Breaking News
Home / ರಾಷ್ಟ್ರೀಯ (page 369)

ರಾಷ್ಟ್ರೀಯ

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿಲ್ಲ. ನರೇಂದ್ರ ಮೋದಿಯವರು ದೇಶದ ಆಡಳಿತದ ಚುಕ್ಕಾಣಿ ಹಿಡಿದ ಬಳಿಕ ಈ ಧೋರಣೆ ಬದಲಾಗಿದೆ. ಆದರೆ, ಆಡಳಿತ ವಿರೋಧಿ ಅಲೆಯಿದೆ ಮನಸ್ಥಿತಿಯಿಂದ ಮತಪೂರ್ವ ಸಮೀಕ್ಷೆ ನಡೆಸುವ ಸಂಸ್ಥೆಗಳು ಹೊರಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪ್ರತಿಪಾದಿಸಿದರು.   ಬಿಜೆಪಿ ಮಾಧ್ಯಮ ಕೇಂದ್ರಕ್ಕೆ ಸೋಮವಾರ ಚಾಲನೆ ನೀಡಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಾರಾತ್ಮಕ ನೆಲೆಯಲ್ಲಿ ಈ ಚುನಾವಣೆಯನ್ನು ಪಕ್ಷ ಎದುರಿಸಲಿದೆ. ಪ್ರಗತಿ ವರದಿ ಮುಂದಿಟ್ಟು ಜನರ …

Read More »

ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ : ಎಚ್. ವಿಶ್ವನಾಥ್

ಮೈಸೂರು: ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ. ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಪಶ್ಚಾತಾಪವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.   ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿ ಮಾತನಾಡಿದ, ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ. ಪಾಪದ ಹೊರೆ ಇಳಿಸಿ ಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ. ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ಎಂಎಲ್​ಸಿ ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು …

Read More »

ಕಾಂಚಾಣದ ಮೇಲೆ ಕೇಂದ್ರ ತಂಡಗಳ ನಿಗಾ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಚುನಾವಣಾ ಅಕ್ರಮ ಹಾಗೂ ಹಣ ಬಲದ ಪ್ರಭಾವವನ್ನು ಸವಾಲಾಗಿ ತೆಗೆದುಕೊಂಡಿರುವ ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಹದ್ದಿನ ಕಣ್ಣಿಡಲು ವಿಶೇಷ ತಂಡಗಳನ್ನು ರವಾನಿಸಲಿದೆ.   ಅದರಂತೆ, ಉತ್ತರ ಭಾರತದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಿಂದ “ಭಾರತೀಯ ಕಂದಾಯ ಸೇವೆ’ (ಐಆರ್‌ಎಸ್‌) ಅಧಿಕಾರಿಗಳ …

Read More »

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಫೂಲ್ ಮಾಡಿದೆ: ಡಿಕೆಶಿ

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲರನ್ನೂ ಮೂರ್ಖರನ್ನಾಗಿಸುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಸಮಾನವಾಗಿ ಸಿಗಬೇಕು. ಅದು ಬಿಟ್ಟು ಒಬ್ಬರದು ಕಿತ್ತು ಮತ್ತೊಬ್ಬರಿಗೆ ಕೊಡುವುದಲ್ಲ ಎಂದು ಟೀಕಿಸಿದರು. ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸುತ್ತೇವೆಂದು ಆಸೆ ತೋರಿಸಿದ್ದರು. ಏನಾಯಿತು? ಬಂಜಾರ ಸಮುದಾಯದ ಆಕ್ರೋಶ ನೋಡಿದ್ದೇವಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಬಿಜೆಪಿಯವರು ಮಾಡಿರುವ ಎಲ್ಲ ತಪ್ಪು ಸರಿ ಮಾಡುತ್ತದೆ. ಎಲ್ಲರಿಗೂ ನ್ಯಾಯ …

Read More »

ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ದ್ರೋಹ: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡದೆ ಮೋದಿ ಸರಕಾರ ಕರ್ನಾಟಕಕ್ಕೆ ದ್ರೋಹ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಬೊಮ್ಮಾಯಿ ನೇತೃತ್ವದ ರಾಜ್ಯ ಮತ್ತು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರಗಳು ಕಳೆದ 6 ತಿಂಗಳಲ್ಲಿ ನೂರಾರು ಕೋಟಿ ರೂ. ಜಾಹೀರಾತು ಬಿಡುಗಡೆ ಮಾಡಿವೆ. ಡಬಲ್‌ ಎಂಜಿನ್‌ ಸರ್ಕಾರ ಬಂದರೆ ಕರ್ನಾಟಕ ಸ್ವರ್ಗ ಆಗುತ್ತದೆ ಎಂದು ನಂಬಿಸಲು ಭಾಷಣಗಳು ಮತ್ತು …

Read More »

ಬಿಜೆಪಿ & ಆ ಪಕ್ಷದ ನಾಯಕರಿಗೆ ರಾಮಾಯಣವೂ ಗೊತ್ತಿಲ್ಲ. ರಾಮನ ಬಗ್ಗೆ ಪ್ರೀತಿಯೂ ಇಲ್ಲ:: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬಿಜೆಪಿ ಮತ್ತು ಆ ಪಕ್ಷದ ನಾಯಕರಿಗೆ ರಾಮಾಯಣವೂ ಗೊತ್ತಿಲ್ಲ. ರಾಮನ ಬಗ್ಗೆ ಪ್ರೀತಿಯೂ ಇಲ್ಲ. ಅವರಲ್ಲಿರುವುದು ಚುನಾವಣೆಗಾಗಿ ಕೇವಲ ತೋರಿಕೆಯ ಪ್ರೀತಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು.   ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಬೆಳಗಾದರೆ ರಾಮನ ಬಗ್ಗೆ ಮಾತನಾಡುವ ಬಿಜೆಪಿ ಶಾಸಕರಲ್ಲಿ ಎಷ್ಟು ಜನ ರಾಮಾಯಣ ಓದಿದ್ದಾರೆ? ಎಷ್ಟು ಜನ ವಿಷ್ಣುಪುರಾಣ ಪಠಿಸಿದ್ದಾರೆ ತೋರಿಸಲಿ. ಅಂತಹವರು ಯಾರೂ ಸಿಗುವುದಿಲ್ಲ. ಅವರಿಗೆ ರಾಮನ ಬಗ್ಗೆ ಪ್ರೀತಿ, …

Read More »

ಐದು ಬಾರಿಯ ಚಾಂಪಿಯನ್ ವಿರುದ್ಧ ಆರ್​​ಸಿಬಿ ಭರ್ಜರಿ ಜಯ

ಬೆಂಗಳೂರು: ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) ಐಪಿಎಲ್​-16ರ ಆರಂಭದಲ್ಲೇ ಐದು ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮೂರು ವರ್ಷಗಳ ಬಳಿಕ ಆರ್​ಸಿಬಿ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯವಾಡಿದ್ದು, ಈ ಸ್ಟೇಡಿಯಮ್​ಗೂ ಗೆಲುವು ಮರುಕಳಿಸಿದೆ.   ಮಾಜಿ ನಾಯಕ ವಿರಾಟ್​ ಕೊಹ್ಲಿ (82*ರನ್​, 49 ಎಸೆತ, 6 ಬೌಂಡರಿ, 5 ಸಿಕ್ಸರ್​) ಮತ್ತು ನಾಯಕ ಫಾಫ್​ ಡು ಪ್ಲೆಸಿಸ್​ (73 ರನ್​, 43 …

Read More »

ಬಸ್ ನಿಲ್ದಾಣಕ್ಕೆ ಅವರೇ ಹೋಗಿ ಸರ್ಕಾರಿ ಕಾರು ಕೊಟ್ಟು ಬಂದ್ರು; ಡಾ. ಕೇಲಗಾರ ಕಾರ್ಯಕ್ಕೆ ಸಿಬ್ಬಂದಿ ಶ್ಲಾಘನೆ

ರಾಣೆಬೆನ್ನೂರ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಎನ್‌ಡಬ್ಲೂೃಕೆಎಸ್‌ಆರ್‌ಟಿಸಿ ಅಧ್ಯಕ್ಷ ಡಾ. ಬಸವರಾಜ ಕೇಲಗಾರ ತಮಗೆ ನೀಡಿದ ಸರ್ಕಾರದ ಕಾರನ್ನು ತಾವೇ ಸ್ವತಃ ಬಸ್ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಿ ಸರಿಯಾಗಿ ಬೆಳಗ್ಗೆ 11.30ಕ್ಕೆ ಅಧಿಕಾರಿಗಳಿಗೆ ಹಸ್ತಾಂತರ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.   ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಡಾ. ಬಸವರಾಜ ಕೇಲಗಾರ ಅವರನ್ನು ಆರಂಭದಲ್ಲಿ ಎನ್‌ಡಬ್ಲೂೃಕೆಎಸ್‌ಆರ್‌ಟಿಸಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಕಳೆದ ಎರಡ್ಮೂರು ತಿಂಗಳ ಹಿಂದೆ ಅಧ್ಯಕ್ಷರನ್ನಾಗಿ …

Read More »

ತಮ್ಮ ಕುಟುಂಬದ ಯಾವುದೇ ಸದಸ್ಯ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆ ಇಲ್ಲ:ರಮೇಶ ಕತ್ತಿ

ಹುಕ್ಕೇರಿ: ‘ತಮ್ಮ ಕುಟುಂಬದ ಯಾವುದೇ ಸದಸ್ಯ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆ ಇಲ್ಲ. ನಾನು ಬೇರೆ ಪಕ್ಷ ಸೇರುತ್ತೇನೆ ಎಂಬುದು ಗಾಳಿ ಸುದ್ದಿ. ಜನ ಇದನ್ನು ಗಮನಕ್ಕೆ ತೆಗೆದುಕೊಳ್ಳಬಾರದು’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಸ್ಪಷ್ಟ‍ಪಡಿಸಿದರು.   ಪಟ್ಟಣದ ವಿಶ್ವರಾಜ್ ಭವನದಲ್ಲಿ ಹುಕ್ಕೇರಿ ಮಂಡಲ ವತಿಯಿಂದ ಗುರುವಾರ ಆಯೋಜಿಸಿದ್ದ ಬಿಜೆಪಿ ಚುನಾವಣಾ ತಯಾರಿ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದರು.’ತಮ್ಮ ಕುಟುಂಬದಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆದಿದೆ, …

Read More »

ಪುನೀತ್ ಕೆರೆಹಳ್ಳಿ ವಿರುದ್ಧ ಕೊಲೆ ಆರೋಪ

ರಾಮನಗರ: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು (Puneeth Kerehalli, Hindu Activist) ಸಾತನೂರು ಪೊಲೀಸರು (Satanuru Police) ಬಂಧಿಸಿರುವ ಮಾಹಿತಿ  ಲಭ್ಯವಾಗಿದೆ. ಸಾತನೂರು ಸಮೀಪ ಜಾನುವಾರುಗಳನ್ನು ರಕ್ಷಣೆ ಮಾಡುವ ವೇಳೆ ಇರ್ದಿಷ್ ಪಾಷಾ ಎಂಬಾತ ಸಾವನ್ನಪ್ಪಿದ್ದನು. ಇರ್ಗಿಷ್ ಮೇಲೆ ಹಲ್ಲೆಗೈದು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಇರ್ದಿಷ್ ಕುಟುಂಬಸ್ಥರು ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು (Complaint) ದಾಖಲಿಸಿದ್ದರು. ದೂರು ದಾಖಲಿಸಿಕೊಂಡಿರುವ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ …

Read More »