Breaking News
Home / ರಾಷ್ಟ್ರೀಯ (page 384)

ರಾಷ್ಟ್ರೀಯ

ಬಣ್ಣದ ಲೋಕದ ತಾರೆಯರು ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಅಖಾಡದಲ್ಲಿ

ಬೆಂಗಳೂರು: ಬಣ್ಣದ ಲೋಕದ ತಾರೆಯರು ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಅಖಾಡದಲ್ಲಿ ಕಾಣಸಿಗುವುದು ಮಾಮೂಲು. ಅಪಾರ ಅಭಿಮಾನಿಗಳನ್ನು ಹೊಂದಿರುವವರನ್ನು ಕರೆತಂದು ತಮ್ಮ ಪರವಾಗಿ ಸ್ಟಾರ್‌ ಪ್ರಚಾರಕರನ್ನಾಗಿ ಮುಂದೆ ನಿಲ್ಲಿಸಿ, ವಿವಿಧ ಪಕ್ಷಗಳು ಮತ್ತು ಕೆಲ ನಾಯಕರು ಮತಗಳನ್ನು ಸೆಳೆಯುವ ತಂತ್ರ ಅನುಸರಿಸುವುದು ಕೂಡ ಸಾಮಾನ್ಯವೇ.   ಹಾಗೆ ನೋಡಿದರೆ ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಸಿನೆ ತಾರೆಯರ ದಂಡು ಕಡಿಮೆಯೇ. ಆದರೂ ಈ ಚುನಾವಣೆಯಲ್ಲಿ ಕೆಲವು ಸಿನೆ ತಾರೆಯರು ಸ್ವತಃ ಆಕಾಂಕ್ಷಿಗ ಳಾಗಿದ್ದರೆ, ಇನ್ನು …

Read More »

ಮಾ.24 ರಿಂದ ಸಾರಿಗೆ ನೌಕರರ ಮುಷ್ಕರ ಗ್ಯಾರೆಂಟಿ

ಬೆಂಗಳೂರು: ಸರ್ಕಾರ ಈಗಾಗಲೇ ನೀಡಿರುವ ವೇತನ ಪರಿಷ್ಕರಣೆಗೆ ಸಹಮತ ವ್ಯಕ್ತಪಡಿಸದ ಸಾರಿಗೆ ನೌಕರರ ಮತ್ತೊಂದು ಸಂಘಟನೆ, ‘ಈಗಾಗಲೇ ನಿರ್ಧರಿಸಿದಂತೆ ಮಾ.24ರಿಂದ ಸಾರಿಗೆ ನೌಕರರ ಮುಷ್ಕರ ಅಬಾಧಿತ’ ಎಂದು ಘೋಷಿಸಿದೆ.   ಸಾರಿಗೆ ನೌಕರರ ವೇತನ ಶೇ.15ರಷ್ಟು ಪರಿಷ್ಕರಣೆ ಮಾಡಿ ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ಸಮ್ಮತಿ ಸೂಚಿಸಿ, 21ರಿಂದ ನಡೆಸಲುದ್ದೇಶಿಸಿದ್ದ ಮುಷ್ಕರವನ್ನು ಹಿಂಪಡೆದಿದೆ. ಆದರೆ, ಇದನ್ನು ಒಪ್ಪದ ಕೆಎಸ್‌ಆರ್‌ಟಿಸಿ ನೌಕರರ ಕೂಟವು ಹೋರಾಟ …

Read More »

ಇನ್ನು ಮುಂದೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ “ಸಿಹಿ’ಯೂ ಇರಲಿದೆ!

ನವದೆಹಲಿ:ಇನ್ನು ಮುಂದೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ “ಸಿಹಿ’ಯೂ ಇರಲಿದೆ! ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪವನ್ನೂ ಸೇರಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸಲಹೆ ನೀಡಿದೆ. ಜೇನುತುಪ್ಪದಲ್ಲಿರುವ ಪೋಷಕಾಂಶಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಜೇನು ಸಾಕಣೆ ಮಾಡುವವರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಸಲಹೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಎಲ್ಲ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದ್ದು, “ದೇಶದಲ್ಲಿ ಜೇನುತುಪ್ಪದ ಸೇವನೆಯನ್ನು ಹೆಚ್ಚಳ ಮಾಡುವ ಸಲುವಾಗಿ ಮತ್ತು …

Read More »

ವಾಡಿ: ಹೆದ್ದಾರಿ ಮೇಲೆ ಪೊಲೀಸ್ ಪೇದೆ ಶವ: ಕೊಲೆ ಶಂಕೆ

ವಾಡಿ: ವಾಹನ ಅಪಘಾತ ದೃಶ್ಯ ರೂಪದಂತೆ ಪೊಲೀಸ್ ಪೇದೆಯೋರ್ವರ ಶವ ವಾಡಿ-ಯಾದಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ (ಮಾ.20) ಬೆಳಗಿನ ಜಾವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಚಿತ್ತಾಪುರ ತಾಲೂಕಿನ ವಾಡಿ ನಗರ ಪೊಲೀಸ್ ಠಾಣೆಯ ಪೇದೆ ಕರಿಯಪ್ಪ (37) ಮೃತ ದುರ್ದೈವಿ. ರವಿವಾರ ಯಾದಗಿರಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ ನಾಲವಾರ ಚೆಕ್‌ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸಿದ್ದ ಪೇದೆ ಕರಿಯಪ್ಪ ರಾತ್ರಿ 8 ಗಂಟೆಗೆ ಕರ್ತವ್ಯ ಮುಗಿಸಿ ಅಪರಿಚಿತ ಕಾರಿನಲ್ಲಿ …

Read More »

ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಮದ್ಯ, ಹಣ, ಗಿಫ್ಟ್ ಸಾಗಾಟಗಳ ಮೇಲೆ ನಿಗಾವಹಿಸಿರುವ ಪೊಲೀಸರು, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ಚುರುಕುಗೊಳಿಸಿದ್ದಾರೆ. ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಯಮಕನಮರಡಿ ಠಾಣೆ ಪೊಲೀಸರು ದಡ್ದಿ ಕ್ರಾಸ್ ಬಳಿ ಚೆಕ್ ಪೋಸ್ಟ್ ನಲ್ಲಿ ಇಂಡಿಕಾ ವಿಸ್ಟಾ ಕಾರನ್ನು ತಪಾಸಣೆ ನಡೆಸಿದ ವೇಳೆ ಕಾರಿನಲ್ಲಿ ವಿವಿಧ ಬಗೆಯ …

Read More »

ಕಿತ್ತೂರು ರಾಣಿ ಚೆನ್ನಮ್ಮ ಮೈದಾನ’ ಹೆಸರು: ಆಕ್ಷೇಪದ ಅರ್ಜಿ ವಾಪಸ್‌

ಬೆಂಗಳೂರು: ಹುಬ್ಬಳ್ಳಿಯ ಈದ್ಗಾ ಮೈದಾನದ ಹೆಸರನ್ನು “ಕಿತ್ತೂರು ರಾಣಿ ಚೆನ್ನಮ್ಮ ಮೈದಾನ’ ಎಂದು ಬದಲಾಯಿಸಲು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಕೈಗೊಂಡಿದ್ದ ನಿರ್ಣಯವನ್ನು ರದ್ದುಪಡಿಸಲು ಕೋರಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿಂಪಡೆಯಲಾಗಿದೆ.   ಈ ಕುರಿತು ಉಡುಪಿ ಜಿಲ್ಲೆಯ ಹುಸೇನ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಪಿ.ಬಿ. ವರಾಲೆ ಮತ್ತು ನ್ಯಾ. ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ವಿಚಾರಣೆ …

Read More »

ಮುಸ್ಲಿಂ ಬೃಹತ್ ಸಮಾವೇಶ ಮಾಡಿದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸುವ ಮೂಲಕ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಸೋಮವಾರದಂದು ಮೂಡಲಗಿ ಪಟ್ಟಣದ ತಹಶೀಲ್ದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

ಚಿತ್ರದುರ್ಗ: ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಹಿರಿಯೂರಿನಲ್ಲಿ ಸೋಮವಾರ ಬಿಜೆಪಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮ ಜೊತೆಯಲ್ಲೇ ಇದ್ದಾರಲ್ಲಾ ಎಂದು ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು ಹೇಳಿದರು.   ಈ ವೇಳೆ ಪೂರ್ಣಿಮಾ ಟಿವಿಯವರಿಗೆ ಬುದ್ದಿ ಇಲ್ಲ. ಪದೇ ಪದೇ ನನ್ನ ಹೆಸರು ತೋರಿಸುತ್ತಿದ್ದಾರೆ …

Read More »

ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ?: ಖರ್ಗೆ ತಿರುಗೇಟು

ಬೆಳಗಾವಿ: ಮೋದಿ ಅವರು ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ ಇದೆ ಎಂದಿದ್ದಾರೆ. ಹಾಗಾದರೆ ನಿಮ್ಮ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ? ಅದಾನಿ ಅವರ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳಿದರೆ ಅದನ್ನು ಕಡತದಿಂದ ತೆಗೆದು ಹಾಕುತ್ತಾರೆ.ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ, ಜಾತಿವಾದ, ತಾರತಮ್ಯವಿದೆ ಎಂದು ಹೇಳಿದರೆ ಅದು ತಪ್ಪಾ? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಸೋಮವಾರ ನಡೆದ ಯುವ …

Read More »

ಮಂಗಳೂರು: ಮಾ.21ರಿಂದ ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ

ಮಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾ.21ರಿಂದ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಮಳೆ? ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.   ಕಳೆದ …

Read More »