Breaking News
Home / ರಾಷ್ಟ್ರೀಯ (page 341)

ರಾಷ್ಟ್ರೀಯ

ಬಂಡಾಯದ ನೆಲದಲ್ಲಿ ಬಲಾಬಲ : ಪ್ರಾಬಲ್ಯಕ್ಕಾಗಿ ಇತರ ಪಕ್ಷಗಳಿಂದ ಪೈಪೋಟಿ

ಗದಗ: ಬಂಡಾಯದ ನೆಲ ನರಗುಂದ ವಿಧಾನಸಭಾ ಮತಕ್ಷೇತ್ರದಲ್ಲಿ ಚುನಾವಣೆ ಜೋರಾಗಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಮತಕ್ಷೇತ್ರ ಕೂಡ ಒಂದು. ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಸ್ಥಳೀಯ ಪಕ್ಷಗಳು ಅಳೆದು ತೂಗಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಬಿರುಸಿನ ಪ್ರಚಾರ ಕೂಡ ನಡೆಸಿದ್ದಾರೆ. ಹಾಗಾಗಿ ಕ್ಷೇತ್ರ ರಾಜಕೀಯ ರಂಗು ಪಡೆದಿದೆ. ಕಿತ್ತೂರು-ಕರ್ನಾಟಕ ಪ್ರದೇಶದ ವ್ಯಾಪ್ತಿಗೆ ಒಳಪಡುವ ಈ ಕ್ಷೇತ್ರ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಒಂದು ಭಾಗ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ …

Read More »

ಬಂಡಾಯ ಅಭ್ಯರ್ಥಿ ಕಾಲಿಗೆ ನಮಸ್ಕರಿಸಿದ ಬಿಜೆಪಿ ಅಭ್ಯರ್ಥಿ

ಗದಗ: ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಹಾಲಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ, ಸೋಮವಾರ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ನಾಮಪತ್ರ ಹಿಂಪಡೆಯುತ್ತಿದ್ದಂತೆ ಅವರ ನಿವಾಸಕ್ಕೆ ಆಗಮಿಸಿದ ಶಿರಹಟ್ಟಿ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರು ಲಮಾಣಿ ಧನ್ಯವಾದ ಹೇಳುವ ಮೂಲಕ, ರಾಮಣ್ಣ ಲಮಾಣಿ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ರಾಮಣ್ಣ ಲಮಾಣಿ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಆದಿಯಾಗಿ ಜಿಲ್ಲಾ …

Read More »

ಬಿಎಸ್​​​ವೈ ಭೇಟಿ ಮಾಡಿದ ಬಿ ಎಲ್ ಸಂತೋಷ್: ಶೆಟ್ಟರ್​​​ಗೆ ಸಿದ್ದವಾಯ್ತಾ ಖೆಡ್ಡಾ..?

ಬೆಂಗಳೂರು: ಎಲ್ಲ ಅವಕಾಶಗಳ ಹೊರತಾಗಿಯೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ​ನ್ನು ಸೋಲಿಸಲು ಬಿಜೆಪಿ ಹೈಕಮಾಂಡ್ ರಣತಂತ್ರ ರೂಪಿಸುತ್ತಿದೆ. ಅದರ ಭಾಗವಾಗಿ ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಅಗ್ರಗಣ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಮೂಲಗಳ ಪ್ರಕಾರ ಶೆಟ್ಟರ್​ಗೆ ಖೆಡ್ಡಾ ಸಿದ್ದಪಡಿಸಲಾಗಿದೆ ಎಂದು ತಿಳಿದುಬಂದಿದೆ. ಕುಮಾರಪಾರ್ಕ್​ನಲ್ಲಿರುವ …

Read More »

ಮತ್ತೆ ಗೆಲ್ತಾರಾ ಹೆಬ್ಬಾಳ್ಕರ್, ಜೊಲ್ಲೆ, ನಿಂಬಾಳ್ಕರ್..? ರತ್ನಾ ಕೊರಳಿಗೆ ಬೀಳುತ್ತಾ ವಿಜಯದ ಮಾಲೆ?

ಬೆಳಗಾವಿ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ರಂಗೇರಿದೆ. ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್​ನಿಂದ ನಾಲ್ವರು ಮಹಿಳಾ ಅಭ್ಯರ್ಥಿಗಳು ಕಣದಲ್ಲಿರುವುದು ಕುತೂಹಲ ಹೆಚ್ಚಿಸಿದೆ. ಬೆಳಗಾವಿ : ಜಿಲ್ಲೆಯಲ್ಲಿ ಕಾಂಗ್ರೆಸ್ ಬಿಜೆಪಿ ರಾಷ್ಟ್ರೀಯ ಪಕ್ಷಗಳಿಂದ ನಾಲ್ವರು ಮಹಿಳೆಯರು ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕಳೆದ ಬಾರಿ ಮೂವರು ಮಹಿಳಾ ನಾಯಕಿಯರು ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಹೌದು, ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಲ್ಲ. ಅವಕಾಶ ಕೊಟ್ಟರೆ ವಿಧಾನಸಭೆಯಲ್ಲಿ ಆಡಳಿತವನ್ನೂ ನಡೆಸಬಲ್ಲರು ಎಂಬುದನ್ನು ಜಿಲ್ಲೆಯ ಮೂವರು …

Read More »

ಮತದಾನ ಬಹಿಷ್ಕರಿಸಿದ ನಾಗನೂರು ಪಿಎ ಗ್ರಾಮಸ್ಥರು

ಚಿಕ್ಕೋಡಿ (ಬೆಳಗಾವಿ): ಮೂಲ ಸೌಕರ್ಯ ಇಲ್ಲದೇ ಇರುವುದರಿಂದ 15ನೇಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ನಾಗನೂರು ಪಿಎ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ನಾಗನೂರ ಪಿಎ ಗ್ರಾಮ ಕಂಟೇಕರ್ ತೋಟದ ನಿವಾಸಿಗಳು ಮತದಾನ ಬಹಿಷ್ಕರಿಸಿ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾಗನೂರು ಪಿಎ ಗ್ರಾಮದಿಂದ ಕಂಟೇಕರ್ ತೋಟಕ್ಕೆ ಬರುವ ವಸತಿ ಪ್ರದೇಶಕ್ಕೆ ದಶಕಗಳಿಂದ ರಸ್ತೆ ಇಲ್ಲದೇ ಇರುವುದರಿಂದ ಗ್ರಾಮಸ್ಥರ …

Read More »

“ಕುಸ್ತಿಪಟುಗಳ ಆರೋಪ ಗಂಭೀರ”; ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ : ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರ ವಿರುದ್ಧ ಎಫ್​ಐಆರ್ ದಾಖಲಿಸಿ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ದೇಶದ ಕುಸ್ತಿಪಟುಗಳು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಮುಂದುವರೆದಿದೆ. ಕೆಲ ಮಹಿಳಾ ಕುಸ್ತಿಪಟುಗಳ ಮೇಲೆ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರ್ಮಾ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬ್ರಿಜ್ ಭೂಷಣ್ ಶರ್ಮಾ ಬಿಜೆಪಿಯ ಲೋಕಸಭಾ ಸಂಸದರೂ ಆಗಿದ್ದಾರೆ.     ಈ ಮಧ್ಯೆ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು …

Read More »

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು: B.S.Y.

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು: ಬಿಎಸ್ ವೈ ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವರುಣಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸಿದ್ದರಾಮಯ್ಯನವರು ಲಿಂಗಾಯುತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ಅವರು ರಾಜ್ಯದ ಜನರಿಗೆ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕ್ಷಮೆ ಯಾಚಿಸುವಂತೆ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದರು.

Read More »

ಯೋಗಿ ಆದಿತ್ಯನಾಥ ಅವರಿಗೆಜೀವ ಬೆದರಿಕೆ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು ಅವರ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. 112 ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಕರೆ ಮಾಡಿದ ವ್ಯಕ್ತಿ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಒಂದು ವಾರದ ಹಿಂದಷ್ಟೇ ಯೋಗಿ ಆದಿತ್ಯನಾಥ ಅವರಿಗೆ ವ್ಯಕ್ತಿಯೊಬ್ಬ ಜಾಲತಾಣದಲ್ಲಿ ಜೀವಬೆದರಿಕೆ ಒಡ್ಡಿದ್ದು ಆತನನ್ನು …

Read More »

ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್ ವಿಧಿವಶ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇನಾಮದಾರ್, ಮಣಿಆಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

Read More »

ಮ್ಮ ಸರ್ಕಾರ ಬಂದ್ರೆ ಕಬ್ಬಿಗೆ ಏಕರೂಪ ದರ ನಿಗದಿ: ರಾಹುಲ್ ಗಾಂಧಿ ಭರವಸೆ

ಬೆಳಗಾವಿ: ”ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದರೆ, ಕಬ್ಬಿಗೆ ಏಕರೂಪದ ದರ ನಿಗದಿ ಮಾಡಲಾಗುವುದು. ಅದು ಈಗಿರುವ ದರಕ್ಕಿಂತ ಅತಿ ಹೆಚ್ಚಾಗಿರುತ್ತದೆ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದರು. ರಾಮದುರ್ಗ ಪಟ್ಟಣದಲ್ಲಿ ಸೋಮವಾರ ರೈತರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ”ಕಬ್ಬು ಬೆಳೆ ದರ ಹೆಚ್ಚಳ ಮಾತ್ರವಲ್ಲ, ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿಯೂ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ರೈತರ ಆದಾಯ ದ್ವಿಗುಣ ಮಾಡಲು ಯತ್ನಿಸುತ್ತೇವೆ” ಎಂದರು. ”ಸಕ್ಕರೆ ಕಾರ್ಖಾನೆಗಳು ಕಬ್ಬಿಗೆ …

Read More »