Breaking News
Home / ರಾಷ್ಟ್ರೀಯ (page 374)

ರಾಷ್ಟ್ರೀಯ

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ಪ್ರಾಚಾರ್ಯ

ರಾಯಚೂರು: ಪ್ರಾಚಾರ್ಯನೊಬ್ಬ ತನ್ನ ಸ್ಥಾನ- ಮಾನಗಳ ಪರಿವೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ವಿಜಯಕುಮಾರ ಅಂಗಡಿ ಆರೋಪಿ. ಈತನ ವಿರುದ್ಧ ಪೋಕ್ಸೋ, ಲೈಂಗಿಕ ಕಿರುಕುಳ, ಜಾತಿ ನಿಂದನೆ ಸೇರಿದಂತೆ ಹಲವು ಕಾಯ್ದೆ, ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮೊದಲಿಗೆ ಸಭ್ಯನಾಗೇ ಇದ್ದ ಪ್ರಾಚಾರ್ಯ ಅಂಗಡಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಬ್ಬಳ ವಿಷಯದಲ್ಲಿ ಗಡಿ ಮೀರಿದ ವರ್ತನೆ ತೋರಲು ಹೋಗಿ ಈಗ ಫಜೀತಿಗೆ ಬಿದ್ದಿದ್ದಾನೆ. ವಿದ್ಯಾರ್ಥಿನಿಯನ್ನು …

Read More »

ಸಧ್ಯದಲ್ಲಿಯೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ:B.S.Y.

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಈಗಗಲೇ ದಿನಾಂಕ ಘೋಷಣೆಯಾಗಿದೆ. ಬಿಜೆಪಿ ಚುನಾವಣೆಗೆ ಸಿದ್ಧವಾಗಿದ್ದು, ಈಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ 4 ತಂಡಗಳಾಗಿ ವಿಜಯಸಂಕಲ್ಪ ಯಾತ್ರೆ ಮಾಡಿದ್ದೇವೆ. ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದ್ದು, ಬಿಜೆಪಿ ಮತ್ತೆ ಅದಿಕಾರಕ್ಕೆ ಬರುವುದು ಸೂರ್ಯ, ಚಂದ್ರ ಇರುವಷ್ಟೇ ಸತ್ಯ ಎಂದು ಹೇಳಿದರು. …

Read More »

ಕರ್ನಾಟಕ ಚುನಾವಣೆ-2023: ಚುನಾವಣಾಪೂರ್ವ ಸಮೀಕ್ಷೆಗಳು ಪ್ರಕಟ; ಯಾರಿಗೆ ಎಷ್ಟು? ಇಲ್ಲಿದೆ ಪೂರ್ತಿ ವಿವರ..

ನವದೆಹಲಿ: ಕರ್ನಾಟಕದ 2023ರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾಪೂರ್ವ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಸದ್ಯಕ್ಕೆ ಐದು ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದ್ದು, ಸರಾಸರಿಯಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಕಂಡುಬಂದಿದೆ. ಎಬಿಪಿ ಸಿವೋಟರ್, ಮ್ಯಾಟ್ರಿಸ್​, ಲೋಕ್​ಪಾಲ್, ಪಾಪ್ಯುಲರ್ ಪೋಲ್ಸ್​​ ಮತ್ತು ಝೀ ನ್ಯೂಸ್​ ತಮ್ಮ ಚುನಾವಣಾಪೂರ್ವ ಸಮೀಕ್ಷೆಯನ್ನು ಪ್ರಕಟ ಮಾಡಿವೆ. ಎಬಿಪಿ ಸಿವೋಟರ್ ಚುನಾವಣಾಪೂರ್ವ ಸಮೀಕ್ಷೆ ಪ್ರಕಾರ ಕಾಂಗ್ರೆಸ್​ಗೆ 115ರಿಂದ 127 ಸ್ಥಾನ ಬರಲಿದ್ದು, ಬಿಜೆಪಿಗೆ 68-80 ಸ್ಥಾನ ಸಿಗಲಿದೆ. …

Read More »

ವಿಧಾನಸಭೆ ಚುನಾವಣೆ: ಎಬಿಪಿ ಸಿ -ವೋಟರ್ ಸಮೀಕ್ಷೆ ಪ್ರಕಟ, ಕಾಂಗ್ರೆಸ್‌ಗೆ ಬಹುಮತ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಎಬಿಪಿ ಸಿ-ವೋಟರ್ ಸಮೀಕ್ಷೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ ಕರ್ನಾಟಕ ವಿಧಾನಸಭೆ ಚುನಾವಣೆ (224 ಸ್ಥಾನಗಳು) ಕಾಂಗ್ರೆಸ್‌ -115 – 127 ಬಿಜೆಪಿ- 68 – 80 ಜೆಡಿಎಸ್‌ -23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ-ವೋಟರ್ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ. ಸಿಎಂ ಅಭ್ಯರ್ಥಿಗಳ ಪರವಾಗಿ ಮತದಾರರ ಒಲವು: …

Read More »

ನೀತಿ ಸಂಹಿತೆ ಜಾರಿ: ಯಾವೆಲ್ಲ ನಿಯಮಗಳು ಇರಲಿವೆ

ಬೆಂಗಳೂರು: 16ನೇ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಅಭ್ಯರ್ಥಿಗಳಿಗೆ ಹಾಗೂ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ನೀತಿ ಸಂಹಿತೆಯ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ಫಲಿತಾಂಶ ಬಂದು ಹೊಸ ಸರ್ಕಾರ ರಚನೆಯಾಗುವವರೆಗೆ ಈ ಸಂಹಿತೆಗಳು ಜಾರಿಯಲ್ಲಿರಲಿವೆ.   ಸಾಮಾನ್ಯ ಸಂಹಿತೆಗಳು 1. ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು ಧರ್ಮ, ಜಾತಿ, ಭಾಷೆ ಹಾಗೂ ಸಮುಯದಾಯಗಳ ನಡುವೆ ದ್ವೇಷ ಉಂಟು ಮಾಡುವಂಥ ಯಾವುದೇ ಚಟುವಟಿಕೆಯಲ್ಲಿ ಭಾಗಿಯಾಗುವಂತಿಲ್ಲ. 2. …

Read More »

ಕರ್ನಾಟಕ ಚುನಾವಣೆ 2023 ವಿಶೇಷಗಳೇನು?

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆಗೆ ಚುನಾವಣೆಯನ್ನು ಮೇ 10ಕ್ಕೆ ನಿಗದಿ ಪಡಿಸಿದ್ದು, ಈ ಬಾರಿಯ ಚುನಾವಣೆಯ ವಿಶೇಷಗಳೇನು ಎಂಬ ಮಾಹಿತಿ ಇಲ್ಲಿದೆ. ರಾಜ್ಯದಾದ್ಯಂತ 52,283 ಮತಗಟ್ಟೆಗಳಲ್ಲಿ 24,063 ನಗರ ಪ್ರದೇಶ ಹಾಗೂ 34,219 ಗ್ರಾಮೀಣ ಮತಗಟ್ಟೆಗಳು ಇವೆ. ಸರಾಸರಿ 888 ಮತದಾರರಿಗೊಂದು ಮತಗಟ್ಟೆಯು ಬರುತ್ತದೆ. 12,000 ಸೂಕ್ಷ್ಮ ಮತದಾನ ಕೇಂದ್ರಗಳನ್ನು ಗುರುತಿಸಲಾಗಿದ್ದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಸಾಲಿನ ರಾಜ್ಯ ಚುನಾವಣೆಯ ಮುಖ್ಯ ವಿಶೇಷಗಳೆಂದರೆ: * ರಾಜ್ಯದಲ್ಲಿ …

Read More »

2013, 2018 ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಏನಿತ್ತು ಗೊತ್ತಾ?

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಘೋಷಣೆ ಮಾಡಿದೆ. ಆ ಪ್ರಕಾರ ಇಂದಿನಿಂದಲೇ ನೀತಿ ಸಂಹಿತಿ ಜಾರಿಯಾಗಿದ್ದು ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕಡೆಯ ದಿನ, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ. ಏಪ್ರಿಲ್ 24 ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆಯಲು ಕಡೆಯ ದಿನವಾಗಿರುತ್ತದೆ. ಮೇ 10 ರಂದು ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು …

Read More »

ಕರ್ನಾಟಕ ವಿಧಾನಸಭಾ ಚುನಾವಣೆ-2023 -ನೀತಿ ಸಂಹಿತೆ ಜಾರಿ, ಜಿಲ್ಲೆಯ ಎಲ್ಲೆಡೆ ಕಟ್ಟೆಚ್ಚರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೆ10 ಮತದಾನ ಹಾಗೂ ಮೆ 13 ರಂದು ಮತ ಎಣಿಕೆ ನಡೆಯಲಿವೆ. ಹಾಗಾಗಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.29) ನಡೆದ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಮತದಾನ ದಿನಾಂಕ ಘೋಷಣೆಯಾಗಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯಲ್ಲಿ …

Read More »

ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನಮಾಡಲು ಅವಕಾಶ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ. ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು) ತಮ್ಮ ಮತವಿರುವ ಕ್ಷೇತ್ರದಲ್ಲಿ …

Read More »

ಆದಾಯ ಮೀರಿ ಆಸ್ತಿ ಗಳಿಕೆ; ರೇಣುಕಾಚಾರ್ಯ ಅರ್ಜಿ ವಜಾ

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು. ಇದರಿಂದ ರೇಣುಕಾಚಾರ್ಯ ಅವರಿಗೆ ಮತ್ತೆ ಕಂಟಕ ಎದುರಾದಂತಾಗಿದೆ. ರೇಣುಕಾಚಾರ್ಯ ವಿರುದ್ಧ ಗುರುಪಾದಯ್ಯ ಮಠದ್‌ ಎಂಬುವರು 2015ರಲ್ಲಿ …

Read More »