Breaking News
Home / ರಾಷ್ಟ್ರೀಯ (page 350)

ರಾಷ್ಟ್ರೀಯ

ಕಲಾಬಿಂಬ ವಸ್ತು ಪ್ರದರ್ಶನ ಮಹಾವೀರ ಭವನದಲ್ಲಿ ಯಶಸ್ವಿ

ಬೆಳಗಾವಿ: ಕ್ರಾಂತಿ ಮಹಿಳಾ ಮಂಡಳ ಹಾಗೂ ಉಮಾ ಸಂಗೀತ ಪ್ರತಿಷ್ಠಾನ ಸಂಸ್ಥೆಗಳು ದೇಶಪಾಂಡೆ ಸ್ಟಾರ್ಟ್ ಅಪ್ ಸಹಯೋಗದೊಂದಿಗೆ ಗೋವಾವೇಸದಲ್ಲಿರುವ ಮಹಾವೀರ ಭವನದಲ್ಲಿ ಕಲಾಬಿಂಬ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಈ ವಸ್ತು ಪ್ರದರ್ಶನ 15 ಮತ್ತು 16 ಎರಡು ದಿನಗಳ ಕಾಲ ಯಶಸ್ವಿಯಾಗಿ ನೆರವೇರಿತು ಸುಮಾರು 40 ಮಾರಾಟ ಮಳಿಗೆಗಳು ಹಾಗೂ 10 ಉಪಹಾರ ಮಳಿಗೆಗಳು ಬಂದಿದ್ದವು ಈ ಕಲಾಬಿಂಬ ವಸ್ತು ಪ್ರದರ್ಶನದಿಂದ ಬಂದ ಹಣವನ್ನು ತಿಲಕವಾಡಿಯ ಮಂಡೋಳಿ ರಸ್ತೆಯ ಶಾಂತಿನಗರದ ಆಶ್ರಮದಲ್ಲಿ …

Read More »

ಯಾದಗಿರಿ: 10 ಸಾವಿರ ಒಂದು ರೂಪಾಯಿ ನಾಣ್ಯಗಳಲ್ಲಿ ಚುನಾವಣಾ ಠೇವಣಿ ಕಟ್ಟಿದ ಸ್ವತಂತ್ರ ಅಭ್ಯರ್ಥಿ!

ಯಾದಗಿರಿ, ಏಪ್ರಿಲ್. 18: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ಹಲವು ಕುತೂಹಲಕಾರಿ ವಿಷಯಗಳು ಹೊರಬರುತ್ತಿವೆ. ಅಭ್ಯರ್ಥಿಗಳ ಆಸ್ತಿ ಘೋಷಣೆ ಕೇಳಿ ಜನಸಾಮಾನ್ಯರು ತಲೆ ಸುತ್ತಿ ಬಿದ್ದರೇ, ಮತ್ತೆ ಕೆಲವು ಅಭ್ಯರ್ಥಿಗಳು ಚುನಾವಣಾ ಠೇವಣಿ ಹಣ ಕಟ್ಟುವ ಸಮಯದಲ್ಲಿ ವಿಭಿನ್ನ ಪ್ರಯೋಗಗಳ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ.   ಸೋಮವಾರವಷ್ಟೇ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಠೇವಣಿ ಇಡಲು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯೊಬ್ಬರು ಬುಟ್ಟಿಯಲ್ಲಿ ರಾಶಿ …

Read More »

ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ದೀಪಕ್‌ ಚಿಂಚೋರೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

ಧಾರವಾಡ, ಏಪ್ರಿಲ್‌, 18: ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾಚಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬಿಳಲಿದೆ. ಈ ಹಿನ್ನೆಲೆ ಮಂಗಳವಾರ (ಏಪ್ರಿಲ್‌ 18) ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗೆಯೇ ತೀವ್ರ ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ದೀಪಕ್‌ ಚಿಂಚೋರೆ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಲಾಗಿದೆ.   ಕಾಂಗ್ರೆಸ್‌ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಹಾಲಿಬಿಜೆಪಿಶಾಸಕ ಅರವಿಂದ ಬೆಲ್ಲದ್‌ ಅವರ ವಿರುದ್ಧ ದೀಪಕ್‌ ಚಿಂಚೋರೆ …

Read More »

ಶೆಟ್ಟರ್, ಸವದಿ ಸೋಲಿಗೆ ಯಡಿಯೂರಪ್ಪ ಶಪಥ!

ಬೆಂಗಳೂರು: ಬಿಜೆಪಿ ನಾಯಕರಿಗೆ ತಮ್ಮದೇ ನಿರ್ಧಾರ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಶಾಸಕರು ಒಬ್ಬರಾದ ನಂತರ ಮತ್ತೊಬ್ಬರು ಪಕ್ಷ ತೊರೆದು ಹೊರ ಹೋಗುತ್ತಿದ್ದಾರೆ. ಈ ಹೊತ್ತಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಸೋಲಿಗೆ ಬಿ.ಎಸ್. ಯಡಿಯೂರಪ್ಪ ಪಣತೊಟ್ಟಿದ್ದಾರೆ. ಇಬ್ಬರ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ತೀವ್ರಗೊಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಒಂದೇ ಪಕ್ಷದಲ್ಲಿದ್ದ ಮಾಜಿ ಸಿಎಂಯಡಿಯೂರಪ್ಪಹಾಗೂ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಆಪ್ತರಾಗಿದ್ದರು. ಆದರೆ ಯಾವಾಗ ಜಗದೀಶ್ …

Read More »

ಕಾಂಗ್ರೆಸ್‌ಗೆ ಗೆಲುವಿನ ಮುನ್ಸೂಚನೆ ನೀಡಿದ ಮಹತ್ವದ ಸಮೀಕ್ಷೆ- ಯಾವ ಭಾಗದಲ್ಲಿ ಎಷ್ಟು ಸ್ಥಾನ ತಿಳಿಯಿರಿ

ಬೆಂಗಳೂರು, : ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣಾ ( Karnataka Assembly Election 2023 ) ಪೂರ್ವ ಸಮೀಕ್ಷೆಗಳು ಹೊರಬರುತ್ತಿವೆ. ಈ ಹಿಂದೆ ಬಂದಿರುವ ಸಮೀಕ್ಷೆಗಳನ್ನು ನೋಡುವುದಾದರೆ, ಕರ್ನಾಟಕದ ಮತದಾರರು ಆಡಳಿತಾರೂಢ ಬಿಜೆಪಿಗೆ ( BJP ) ಹೆಚ್ಚಿನ ಮನ್ನಣೆ ನೀಡುತ್ತಿಲ್ಲ ಎನ್ನುವುದು ತಿಳಿದುಬರುತ್ತದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ( Congress ) ಲಾಭವಾಗಬಹುದು ಎಂಬುದನ್ನು ಮಹತ್ವದ ಚುನಾವಣಾ ಸಮೀಕ್ಷೆಗಳು ಬಹಿರಂಗ ಪಡಿಸಿವೆ. ಸೋಮವಾರ ಹೊರ …

Read More »

ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲಿ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದೆ. ನಾಲ್ಕನೇ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ 7 ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್- ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಪಶ್ಚಿಮ- ದೀಪಕ್ ಚ್ಂಚೋರೆ ಲಿಂಗಸಗೂರು- ದುರ್ಗಪ್ಪ ಎಸ್ ಹುಲಗೇರಿ ಶಿಗ್ಗಾವಿ-ಮೊಹಮ್ಮದ್ ಯೂಸೂಫ್ ಸವಣೂರು ಹರಿಹರ- ನಂದಗಾವಿ ಶ್ರೀನಿವಾಸ್ ಚಿಕ್ಕಮಗಳೂರು-ಹೆಚ್.ಡಿ.ತಮ್ಮಯ್ಯ ಶ್ರವಣಬೆಳಗೊಳ-ಎಂ.ಎ.ಗೋಪಾಲಸ್ವಾಮಿ

Read More »

ಕುಸಿದು ಬಿದ್ದ ಕಬ್ಬಿಣದ ಹೋರ್ಡಿಂಗ್ : ಐವರು ಸಾವು.!

ಮುಂಬೈ-ಪುಣೆ ಹೆದ್ದಾರಿಯ ರಾವೆಟ್ ಕಿವಾಲೆ ಪ್ರದೇಶದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕೆಲವರು ಬಿರುಗಾಳಿಯಿಂದ ಕಬ್ಬಿಣದ ಹೋರ್ಡಿಂಗ್ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಹೋರ್ಡಿಂಗ್ ಅವರ ಮೇಲೆ ಕುಸಿದು ಬಿದ್ದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಐದು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ ಯಾರಾದರೂ ಹೋರ್ಡಿಂಗ್ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆಯೇ ಎಂದು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. …

Read More »

ಪ್ರಚಾರಕ್ಕೆ ತೆರಳಿದ್ದ ವಿ.ಸೋಮಣ್ಣ, ಪ್ರತಾಪ ಸಿಂಹಗೆ ತೀವ್ರ ತರಾಟೆ

ಮೈಸೂರು; ಪ್ರಚಾರಕ್ಕೆ ತೆರಳಿದ್ದ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ ಸಿಂಹಗೆ ಜನರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ವರುಣಾ ಕ್ಷೇತ್ರದಲ್ಲಿ ನಡೆದಿದೆ. ವಿ.ಸೋಮಣ್ಣ ಅವರು ನಿನ್ನೆ ನಾಮಪತ್ರ ಸಲ್ಲಿಸಿದ್ದು, ಇಂದು ವರುಣಾ ಕ್ಷೇತ್ರ ವ್ಯಾಪ್ತಿಯ ಲಲಿತಾದ್ರಿಪುರಂನಲ್ಲಿ ಮತಯಾಚನೆಗೆ ತೆರಳಿದ್ದರು. ಈ ವೇಳೆ ಲಲಿತಾದ್ರಿಪುರಂ ಗ್ರಾಮಸ್ಥರು, ನೀವು ಮೈಸೂರು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗ ಯಾವ ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಸೋಮಣ್ಣ ಹಾಗೂ ಪ್ರತಾಪ ಸಿಂಹ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. …

Read More »

ಬಿಜೆಪಿಯ ಕೆಲ ನಾಯಕರಿಂದ ನಾನು ನೋವನುಭವಿಸಿದ್ದೇನೆ ನನಗೆ ಟಿಕೆಟ್ ಕೈತಪ್ಪಲು ಕೆಲ ನಾಯಕರು ಕಾರಣ::ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯಲ್ಲಿ ನನಗೆ ಅವಕಾಶ ಸಿಕ್ಕಾಗ ಒಳ್ಲೆಯ ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಆದರೆ ಬಿಜೆಪಿಯ ಕೆಲ ನಾಯಕರಿಂದ ನಾನು ನೋವನುಭವಿಸಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗುವವರೆಗೆ ಸುಮ್ಮನಿದ್ದೆ. ನನಗೆ ಟಿಕೆಟ್ ಕೈತಪ್ಪಲು ಕೆಲ ನಾಯಕರು ಕಾರಣ. ನನ್ನ ವಿರುದ್ಧ ಷಡ್ಯಂತ್ರ ನಡೆಸಿ ಪಕ್ಷದಿಂದ ಹೊರ ಬರುವಂತೆ ಮಾಡಿದರು. ಅವರು ಯಾರು …

Read More »

ಅಥಣಿಯಲ್ಲಿ ಯುವಕನ ಬರ್ಬರವಾಗಿ ಹತ್ಯ

ಅಥಣಿ: ಅಥಣಿಯಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯ ಮಾಡಲಾಗಿದೆ. ಕೊಕಟನೂರು ರಸ್ತೆಯ ಶಾಂತಿನಾಥ ಬಡಾವಣೆಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಲಾಗಿದೆ. ನಂದಗಾಂವ್ ನಿವಾಸಿಯಾಗಿದ್ದ ಜ್ಯೋತಿಬಾ ಗಾಯಕವಾಡ (35) ಕೊಲೆಯಾದಾತ. ಅಥಮಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Read More »