ಮೈಸೂರು: ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳಿಗೆ ನೀಡುವ ಊಟವನ್ನು ಇದೇ ಮೊದಲ ಬಾರಿಗೆ ‘ಹಾಟ್‌ಬಾಕ್ಸ್’ನಲ್ಲಿ ಕೊಡುವುದಕ್ಕೆ ತಯಾರಿ ಆರಂಭವಾಗಿದೆ. ‘ಈ ಉಪಕ್ರಮದ ಮೂಲಕ ತಟ್ಟೆಯಲ್ಲಿ ಊಟ ಪಡೆಯುವುದು, ತಣ್ಣಗಾದ ಆಹಾರ ಸೇವಿಸುವ ಪ್ರಮೇಯ ತಪ್ಪಲಿದೆ’ ಎಂಬ ಆಶಯವನ್ನು ಇಲಾಖೆ ಹೊಂದಿದೆ. ಸದ್ಯ 810 ಕೈದಿಗಳಿರುವ ಕಾರಾಗೃಹದಲ್ಲಿ ನಿತ್ಯ ಸಂಜೆ 6.30ರೊಳಗೆ ರಾತ್ರಿ ಊಟ ವಿತರಿಸಲಾಗುತ್ತದೆ. ತಟ್ಟೆಗಳಲ್ಲಿ ಊಟ ಪಡೆಯುವ ಕೈದಿಗಳು ರಾತ್ರಿ ವೇಳೆ ಊಟ ಮಾಡುತ್ತಿದ್ದರು. ಅಷ್ಟರ ವೇಳೆಗೆ ಊಟವು …
Read More »ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ
ಮುಂಬೈ : ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸೋಮವಾರ ಮಹಿಳೆ ತನ್ನ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರತ್ನಗಿರಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿಗೆ ಆಟೋ ರಿಕ್ಷಾ ಚಾಲಕ ತನ್ನ ನೀರಿನಲ್ಲಿ ಮತ್ತು ಬೆರೆಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸರ ಪ್ರಕಾರ, ಆಟೋ ರಿಕ್ಷಾದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ, ವಿದ್ಯಾರ್ಥಿನಿ ಚಾಲಕನಿಂದ ನೀರು …
Read More »ಕರ್ನಾಟಕ ಸೇರಿ ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದ `UGC’
ನವದೆಹಲಿ : ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದೆ. ಇವುಗಳಲ್ಲಿ ದೆಹಲಿಯಲ್ಲಿ 8 ಮತ್ತು ಕರ್ನಾಟಕದಲ್ಲಿ ಒಂದು ನಕಲಿ ವಿಶ್ವವಿದ್ಯಾಲಯಗಳಿವೆ. ಕಳೆದ ವರ್ಷ 20 ನಕಲಿ ವಿಶ್ವವಿದ್ಯಾಲಯಗಳಿದ್ದು, ಈ ವರ್ಷ ಅವುಗಳ ಸಂಖ್ಯೆ 21ಕ್ಕೆ ತಲುಪಿದೆ. ಈ ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಮಾನ್ಯವಾಗಿಲ್ಲ ಎಂದು ಹೇಳಿದೆ. ಮೇಲಾಗಿ, ಈ ನಕಲಿ ವಿಶ್ವವಿದ್ಯಾನಿಲಯಗಳು ಪದವಿಗಳನ್ನು ನೀಡಿದ್ದರೂ, ಉದ್ಯೋಗದ ಉದ್ದೇಶಕ್ಕಾಗಿ ಅವುಗಳನ್ನು ಗುರುತಿಸಲಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ. …
Read More »KAS’ ಪೂರ್ವಭಾವಿ ಪರೀಕ್ಷೆ : ಬೆಳಗಾವಿಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಪರೀಕ್ಷಾರ್ಥಿಗಳ ಪ್ರತಿಭಟನೆ!
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಇಂದು ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅಲ್ಲದೇ ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ ಮಾಡಲಾಗಿದೆ. ಒಎಂಆರ್ ಶೀಟ್ ಕೂಡ ಅದಲು ಬದಲಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ …
Read More »ದುಬಾರಿ ಮದ್ಯ ನಾಳೆಯಿಂದ ಅಗ್ಗ: ಯಾವ ಬ್ರ್ಯಾಂಡ್ ದರ ಎಷ್ಟು ಇಳಿಕೆ?
ದುಬಾರಿ ಮದ್ಯ ನಾಳೆಯಿಂದ ಅಗ್ಗ: ಯಾವ ಬ್ರ್ಯಾಂಡ್ ದರ ಎಷ್ಟು ಇಳಿಕೆ? ಬೆಂಗಳೂರು: ದುಬಾರಿ ದರದ (ಪ್ರೀಮಿಯಂ) ಬ್ರ್ಯಾಂಡ್‌ಗಳ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಕೆ ಮಾಡಿ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ಮಂಗಳವಾರದಿಂದಲೇ ಪ್ರೀಮಿಯಂ ಬ್ರ್ಯಾಂಡ್‌ಗಳ ಮದ್ಯದ ದರದಲ್ಲಿ ಶೇಕಡ 15ರಿಂದ ಶೇ 20ರಷ್ಟು ಇಳಿಕೆಯಾಗಲಿದೆ. ದುಬಾರಿ ಬೆಲೆಯ ಮದ್ಯದ ದರಗಳನ್ನು ನೆರೆಯ ರಾಜ್ಯಗಳಿಗೆ ಸರಿಸಮನಾಗಿ ಪರಿಷ್ಕರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ …
Read More »ಹೆಸರುಕಾಳು ದರ ₹4,000ಕ್ಕೆ ಕುಸಿತ, ಚಿಂತೆಗೀಡಾದ ಜಿಲ್ಲೆಯ ಅನ್ನದಾತ
ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆಯಲಾಗಿದೆ. ಶೇ 80ರಷ್ಟು ರೈತರು ಈಗಾಗಲೇ ರಾಶಿ ಮಾಡಿದ್ದಾರೆ. ಲಕ್ಷಾಂತರ ಕ್ವಿಂಟಲ್ ಹೆಸರುಕಾಳು ಸಿದ್ಧಗೊಂಡಿದೆ. ಆದರೆ, ದರ ಕುಸಿತ ರೈತರನ್ನು ಚಿಂತೆಗೀಡು ಮಾಡಿದೆ. ಜಿಲ್ಲಾಡಳಿತ ಯಾವಾಗ ಖರೀದಿ ಕೇಂದ್ರ ತೆರೆಯುವುದೋ ಎಂದು ರೈತರು ಕಾದು ಕುಳಿತಿದ್ದಾರೆ. ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆ ತುಂಬ ಹದವಾಗಿ ಬಿದ್ದಿದೆ. ಪರಿಣಾಮ ಪ್ರತಿ ವರ್ಷಕ್ಕಿಂತ ಈಗ ಹೆಸರು ಬೆಳೆ ಅತ್ಯಂತ …
Read More »ಲೋಕಾ ದಾಳಿಗೊಳಗಾದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗೆ ಭಡ್ತಿ?
ಲೋಕಾ ದಾಳಿಗೊಳಗಾದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗೆ ಭಡ್ತಿ? ಬೆಂಗಳೂರು: ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಅಮಾನತುಗೊಳ್ಳಬೇಕಾದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗೆ ಹೆಚ್ಚುವರಿ ಭಡ್ತಿ ನೀಡಲು ಸರಕಾರ ಸಿದ್ಧತೆ ನಡೆಸಿದೆ. ವಾಣಿಜ್ಯ ತೆರಿಗೆ ಇಲಾಖೆ ಬೆಂಗಳೂರು ಜಂಟಿ ಆಯುಕ್ತರ ಮೇಲೆ ಕಳೆದ ತಿಂಗಳಷ್ಟೇ ಲೋಕಾಯುಕ್ತ ದಾಳಿ ನಡೆಸಿದ್ದರು. ಅವರ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ಕೂಡ ದಾಖಲಾಗಿತ್ತು. ಅಕ್ರಮ ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಸರಕಾರಕ್ಕೆ ಲೋಕಾಯುಕ್ತ ವರದಿ ನೀಡಿದೆ. ಅದರಂತೆ …
Read More »ನಗರದಲ್ಲಿ ಇಂದು ಮಾಂಸ ಮಾರಾಟ ನಿಷೇಧ
ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಸೋಮವಾರ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು. ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಪಶುಪಾಲನೆ …
Read More »ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ. ನಗರಸಭೆಗೆ ಬಿಗಿ ಪೊಲೀಸ್ ಬಂದೋಬಸ್ತ್
ಮುಧೋಳ : ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ನಗರಸಭೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಮಧ್ಯಾಹ್ನ ಎರಡು ಗಂಟೆ ವೇಳೆಗೆ ಆಯ್ಕೆಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಂಜಾಗೃತ ಕ್ರಮವಾಗಿ ನಗರಸಭೆ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿದ್ದಾಜಿದ್ದಿನ ಕಾಳಗಕ್ಕೆ ಸಿದ್ದವಾಗಿರುವ ನಗರಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕೈ-ಕಮಲ ಪಡೆಗಳ …
Read More »11 ದಿನಗಳ ಮುಷ್ಕರ ಹಿಂಪಡೆದ ಭಾರತೀಯ ವೈದ್ಯಕೀಯ ಸಂಘ
ನವದೆಹಲಿ: ಅಖಿಲ ಭಾರತ ವೈದ್ಯಕೀಯ ಸಂಘದ ಒಕ್ಕೂಟವು 11 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕರೆ ನೀಡಲಾಗಿದ್ದ 11 ದಿನಗಳ ಮುಷ್ಕರವನ್ನು ಸುಪ್ರೀಂ ಕೋರ್ಟ್‌ನ ಸಕಾರಾತ್ಮಕ ನಿರ್ದೇಶನಗಳನ್ನು ಅನುಸರಿಸಿ ಕೊನೆಗೊಳಿಸಲು ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಶನ್(ಎಫ್‌ಐಎಂಎ) ಗುರುವಾರ ನಿರ್ಧರಿಸಿದೆ. ಸುಪ್ರೀಂ ಕೋರ್ಟ್ ಪ್ರತಿಭಟನಾನಿರತ ವೈದ್ಯರಿಗೆ ಕೆಲಸವನ್ನು ಪುನರಾರಂಭಿಸಲು ಕೇಳಿಕೊಂಡಿತು. ಯಾವುದೇ ಪ್ರತಿಕೂಲ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿತು.
Read More »