Breaking News

ರಾಷ್ಟ್ರೀಯ

ಅಕ್ಕ ಸಮ್ಮೇಳನಕ್ಕೆ ಅದ್ಧೂರಿ ಸಿದ್ಧತೆ

ಆ.28- ಅಮೇರಿಕಾದ ವರ್ಜೀನಿಯಾ ರಾಜ್ಯದ ರಿಚಂಡ್‌ ನಗರದಲ್ಲಿ ಇದೇ ಆ.30, 31 ಮತ್ತು ಸೆ.1 ರಂದು ನಡೆಯಲಿರುವ ಅಮೆರಿಕಾ ಕನ್ನಡ ಕೂಟಗಳ ಆಗರ (ಅಕ್ಕ) 2024ರ ಸಮೇಳನಕ್ಕೆ ಅದ್ಧೂರಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಮೇಳನದ ಅಧ್ಯಕ್ಷರಾದ ರವಿ ಬೋರೆಗೌಡ ಅವರು ತಿಳಿಸಿದ್ದಾರೆ.   ಅಮೇರಿಕಾದ 50ಕ್ಕೂ ಹೆಚ್ಚು ರಾಜ್ಯಗಳ ಕನ್ನಡ ಸಂಘಗಳು ಒಟ್ಟಾಗಿ ಸೇರಿ ಪ್ರತೀ ಎರಡು ವರ್ಷಗಳಿಗೊಮೆ ಈ ಸಮೇಳನವನ್ನು ಆಯೋಜಿಸುತ್ತವೆ. ಕೋವಿಡ್‌ ಕಾರಣದಿಂದಾಗಿ ಕಳೆದ ನಾಲ್ಕು ವರ್ಷಗಳಿಂದ …

Read More »

ದರ್ಶನ್‌ ಗ್ಯಾಂಗ್‌ನ ಮೂವರು ಮೈಸೂರು ಜೈಲಗೆ ಶಿಫ್ಟ್!

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಮತ್ತು ಸಹಚರರಿಗೆ ಹೊಸ ಸಂಕಷ್ಟ ಶುರುವಾಗಿದೆ. ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕ ಹಿನ್ನಲೆಯಲ್ಲೇ ದರ್ಶನ್ ಮತ್ತು ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಆದೇಶ ನೀಡಿದೆ. ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದು, ಮೈಸೂರು ಕಾರಾಗೃಹಕ್ಕೂ ಮೂವರು ಆರೋಪಿಗಳನ್ನು ಸ್ಥಳಾಂತರ ಮಾಡಲಾಗುತ್ತದೆ. ಈ ಮೊದಲೇ ಮೂವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿತ್ತು. …

Read More »

ಗ್ರಾಮದಲ್ಲಿ ಎರಡು ನ್ಯಾಯ ಬೆಲೆ ಅಂಗಡಿ ತೆರಯಲು ಆಕ್ಷೇಪ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ದೇಶದ ನಾಗರೀಕರಿಗೆ ಅಗತ್ಯ ಸಾಮಗ್ರಿಗಳನ್ನು ಸುಲಭವಾಗಿ ಪೂರೈಕೆ ಮಾಡುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳು ಕಾರ್ಯಾಚರಿಸುತ್ತಿದೆ ಎಂದಿರುವ ಹೈಕೋರ್ಟ್, ಒಂದು ಗ್ರಾಮದಲ್ಲಿ ಮತ್ತೊಂದು ನ್ಯಾಯ ಬೆಲೆ ಅಂಗಡಿ ಆರಂಭಿಸುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.   ಅಲ್ಲದೆ, ಪಡಿತರ ಚೀಟಿದಾರರಲ್ಲಿ ಅತಿ ಹೆಚ್ಚು ಜನರು ಸಮಾಜದಲ್ಲಿನ ಬಡ ವರ್ಗಕ್ಕೆ ಹಾಗೂ ಬಡತನ ರೇಖೆಗಿಂತ ಕೆಳಗಿನವರಿದ್ದಾರೆ ಎಂದು ಹೇಳಿದೆ. ಪ್ರಕರಣ ಸಂಬಂಧ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ …

Read More »

ಶಿವಾಜಿ ಪ್ರತಿಮೆ ಕುಸಿತ: ರಾಜ್ಯದ ಜನತೆಗೆ ಕ್ಷಮೆಯಾಚಿಸಿದ ಡಿಸಿಎಂ ಅಜಿತ್ ಪವಾರ್

ಲಾತೂರ್(ಮಹಾರಾಷ್ಟ್ರ): ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಘಟನೆ ಸಂಬಂಧ ರಾಜ್ಯದ ಜನರಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕ್ಷಮೆಯಾಚಿಸಿದ್ದಾರೆ. ಲಾತೂರ್ ಜಿಲ್ಲೆಯಲ್ಲಿ ನಡೆದ ಜನ ಸಮ್ಮಾನ್ ಯಾತ್ರೆ ವೇಳೆ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಪವಾರ್, ‘ಅಧಿಕಾರಿಗಳೇ ಆಗಲಿ ಅಥವಾ ಗುತ್ತಿಗೆದಾರರೇ ಆಗಲಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.   ‘ಶಿವಾಜಿ ಮಹಾರಾಜನರು ನಮ್ಮ ಆರಾಧ್ಯ ದೈವ. ಅವರ ಪ್ರತಿಮೆ ಕುಸಿದು ಬಿದ್ದಿರುವುದಕ್ಕೆ …

Read More »

ಸೆ.5ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರ ಸಂಬಂಧ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡುವಂತ ತೀರ್ಮಾನ, ಆ ಬಳಿಕ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸುವಂತ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಸೆಪ್ಟೆಂಬರ್.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗಿದೆ.   ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-09-2024ರಂದು ಗುರುವಾರ …

Read More »

ಡಿಜಿಟಲ್ ಮೀಡಿಯಾ’ಗಳಿಗೂ ಸರ್ಕಾರಿ ಜಾಹೀರಾತು: ಇದು ‘KSDMF’ಗೆ ಸಿಕ್ಕ ಮೊದಲ ಗೆಲುವು- ಅಧ್ಯಕ್ಷ ಸಮೀವುಲ್ಲಾ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ 2024 ಪ್ರಕಟಿಸಲಾಗಿದೆ. ಇದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂಗೆ ಸಿಕ್ಕಂತ ಮೊದಲ ಗೆಲುವು ಎಂಬುದಾಗಿ ಅಧ್ಯಕ್ಷರಾದಂತ ಬಿ.ಸಮೀವುಲ್ಲಾ ಬೆಲಗೂರು ಹರ್ಷವನ್ನು ವ್ಯಕ್ತ ಪಡಿಸಿದ್ದಾರೆ.   ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಪ್ರಸ್ತುತ ಜಗತ್ತಿನ ಮುಂಚೂಣಿ ಮಾಧ್ಯಮ ಡಿಜಿಟಲ್ ಮಾಧ್ಯಮ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಸರ್ಕಾರದ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಗಳ ಮಾನ್ಯತೆ ಇರಲಿಲ್ಲ. ಹೀಗಾಗಿ …

Read More »

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಚುನಾವಣೆಯಲ್ಲಿ ಅಕ್ರಮ ಎಸಗುವ ಮೂಲಕ ಜಯಶಾಲಿಯಾಗಿದ್ದಾರೆಂದು ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ದಾವಣಗೆರೆ ಲೋಕಸಭಾ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯಿತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆ ನಿವಾಸಿ ಸುಭಾನ್ ಖಾನ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಏಕಸದಸ್ಯ ನ್ಯಾಯಪೀಠದ ಮಂಗಳವಾರ ವಿಚಾರಣೆಗೆ ನಡೆಸಿತು. ವಾದ …

Read More »

ತಜ್ಞರು, ಸಮುದಾಯದ ನಾಯಕರೊಂದಿಗೆ ಚರ್ಚಿಸಿ ಒಳ ಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಸಚಿವರಾದ ಕೆ.ಹೆಚ್. ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಹೆಚ್. ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್. ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ಸಿಎಂ ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ …

Read More »

ಒಂದು ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ನಾಲ್ವರು ಘಟಾನುಘಟಿ ನಾಯಕರ ಪೈಪೋಟಿ!

ಒಂದು ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ನಾಲ್ವರು ಘಟಾನುಘಟಿ ನಾಯಕರ ಪೈಪೋಟಿ! ನವದೆಹಲಿ, ಆಗಸ್ಟ್ 28: ಹರ್ಯಾಣ ವಿಧಾನಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ 1/10/2024ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಸರತ್ತು ಆರಂಭಿಸಿದೆ. ಇಂತಹ ಸಂದರ್ಭದಲ್ಲಿ ಒಂದೇ ಕ್ಷೇತ್ರದ ಟಿಕೆಟ್‌ಗಾಗಿ ಘಟಾನುಘಟಿ ನಾಯಕರು ಪೈಪೋಟಿ ನಡೆಸುತ್ತಿರುವುದು ಪಕ್ಷದ ಚಿಂತೆ ಹೆಚ್ಚಿಸಿದೆ. ಬಾದಶಹಪುರ …

Read More »

4 ತಿಂಗಳ ನಂತರ ಆಸ್ಪತ್ರೆಯಿಂದ ಎಸ್.ಎಂ.ಕೃಷ್ಣ ಡಿಸ್ಚಾರ್ಜ್!

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ (Lung problem) ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ (SM Krishna) ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ (Doctor) ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ವಿಧಾನ ಪರಿಷತ್​ ಸದಸ್ಯ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.   ಕೃಷ್ಣ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ …

Read More »