ಚಂದ್ರನ ದಕ್ಷಿಣ ಧ್ರುವದಲ್ಲಿರುವ ವಿಕ್ರಂ ಲ್ಯಾಂಡರ್ನ್ನು ಶಿವಶಕ್ತಿ ಪಾಯಿಂಟ್ನಿಂದ 40 ಸೆಂ.ಮೀ ಎತ್ತರಕ್ಕೆ ಹಾರಿಸಿ ಮತ್ತೆ ನಂತರ 30ರಿಂದ 40 ಸೆಂ.ಮೀ ಪಕ್ಕಕ್ಕೆ ಲ್ಯಾಂಡ್ ಮಾಡಿಸಲಾಗಿದ್ದು, ಇಸ್ರೋದ ಈ ಸಾಧನೆ ಕುರಿತಂತೆ ಬಾಹ್ಯಾಕಾಶ ಲೇಖಕರು ಹಾಗೂ ರಕ್ಷಣಾ ಮತ್ತು ರಾಜಕೀಯ ವಿಶ್ಲೇಷಕರಾದ ಗಿರೀಶ್ ಲಿಂಗಣ್ಣ ಅವರು ವಿವರಿಸಿದ್ದಾರೆ. ಇಸ್ರೋದ ವಿಕ್ರಮ್ ಲ್ಯಾಂಡರ್ ತನ್ನ ಸಾಮರ್ಥ್ಯದ ವಿಚಾರದಲ್ಲಿ ಎಲ್ಲ ನಿರೀಕ್ಷೆಗಳನ್ನು ಮೀರಿ ಸಾಧನೆ ನಿರ್ಮಿಸಿದೆ ಎಂದು ಇಸ್ರೋ ಟ್ವೀಟ್ ಮೂಲಕ …
Read More »ವಾಘಾ ಗಡಿ ಮೂಲಕ ಪಾಕಿಸ್ತಾನ ಪ್ರವೇಶಿಸಿದ ರೋಜರ್ ಬಿನ್ನಿ, ರಾಜೀವ್ ಶುಕ್ಲಾ
ಅಮೃತಸರ (ಪಂಜಾಬ್): ಏಷ್ಯಾಕಪ್ 2023 ಪಾಕಿಸ್ತಾನ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯುತ್ತಿದೆ. ಪಾಕಿಸ್ತಾನದ ಲಾಹೋರ್ನಲ್ಲಿ ಸಪ್ಟೆಂಬರ್ 5 ಮತ್ತು 6ರಂದು ನಡೆಯಲಿರುವ ಪಂದ್ಯದಲ್ಲಿ ಬಿಸಿಸಿಐನ ಇಬ್ಬರು ಅಧಿಕಾರಿಗಳು ಇರಲಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ತೆರಳಿದ್ದಾರೆ.. ನಾಳೆ (ಮಂಗಳವಾರ) ನಡೆಯುವ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯವನ್ನು ಗಡಾಫಿ ಕ್ರೀಡಾಂಗಣದಲ್ಲಿ …
Read More »370ನೇ ವಿಧಿ ರದ್ದತಿ ವಿಚಾರಣೆ: ಮುಖ್ಯ ಅರ್ಜಿದಾರ, ಸಂಸದ ಅಕ್ಬರ್ ಸಂವಿಧಾನ ನಿಷ್ಠೆ ಸಾಬೀತಿಗೆ ಕೋರ್ಟ್ ಸೂಚನೆ
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ 370 ನೇ ವಿಧಿ ರದ್ದತಿ ಬಗ್ಗೆ ಸುಪ್ರೀಂಕೋರ್ಟ್ ನಿತ್ಯ ವಿಚಾರಣೆ ನಡೆಸುತ್ತಿದ್ದು, ಮುಖ್ಯ ಅರ್ಜಿದಾರರಾಗಿರುವ ಬಾರಾಮುಲ್ಲಾ ಕ್ಷೇತ್ರದ ಸಂಸದ ಮುಹಮದ್ ಅಕ್ಬರ್ ಲೋನ್ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಖಂಡಿಸಿ, ದೇಶದ ಸಂವಿಧಾನದ ಮೇಲೆ ಇರುವ ನಿಷ್ಠೆಯ ಬಗ್ಗೆ ಅಫಿಡವಿಟ್ ಸಲ್ಲಿಸಲು ಕೋರ್ಟ್ ಸೂಚಿಸಿದೆ. 15ನೇ ದಿನದ ವಿಚಾರಣೆಯಲ್ಲಿ ಮುಖ್ಯ ಅರ್ಜಿದಾರ ಅಕ್ಬರ್ ಲೋನ್ ವಿರುದ್ಧವೇ ಭಾರತ ವಿರೋಧಿ …
Read More »ಚುನಾವಣಾ ಅಕ್ರಮ ನಡೆಸಿ ಗೆದ್ದ ಆರೋಪ : ಹೆಚ್ಡಿ ರೇವಣ್ಣಗೆ ಹೈಕೋರ್ಟ್ ಸಮನ್ಸ್
ಬೆಂಗಳೂರು : ಚುನಾವಣಾ ಅಕ್ರಮಗಳನ್ನು ನಡೆಸಿ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರು ಆಯ್ಕೆಯಾಗಿದ್ದು, ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ಹೊಳೆನರಸೀಪುರದ ಪರಾಜಿತ ಅಭ್ಯರ್ಥಿ ಹಾಗೂ ವಕೀಲ ದೇವರಾಜೇಗೌಡ ಎಂಬುವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ, ರೇವಣ್ಣಗೆ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ಕೂಡ …
Read More »ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿ: ಪ್ರಕರಣ ದಾಖಲು
ಬೆಂಗಳೂರು: ಸಾಮಾನ್ಯವಾಗಿ ರಾಜಕೀಯ ನಾಯಕರು, ಪೊಲೀಸ್ ಅಧಿಕಾರಿಗಳು, ಸಿನಿಮಾ ತಾರೆಗಳು ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸುತ್ತಿದ್ದ ಸೈಬರ್ ವಂಚಕರು ಇದೀಗ ರಾಜ್ಯಪಾಲರ ಹೆಸರಿನಲ್ಲಿಯೂ ನಕಲಿ ಖಾತೆ ತೆರೆದಿರುವ ವಿಚಾರ ಬೆಳಕಿಗೆ ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರ ಫೋಟೋ, ಹೆಸರು ಬಳಸಿಕೊಂಡು ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಕರ್ನಾಟಕ ಪ್ರದೇಶ …
Read More »ಛಾಯಾಗ್ರಾಹಕನ ವಿರುದ್ಧ ಹಾರ್ಡ್ ಡಿಸ್ಕ್ ಕೊಡದೇ ವಂಚನೆ ಪ್ರಕರಣ: ಆರೋಪ ಅಲ್ಲಗಳೆದ ಸಹ ನಿರ್ಮಾಪಕಿ
ಬೆಂಗಳೂರು: ಚಿತ್ರೀಕರಣವಾದ ಸಿನಿಮಾ ದೃಶ್ಯಗಳ ಹಾರ್ಡ್ ಡಿಸ್ಕ್ ಕೊಡದೇ, ನಿರ್ಮಾಪಕರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಛಾಯಾಗ್ರಾಹಕನ ವಿರುದ್ಧ ಪ್ರಕರಣ ದಾಖಲಾಗಿದೆ. ‘ಸಮುದ್ರಂ’ ಸಿನಿಮಾದ ನಿರ್ಮಾಪಕಿ ರಾಜಲಕ್ಷ್ಮಿ ನೀಡಿರುವ ದೂರಿನನ್ವಯ ಛಾಯಾಗ್ರಾಹಕ ರಿಷಿಕೇಷ್ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಅನಿತಾ ಭಟ್ ಮುಖ್ಯ ಭೂಮಿಕೆಯಲ್ಲಿರುವ ‘ಸಮುದ್ರಂ’ ಸಿನಿಮಾವನ್ನು ರಾಜಲಕ್ಷ್ಮಿ ಸಿನಿ ಕ್ರಿಯೇಷನ್ಸ್ ಹೆಸರಿನಲ್ಲಿ ನಿರ್ಮಾಣ ಮಾಡಲಾಗುತ್ತಿತ್ತು. ಈ ಚಿತ್ರಕ್ಕೆ ರಿಷಿಕೇಷ್ ಛಾಯಾಗ್ರಾಹಕನಾಗಿದ್ದು, ರಾಜಲಕ್ಷ್ಮಿ ಎಂಬುವವರು ಬಂಡವಾಳ ಹೂಡಿದ್ದರು. …
Read More »ಗಣೇಶ ಮತ್ತು ಈದಮಿಲಾದ್ ಹಬ್ಬವನ್ನು ಶಾಂತತೆಯಿಂದ ಆಚರಿಸಿ
ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಭಾಗದ ಸರಹದ್ದಿನಲ್ಲಿ ಗಣೇಶ ಮತ್ತು ಈದ ಮಿಲಾದ ಹಬ್ಬವನ್ನು ಹಿಂದೂ ಮುಸ್ಲಿಂ ಸಮಾಜದವರು ಭಾವಕ್ಯದಿಂದ ಆಚರಿಸ ಬೇಕು ಎಂದು ಯಮಕನಮರ್ಡಿ ಪೋಲಿಸ್ ಠಾಣೆಯ ಇನ್ಸಪೇಕ್ಟರ ರಮೇಶ ಛಾಯಾಗೋಳ ಹೇಳಿದರು. ಅವರು ಇಂದು ಯಮಕನಮರ್ಡಿ ಪೋಲಿಸ್ ಠಾಣೆಯಲ್ಲಿ ಜರುಗಿದ ಶಾಂತತಾ ಸಭೆಯಲ್ಲಿ ಭಾಗವಹಿಸಿ ಮುಂಬರುವ ಸೆಪ್ಟೆಂಬರ್ 19 ರಿಂದ ಗಣೇಶ ಚತುರ್ಥಿ ಮತ್ತು 28 ರಂದು ಜರಗಲಿರುವ ಈದ ಮಿಲಾದ ಹಬ್ಬವನ್ನು ಹಿಂದೂ ಮುಸ್ಲಿಂ ಬಾಂಧವರು ಶ್ರದ್ದಾ …
Read More »ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ: ಡಿ ಕೆ ಶಿ
ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಪ್ರಶ್ನಿಸಿದ್ದಾರೆ ನಾವು ಕರ್ನಾಟಕದ ರೈತರ್ ಹಿತರಕ್ಷಣೆಗೆ ಏನು ಮಾಡಬೇಕು ಅದನ್ನು ಮಾಡಿದ್ದೇವೆ ಮೇಕೆದಾಟು ನೀರಿಗಾಗಿ ಯಾರು ಹೋರಾಟ ಮಾಡಿಲ್ಲ ನಾವು ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಇವರೆಲ್ಲ ಕಾವೇರಿ ಬಗ್ಗೆ ಮಾತನಾಡುತ್ತಿದ್ದಾರೆ ಯಾಕೆ ಮೇಕೆದಾಟು ಬಗ್ಗೆ ಮಾತನಾಡುತ್ತಿಲ್ಲ ನಮ್ಮ ಅಧಿಕಾರಿಗಳು …
Read More »ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ.
ಚಿತ್ರದುರ್ಗ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ದುರಂತ ಘಟನೆಯೊಂದು ಸಂಭವಿಸಿದೆ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವುದು ತಿಳಿದುಬಂದಿದೆ. ಈ ಅಪಘಾತ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತ ಘಟನೆಯಲ್ಲಿ …
Read More »ಸೂಪರ್ ಸ್ಟಾರ್’ ರಜನಿಕಾಂತ್‌ಗೆ ರಾಜ್ಯಪಾಲ ಹುದ್ದೆ?
ಮಧುರೈ (ತಮಿಳುನಾಡು): ”ಎಲ್ಲವೂ ದೇವರ ಕೈಯಲ್ಲಿದೆ. ರಜಿನಿ ಅವರಿಗೆ ಇದು (ರಾಜ್ಯಪಾಲರ ಹುದ್ದೆ) ಇಷ್ಟವಿಲ್ಲ. ಆದರೆ, ಬಹುಶಃ ಅವರು ಸಿಕ್ಕರೆ ಹಿಂಜರಿಯುವುದಿಲ್ಲ” ಎಂದು ನಟ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಹೇಳಿದ್ದಾರೆ. ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಭಾನುವಾರ ನಡೆದ ಎರಡು ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದ ಬಳಿಕ, ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದ್ದಾರೆ. ರಜನಿಕಾಂತ್‌ಗೆ ರಾಜ್ಯಪಾಲರ ಹುದ್ದೆ?: ”ರಜನಿಕಾಂತ್ ರಾಜಕೀಯಕ್ಕೆ ಬರಲು ಯೋಚಿಸಿಲ್ಲ” ಎಂದು ರಜನಿ ಸಹೋದರ ಸತ್ಯನಾರಾಯಣ ರಾವ್ …
Read More »
Laxmi News 24×7