Breaking News
Home / ರಾಷ್ಟ್ರೀಯ (page 400)

ರಾಷ್ಟ್ರೀಯ

ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆಯನ್ನುಅನಾವರಣ ಮಾಡಿದ ಸಿಎಂ ಬೊಮ್ಮಾಯಿ

ಬೆಳಗಾವಿಯ ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅನಾವರಣ ಮಾಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ರಾಜಹಂಸಗಡ ಕೋಟೆಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಶಿವಾಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಪ್ರತಿಮೆ ಅನಾವರಣ ಮಾಡಿದರು. 43 ಅಡಿ ಎತ್ತರದ ಬೃಹತ್ ಶಿವಾಜಿ ಪ್ರತಿಮೆ ಇದಾಗಿದ್ದು, ಇದೇ ವೇಳೆ ರಾಜಹಂಸಗಡದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಸಿಎಂ ಚಾಲನೆ ನೀಡಿದರು. ಸಚಿವ ಗೋವಿಂದ ಕಾರಜೋಳ, ಸುನೀಲ್ ಕುಮಾರ್, ಸಂಸದೆ …

Read More »

ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ : ಯಾರಿಗೆ ಎಷ್ಟೆಷ್ಟು ಹೆಚ್ಚುವರಿ ವೇತನ ಸಿಗಲಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಅದರಂತೆ ನಿಮ್ಮ ಮೂಲ ವೇತನ, ಪ್ರಸ್ತುತ ತುಟ್ಟಿ ಭತ್ಯೆ ಸೇರಿ ಶೇ.17ರಷ್ಟು ಮಧ್ಯಂತರ ಪರಿಹಾರ ಸೇರಿದರೇ ವೇತನ ಎಷ್ಟು ಸಿಗಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ.   ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು …

Read More »

ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಭೆ ಮಾ. 8ಕ್ಕೆ ನಡೆಯಲಿದೆ.

ಬೆಂಗಳೂರು: ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಹಾಗೂ ತೀವ್ರ ಗೊಂದಲದಲ್ಲಿರುವ 75 ರಿಂದ 80 ಕ್ಷೇತ್ರಗಳ ಆಕಾಂಕ್ಷಿಗಳು ಹಾಗೂ ಸ್ಥಳೀಯ ಮುಖಂಡರ ಸಭೆ ಮಾ. 8ಕ್ಕೆ ನಡೆಯಲಿದೆ. ಬೆಂಗಳೂರು ಹೊರವಲಯದ ರೆಸಾರ್ಟೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುಜೇìವಾಲ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ.   ತೀವ್ರ ಕಗ್ಗಂಟಾಗಿರುವ ಕ್ಷೇತ್ರಗಳ ಟಿಕೆಟ್‌ ಆಕಾಂಕ್ಷಿಗಳನ್ನು ಸಭೆಗಳನ್ನು ಆಹ್ವಾನಿಸಲಾಗಿದೆ. ಕೆಲವು ಕ್ಷೇತ್ರಗಳಲ್ಲಿ ಎರಡರಿಂದ …

Read More »

ಇಂದು ಮೂರು ರಾಜ್ಯಗಳ ಫ‌ಲಿತಾಂಶ ಪ್ರಕಟ

ಹೊಸದಿಲ್ಲಿ: ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ ರಾಜ್ಯಗಳ ಚುನಾವಣ ಫ‌ಲಿತಾಂಶ ಗುರುವಾರ ಹೊರಬೀಳಲಿದೆ. ತ್ರಿಪುರಾ, ನಾಗಾಲ್ಯಾಂಡ್‌ ಬಿಜೆಪಿ ತೆಕ್ಕೆಗೆ ಹೋಗಲಿದೆ, ನಾಗಾಲ್ಯಾಂಡ್‌ ಅತಂತ್ರವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.   ಫೆ. 16ರಂದು ತ್ರಿಪುರಾ ಮತ್ತು ಫೆ. 27ರಂದು ನಾಗಾಲ್ಯಾಂಡ್‌ ಹಾಗೂ ಮೇಘಾಲಯ ವಿಧಾನಸಭೆಗಳಿಗೆ ಚುನಾವಣೆ ನಡೆದಿತ್ತು. ತ್ರಿಪುರಾದಲ್ಲಿ ಪ್ರಾದೇಶಿಕ ಪಕ್ಷ ತಿಪ್ರ ಮೋಥಾ 42 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಮೇಘಾಲಯ ಹಾಗೂ ನಾಗಾಲ್ಯಾಂಡ್‌ಗಳಲ್ಲಿ …

Read More »

ಸಕಾರಣವಿಲ್ಲದೆ ತೆಗೆದು ಹಾಕಲಾಗಿದ್ದ ಮತದಾರರ ಹೆಸರು ಮರು ಸೇರ್ಪಡೆ

ಬೆಂಗಳೂರು ಕೇಂದ್ರ ಚುನಾವಣ ಆಯೋಗದ ನಿರ್ದೇಶನದಂತೆ ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಮರುಪರಿಶೀಲಿಸಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಪ್ರತಿಯೊಂದು ಕ್ಷೇತ್ರ ದಲ್ಲೂ ಅಂದಾಜು 20 ಸಾವಿರ ಹೆಸರುಗಳನ್ನು ಸಕಾರಣವಿಲ್ಲದೆ ತೆಗೆದುಹಾಕಿರುವುದನ್ನು ಪತ್ತೆಹಚ್ಚಿದೆ.   ಅಂತಿಮ ಮತದಾರರ ಪಟ್ಟಿಯಲ್ಲಿ 10 ಸಾವಿರ ಹೆಸರುಗಳು ತೆಗೆದುಹಾಕಿದ್ದರೆ (ಅಂದರೆ ಶೇ.4ಕ್ಕಿಂತ ಅಧಿಕ) ಅಂತಹ ಕ್ಷೇತ್ರಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಮರು ಪರಿಶೀಲಿಸುವಂತೆ ಚುನಾವಣ ಆಯೋಗ ನಿರ್ದೇಶಿಸಿತ್ತು. ಶೇ.4ಕ್ಕಿಂತ ಹೆಚ್ಚು …

Read More »

ಶಾಸಕರ ಆಪ್ತನ ಮಾತೋಶ್ರೀ ನಿಧನ ಇಂದು 10ಗಂಟೆಗೆ ಗೋಕಾಕ ನ ಭಗತ ಸಿಂಗ್ ಸರ್ಕಲ ನಲ್ಲಿರುವ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ

ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರ ಮಾತೋಶ್ರೀ ನಿಧನಗುರುವಾರದಂದು ಮುಂ. ೧೦ ಗಂಟೆಗೆ ಅಂತ್ಯಕ್ರಿಯೆ. ಗೋಕಾಕ್- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರ ಮಾತೋಶ್ರೀ ಗಂಗವ್ವ ಲಕ್ಷ್ಮಣ ಶೇಖರಗೋಳ (೮೨) ಅವರು ಬುಧವಾರ ದಿ. ೧.೩.೨೦೨೩ ರಂದು ಸಂಜೆ ೭.೪೫ ಗಂಟೆಗೆ ಅನಾರೋಗ್ಯದಿಂದ ನಿಧನರಾದರು. ಮೃತರಿಗೆ ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ. ಮೃತರ ಅಂತ್ಯಕ್ರಿಯೆಯು ನಾಳೆ …

Read More »

ಅಪ್ಪ ಜೈಲಿಗೆ ಹೋಗಿದ್ದ ಕರಾಳ ದಿನಗಳ ಪುಸ್ತಕ ಬಿಡುಗಡೆ: ಬಿಎಸ್‌ವೈ ಪುತ್ರಿ

ಶಿವಮೊಗ್ಗ : ‘ನಮ್ಮ ತಂದೆ (ಬಿ.ಎಸ್‌.ಯಡಿಯೂರಪ್ಪ) ಜೈಲಿಗೆ ಹೋಗಿದ್ದು ಕರಾಳ ದಿನಗಳು. ಅವರ ಕುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು ಮಾಡಿದ್ದರು ಎಂಬುದನ್ನು ಅವರು ಜೈಲಿನಲ್ಲಿದ್ದಾಗ ಡೈರಿ ಬರೆದಿಟ್ಟಿದ್ದಾರೆ. ಸಂದರ್ಭ ಬಂದಾಗ ಬಹಿರಂಗಪಡಿಸಲಾಗುವುದು’ ಎಂದು ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರಿ ಬಿ.ವೈ.ಅರುಣಾದೇವಿ ಹೇಳಿದರು. ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆ ಸಂದರ್ಭದಲ್ಲಿ ಅದೊಂದು ರಾಜಕೀಯ ಅಸಹ್ಯ ಅನ್ನಿಸಿತ್ತು. ಡೈರಿಯಲ್ಲಿ ಪ್ರತಿಯೊಂದು ಘಟನೆಯನ್ನು ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧ …

Read More »

ಮೋದಿಗೆ ಮರಳಿ ನಮಸ್ಕರಿಸುವ ಸಂಸ್ಕೃತಿ ಗೊತ್ತಿಲ್ಲ: ಎಚ್‌.ಕೆ.ಪಾಟೀಲ ಕಿಡಿ

ರೋಣ (ಗದಗ ಜಿಲ್ಲೆ): ‘ಮರಳಿ ನಮಿಸುವ ಸಂಸ್ಕೃತಿ ಗೊತ್ತಿಲ್ಲದ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಕಾಂಗ್ರೆಸ್‌ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಶಾಸಕ ಎಚ್‌.ಕೆ.ಪಾಟೀಲ ತಿರುಗೇಟು ನೀಡಿದರು. ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಅವರಿಗೆ ಸ್ವಪಕ್ಷದಲ್ಲೇ ಗೌರವ ಸಿಗುತ್ತಿಲ್ಲ ಎಂದು ಹೇಳಿರುವ ಪ್ರಧಾನಿ ಮೋದಿ ಅವರ ಮಾತಿಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾನಿ ಅವರು ಕೈ ಜೋಡಿಸಿ ನಿಂತಾಗ ಮೋದಿ ಅವರು ಮರಳಿ ನಮಸ್ಕಾರ ಮಾಡಲಿಲ್ಲ. ಈಗ ಅವರು …

Read More »

ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಎಎಪಿ ಉಪಾಧ್ಯಕ್ಷ ರಾಗಿದ್ದ ಭಾಸ್ಕರ್ ರಾವ್ ಬುಧವಾರ ಬಿಜೆಪಿ ಸೇರಿದರು.

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಎಎಪಿ ಉಪಾಧ್ಯಕ್ಷ ರಾಗಿದ್ದ ಭಾಸ್ಕರ್ ರಾವ್ ಬುಧವಾರ ಬಿಜೆಪಿ ಸೇರಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿ ಯಲ್ಲಿ, ಬಿಜೆಪಿ ಸೇರಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಇನ್ನಷ್ಟು ಅಭಿವೃದ್ಧಿ ಹೊಂದಲಿದ್ದು, ಬಿಜೆಪಿ ಯುವ ಜನತೆಯ ಆಶಾ ಕಿರಣವಾಗಿದೆ ಎಂದರು.   ಈ ಹಿಂದೆ ಆಮ್ ಆದ್ಮಿ ಪಕ್ಷ ಸೇರಿದಾಗ ಬಿಜೆಪಿಯ ಆರೋಪ ಮಾಡಿದ …

Read More »

ರಾಜ್ಯ ಸರ್ಕಾರಿ ನೌಕರರ ವೇತನ ಶೇ 17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ತಕ್ಷಣದಲ್ಲೇ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಏಳನೇ ವೇತನ ಆಯೋಗವನ್ನು ಈಗಾಗಲೇ ನೇಮಿಸಲಾಗಿದೆ. ಅವರಿಂದ ವರದಿ ಪಡೆದು ಶೀಘ್ರದಲ್ಲಿ ವೇತನ ಪರಿಷ್ಕರಣೆಗೆ ಪ್ರಯತ್ನ …

Read More »