ಚಿಕ್ಕಮಗಳೂರು : ಹುಲಿ ಉಗುರಿನಿಂದ ಡಾಲರ್ ಮಾಡಿ ಕತ್ತಿಗೆ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಇಬ್ಬರು ಅರ್ಚಕರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ನಡೆದಿದೆ. ಬಂಧಿತರಿಗೆ ಚಿಕ್ಕಮಗಳೂರು ಜೆಎಂಎಫ್‌ಸಿ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಬಾಳೆಹೊನ್ನೂರು ಸಮೀಪದ ಖಾಂಡ್ಯಾದ ಪ್ರಸಿದ್ಧ ಮಾರ್ಕಂಡೇಶ್ವರ ಸ್ವಾಮಿ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಮೂರು ಹುಲಿ ಉಗುರು ವಶಕ್ಕೆ ಪಡೆಯಲಾಗಿದೆ. ಇಬ್ಬರನ್ನು …
Read More »ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್ ತಯಾರಿಕೆ,
ಬಾಗಲಕೋಟೆ: ಮಹಿಳೆ ಮನಸ್ಸು ಮಾಡಿದರೆ ಪ್ರಪಂಚವನ್ನೇ ಗೆಲ್ಲಬಹದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ಮಹಿಳೆಯರು ಮಾದರಿಯಾಗಿದ್ದಾರೆ. ಇವರ ಸಾಧನೆಯ ಫಲ ಎಂಬಂತೆ ಇದೀಗ ಕೇಂದ್ರ ಸರ್ಕಾರ 5 ಕೋಟಿ ರೂಪಾಯಿ ಅನುದಾನ ನೀಡಿ ಬೃಹತ್ ಕಾರ್ಖಾನೆ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಹೌದು.. ಪರಿಸರಸ್ನೇಹಿ ಬ್ಯಾಗ್ ತಯಾರಿಕೆ ಮೂಲಕ ಬಾಗಲಕೋಟೆ ವನಿತೆಯರು ರಾಜ್ಯವಲ್ಲದೇ ಕೇಂದ್ರ ಸರ್ಕಾರದ ಗಮನ ಸೆಳೆಯುವಲ್ಲೂ ಯಶಸ್ವಿಯಾಗಿದ್ದಾರೆ. ಕಟಗೇರಿ ಗ್ರಾಮದಲ್ಲಿರುವ ಪಂಚಾಯತ್ ಮಟ್ಟದ ಸಂಜೀವಿನಿ ಮಹಿಳಾ …
Read More »ನವಿಲು ಭೇಟೆಯಾಡಿ ಮಾಂಸ ಭಕ್ಷಣೆ; ಒಡಿಶಾ ಮೂಲದ ಮೂವರ ಬಂಧನ
ತುಮಕೂರು: ರಾಜ್ಯಾದ್ಯಂತ ಹುಲಿ ಉಗುರಿನ ಪೆಂಡೆಂಟ್ ಪ್ರಕರಣದ ಸದ್ದು ಜೋರಾಗಿರುವ ಬೆನ್ನಲ್ಲೇ ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರನಾಯಕನಪಾಳ್ಯದ ಬಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್‌ದಾವು, ದುಬಾ ಕಾಪತ್ ಬಂಧಿತರು. ಇವರು ಅನೇಕ ದಿನಗಳಿಂದ ನವಿಲುಗಳನ್ನು ಕೊಂದು ಭಕ್ಷಿಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು, 1.5 …
Read More »ನ.1ರ ಬಳಿಕ ಯಾವ ದಿನವಾದರೂ ಸರಿ, ಬಹಿರಂಗ ಚರ್ಚೆಗೆ ಸಮಯ ಫಿಕ್ಸ್ ಮಾಡಿ; ಡಿ ಕೆ ಶಿವಕುಮಾರ್
ಬೆಂಗಳೂರು: ಯಾವಾಗಾದ್ರೂ ಸರಿ. ಚರ್ಚೆಗೆ ಸಮಯ ಫಿಕ್ಸ್ ಮಾಡಿ. ನವೆಂಬರ್ 1ರ ನಂತರ ಯಾವ ದಿನಾಂಕವಾದ್ರೂ ನಿಗದಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಚರ್ಚೆಗೆ ಒಪ್ಪಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡ ಬಹಿರಂಗ ಚರ್ಚೆಗೆ ಒಪ್ಪಿಗೆ ಸೂಚಿಸಿ ಸಮಯ ನಿಗದಿಪಡಿಸುವಂತೆ ಹೇಳಿದ್ದಾರೆ. ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್ ಪಟಾಲಮ್ನಿಂದ ರೈತರ ಪರಿಹಾರದಲ್ಲಿ ಲೂಟಿ ಎಂಬ ಹೆಚ್ಡಿಕೆ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದರು. …
Read More »ಬೀದರ್: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ರೈತನ ಬಂಧನ, 25.54 ಲಕ್ಷ ರೂ. ಮೌಲ್ಯದ ಗಿಡಗಳು ವಶಕ್ಕೆ!
ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಬೀದರ್: ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ …
Read More »ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಅತಿದೊಡ್ಡ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ! ನೆದರ್ಲೆಂಡ್ಸ್ ವಿರುದ್ಧ 309 ರನ್‌ಗಳ ಜಯಭೇರಿ
ಆಸ್ಟ್ರೇಲಿಯಾ ನೀಡಿರುವ 400 ರನ್‌ಗಳ ಗುರಿ ಬೆನ್ನತ್ತುವಲ್ಲಿ ವಿಫಲವಾದ ನೆದರ್ಲೆಂಡ್ಸ್ 309 ರನ್‌ಗಳ ಭಾರಿ ಅಂತರದ ಸೋಲು ಕಂಡಿತು. ನವದೆಹಲಿ: ಐದು ಬಾರಿ ಏಕದಿನ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ಇಂದು ತಮ್ಮ ಹಳೆಯ ಚಾರ್ಮ್ ಪ್ರದರ್ಶಿಸಿತು. ನೆದರ್ಲೆಂಡ್ಸ್ ವಿರುದ್ಧ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಚಾಂಪಿಯನ್ ರೀತಿಯ ಪ್ರದರ್ಶನ ನೀಡಿ 29 ಓವರ್ ಮತ್ತು 309 ರನ್‌ಗಳಿಂದ ಪಂದ್ಯ ಗೆದ್ದುಕೊಂಡಿತು. ಆಸ್ಟ್ರೇಲಿಯಾ ನೀಡಿದ 400 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಡಚ್ಚರು 21 …
Read More »ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ.. ಆಲೆಮನೆಯನ್ನೇ ಸ್ಕ್ಯಾನಿಂಗ್ ಸೆಂಟರ್ ಆಗಿ ಪರಿವರ್ತಿಸಿದ್ದ ನಾಲ್ವರ ಸೆರೆ
ಬೆಂಗಳೂರು : ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ದಂಧೆಯನ್ನು ಪತ್ತೆ ಹಚ್ಚಿರುವ ಬೈಯಪ್ಪನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಿವಲಿಂಗೇಗೌಡ, ನಯನ್ ಕುಮಾರ್, ನವೀನ್ ಕುಮಾರ್, ವೀರೇಶ್ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್ 15ರಂದು ಪಿಎಸ್‌ಐ ಮಂಜುನಾಥ್ ನೇತೃತ್ವದ ತಂಡ ರಾತ್ರಿ ಹೊತ್ತು ಗಸ್ತು ತಿರುಗುತ್ತಿತ್ತು. ಈ ವೇಳೆ ಅನುಮಾನಾಸ್ಪದವಾಗಿ ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿಗೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು …
Read More »ಕಾನೂನು ಆಯೋಗದ ಜೊತೆ ಕೋವಿಂದ್ ನೇತೃತ್ವದ ಸಮಿತಿ ಸಭೆ
ನವದೆಹಲಿ : “ಒಂದು ದೇಶ, ಒಂದು ಚುನಾವಣೆ” ಸಾಧ್ಯತೆ ಬಗ್ಗೆ ಪರಿಶೀಲಿಸಲು ನೇಮಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಗೆ ಕಾನೂನು ಆಯೋಗವು ತನ್ನ ವಿಸ್ತೃತ ವರದಿಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ. ಕೋವಿಂದ್ ನೇತೃತ್ವದ ಸಮಿತಿಯು ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸುತ್ತಿರುವ ಮಧ್ಯೆ ಕಾನೂನು ಆಯೋಗವು ವರದಿಯನ್ನು ನೀಡಲು ಮುಂದಾಗಿದೆ. ಈ ಸಂಬಂಧ ಚುನಾವಣಾ ಸುಧಾರಣೆ ಕುರಿತು ಚರ್ಚೆ ನಡೆಸಲು ಕಾನೂನು ಆಯೋಗ ಮತ್ತು ಸಮಿತಿ ಬುಧವಾರ ಸಭೆ …
Read More »ರಾಮನಗರ ಬೆಂಗಳೂರಿಗೆ ಸೇರಿಸುವ ವಿಚಾರ ನನಗೆ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ
ಮೈಸೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಜೊತೆ ಡಿಕೆಶಿ ಅವರು ಚರ್ಚೆ ಮಾಡಿಲ್ಲ. ಅವರ ಮೈಂಡ್ನಲ್ಲಿ ಏನಿದೆ ಎಂಬುದು ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ತಮ್ಮ ಟಿ ಕೆ ಲೇಔಟ್ ನ ಮನೆಯ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡಹಬ್ಬ ದಸರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ. ಎಲ್ಲ ಪಕ್ಷದ ಶಾಸಕರು, ಜನಪ್ರತಿನಿಧಿಗಳು ಬೆಂಬಲ ನೀಡಿದ್ದಾರೆ. ಎಲ್ಲ …
Read More »ಸಹೋದರನಿಗೆ 100 ಕೋಟಿ ರೂ. ವಂಚನೆ ಆರೋಪ.. ಮೈಸೂರಿನಲ್ಲಿ ಮುಂಬೈ ಮೂಲದ ಮಹಿಳೆ ಬಂಧನ
ಮುಂಬೈ (ಮಹಾರಾಷ್ಟ್ರ): ಅಂದಾಜು 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮಾರಾಟ ಮಾಡಿ ಸ್ವಂತ ಸಹೋದರನಿಗೆ ಮೋಸ ಮಾಡಿದ ಆರೋಪದ ಮೇಲೆ ಮುಂಬೈ ಮೂಲದ ಮಹಿಳಾ ಆರೋಪಿಯನ್ನು ಕರ್ನಾಟಕದ ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ. ಸೆಂಟ್ರಲ್ ಮುಂಬೈನ ನಿವಾಸಿ ಅಬಿದಾ ಇಸ್ಮಾಯಿಲ್ ಎಂಬ ಮಹಿಳೆಯೇ ಬಂಧಿತ ಆರೋಪಿ. ಈಕೆ ತನ್ನ ಸಂಬಂಧಿಕರು ಹಾಗೂ ಸಹೋದರನಿಗೆ ಸೇರಿದ ಆಸ್ತಿಯನ್ನು ಬೇರೊಬ್ಬರಿಗೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಇದರ ಅಂದಾಜು …
Read More »
Laxmi News 24×7