Breaking News
Home / ರಾಷ್ಟ್ರೀಯ (page 379)

ರಾಷ್ಟ್ರೀಯ

₹40 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಎಸ್‌ಐ, ಕಾನ್‌ಸ್ಟೆಬಲ್‌ ಬಂಧನ

ರಾಣೆಬೆನ್ನೂರು: ವ್ಯಕ್ತಿಯೊಬ್ಬರಿಂದ ಮನೆ ಬಾಡಿಗೆ ವಸೂಲಿ ಮಾಡಿಕೊಡಲು ₹ 40 ಸಾವಿರ ಲಂಚ ಪಡೆಯುತ್ತಿದ್ದಾಗ ಇಲ್ಲಿನ ಅಶೋಕನಗರ ಠಾಣೆ ಪಿಎಸ್‌ಐ ಮತ್ತು ಕಾನ್‌ಸ್ಟೆಬಲ್‌ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಪಿಎಸ್‌ಐ ಸುನೀಲ ತೇಲಿ, ವಾಹನ ಚಾಲಕ ಹಾಗೂ ಕಾನ್‌ಸ್ಟೆಬಲ್‌ ಸಚಿನ್‌ ಓಲೇಕಾರ ಸಿಕ್ಕಿಬಿದ್ದವರು. ಇವರ ಜೊತೆಗೆ ಉಡುಪಿ ಟಿಸ್ಟಾಲ್‌ ಮಾಲೀಕ ಸಂತೋಷ್‌ ಶೆಟ್ಟಿ ಅವರನ್ನು ಲೋಕಾಯುಕ್ತ ಬಂಧಿಸಿದ್ದು, ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ದೂರುದಾರ ಸಿದ್ಧೇಶ್ವರ ನಗರದ ಅಫ್ರೋಜ್‌ ಅಹ್ಮದ್‌ ನೂರ ಅಹ್ಮದ್‌ಸಾಬ್‌ ಊದಗಟ್ಟಿ ಅವರಿಗೆ …

Read More »

ಯುಗಾದಿ.. ಅರ್ಥ ಆಚರಣೆ ವಿಶ್ಲೇಷಣೆ

ಭಾರತೀಯ ಸಂಸ್ಕೃತಿಯೇ ಹಾಗೆ! ಜೀವನವನ್ನು, ಮನುಷ್ಯನನ್ನು, ಜೀವನಕ್ರಮವನ್ನು, ಜೀವನಕ್ಕೆ ಆಶ್ರಯ, ಪುಷ್ಟಿ, ತುಷ್ಟಿಗಳನ್ನು ನೀಡುವ ಭೂಮಿ, ನೀರು, ಆಕಾಶ, ಗಾಳಿಗಳನ್ನು, ಇದಕ್ಕೆ ಆಧಾರವಾಗಿ ನಿಲ್ಲುವ ದೇಶ, ಮಾತಾಪಿತೃಗಳು, ಗುರುಹಿರಿಯರು, ರಾಜ, ಪಶುಪಕ್ಷಿಗಳನ್ನು ದೈವೀಕರಿಸಿ ಉದಾತ್ತೀಕರಿಸಿ ಇವುಗಳೆಡೆಗೆ ಉತ್ಸಾಹ, ಹುಮ್ಮಸ್ಸುಗಳು ಪ್ರತಿನಿತ್ಯವೂ ಧುಮ್ಮಿಕ್ಕುವಂತೆ ಇದು ಮಾಡುವುದರ ಪರಿಯನ್ನು ನೋಡಿಯೇ ತಿಳಿಯಬೇಕು. ವೇದಗಳಲ್ಲಿ ಬರುವ ಈ ಜೀವನೋತ್ಸಾಹ ಮತ್ತೆಲ್ಲಿ ಕಾಣಲಾದೀತು! ಪಶ್ಯೇಮ ಶರದಃ ಶತಂ| ಜೀವೇಮ ಶರದಃ ಶತಂ | ಶೃಣುಯಾಮ ಶರದಃ …

Read More »

ಬೆಳಗಾವಿಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಜಿಲ್ಲೆಯ ಸಂಭಾವ್ಯ ಅಭ್ಯರ್ಥಿಗಳ ಲೇಟೆಸ್ಟ್ ಮಾಹಿತಿ

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬುಧವಾರ ಬಿಡುಗಡೆಯಾಗುವ ಸಾಧ್ಯತೆ ಇದೆ. ರಾಜ್ಯದ ಸುಮಾರು 125 – 150 ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆಯಾಗಬಹುದು. ಇದರಲ್ಲಿ ಬೆಳಗಾವಿ ಜಿಲ್ಲೆಯ 12-14 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯ 2 -4 ಕಡೆಗಳಲ್ಲಿ ಅಚ್ಛರಿಯ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕಣಕ್ಕಿಳಿಸುವ ನಿರೀಕ್ಷೆ ಇದೆ. ಬೆಳಗಾವಿ ಜಿಲ್ಲೆಯ ಸಂಭಾವ್ಯ ಅಭ್ಯರ್ಥಿಗಳ ಲೇಟೆಸ್ಟ್ ಮಾಹಿತಿ ಇಲ್ಲಿದೆ: ಬೆಳಗಾವಿ ಗ್ರಾಮೀಣ – ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ …

Read More »

ಸಿಆರ್‌ಪಿಎಫ್‌ನಲ್ಲಿ 9,212 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಮೆಟ್ರಿಕುಲೇಷನ್ ಅಥವಾ 10 ನೇ ತರಗತಿ ಮುಗಿಸಿ ವಿವಿಧ ಕೌಶಲ್ಯ ಹೊಂದಿರುವವರಿಗೆ ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಆರ್‌ಪಿಎಫ್) ದೊಡ್ಡ ಪ್ರಮಾಣದ ನೇಮಕಾತಿಗೆ ಚಾಲನೆ ನೀಡಲಾಗಿದೆ. ಸಿಆರ್‌ಪಿಎಫ್‌ನಲ್ಲಿ ಪುರುಷ ಮತ್ತು ಮಹಿಳೆಯರಿಗೆ ‘ಟೆಕ್ನಿಷಿಯನ್’ ಹಾಗೂ ‘ಟ್ರೇಡ್ಸ್‌ಮನ್’ ಕಾನ್‌ಸ್ಟೆಬಲ್ ಎಂಬ ಒಟ್ಟು 9,212 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇದರಲ್ಲಿ 9,105 ಹುದ್ದೆಗಳು -ಪುರುಷರಿಗೆ ಹಾಗೂ 107 ಹುದ್ದೆಗಳು ಮಹಿಳೆಯರಿಗೆ ಮೀಸಲಿವೆ. ಹುದ್ದೆಗಳು ರಾಜ್ಯವಾರು ಹಂಚಿಕೆಯಾಗಿದ್ದು ಇದೇ ಮಾರ್ಚ್ 27 ರಿಂದ www.crpf.gov.in …

Read More »

ಜ್ಞಾನವಿದ್ದರೆ ಸಾಲದು, ಬದುಕುವ ಕಲೆಯೂ ಗೊತ್ತಿರಬೇಕು

ಬೆಳಗಾವಿ: ‘ಪ್ರಸ್ತುತ ಕಾಲಘಟ್ಟದಲ್ಲಿ ನಮ್ಮ ಬಳಿ ಜ್ಞಾನವಿದ್ದರಷ್ಟೇ ಸಾಲದು. ಪರಿಸ್ಥಿತಿಗೆ ಅನುಗುಣವಾಗಿ ಅದನ್ನು ಬಳಸುವ ಕಲೆಯೂ ಗೊತ್ತಿರಬೇಕು’ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಮಾಜಿ ಉಪಾಧ್ಯಕ್ಷ ಡಾ.ಬಿ.ತಿಮ್ಮೇಗೌಡ ಅಭಿಪ್ರಾಯಪಟ್ಟರು.   ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ(ಆರ್‌ಸಿಯು)ದ 11ನೇ ವಾರ್ಷಿಕ ಘಟಿಕೋತ್ಸವದ ಭಾಷಣ ಮಾಡಿದ ಅವರು, ‘ಶಿಕ್ಷಣ ಸಂಸ್ಥೆಗಳು ವೃತ್ತಿಪರರನ್ನು ಸೃಷ್ಟಿಸಿದರೆ ಸಾಲದು. ವಿದ್ಯಾರ್ಥಿಗಳಲ್ಲಿ ವೃತ್ತಿಯಾಚೆಗಿನ ನೈತಿಕ ಮೌಲ್ಯಗಳನ್ನು ಬೆಳೆಸಲು ಪ್ರಯತ್ನಿಸಬೇಕು. ಕಲಿಕೆಗೆ ಯಾವುದೇ …

Read More »

“ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ” 

ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾಗಿರುವಂತೆ ಎಲ್ಲಾ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತದಲ್ಲಿ ಬೇರೆ-ಬೇರೆ ಹೆಸರಿನಿಂದ ಆಚರಿಸುತ್ತಾರೆ. ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮದೇವನ ಸೃಷ್ಟಿಯ ದಿನ. ಚೈತ್ರಶುದ್ಧ ಪಾಡ್ಯದಂದು ಸೂರ್ಯೋದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದು, ಅಂದಿನಿಂದ ಕಾಲಗಣನೆಗಾಗಿ ಗ್ರಹ-ನಕ್ಷತ್ರ-ಮಾಸ-ಋತು-ವರ್ಷ ಇವುಗಳನ್ನು ಏರ್ಪಡಿಸಿದನೆಂದು ವ್ರತಖಂಡದಲ್ಲಿ ಮತ್ತು ಪುರಾಣಗಳಲ್ಲಿ ಉಲ್ಲೇಖವಿದೆ.  ಪಂಚಾಂಗಗಳೂ ಇದನ್ನೇ ಹೇಳುತ್ತವೆ.  ವೇದಗಳ ಕಾಲದಿಂದಲೂ ಯುಗಾದಿಯ …

Read More »

ಸಾವಿರಾರು ಪ್ರಯಾಣಿಕರು ಇರುವ ರೈಲು ನಿಲ್ದಾಣದಲ್ಲಿ ಅಶ್ಲೀಲ ವಿಡಿಯೊ

ಪಟ್ನಾ: ಮೊಬೈಲ್ ಗಳಲ್ಲಿ ಕದ್ದು ಅಶ್ಲೀಲ ವಿಡಿಯೋ ವೀಕ್ಷಿಸಿ ಸಿಕ್ಕಿಬಿದ್ದು ಮುಜುಗರಕ್ಕೀಡಾದವರು ಅನೇಕರಿದ್ದಾರೆ. ಆದರೆ ಸಾವಿರಾರು ಪ್ರಯಾಣಿಕರು ಇರುವ ರೈಲು ನಿಲ್ದಾಣದಲ್ಲಿ ಸಾರ್ವಜನಿಕರ ವೀಕ್ಷಣೆಗಿಟ್ಟ ಜಾಹೀರಾತು ಪರದೆ ಮೇಲೆ ಖುಲ್ಲಂಖುಲ್ಲಾ ಅಶ್ಲೀಲ ವಿಡಿಯೊ ಪ್ರಸಾರವಾಗಿಬಿಟ್ಟರೆ ಹೇಗಾಗಬೇಡ? ಅಂಥದ್ದೊಂದು ಮುಜುಗರದ ಸಂಗತಿ ಬಿಹಾರದ ಪಟ್ನಾ ರೈಲು ನಿಲ್ದಾಣದಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ ಜನ ಮಾಹಿತಿಗಾಗಿ ವೀಕ್ಷಿಸುತ್ತಿದ್ದರೆ ಏಕಾಏಕಿ ಅಶ್ಲೀಲ ವಿಡಿಯೊ ಶುರುವಾಗಿದೆ. ಒಂಟಿ ಹೈದರೆಲ್ಲ ತುಂಟತನದಿಂದ ಕಣ್ಣಿಟ್ಟರೆ ಕುಟುಂಬ ಸಹಿತ ಬಂದ ಪ್ರಯಾಣಿಕರು …

Read More »

ಬಣ್ಣದ ಲೋಕದ ತಾರೆಯರು ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಅಖಾಡದಲ್ಲಿ

ಬೆಂಗಳೂರು: ಬಣ್ಣದ ಲೋಕದ ತಾರೆಯರು ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಅಖಾಡದಲ್ಲಿ ಕಾಣಸಿಗುವುದು ಮಾಮೂಲು. ಅಪಾರ ಅಭಿಮಾನಿಗಳನ್ನು ಹೊಂದಿರುವವರನ್ನು ಕರೆತಂದು ತಮ್ಮ ಪರವಾಗಿ ಸ್ಟಾರ್‌ ಪ್ರಚಾರಕರನ್ನಾಗಿ ಮುಂದೆ ನಿಲ್ಲಿಸಿ, ವಿವಿಧ ಪಕ್ಷಗಳು ಮತ್ತು ಕೆಲ ನಾಯಕರು ಮತಗಳನ್ನು ಸೆಳೆಯುವ ತಂತ್ರ ಅನುಸರಿಸುವುದು ಕೂಡ ಸಾಮಾನ್ಯವೇ.   ಹಾಗೆ ನೋಡಿದರೆ ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಸಿನೆ ತಾರೆಯರ ದಂಡು ಕಡಿಮೆಯೇ. ಆದರೂ ಈ ಚುನಾವಣೆಯಲ್ಲಿ ಕೆಲವು ಸಿನೆ ತಾರೆಯರು ಸ್ವತಃ ಆಕಾಂಕ್ಷಿಗ ಳಾಗಿದ್ದರೆ, ಇನ್ನು …

Read More »

ಮಾ.24 ರಿಂದ ಸಾರಿಗೆ ನೌಕರರ ಮುಷ್ಕರ ಗ್ಯಾರೆಂಟಿ

ಬೆಂಗಳೂರು: ಸರ್ಕಾರ ಈಗಾಗಲೇ ನೀಡಿರುವ ವೇತನ ಪರಿಷ್ಕರಣೆಗೆ ಸಹಮತ ವ್ಯಕ್ತಪಡಿಸದ ಸಾರಿಗೆ ನೌಕರರ ಮತ್ತೊಂದು ಸಂಘಟನೆ, ‘ಈಗಾಗಲೇ ನಿರ್ಧರಿಸಿದಂತೆ ಮಾ.24ರಿಂದ ಸಾರಿಗೆ ನೌಕರರ ಮುಷ್ಕರ ಅಬಾಧಿತ’ ಎಂದು ಘೋಷಿಸಿದೆ.   ಸಾರಿಗೆ ನೌಕರರ ವೇತನ ಶೇ.15ರಷ್ಟು ಪರಿಷ್ಕರಣೆ ಮಾಡಿ ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ಸಮ್ಮತಿ ಸೂಚಿಸಿ, 21ರಿಂದ ನಡೆಸಲುದ್ದೇಶಿಸಿದ್ದ ಮುಷ್ಕರವನ್ನು ಹಿಂಪಡೆದಿದೆ. ಆದರೆ, ಇದನ್ನು ಒಪ್ಪದ ಕೆಎಸ್‌ಆರ್‌ಟಿಸಿ ನೌಕರರ ಕೂಟವು ಹೋರಾಟ …

Read More »

ಇನ್ನು ಮುಂದೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ “ಸಿಹಿ’ಯೂ ಇರಲಿದೆ!

ನವದೆಹಲಿ:ಇನ್ನು ಮುಂದೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ “ಸಿಹಿ’ಯೂ ಇರಲಿದೆ! ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪವನ್ನೂ ಸೇರಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸಲಹೆ ನೀಡಿದೆ. ಜೇನುತುಪ್ಪದಲ್ಲಿರುವ ಪೋಷಕಾಂಶಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಜೇನು ಸಾಕಣೆ ಮಾಡುವವರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಸಲಹೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಎಲ್ಲ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದ್ದು, “ದೇಶದಲ್ಲಿ ಜೇನುತುಪ್ಪದ ಸೇವನೆಯನ್ನು ಹೆಚ್ಚಳ ಮಾಡುವ ಸಲುವಾಗಿ ಮತ್ತು …

Read More »