ಬೆಂಗಳೂರು: ಬಿಸಿಲ ಝಳ ಹೆಚ್ಚಾಗುತ್ತಿದ್ದು ಕಲಬುರಗಿ ಹೈಕೋರ್ಟ್ ಪೀಠದ ಕಲಾಪದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆ 8ಕ್ಕೆ ಆರಂಭವಾಗುವ ಕಲಾಪವು ಮಧ್ಯಾಹ್ನ 1.30ಕ್ಕೆ ಮುಗಿಯಲಿದೆ. ಇದೇ ನಿಯಮವನ್ನು ಕಲಬುರಗಿ ಮತ್ತು ಬೆಳಗಾವಿ ವಿಭಾಗದ 8 ಜಿಲ್ಲಾ ನ್ಯಾಯಾಲಯಗಳಿಗೂ ವಿಸ್ತರಿಸಲಾಗಿದೆ. ಏಪ್ರಿಲ್ 3ರಿಂದ ಸಮಯ ಬದಲಾವಣೆ ಜಾರಿಗೆ ಬಂದಿದ್ದು, ಮೇ 31ರವರೆಗೂ ಮುಂದುವರೆಯಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ …
Read More »ಅತ್ತೆ ಮನೆಯಲ್ಲಿ 11 ಲಕ್ಷ ರೂ. ಕಳ್ಳತನ ಮಾಡಿದ ಅಳಿಯ
ಕಲಬುರಗಿ: ಕಲಬುರಗಿ ಜಿಲ್ಲೆ ಕಾಳಗಿ ಪೊಲೀಸರು ಕಾರ್ಯಾಚರಣೆ ನಡೆಸಿ ಅತ್ತೆ ಮನೆಯಲ್ಲಿಯೇ 11 ಲಕ್ಷ ರೂ.ಕಳ್ಳತನ ಮಾಡಿದ್ದ ಆರೋಪಿ ಅಳಿಯನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಅಡ್ಡೂರು ಶ್ರೀನಿವಾಸುಲು ತಿಳಿಸಿದರು. ಕಾಳಗಿ ಪಟ್ಟಣದ ನಿವಾಸಿ ಮೀನಪ್ಪ ಬೆನ್ನೂರ (38) ಬಂಧಿತ ಆರೋಪಿಯಾಗಿದ್ದು, ಆತನಿಂದ 9.30 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಕಳೆದ ಮಾ.28 ರಂದು ರಟಕಲ್ ಗ್ರಾಮದ ಸಿದ್ದಮ್ಮ ಮಲ್ಲೇಶಪ್ಪ ರಟಕಲ್ ಅವರ ಮನೆಯಲ್ಲಿ 11 ಲಕ್ಷ ರೂ. ಕಳ್ಳತನ ಆಗಿತ್ತು. …
Read More »ಪಿಯುಸಿ ರಿಸಲ್ಟ್: ಬಾಲಕಿಯರದ್ದೇ ಮೇಲುಗೈ
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆ ಬರೆದಿದ್ದ 6,37,805 ಲಕ್ಷ ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ಶೇ.73.45ರಷ್ಟು ಫಲಿತಾಂಶ ಬಂದಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.8ರಷ್ಟು ಕುಸಿತವಾಗಿದೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಎಲ್.ಆರ್.ಸಂಜನಾಬಾಯಿ ಅವರಿಗೆ ಒಟ್ಟು 600ರಲ್ಲಿ 597 ಅಂಕ ಬಂದಿದೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ …
Read More »ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ಕಾಲೇಜಿನ ಖುಷಿ ಹುಗ್ಗಿ ಸಾಧನೆ
ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ಕಾಲೇಜಿನ ಖುಷಿ ಹುಗ್ಗಿ ಸಾಧನೆ ಬೆಳಗಾವಿ ಪ್ರೇರಣಾ ಪಿ.ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಹುಗ್ಗಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭಾರಿ ಸಾಧನೆಯನ್ನು ಮಾಡಿದ್ದಾರೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಬೆಳಗಾವಿಯ ಪ್ರೇರಣಾ ಪಿ. ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಗಿರೀಶ ಹುಗ್ಗಿ ಒಟ್ಟು 600 ಅಂಕಗಳ ಪೈಕಿ 581 ಅಂಕಗಳನ್ನು ಪಡೆದಿದ್ದಾರೆ. ಮಹಾವಿದ್ಯಾಲಯದಲ್ಲಿ ಮತ್ತು ಪೋಷಕರಲ್ಲಿ ಸಂತಸ …
Read More »ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಮದ್ಯಾಹ್ನ ಪ್ರಕಟವಾಗಲಿದೆ. ರಾಜ್ಯದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಂಗಳವಾರ ಮದ್ಯಾಹ್ನ 1.30 ಕ್ಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್ 8ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ.ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ನಾಳೆ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ …
Read More »ಪಂಬನ್ ಸೇತುವೆ- ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆ
ಹುಬ್ಬಳ್ಳಿ: ತಮಿಳುನಾಡಿನ ರಾಮೇಶ್ವರಂನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಪಂಬನ್ ಸಮುದ್ರ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಇದರೊಂದಿಗೆ, ಹುಬ್ಬಳ್ಳಿ ಹಾಗೂ ರಾಮೇಶ್ವರಂ ನಡುವೆ ರೈಲು ಸಂಚಾರ ಆರಂಭಗೊಳ್ಳಲಿದೆ. ಸೇತುವೆಯು ಭೂಮಿ ಮತ್ತು ರಾಮೇಶ್ವರಂ ದ್ವೀಪದ ನಡುವೆ ರೈಲು ಸಂಪರ್ಕ ಒದಗಿಸುತ್ತದೆ. ರಾಮನವಮಿಯ ಶುಭ ಸಂದರ್ಭದಲ್ಲಿ ಸೇತುವೆ ಉದ್ಘಾಟನೆಯಾಗಿದ್ದು, ಇದು ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆಯಾಗಿದೆ. ಈ ಮೊದಲು ಕಾರ್ಯಾಚರಣೆಯ ಕಾರಣಾಂತರಗಳಿಂದ ರದ್ದುಗೊಳಿಸಲಾಗಿದ್ದ ಹುಬ್ಬಳ್ಳಿ-ರಾಮೇಶ್ವರಂ ನಡುವಿನ ಸಾಪ್ತಾಹಿಕ …
Read More »ನೀರಾವರಿ ನಿಗಮದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಮೈಸೂರು: ಲಂಚ ಸ್ವೀಕರಿಸುತ್ತಿದ್ದ ನಂಜನಗೂಡು ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಅವರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಈ ಅಧಿಕಾರಿಗಳು 1.45 ಲಕ್ಷ ರೂ.ಲಂಚದ ಹಣ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಪಾಲಕ ಅಭಿಯಂತರ ಕಾವೇರಿ ರಂಗನಾಥ್ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಉಮಾ ಮಹೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರದ ಅಬ್ದುಲ್ ಅಜೀಜ್ ಎಂಬವರಿಂದ ಅಧಿಕಾರಿಗಳು 1.45 ಲಕ್ಷ ರೂ. ಲಂಚ …
Read More »ಯತ್ನಾಳ್ ಉಚ್ಚಾಟನೆಗೆ ಉತ್ತರ ಕರ್ನಾಟಕದ ಜನರು ಸಂದರ್ಭಾನುಸಾರವಾಗಿ ಉತ್ತರ ಕೊಡುತ್ತಾರೆ ಎಂದ ಸವದಿ
ಚಿಕ್ಕೋಡಿ (ಬೆಳಗಾವಿ) : ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಚಿಂತನೆ ಪ್ರಾರಂಭವಾಗಿದೆ. ಸಂದರ್ಭಾನುಸಾರವಾಗಿ ಬಿಜೆಪಿಗೆ ಏನು ಉತ್ತರ ಕೊಡಬೇಕು ಅದನ್ನು ಮುಂದೆ ಈ ಭಾಗದ ಜನ ಕೊಡುತ್ತಾರೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಅಥಣಿ ಶಾಸಕ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದರು. ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಚಾಕ್ವೆಲ್ ಕಮ್ ಪಂಪ್ ಹೌಸ್ ನಿರ್ಮಾಣ ಹಂತಕ್ಕೆ ಪೂಜೆ ನೆರವೇರಿಸಿದ ಬಳಿಕ, ಮಾಧ್ಯಮದವರೊಂದಿಗೆ …
Read More »ಲಾಡ್ ಅವರಿಗೆ ತಮ್ಮ ಕ್ಷೇತ್ರವೇ ಕಾಣೋದಿಲ್ಲ: ಬೆಲ್ಲದ
ಲಾಡ್ ಅವರಿಗೆ ತಮ್ಮ ಕ್ಷೇತ್ರವೇ ಕಾಣೋದಿಲ್ಲ: ಶಾಸಕ ಬೆಲ್ಲದ ತಿರುಗೇಟು. ….ಬಿಜೆಪಿ ಮೋದಿ ವಿರುದ್ಧವೇ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂದಿದ್ದ ಸಚಿವ ಲಾಡ್‌ಗೆ ಬೆಲ್ಲದ ಟಾಂಗ್… ಬಿಜೆಪಿ ಮೋದಿ ವಿರುದ್ಧವೇ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂಬ ಸಚಿವ ಸಂತೋಷ ಲಾಡ್ ಹೇಳಿಕೆಗೆ ಪ್ರತಿಕ್ರಿಯೆಪ್ರತಿಕ್ರಿಯೆಯಾಗಿ ನಿಒಡ ಲಾಡ್ ಹೇಳಿಕೆಗೆ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಸಚಿವ ಲಾಡ್ ಅವರಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸಂತೋಷ …
Read More »ನಾಳೆ ದ್ವಿತೀಯ ಪಿಯು ಫಲಿತಾಂಶ:
ಬೆಂಗಳೂರು, (ಏಪ್ರಿಲ್ 07): ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ( 2nd PUC Students) ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd PUC Exam 2025 Result ) ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. …
Read More »