Breaking News

ರಾಷ್ಟ್ರೀಯ

BJP: ರಾಜ್ಯ ರಾಜಕಾರಣಕ್ಕೆ ಸಂಸದ ಅನಂತ್‌ ಹೆಗಡೆ ?

ಶಿರಸಿ: ಸಕ್ರಿಯ ರಾಜಕಾರಣದಿಂದ ದೂರ ಸರಿದಿದ್ದ ಉತ್ತರ ಕನ್ನಡ ಸಂಸದ, ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ರಾಜ್ಯ ರಾಜಕಾರಣ ಪ್ರವೇಶಿಸಿ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಲಿದ್ದಾರೆಯೇ ಎಂಬ ವಿಚಾರ ಈಗ ಸದ್ದು ಮಾಡುತ್ತಿದೆ. ಈ ಬಾರಿಯ ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಭಾರತೀಯತೆ, ದೇಶ, ಸಂಸ್ಕೃತಿ, ಸಂಸ್ಕಾರ, ಹಿಂದುತ್ವ… ಹೀಗೆ ರಾಷ್ಟ್ರೀಯ ಚಿಂತನೆಗಳ ಬಗ್ಗೆ ನಿರರ್ಗಳವಾಗಿ ಮಾತನಾಡಬಲ್ಲ ನಾಯಕರನ್ನು ಮುಂದಿಟ್ಟುಕೊಂಡು ಪಕ್ಷವನ್ನು ಮರು …

Read More »

ಗ್ಯಾಸ್ ಸಿಲಿಂಡರ್​​ಗೆ ₹ 500, ಕೃಷಿ ಸಾಲ ಮನ್ನಾ: ಮಧ್ಯಪ್ರದೇಶದ ಜನತೆಗೆ ಐದು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್!

ಕರ್ನಾಟಕದಲ್ಲಿ (Karnataka) ದಲ್ಲಿ ನೀಡಿದ 5 ಗ್ಯಾರಂಟಿ ಸಕ್ಸಸ್ ಅದ ಬೆನ್ನಲ್ಲೇ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ(Madhya Pradesh) ಮತ್ತೊಂದು ನಿರ್ಣಾಯಕ ವಿಧಾನಸಭಾ ಚುನಾವಣೆಯತ್ತ ಮುಖಮಾಡಿದ್ದು, ಸೋಮವಾರ ಐದು ಭರವಸೆಗಳನ್ನು ಘೋಷಿಸಿದೆ.   ಒಂದು ಗ್ಯಾಸ್ ಸಿಲಿಂಡರ್ ಬೆಲೆ ₹ 500 ಮತ್ತು ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ ₹ 1500 ಸೇರಿದಂತೆ ಐದು ಭರವಸೆಗಳನ್ನು ಕಾಂಗ್ರೆಸ್ ನೀಡಿದೆ. 1. ಗ್ಯಾಸ್ ಸಿಲಿಂಡರ್ ₹500 2. ಪ್ರತಿ ಮಹಿಳೆಗೆ ತಿಂಗಳಿಗೆ ₹ 1500 …

Read More »

ಯು.ಟಿ ಖಾದರ್ ನೂತನ ಸ್ಪೀಕರ್ ?

ಬೆಂಗಳೂರು, ಮೇ 22: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ. ಸ್ಪೀಕರ್ ಸ್ಥಾನಕ್ಕೆ ಆರ್ ವಿ ದೇಶಪಾಂಡೆ, ಟಿ ಬಿ ಜಯಚಂದ್ರ ಹಾಗು ಎಚ್ ಕೆ ಪಾಟೀಲ್ ಅವರ ಹೆಸರು ಕೇಳಿಬರುತ್ತಿತ್ತು. ಆದರೆ ಇದೀಗ ಕೊನೆ ಗಳಿಗೆಯಲ್ಲಿ ಯು ಟಿ ಖಾದರ್ ಅವರನ್ನು ವಿಧಾನ ಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಆಯ್ಕೆ …

Read More »

ರಾಜ್ಯದಲ್ಲಿ ವರುಣಾರ್ಭಟಕ್ಕೆ 10 ಮಂದಿ ಬಲಿ, ಅಪಾರ ಪ್ರಮಾಣದ ಬೆಳೆ ಹಾನಿ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಬೆಳೆ ನಷ್ಟವಾಗಿದ್ದು, ವರುಣಾರ್ಭಟಕ್ಕೆ 8 ಮಂದಿ ಬಲಿಯಾಗಿದ್ದಾರೆ. ರಾಜ್ಯದ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, 8 ಸಾವಿರ ಎಕರೆಗೂ ಹೆಚ್ಚಿನ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ. ಅಕಾಲಿಕ ಮಳೆಗೆ ರಾಜ್ಯದಲ್ಲೇ ಅತಿಹೆಚ್ಚು ಬೆಳೆ ನಷ್ಟ ಕೋಲಾರದಲ್ಲಿ ಆಗಿದ್ದು, 7,166 ಎಕರೆ ಬೆಳೆಹಾನಿಯಾಗಿದೆ. ಕೊಪ್ಪಳದಲ್ಲಿ 618 ಕ್ಕೂ ಹೆಚ್ಚು ಎಕರೆ, ದಾವಣಗೆರೆಯಲ್ಲಿ 153 ಎಕರೆ, ಚಿಕ್ಕಬಳ್ಳಾಪುರದಲ್ಲಿ 100 …

Read More »

ಗುಜರಾತ್​ ಗಲಭೆ ಕುರಿತ ಸಾಕ್ಷ್ಯಚಿತ್ರ: ಬಿಬಿಸಿಗೆ ದೆಹಲಿ ಹೈಕೋರ್ಟ್​ ಸಮನ್ಸ್​ ಜಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ನ್ಯಾಯಾಂಗ ಮತ್ತು ದೇಶದ ಘನತೆಗೆ ಧಕ್ಕೆ ತರುವ ಮಾದರಿಯಲ್ಲಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿದ್ದ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ಗೆ (ಬಿಬಿಸಿ) ದೆಹಲಿ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿಗೊಳಿಸಿದೆ. ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 15 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಬಿಬಿಸಿ ಸಾಕ್ಷ್ಯಚಿತ್ರದಿಂದಾಗಿ ದೇಶದ ಘನತೆಗೆ ಧಕ್ಕೆಯುಂಟಾಗಿದೆ. ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ನ್ಯಾಯಾಂಗದ ವಿರುದ್ಧ …

Read More »

ವಿಧಾನಸಭೆಗೆ ಸ್ಪೀಕರ್ ಯಾರು? ನಾಳೆ ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ತೀರ್ಮಾನ:ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಶಾಸಕಾಂಗ ಸಭೆ ಕರೆದಿದ್ದಾರೆ. ವಿಧಾನಸಭೆ ಸದಸ್ಯರ ಪದಗ್ರಹಣ ಪ್ರಯುಕ್ತ ಮೂರು ದಿನಗಳ ಅಧಿವೇಶನ ಕರೆದಿರುವ ಸಿಎಂ ಕಡೆಯ ದಿನ ಬೆಳಗ್ಗೆ ಶಾಸಕಾಂಗ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334 ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ …

Read More »

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣ ಜಪ್ತಿ

ಹುಬ್ಬಳ್ಳಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣವನ್ನು ನರಗುಂದ ಪೊಲೀಸರು ಜಪ್ತಿ ಮಾಡಿದ್ದಾರೆ. ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಈ ಹಣವನ್ನು ನರಗುಂದ ಪಟ್ಟಣ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರು ಚಾಲಕ ಶಿವಬಸವಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಉದ್ಯಮಿ ವಿಕ್ರಮ್ ಸಿಂಗ್ ಗೆ ಸೇರಿದ ಹಣ ಎಂದು ಹೇಳಲಾಗುತ್ತಿದೆ.

Read More »

ಗಂಗಾವತಿಯಲ್ಲಿ ಹನಿಟ್ರ್ಯಾಪ್​ಗೆ ಒಪ್ಪದ ಮಂಗಳಮುಖಿಯರ ಮೇಲೆ ಹಲ್ಲೆ

ಗಂಗಾವತಿ (ಕೊಪ್ಪಳ): ಆರ್ಥಿಕವಾಗಿರುವ ಸ್ಥಿತಿವಂತರನ್ನು ಹನಿಟ್ರ್ಯಾಪ್​ಗೆ ಕೆಡವಲು ಸಂಚು ರೂಪಿಸಿದ ಯುವಕರ ತಂಡವೊಂದು ಇದಕ್ಕಾಗಿ ಮಂಗಳಮುಖಿಯರನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಆದರೆ ಇದಕ್ಕೆ ಮಂಗಳಮುಖಿಯರು ಒಪ್ಪದ ಹಿನ್ನೆಲೆ ಅವರ ಮೇಲೆ ಯುವಕರ ತಂಡ ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಯುವಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವವರನ್ನು ಗಾಂಧಿ ವೃತ್ತದ ನಿವಾಸಿಗಳಾದ ಅನುಶ್ರೀ, ರತ್ನಾ ಅಲಿಯಾಸ್ ರತಿ ಮತ್ತು ಸುಕನ್ಯಾ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ …

Read More »

ಬಳ್ಳಾರಿಯಲ್ಲಿ ಸರ್ಕಾರಿ ಬಸ್-ಲಾರಿ ಅಪಘಾತ; ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಬಳ್ಳಾರಿಯಲ್ಲಿ ಲಾರಿ ಹಾಗು ಸರ್ಕಾರಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್-ಲಾರಿ ಅಪಘಾತಬಳ್ಳಾರಿ: ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಘಟನೆ ಜರುಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು ವಿಮ್ಸ್‌ಗೆ ದಾಖಲಿಸಲಾಗಿದೆ.

Read More »

16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭ

ಬೆಂಗಳೂರು: ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ನೂತನ ಶಾಸಕರ ಪ್ರಮಾಣವಚನ, ಸ್ಪೀಕರ್ ಆಯ್ಕೆ ನಡೆಯಲಿದೆ. ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಕಾರ್ಯನಿರ್ವಹಣೆಯಲ್ಲಿ ಅಧಿವೇಶನ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ವರುಣಾ ಕ್ಷೇತ್ರದ ಶಾಸಕರಾದ ಸಿಎಂ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕನಕಪುರದ ಶಾಸಕರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾದರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್, ದೇವನಹಳ್ಳಿ …

Read More »