Breaking News

ರಾಷ್ಟ್ರೀಯ

ಪತಿಯನ್ನು ಹತ್ಯೆ ಮಾಡಿ ಅಪಘಾತದ ಕಥೆ ಸೃಷ್ಟಿಸಿದಳೆ ಪತ್ನಿ?

ಗದಗ: ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಮೊದಲು ಅಪಘಾತದಂತೆ ಕಂಡು ಬಂದರೂ ಪತ್ನಿಯೇ ಹತ್ಯೆ ಮಾಡಿ ಆತನನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ ಎಂಬ ಆರೋಪ ಮಾಡಲಾಗಿದೆ. ಮಂಜುನಾಥ್ ಮೀಸಿ ಎಂಬಾತ ಶವವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಶಾರದಮ್ಮ ಕೊಲೆ ಮಾಡಿದ್ದಾಳೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಗುರುವಾರ(ಆ 29)ತಡರಾತ್ರಿ ಮನೆಯಲ್ಲೇ ಹತ್ಯೆ ಮಾಡಿ ಹೆದ್ದಾರಿಯಲ್ಲಿ ಬಿಸಾಕಿ ಅಪಘಾತದ ಕಥೆ ಸೃಷ್ಟಿ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮಂಜುನಾಥ್ ಕೋಟುಮಚಗಿಯಲ್ಲಿ …

Read More »

ಸೆ. 2 ರಿಂದ ರಾಜ್ಯಾದ್ಯಂತ 1-5 ನಮೂನೆ ಡಿಜಿಟಲ್‌ ಪೋಡಿ ದುರಸ್ಥಿ ಅಭಿಯಾನ: ಕೃಷ್ಣ ಬೈರೇಗೌಡ

ಬೆಂಗಳೂರು ಆಗಸ್ಟ್‌ 30: ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ …

Read More »

ಸಿಎಂ ಬದಲಾವಣೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಚರ್ಚೆ ಬಗ್ಗೆ ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೆರೆ ಎಳೆಯುವ ಯತ್ನ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿಎಂ ಬದಲಾಗಬೇಕು ಎಂದು ಯಾರೂ ಸಹ ಬಯಸಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ ಬದಲಾವಣೆ ಬಗ್ಗೆ ನಾವು ಊಹೆ ಕೂಡ ಮಾಡಿಲ್ಲ. …

Read More »

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ ಬೆಂಗಳೂರು: ದ್ವೇಷದ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಬಿ.ವೈ.ವಿಜಯೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಎಫ್‌ಐಆರ್ ಗೆ ತಡೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ. ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೋ ತುಣುಕೊಂದನ್ನು ಬಿಜೆಪಿ ರಾಜ್ಯ …

Read More »

ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. ಎಂಡಿಎಂಎ ಸೇರಿದಂತೆ ಹಲವು ಮಾದಕ ವಸ್ತು ಹಾಗೂ ಕಾರು ಸಮೇತ ಪೊಲಿಸರು ಮೂವರನ್ನು ಬಂಧಿಸಿದ್ದಾರೆ. ಶಾಜಹಾನ್, ಮೊಹಮ್ಮದ್ ನಿಸಾರ್, ಮನ್ಸೂರ್ ಬಂಧಿತ ಆರೋಪಿಗಳು. ಬಂಧಿತರಿಂದ 2.10 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ. ಬಾಡಿಗೆ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ …

Read More »

ದರ್ಶನ್ ವಿಚಾರಕ್ಕೆ ಪ್ರಭಾವಿ ಸಚಿವರಿಗೆ ಸಿಎಂ ತರಾಟೆ!

ದರ್ಶನ್ ವಿಚಾರಕ್ಕೆ ಪ್ರಭಾವಿ ಸಚಿವರಿಗೆ ಸಿಎಂ ತರಾಟೆ! ಬೆಂಗಳೂರು ಆಗಸ್ಟ್ 30: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶದ್‌ಗೆ ರಾಜಾತಿಥ್ಯ ನೀಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಭಾವಿ ಸಚಿವರೊಬ್ಬರಿಗೆ ತರಾಟೆ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಜೈಲಿನಲ್ಲಿ ದರ್ಶನ್‌ಗೆ ಐಶಾರಾಮಿ ವ್ಯವಸ್ಥೆ ನೀಡಿರುವುದರ ಹಿಂದೆ ಸಚಿವರೊಬ್ಬರ ಕೈವಾಡವಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಅದಕ್ಕೆ ಸಿಎಂ ಗರಂ ಆಗಿದ್ದು, ಆ ಸಚಿವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ‘ನೋಡಪ್ಪ ಇಂತಹ ವಿಚಾರಕ್ಕೆ …

Read More »

ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಿ’

ಗುಳೇದಗುಡ್ಡ: ಕಾರ್ಮಿಕರು ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡುವ ಮೂಲಕ ಕಟ್ಟಡ ಸೇರಿದಂತೆ ಇತರೆ ಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.   ಪಟ್ಟಣದ ಹೊಸಪೇಟೆ ಸಂಗನಬಸವೇಶ್ವರ ನಗರದಲ್ಲಿ ‌ಗುರುವಾರ ಲಕ್ಷ್ಮಿ ಕಟ್ಟಡ ಕಾರ್ಮಿಕರ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಅವುಗಳು ನೈಜ ಕಟ್ಟಡ ಕಾರ್ಮಿಕರಿಗೆ …

Read More »

ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು:D.C.

ಬೆಳಗಾವಿ: ‘ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು. ಬದಲಿಗೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಸೂಚಿಸಿದರು. ಇಲ್ಲಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ(ಕೆಯುಐಡಿಎಫ್‌ಸಿ) ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.   ‘ಈಗ ಪಾಲಿಕೆ ವ್ಯಾಪ್ತಿಯ 10 ವಾರ್ಡ್‌ಗಳಿಗೆ 24×7 ಮಾದರಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ಉಳಿದ ವಾರ್ಡ್‌ಗಳಿಗೆ …

Read More »

ಗ್ರಾಮೀಣಾಭಿವೃದ್ಧಿಯಲ್ಲಿ ರಾಜಕಾರಣ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ರಾಜಕೀಯ ಆರಂಭಿಸಿದ ದಿನದಿಂದಲೂ ನಾನು ದ್ವೇಷ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ಒಂದೇ ನಮ್ಮ ಮೂಲಮಂತ್ರ. ದ್ವೇಷ ರಾಜಕಾರಣ ನನ್ನ ಶಬ್ದಕೋಶದಲ್ಲೇ ಇಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ತಾಲ್ಲೂಕಿನ ಮೋದಗಾದಲ್ಲಿ ಬುಧವಾರ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ರಾಜೀವ ಗಾಂಧಿ ಸೇವಾ ಕೇಂದ್ರ ಮತ್ತು ಸಂಜೀವಿನಿ ಸೇವಾ ಕೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ‘ಭಾರತ ದೇಶ ಹಳ್ಳಿಗಳ ದೇಶ. ಹಳ್ಳಿಗಳು …

Read More »

ಇಂಧನ ಯೋಜನೆಗೆ ‘ಮೊದಲ ಪಾವತಿಯನ್ನು’ ಶ್ರೀಲಂಕಾಕ್ಕೆ ಹಸ್ತಾಂತರಿಸಿದ ಭಾರತ

ನವದೆಹಲಿ:ಡೆಲ್ಫ್ಟ್, ನೈನತೀವು ಮತ್ತು ಅನಾಲೈತೀವು ದ್ವೀಪಗಳಲ್ಲಿನ ಇಂಧನ ಅಗತ್ಯಗಳನ್ನು ಪೂರೈಸುವ ಗುರಿಯನ್ನು ಹೊಂದಿರುವ ಹೈಬ್ರಿಡ್ ವಿದ್ಯುತ್ ಯೋಜನೆಗಳಿಗೆ ಮೊದಲ ಪಾವತಿಯನ್ನು ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಸಂತೋಷ್ ಝಾ ಗುರುವಾರ ಹಸ್ತಾಂತರಿಸಿದರು ಎಂದು ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ ಝಾ ಅವರು ವಿದ್ಯುತ್ ಮತ್ತು ಇಂಧನ ಸಚಿವಾಲಯದ ಕಾರ್ಯದರ್ಶಿ ಮತ್ತು ಶ್ರೀಲಂಕಾ ಸುಸ್ಥಿರ ಇಂಧನ ಪ್ರಾಧಿಕಾರದ (ಎಸ್‌ಎಲ್‌ಎಸ್‌ಇಎ) ಅಧ್ಯಕ್ಷೆ ಸುಲಕ್ಷಣಾ ಜಯವರ್ಧನೆ ಅವರಿಗೆ ಪಾವತಿಯನ್ನು ಹಸ್ತಾಂತರಿಸಿದರು ಎಂದು ಹೇಳಿಕೆ …

Read More »