Breaking News

ರಾಷ್ಟ್ರೀಯ

ಎಚ್‌ಡಿಕೆ ನೈಸ್‌ ದಾಖಲೆ ಕೊಟ್ರೆ ತನಿಖೆ ಎಂದ ಜೋಶಿ; ಪ್ರತ್ಯುತ್ತರ ಕೊಡುವೆನೆಂದ ಡಿಕೆಶಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka Politics) ಹಲವಾರು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, “ನೈಸ್‌” ವಿವಾದ (Nice controversy) ತಾರಕಕ್ಕೇರಿದೆ. ಬಿಎಂಐಸಿ ಯೋಜನೆಯ ಅವ್ಯವಹಾರದ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಸಲ್ಲಿಸುವುದಾಗಿ ಹೇಳಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌ ಕೆಂಡವಾಗಿದೆ. ಅಲ್ಲದೆ, ನೈಸ್‌ ಸಂಸ್ಥೆ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಸೇರಿಕೊಂಡಿದ್ದಾರೆ ಎಂಬ ಆರೋಪಕ್ಕೆ ಡಿಕೆಶಿ ಖಡಕ್‌ ಪ್ರತಿಕ್ರಿಯೆ ನೀಡಿದ್ದು, ಎಚ್‌ಡಿಕೆಗೆ …

Read More »

ರಾಜ್ಯ ​ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ.: ಅಶ್ವತ್ಥ್ ನಾರಾಯಣ

ಬೆಂಗಳೂರು, ಆಗಸ್ಟ್​ 06: ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ(Ashwath Narayan)ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಅರ್ಹತೆ, ಯೋಗ್ಯತೆ ಇಲ್ಲ. ಭ್ರಷ್ಟಾಚಾರ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್​​ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ. ಜನರ ಮೇಲೆ ಪ್ರೀತಿ ಇಟ್ಟುಕೊಂಡು ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದಲ್ಲ. …

Read More »

ಜೆಡಿಎಸ್​ ಶಾಸಕರ ಮೇಲೆ ಕಾಂಗ್ರೆಸ್ ಕಣ್ಣು ಶಾಸಕರನ್ನ ಉಳಿಸಿಕೊಳ್ಳಲು ದಳಪತಿ ಮಾಸ್ಟರ್ ಪ್ಲ್ಯಾನ್!

ಬೆಂಗಳೂರು, (ಆಗಸ್ಟ್. 06): ಕರ್ನಾಟಕದಲ್ಲಿ (karnataka) ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಯಾರನ್ನು ಮಾಡುತ್ತೆ ಎನ್ನುವುದರಲ್ಲಿ ರಾಜ್ಯ ಬಿಜೆಪಿ(BJP) ನಾಯಕರು ಇದ್ದಾರೆ. ಇದರ ನಡುವೆ ಅತ್ತ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಆಡಳಿತ ಪಕ್ಷ ಕಾಂಗ್ರೆಸ್​ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ವರ್ಗಾವಣೆ ದಂಧೆ ವಿಚಾರವಾಗಿ ಪೆನ್​ಡ್ರೈವ್​ ಬಂಬ್​ ಸಿಡಿಸಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಒಂದು ಸಾವಿರ ಕೋಟಿ ವಸೂಲಿ ಪಕ್ಷ.. ಪೆನ್‌ಡ್ರೈವ್‌ ಎಂದು …

Read More »

ಟೊಮ್ಯಾಟೊ ಬೆಳೆದು ಕೋಟ್ಯಧಿಪತಿಗಳಾದ ಅಣ್ತಮ್ಮ

ಈ ಕುಟುಂಬ ಮೊದಲಿಗೆ ಸ್ವಂತ ಜಮೀನಿನಲ್ಲಿ ಮಳೆ ಆಶ್ರಿತ ಬೆಳೆ ಬೆಳೆದು ಜೀವನ ಸಾಗಿಸುತ್ತಿತ್ತು. ಬಳಿಕ ಸಹೋದರರು ಎಸ್​ಎಸ್​ಎಲ್​ಸಿ ಮುಗಿಸಿ, ಕಾಲೇಜು ಮೆಟ್ಟಿಲು ಏರದೆ ಕೃಷಿ ಮಾಡುವ ನಿರ್ಧಾರ ಕೈಗೊಂಡರು. 3-4 ವರ್ಷಗಳಿಂದ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಸಹೋದರರು ಟೊಮ್ಯಾಟೊ ಬೆಳೆಯುವುದನ್ನೇ ರೂಢಿಯಾಗಿಸಿಕೊಂಡಿದ್ದಾರೆ. 2 ವರ್ಷಗಳ ಹಿಂದೆ ಟೊಮ್ಯಾಟೊ ಬೆಲೆ ಕಡಿಮೆ ಇದ್ದ ಕಾರಣ ಅಷ್ಟೇನೂ ಲಾಭ ಸಿಕ್ಕಿರಲಿಲ್ಲ. ಹಿಂದಿನ ವರ್ಷವೂ ಖರ್ಚು ಸಿಕ್ಕಿತ್ತೇ ಹೊರತು ಲಾಭ ಕಂಡಿರಲಿಲ್ಲ. ಆದರೂ ಟೊಮ್ಯಾಟೊ …

Read More »

ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲು

ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಯಾವುದೇ ತೊಂದರೆಯಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇಂದು ಹಾಸನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ಸಾಲುಮರದ …

Read More »

ರಾಜ್ಯ ಕಾಂಗ್ರೆಸ್​ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7 ರಂದು (ನಾಳೆ) ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ.   ಆಡಳಿತರೂಢ ಕಾಂಗ್ರೆಸ್ ಸರ್ಕಾರವೂ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಕೈ ಬಿಟ್ಟಿದ್ದು, ರಾಜ್ಯದ ಅನ್ನದಾತರ ವಿರುದ್ಧವಾಗಿ ನಡೆದುಕೊಂಡಿದೆ. ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ …

Read More »

ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮದ್ಯದ ಅಮಲಿನಲ್ಲಿದ್ದ ಯುವತಿಯ ರಂಪಾಟ

ಬೆಂಗಳೂರು: ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮೆರೆಯುವ ಪ್ರಕರಣಗಳು ನಗರದಲ್ಲಿ ಆಗಾಗ ವರದಿಯಾಗುತ್ತಲೇ ಇರುತ್ತವೆ. ಅಂಥಹದ್ದೇ ಮತ್ತೊಂದು ಪ್ರಕರಣ ಶನಿವಾರ ತಡರಾತ್ರಿ ನಗರದ ಚರ್ಚ್ ಸ್ಟ್ರೀಟ್​ನಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಯುವತಿಯೊಬ್ಬಳು ತೂರಾಡುತ್ತ ಸಾರ್ವಜನಿಕರಿಗೆ ತಲೆ ನೋವಾದ ಘಟನೆ ನಡೆದಿದೆ. ಬುದ್ಧಿ ಹೇಳಲು ಹೋದವರ ಮೇಲೆಯೇ ಮುಗಿ ಬೀಳುತ್ತಿದ್ದ ಯುವತಿಯನ್ನು ಸಂಬಾಳಿಸುವಲ್ಲಿ ಪೊಲೀಸರೇ ಹೈರಾಣಾಗಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಪೊಲೀಸ್​ ಸಿಬ್ಬಂದಿ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಯತ್ನಿಸಿದ್ದಾರೆ. ಆದರೆ ಮಹಿಳಾ ಸಿಬ್ಬಂದಿಗಳಿಲ್ಲದ …

Read More »

ಹೈದರಾಬಾದ್​ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು ಮುಂದೆ ವರ್ಷಪೂರ್ತಿ ವಿದ್ಯುದ್ಧೀಪಗಳಿಂದ ಜಗಮಗಿಸಲಿದೆ.

ಹೈದರಾಬಾದ್ (ತೆಲಂಗಾಣ) : ಹೈದರಾಬಾದ್​ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು ಮುಂದೆ ವರ್ಷಪೂರ್ತಿ ವಿದ್ಯುದ್ಧೀಪಗಳಿಂದ ಜಗಮಗಿಸಲಿದೆ. ಪ್ರಸಿದ್ಧ ಸ್ಮಾರಕವಾಗಿರುವ ಚಾರ್ಮಿನಾರ್​ ಮುಂಭಾಗದ ವಿದ್ಯುದ್ದೀಪದ ವ್ಯವಸ್ಥೆಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಶನಿವಾರ ರಾತ್ರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಾರ್ಮಿನಾರ್ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಅದ್ಭುತವಾಗಿ ಬೆಳಗಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ರೆಡ್ಡಿ, “ಇನ್ನು ಮುಂದೆ ವರ್ಷವಿಡೀ ಪ್ರತಿದಿನ ಸಂಜೆ ಚಾರ್ಮಿನಾರ್ ಅನ್ನು ವಿದ್ಯುದ್ದೀಪಗಳಿಂದ …

Read More »

ಜಲ ಮೂಲ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸ್ವಯಂ ಸೇವಕರು, ಗ್ರಾಮೀಣ ಸಮುದಾಯದ ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಚಿಂತನೆ

ಬೆಂಗಳೂರು: ”ಜಲ ಮೂಲಗಳಾದ ನದಿ, ಕೆರೆ ಮತ್ತು ನಾಲೆಗಳ ಸಂರಕ್ಷಣೆಗೆ ಸ್ವಯಂ ಸೇವಕರು ಹಾಗೂ ಗ್ರಾಮೀಣ ಸಮುದಾಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ ಚಿಂತನೆ ನಡೆಸಿದೆ” ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಹೇಳಿದರು. ವಿಕಾಸಸೌಧದಲ್ಲಿ ಶನಿವಾರ ಸಚಿವರನ್ನು ಭೇಟಿ ಮಾಡಿದ ಆರ್ಟ್ ಆಫ್ ಲಿವಿಂಗ್ ರಿವರ್ ರಿಜ್ಯೂವಿನೇಷನ್ ಸಂಸ್ಥೆಯ ರಾಷ್ಟ್ರೀಯ ನಿರ್ದೇಶಕರಾದ ಡಾ. ಲಿಂಗರಾಜು ಯಾಲೆ ಅವರ ನೇತೃತ್ವದ ತಂಡದೊಂದಿಗೆ …

Read More »

ಒಣದ್ರಾಕ್ಷಿ ಬೆಲೆ ಕುಸಿತದಿಂದ ಬೆಳೆಗಾರರು ಅಕ್ಷರಶಃ ಕಂಗಾಲ

ಚಿಕ್ಕೋಡಿ (ಬೆಳಗಾವಿ) : ಒಣದ್ರಾಕ್ಷಿ ಬೆಲೆ ಕುಸಿತದಿಂದ ಬೆಳೆಗಾರರು ಅಕ್ಷರಶಃ ಕಂಗಾಲಾಗಿದ್ದು, ರಾಜ್ಯ ಸರ್ಕಾರ ತುರ್ತಾಗಿ ಬೆಳೆ ಖರೀದಿ ಮಾಡಿ ತಮ್ಮ ನೆರವಿಗೆ ಬರುವಂತೆ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಿಜಯಪುರ ಜಿಲ್ಲೆಯನ್ನು ಬಿಟ್ಟರೆ ಬೆಳಗಾವಿ ಜಿಲ್ಲೆಯ ರಾಯಬಾಗ, ಕಾಗವಾಡ, ಅಥಣಿ, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ಅತಿ ಹೆಚ್ಚು ದ್ರಾಕ್ಷಿ ಬೆಳೆಗಾರರನ್ನು ಹೊಂದಿರುವ ಪ್ರದೇಶ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಆದರೆ, ಈ ಬಾರಿ ಬೆಲೆ ಕುಸಿತದಿಂದ ಸಾವಿರಾರು ಟನ್ …

Read More »