಲಿ ಮಾಹಿತಿ ಪಡೆದು ಚುನಾವಣಾ ಅಭ್ಯರ್ಥಿಗಳಿಗೆ ಅನಾಮಧೇಯ ಕಂಪೆನಿಯು ಮಾರಾಟ ಮಾಡುತ್ತಿರುವ ಜಾಲ ಬೆಳಕಿಗೆ ಬಂದಿದೆ.   25 ಸಾವಿರ ಕೊಟ್ಟರೆ‌ ಸಾಕು ನಿಮ್ಮ ಕ್ಷೇತ್ರದಲ್ಲಿ ಮತದಾರರ ಮಾಹಿತಿಯನ್ನು ನಾವು ನಿಮಗೆ ಕೊಡುತ್ತೇವೆ.‌ ಇಲ್ಲಿ ಲಕ್ಷಾಂತರ ಮತದಾರರ ಮಾಹಿತಿಯನ್ನು ಕೇವಲ 25 ಸಾವಿರಕ್ಕೆ ಮಾರಾಟ ಮಾಡುವುದಾಗಿ ಹೇಳಿದ್ದ ಅನಾಮಧೇಯ ವೆಬ್​ಸೈಟ್​ …

Read More »

ವಿಷದ ಹಾವಿಗೆ ಪ್ರಧಾನಿ ಮೋದಿಯವರನ್ನು ಹೋಲಿಸಿದ ಮಲ್ಲಿಕಾರ್ಜುನ ಖರ್ಗೆ

ಗದಗ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ವಾಕ್ಪ್ರಹಾರ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷದ ಹಾವಿಗೆ ಹೋಲಿಕೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ ನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರು ವಿಷದ ಹಾವು ಇದ್ದಂತೆ. ಹಾವಿನ ವಿಷ ಸ್ವಲ್ಪ ತಾಗಿದರೂ ಸತ್ತು ಹೋಗ್ತಾರೆ. ಹಾಗಾಗಿ ರಾಜ್ಯಕ್ಕೆ ನುಗ್ಗಿರುವ ವಿಷದ ಹಾವು …

Read More »

ಚುನಾವಣೆ ನಡೆಸುತ್ತಿರುವುದುಚುನಾವಣಾ ಆಯೋಗವೋ? BJP ಪಕ್ಷವೋ? : ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು:ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದುಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಚೆ ಬಿಜೆಪಿ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಭ್ಯರ್ಥಿಗಳು ಹಾಗೂ ಚುನಾವಣೆ ಏಜಂಟರಿಗೆ ಬರೆದ ಪತ್ರದ ಕುರಿತು ಪ್ರಸ್ತಾಪಿಸಿ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಪ್ರಶ್ನಿಸಿದ್ದಾರೆ. …

Read More »

ಚಾಯ್ ಪೆ ಚರ್ಚಾ ಕಾರ್ಯಕ್ರಮದ ಮೂಲಕ ನಗರದ ಮುಖ್ಯ ಮಾರುಕಟ್ಟೆಯ ಪರಿಸರದಲ್ಲಿ ಪ್ರಚಾರ ಕಾರ್ಯ ಕೈಗೊಂಡ ರವಿ ಪಾಟೀಲ್

ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ ಭಾರತೀಯ ಜನತಾ ಪಾರ್ಟಿ ಅಧಿಕೃತ ಅಭ್ಯರ್ಥಿ ಡಾಕ್ಟರ್ ರವಿ ಪಾಟೀಲ್ ಬೆಳಗಾವಿ ನಗರದ ರಾಮದೇವ್ ಗಲ್ಲಿ ಕಾರ್ ಪಾರ್ಕಿಂಗ್ ನಲ್ಲಿ ಚಾಯ್ ಪೆ ಚರ್ಚಾ ಕಾರ್ಯಕ್ರಮದ ಮೂಲಕ ನಗರದ ಮುಖ್ಯ ಮಾರುಕಟ್ಟೆಯ ಪರಿಸರದಲ್ಲಿ ಪ್ರಚಾರ ಕಾರ್ಯ ಕೈಗೊಂಡರು. ಈ ಸಂದರ್ಭದಲ್ಲಿ ಡಾ ರವಿ ಪಾಟೀಲ್ ನಗರದ ವರ್ತಕರೊಂದಿಗೆ ಸುದೀರ್ಘಕಾಲ ಸಂವಹನ ನಡೆಸಿ ಅವರ ಸಮಸ್ಯೆಗಳನ್ನು ಕುಲಂಕಷವಾಗಿ ಆಲಿಸಿದರು. ಮೂಲಭೂತ ಸೌಕರ್ಯಗಳ ಕೊರತೆಯಿಂದ ತಮಗಾಗಿರುವ ತೊಂದರೆಯನ್ನು …

Read More »

ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಲಿದ ಕಾಂಗ್ರೆಸ್

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ಉಸ್ತುವಾರಿಗಳಾಗಿರುವ ರಣದೀಪ್ ಸಿಂಗ್ ಸುರ್ಜೇವಾಲ ರವರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗದ ಕಾಂಗ್ರೆಸ್ ಮುಖಂಡರು ಇಂದು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಲಿದ್ದಾರೆ. ವರುಣಾ ಹಾಗೂ ಚಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ್ದಾರೆ. ಸಚಿವ ವಿ.ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ್ದಾರೆ. …

Read More »

ಮೇ 3ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಂಕೋಲಾಗೆ; ಕೇಂದ್ರ ಸಚಿವ ಶ್ರೀಪಾದ ನಾಯ್ಕ

ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ವಿರೋಧ ಪಕ್ಷದಲ್ಲಿರುವುದರಿಂದ ಅವರನ್ನು ಸೋಲಿಸುವುದು ಅವಶ್ಯಕ ಹಾಗೂ ಅನಿವಾರ್ಯ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಅವರು ಹೇಳಿದರು. ಕೇಂದ್ರ ಸಚಿವ ಶ್ರೀಪಾದ ನಾಯ್ಕಕಾರವಾರ (ಉತ್ತರ ಕನ್ನಡ) : ಪ್ರಧಾನಿ ನರೇಂದ್ರ ಮೋದಿ ಮೇ 3 ರಂದು ಜಿಲ್ಲೆಗೆ ಆಗಮಿಸುವುದು ಬಹುತೇಕ ಖಚಿತವಾಗಿದ್ದು, ಸಮಾವೇಶಕ್ಕೆ 3 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಹೇಳಿದರು.   …

Read More »

ಆರ್​ಟಿಐಯಡಿ ಕೇಳಿದ ಮಾಹಿತಿ ನಿರಾಕರಣೆ: ಮಹೇಶ್​ ಜೋಷಿಗೆ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರಿನ ದೂರದರ್ಶನ ಕೇಂದ್ರದ ಸಹಾಯಕ ನಿರ್ದೇಶಕ ಹಾಗೂ ಕೇಂದ್ರ ಮಾಹಿತಿ ಅಧಿಕಾರಿಯಾಗಿದ್ದ ಹಾಲಿ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷರಾಗಿರುವ ಮಹೇಶ್​ ಜೋಷಿ ಅವರಿಗೆ ಹೈಕೋರ್ಟ್ 50 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕರ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಮಾಹಿತಿಯನ್ನು ಒದಗಿಸುವಂತೆ ಸೂಚಿಸಿದ್ದ ಮೇಲ್ಮನವಿ ಪ್ರಾಧಿಕಾರದ ಸೂಚನೆ ಹಾಗೂ ಮಾಹಿತಿ ನೀಡಲು ವಿಳಂಬ ಮಾಡಿದ್ದರ ಪರಿಣಾಮ ವಿಧಿಸಿದ್ದ ದಂಡವನ್ನು ರದ್ದು ಪಡಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್​ ಜೋಷಿಗೆ …

Read More »