Breaking News

ರಾಷ್ಟ್ರೀಯ

ಅಶುದ್ಧ ನೀರು ಸೇವನೆಯಿಂದ ಸಾವು ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಎಚ್ಚರಿಕೆ

ಬೆಂಗಳೂರು: ಅಶುದ್ಧ ನೀರು ಕುಡಿದು ಸಾವನ್ನಪ್ಪುವ ಪ್ರಕರಣಗಳು ಭವಿಷ್ಯದಲ್ಲಿ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೇ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ …

Read More »

ಚಂದ್ರಯಾನ 3 ಯಶಸ್ವಿಯಾಗಲೆಂದು ದೇಶ, ವಿದೇಶಗಳಲ್ಲಿ ಪ್ರಾರ್ಥನೆ: ಹೋಮ, ಹವನ, ಪೂಜೆ ನಡೆಸುತ್ತಿರುವ ಭಕ್ತರು

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ದೇಶ ಮಾತ್ರವಲ್ಲದೇ ಜಗತ್ತಿನಾದ್ಯಂತ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲೆಂದು ಪ್ರಪಂಚಾದ್ಯಂತ ವಿವಿಧ ಧಾರ್ಮಿಕ ಸಮುದಾಯಗಳಿಂದ ಹೋಮ, ಹವನ, ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ.     ಚಂದ್ರಯಾನ 3 ಮಿಷನ್‌ ಯಶಸ್ಸಿಯಾಗಲಿ ಎಂದು ಭಾರತಾದ್ಯಂತ ವಿವಿಧ …

Read More »

ದಕ್ಷಿಣ ಆಫ್ರಿಕಾದಿಂದ ‘Chandrayaan 3’ ಲ್ಯಾಂಡಿಂಗ್ ವರ್ಚುಯಲ್ ಆಗಿ ವೀಕ್ಷಿಸಲಿರುವ ಪ್ರಧಾನಿ

ಜೋಹಾನ್ಸ್‌ಬರ್ಗ್(ದಕ್ಷಿಣ ಆಫ್ರಿಕಾ): 15ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾದಿಂದಲೇ ಮೋದಿ ವರ್ಚುಯಲ್ ಆಗಿ ಐತಿಹಾಸಿಕ ವಿಕ್ರಮ್‌ ಲ್ಯಾಂಡರ್ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ 3 ಚಂದ್ರನ ಅಜ್ಞಾತ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ ಎಂದು ಹೇಳಿದೆ. ದೇಶಾದ್ಯಂತ ಪೂಜೆ ಪ್ರಾರ್ಥನೆ: ಇಂದು ಸಂಜೆ 6.04ಕ್ಕೆ ಸಾಫ್ಟ್ ಲ್ಯಾಂಡಿಂಗ್ ಸಮಯ ನಿಗದಿಪಡಿಸಲಾಗಿದೆ. …

Read More »

ನಗರದಾದ್ಯಂತ ಕಳೆದ 24 ಗಂಟೆಯಲ್ಲಿ 15 ರಸ್ತೆ ಅಪಘಾತ, ಐವರ ಸಾವು

ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸಂಭವಿಸಿದ್ದು, ಹದಿನೈದು ಅಪಘಾತಗಳ ಪ್ರಕರಣಗಳು ಸಂಭವಿಸಿವೆ. ಈ ವೇಳೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ‌. ಹೆಬ್ಬಾಳದಲ್ಲಿ – 1, ರಾಜಾಜಿನಗರ – 2, ಹೆಣ್ಣೂರು – 2, ಬಸವನಗುಡಿ – 2, ಕೆ.ಆರ್ ಪುರಂ – 1 ವೈಟ್ ಫೀಲ್ಡ್ – 2 ಹುಳಿಮಾವು – 2 ಹಾಗೂ ಸದಾಶಿವನಗರ – 1 ಮೈಕೊ ಲೇಔಟ್ – 1, ಎಲೆಕ್ಟ್ರಾನಿಕ್- 1 …

Read More »

ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯಲ್ಲಿ ಮಹಿಳಾ ಶಕ್ತಿ: 39 ಸದಸ್ಯರ ಪೈಕಿ 15 ಮಂದಿಗೆ ಸ್ಥಾನ

ನವದೆಹಲಿ : ಈ ವರ್ಷಾಂತ್ಯದ ಪಂಚರಾಜ್ಯಗಳ ವಿಧಾನಸಭೆ ಮತ್ತು ಮುಂದಿನ ವರ್ಷದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ​, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನೇತೃತ್ವದಲ್ಲಿ 84 ಜನರ ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯನ್ನು ಹೊಸದಾಗಿ ರಚಿಸಿದೆ. ಅದರಲ್ಲಿ ಪಕ್ಷದ ವಿರುದ್ಧ ಬಹಿರಂಗವಾಗಿ ಬಂಡಾಯವೇಳುತ್ತಿದ್ದ ನಾಯಕರೂ ಸೇರಿದಂತೆ 15 ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಪಕ್ಷದ ಅತ್ಯುನ್ನತ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಸಂಸ್ಥೆಯಾದ ಸಿಡಬ್ಲ್ಯೂಸಿಗೆ ಇಷ್ಟು ಪ್ರಮಾಣದಲ್ಲಿ ಮಹಿಳೆಯರಿಗೆ ಅವಕಾಶ ನೀಡಿದ್ದು, …

Read More »

ಬಗರ್​ ಹುಕುಂ ಭೂಮಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್​ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಶಿವಮೊಗ್ಗ: ಬಗರ್ ಹುಕುಂ ಭೂಮಿ ಖಾತೆ ವಿಷಯವಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮದ ನಾಡ ಕಚೇರಿಯ ಉಪ ತಹಶೀಲ್ದಾರ್ ಪರಮೇಶ್ ನಾಯ್ಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.   ಎರಡು ಎಕರೆ ಬಗರ್ ಹುಕುಂ ಭೂಮಿ ಖಾತೆಗೆ ಸೇರಿಸಲು ಶಿವರಾಜ್​ ಎಂಬುವರಿಂದ 40 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಡಿವೈಎಸ್ಪಿ ಈಶ್ವರ ನಾಯಕ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. …

Read More »

ಕೊಲೆ ಪ್ರಕರಣದಲ್ಲಿ ಪುತ್ರ ಮತ್ತು ಪತಿ ಭಾಗಿಯಾಗಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಮೈಸೂರು: ಯುವಕನ ಕೊಲೆ ಪ್ರಕರಣದಲ್ಲಿ ಮಗ ಮತ್ತು ಪತಿ ಜೈಲುಪಾಲಾದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ ಸಾವಿನ ವಿಚಾರ ತಿಳಿದು ಪತಿ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಮೃತಪಟ್ಟವರನ್ನು ಸಾಮ್ರಾಟ್ ಹಾಗೂ ಆತ್ಮಹತ್ಯೆಗೆ ಶರಣಾದವರನ್ನು ಇಂದ್ರಾಣಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಕಳೆದ ಶನಿವಾರ ರಾತ್ರಿ ಮೈಸೂರು ನಗರದ ವಿದ್ಯಾನಗರದ 4 ನೇ ಕ್ರಾಸ್​​ನ ನಿವಾಸಿ ಬಾಲರಾಜ್ ಎಂಬುವನನ್ನು ಕ್ಷುಲ್ಲಕ ಕಾರಣಕ್ಕಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. …

Read More »

ಡಿಸಿಎಂಗೆ ದೇವೇಗೌಡರ ಕುಟುಂಬವನ್ನು ಖರೀದಿಸುವ ಶಕ್ತಿ ಇಲ್ಲ:H.D.K.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಯಶವಂತಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂಬ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದರು. …

Read More »

ಮಹಾರಾಷ್ಟ್ರ ರಾಜ್ಯದ ಬತ್ತಿ ಶಿರಾಳದಲ್ಲಿ ನಿಜ ನಾಗರ ಹಾವಿಗೆ ಪೂಜೆ ಸಲ್ಲಸಿದ ಜನರು.

ಮಹಾರಾಷ್ಟ್ರ ರಾಜ್ಯದ ಬತ್ತಿ ಶಿರಾಳದಲ್ಲಿ ನಿಜ ನಾಗರ ಹಾವಿಗೆ ಪೂಜೆ ಸಲ್ಲಸಿದ ಜನರು. ಹೌದು ಇದು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಹತ್ತಿರ ಬತ್ತಿ ಶಿರಾಳ ಗ್ರಾಮದಲ್ಲಲ್ಲಿ ಪ್ರತಿವರ್ಷ ನಾಗರ ಪಂಚಮಿ ಯಂದು ನಿಜ ನಾಗರ ಹಾವಿನೊಂದಿಗೆ ಆಚರಿಸುತ್ತಾರೆ. ಒಂದು -ಎರೆಡು ದಿನ ಮುಂಚೆ ಕಾಡಿಗೆ ಹೋಗಿ ಸಾವಿರಾರು ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ, ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ, ಮಣ್ಣಿನ ಮಡಿಕೆಯಲ್ಲಿ …

Read More »

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ ಅಧಿಕಾರ ಸ್ವೀಕರಿಸಿದರು ಇವರಿಗೆ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಘಟಕದ ವತಿಯಿಂದ ಸನ್ಮಾನಿಸುವ ಮೂಲಕ ಬೈಲಹೊಂಗಲ ತಾಲೂಕಿಗೆ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Read More »