Breaking News

ರಾಷ್ಟ್ರೀಯ

ಮಾನಸಿಕ ಖಿನ್ನತೆಯಲ್ಲಿ ಅಶ್ವತ್ಥನಾರಾಯಣ್​ ಅವರಿದ್ದಾರೆ ಎಂದ ಡಿ ಕೆ ಶಿವಕುಮಾರ್

ಬೆಂಗಳೂರು : ಇವರು ಅಶ್ವತ್ಥನಾರಾಯಣ್​ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾಜಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಾಮನಗರ ಕ್ಲೀನ್ ಮಾಡುತ್ತೇನೆ ಎಂದು ಬಂದವರು, ಜಿಲ್ಲೆಯಲ್ಲಿ ಅವರ ಪಕ್ಷವನ್ನೇ ಕ್ಲೀನ್ ಮಾಡಿದರು. ಆ ಮಾನಸಿಕ ಖಿನ್ನತೆಯಲ್ಲಿ ಅವರಿದ್ದಾರೆ. ಅಶ್ವತ್ಥನಾರಾಯಣ್ ಅವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ …

Read More »

ಲೋಕಸಭೆಗೆ ಶೀಘ್ರದಲ್ಲೇ ಬಿಜೆಪಿ ಆಕಾಂಕ್ಷಿಗಳ ಪಟ್ಟಿ:B.S.Y.

ಶಿವಮೊಗ್ಗ : “ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿಯನ್ನು ಶೀಘ್ರದಲ್ಲೇ ತಯಾರಿಸಲಾಗುವುದು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇಂದು ಶಿವಮೊಗ್ಗದ ವಿನೋಬ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಶುರುವಾಗಿಲ್ಲ. ಆದಷ್ಟು ಬೇಗ ಸ್ಪರ್ಧಿಸುವ ಆಕಾಂಕ್ಷಿಗಳ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಕಳೆದ ಲೋಕಸಭೆ ಚುನಾವಣೆಯಂತೆ ಈ ಬಾರಿಯೂ 25ಕ್ಕೆ 25 ಕ್ಷೇತ್ರವನ್ನೂ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ” …

Read More »

ವೆಸ್ಟ್​ ಇಂಡೀಸ್​ ವಿರುದ್ಧ ಸರಣಿ ಕೈಚೆಲ್ಲಿದ ಭಾರತ.. ಹಾರ್ದಿಕ್​ ಬಗ್ಗೆ ವೆಂಕಟೇಶ್​ ಪ್ರಸಾದ್​ ಬೇಸರ

ಮಾಜಿ ಬೌಲರ್ ವೆಂಕಟೇಶ್​ ಪ್ರಸಾದ್​ ಅವರು ಭಾರತೀಯ ತಂಡದ ಆಟಗಾರರಿಗೆ ತಮ್ಮ ಕೌಶಲ್ಯವನ್ನು ಸುಧಾರಿಸಲು ಸಲಹೆ ನೀಡಿದ್ದಾರೆ ಮತ್ತು ಕ್ಯಾಪ್ಟನ್ ಹಾರ್ದಿಕ್ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಲಾಡರ್​ಹಿಲ್​, ಫ್ಲೋರಿಡಾ: ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಕಂಡಿತು. ಪಂದ್ಯ ಹಾಗೂ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನೀಡಿರುವ ಹೇಳಿಕೆ ಟೀಕೆಗೆ ಗುರಿಯಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು T20 …

Read More »

MSP: 9 ವರ್ಷಗಳಲ್ಲಿ ಜೋಳ, ಸಜ್ಜೆ, ರಾಗಿಯ ಕನಿಷ್ಠ ಬೆಂಬಲ ಬೆಲೆ ಶೇ 100ರಿಂದ 150ರಷ್ಟು ಹೆಚ್ಚಳ

ನವದೆಹಲಿ : ಕಳೆದ ಒಂಬತ್ತು ವರ್ಷಗಳಲ್ಲಿ ಜೋಳ, ಸಜ್ಜೆ ಮತ್ತು ರಾಗಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್​​ಪಿ) ಶೇ 100ರಿಂದ ಶೇ 150ರಷ್ಟು ಹೆಚ್ಚಳವಾಗಿದೆ. ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2014-15 ಮತ್ತು 2023-24ರ ನಡುವೆ ಜೋಳದ ಎಂಎಸ್​ಪಿ ಶೇಕಡಾ 108 ರಷ್ಟು ಹೆಚ್ಚಾಗಿದೆ. 2014-15ರಲ್ಲಿ ಜೋಳದ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್​ಗೆ 1,550 ರೂ.ಗಳಷ್ಟಿತ್ತು. ಇದು 2023-24ರಲ್ಲಿ ಪ್ರತಿ ಕ್ವಿಂಟಾಲ್​ಗೆ ಶೇ 108ರಷ್ಟು ಏರಿಕೆಯಾಗಿ 3,225 …

Read More »

ಮಾಯಾವತಿ ಜನ್ಮದಿನದಂದು ಮಣ್ಣಿನ ಕೇಕ್ ಕತ್ತರಿಸಿದ ಆರೋಪ: ಮೂವರ ಬಂಧನ

ಸಂಭಾಲ್ (ಉತ್ತರ ಪ್ರದೇಶ): ಎಂಟು ವರ್ಷಗಳ ಹಿಂದೆ ಬಹುಜನ ಸಮಾಜ ಪಕ್ಷದ (ಬಿಎಸ್​ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ ಜನ್ಮದಿನದಂದು ಮಣ್ಣಿನ ಕೇಕ್ ಕತ್ತರಿಸಿ, ಮಣ್ಣಿನ ಲಡ್ಡುಗಳನ್ನು ವಿತರಿಸಿದ್ದ ಆರೋಪ ಪ್ರಕರಣದಲ್ಲಿ ​ಮೂವರನ್ನು ಸಂಭಾಲ್ ಪೊಲೀಸರು ಬಂಧಿಸಿದ್ದಾರೆ. ಶನಿವಾರ ನ್ಯಾಯಾಲಯ ಹೊರಡಿಸಿದ ಬಂಧನ ವಾರೆಂಟ್​ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಶಕೀಲ್ ಉರ್ ರೆಹಮಾನ್ ಮಲಿಕ್, ನೂರ್ ಖಾನ್ ಹಾಗೂ ಜುಲ್ಫಿಕರ್​ ಎಂಬುವವರೇ ಬಂಧಿತರೆಂದು ಗುರುತಿಸಲಾಗಿದೆ. …

Read More »

ಗಂಗಾವತಿ: ಗ್ರಾ.ಪಂಚಾಯಿತಿ ಅಧ್ಯಕ್ಷಗಿರಿ ಮೀಸಲಾತಿ ಸಂಘರ್ಷ; ಹಲವರಿಗೆ ಗಾಯ, ಬೂದಗುಂಪಾ ಉದ್ವಿಗ್ನ

ಗಂಗಾವತಿ (ಕೊಪ್ಪಳ): ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಪ್ರಕಟವಾದ ಮೀಸಲಾತಿ ಅವೈಜ್ಞಾನಿಕವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ. ಪರಸ್ಪರ ದೊಣ್ಣೆ, ರಾಡ್ ಸೇರಿದಂತೆ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಕಾರಟಗಿ ತಾಲ್ಲೂಕಿನ ಬೂದಗುಂಪಾ ಗ್ರಾಮದಲ್ಲಿ ಇಂದು (ಭಾನುವಾರ) ಘಟನೆ ನಡೆಯಿತು. ಗಂಭೀರ ಗಾಯಗೊಳಗಾದವರನ್ನು ಸಮುದಾಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. …

Read More »

ಬೊಮ್ಮಾಯಿ ಸರ್ಕಾರ ₹1.5 ಲಕ್ಷ ಕೋಟಿ ಮೌಲ್ಯದ ಟೆಂಡರ್​ ಕರೆದು ಕಿಕ್‌ಬ್ಯಾಕ್ ಪಡೆದಿತ್ತು- ಹೆಚ್.ವಿಶ್ವನಾಥ್

ಬೆಳಗಾವಿ : “ವಿಧಾನಸಭೆ ಚುನಾವಣೆಗೂ ಮುನ್ನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದೂವರೆ ಲಕ್ಷ ಕೋಟಿ ರೂಪಾಯಿ ಮೌಲ್ಯದ ಟೆಂಡರ್ ಕರೆದು ಕಿಕ್ ಬ್ಯಾಕ್ ತೆಗೆದುಕೊಂಡಿದೆ” ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರಿಂದ ಕಮಿಷನ್ ಆರೋಪದ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಮಾತನಾಡುವುದು ಸುಲಭ, ಮಾತನಾಡುವವನು ಸತ್ಯವಂತನಿರಬೇಕು. ಇಡೀ ದೇಶ, ರಾಜ್ಯದಲ್ಲಿ ನೀ ಕಳ್ಳ, ನೀ ಕಳ್ಳ ಎನ್ನುತ್ತಾರೆ. ಆದರೆ ಯಾರು ಕಳ್ಳ …

Read More »

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕುಟುಂಬ ಸಮೇತರಾಗಿ ಭಾನುವಾರ ಹಾವೇರಿ ಸಿಂದಗಿ ಮಠಕ್ಕೆ ಭೇಟಿ

ಹಾವೇರಿ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕುಟುಂಬ ಸಮೇತರಾಗಿ ಭಾನುವಾರ ಹಾವೇರಿ ಸಿಂದಗಿ ಮಠಕ್ಕೆ ಭೇಟಿ ನೀಡಿದರು. ಸಿಂದಗಿ ಮಠದ ಶಾಂತವೀರೇಶ್ವರ ಗದ್ದುಗಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನ ರಾಜಕೀಯ ಜೀವನಕ್ಕೆ ಆಶೀರ್ವಾದ ಮಾಡಿರುವ ಮಠ “ಸಿಂದಗಿಮಠ” ಎಂದು ತಿಳಿಸಿದರು. ಟಿಕೆಟ್​ ವಿಚಾರವನ್ನು ರಾಜ್ಯ, ರಾಷ್ಟ್ರೀಯ ಸಮಿತಿ ನಾಯಕರು ನಿರ್ಧರಿಸುತ್ತಾರೆ: 25 ವರ್ಷಗಳಿಂದ ನಾನು ಈ ಮಠದೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದೇನೆ. ಇದು ಸಮಾಜವನ್ನು ಒಂದೂಗೂಡಿಸುವ ಮಠ. …

Read More »

ಏಷ್ಯಾ ಬುಕ್ ಆಫ್​ ರೆಕಾರ್ಡ್‌ನಲ್ಲಿ ದಾಖಲೆ ಮಾಡಿದ ಕಲಬುರಗಿಯ ಬಾಲಕ

ಕಲಬುರಗಿ : ಕೋವಿಡ್ ಸಂದರ್ಭದಲ್ಲಿ ಶಾಲೆಗಳಿಗೆ ಸಾಲು ಸಾಲು ರಜೆ ನೀಡಿದ್ದ ಪರಿಣಾಮ ಮನೆಯಲ್ಲಿ ಕುಳಿತಿದ್ದ ಬಹುತೇಕ ಮಕ್ಕಳು ಮೊಬೈಲ್ ಬಳಕೆಗೆ ಅಂಟಿಕೊಂಡಿದ್ರು. ಆದ್ರೆ ಇಲ್ಲೊಬ್ಬ ಪೋರ ರಜೆ ಸಮಯ ಸದುಪಯೋಗ ಮಾಡಿಕೊಂಡು ದಾಖಲೆ ಬರೆಯುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾನೆ. ಮೊದಲು ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ‌ ಪಟ್ಟಿಗೆ ಸೇರಿದ್ದ ಈ ಬಾಲಕ, ಇದೀಗ ಏಷ್ಯಾ ಬುಕ್ ಆಪ್ ರೆಕಾರ್ಡ್‌ನಲ್ಲಿ ಗ್ರಾಂಡ್ ಮಾಸ್ಟರ್ ಎಂಬ ಬಿರುದು ಪಡೆದು …

Read More »

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ಉಪೇಂದ್ರ ಅವರ ವಿರುದ್ಧ F.I.R.​ ದಾಖಲ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಡಿ ನಟ, ನಿರ್ದೇಶಕ ಉಪೇಂದ್ರ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಾಗಿದೆ. ಜಾತಿಯೊಂದರ ಭಾವನೆಗಳಿಗೆ ಧಕ್ಕೆಯಾಗುವ ಪದ ಬಳಸಿದ್ದಾರೆ ಎಂದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಅವರು ದೂರು ನೀಡಿದ್ದರು. ಇತ್ತೀಚಿಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ನೇರಪ್ರಸಾರದಲ್ಲಿ ಮಾತನಾಡಿದ್ದ ಉಪೇಂದ್ರ ಸಮುದಾಯವೊಂದರ ಕುರಿತು ಆಕ್ಷೇಪಾರ್ಹ …

Read More »