Breaking News

ರಾಷ್ಟ್ರೀಯ

ಜಾಗತಿಕವಾಗಿ ಅಕ್ಕಿ ದರ ಭಾರಿ ಹೆಚ್ಚಳ

ನವದೆಹಲಿ : ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆಯ (ಎಫ್‌ಎಒ) ಎಲ್ಲಾ ಅಕ್ಕಿ ಬೆಲೆ ಸೂಚ್ಯಂಕವು (All Rice Price Index) ತಿಂಗಳಲ್ಲಿ ಶೇಕಡಾ 2.8 ರಷ್ಟು ಹೆಚ್ಚಾಗಿ ಶೇ 19.7ಕ್ಕೆ ತಲುಪಿದೆ. ಸೆಪ್ಟೆಂಬರ್ 2011 ರ ನಂತರ ಆಲ್ ರೈಸ್ ಪ್ರೈಸ್​ ಇಂಡೆಕ್ಸ್​ನ ಅತ್ಯಧಿಕ ಮಟ್ಟ ಇದಾಗಿದೆ. ಜುಲೈ 20ರಂದು ಭಾರತವು ಸ್ಟೀಮ್​ ಮಾಡದ ಭಾರತೀಯ ಅಕ್ಕಿಯ ರಫ್ತನ್ನು ನಿಷೇಧಿಸಿದ್ದರಿಂದ ಇತರ ಮಾದರಿಯ ಅಕ್ಕಿಯ ಬೆಲೆಗಳು ಹೆಚ್ಚಾಗಬಹುದು ಎಂಬ ನಿರೀಕ್ಷೆಯಿಂದ …

Read More »

ನೈಸ್ ಹಗರಣದ ದಾಖಲೆಗಳನ್ನು ಪ್ರಧಾನಿ ಮೋದಿಗೆ ಕೊಡುತ್ತೇನೆ,:H.D.K

ಬೆಂಗಳೂರು : ನೈಸ್ ರಸ್ತೆ ಮಾಡುವ ಸಂದರ್ಭದಲ್ಲಿ ರೈತರ ಜಮೀನನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದೊಂದು ದೊಡ್ಡ ಹಗರಣವಾಗಿದ್ದು, ಈ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದೇನೆ. ನೈಸ್ ಹಗರಣದ ದಾಖಲೆಗಳನ್ನು ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರೈತರ ಹೆಸರಿನಲ್ಲಿ ಕೋಟಿ, ಕೋಟಿ ಹಣ ಲೂಟಿಯಾಗಿದೆ. ನೈಸ್ ಸಂಸ್ಥೆ ವಿರುದ್ಧ ದೂರು ನೀಡಲು ಪ್ರಧಾನಿ ನರೇಂದ್ರ ಮೋದಿ …

Read More »

ಆರಗ ಜ್ಞಾನೇಂದ್ರರಿಗೆ ಬುದ್ಧಿ ಭ್ರಮಣೆಯಾಗಿದೆ:ಶಿವರಾಜ ತಂಗಡಗಿ

ಕೊಪ್ಪಳ: ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಬುದ್ಧಿ ಭ್ರಮಣೆ ಆಗಿದ್ದು, ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಅವರು ಮಲ್ಲಿಕಾರ್ಜುನ ಖರ್ಗೆ ಕುರಿತು ಆರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆ ವಿರುದ್ಧ ಗುಡುಗಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೋದಿ ಉಪನಾಮ ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಲಾಯಿತು. ಆದರೆ ಈಗ ಆರಗ ಜ್ಞಾನೇಂದ್ರ ಅವರು ಖರ್ಗೆ ಅವರಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ …

Read More »

ಅಗ್ನಿಪಥ್ ಯೋಜನೆಯಡಿ ಬೆಂಗಳೂರಿನ ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್​ನಲ್ಲಿ(ಉತ್ತರ) ಮೊದಲ ಬ್ಯಾಚಿ‌ನ 113 ಅಗ್ನಿವೀರರು ತರಬೇತಿ ಪೂರ್ಣಗೊಳಿಸಿದ್ದಾರೆ.

ಬೆಂಗಳೂರು: ಅಗ್ನಿಪಥ್ ಯೋಜನೆಯಡಿ ಬೆಂಗಳೂರಿನ ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್​ನಲ್ಲಿ(ಉತ್ತರ) ಮೊದಲ ಬ್ಯಾಚಿ‌ನ 113 ಅಗ್ನಿವೀರರು ತರಬೇತಿ ಪೂರ್ಣಗೊಳಿಸಿದ್ದಾರೆ. ಕೇಂದ್ರ ಸಶಸ್ತ್ರ ಪಡೆಗಳ ಮೂರು ಸೇವೆಗಳಿಗೆ ಸೈನಿಕರ ನೇಮಕಾತಿಗಾಗಿ 2022ರ ಜೂನ್ 16ರಂದು ಭಾರತ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಅನುಮೋದನೆಗೊಳಿಸಿತ್ತು. ಯೋಜನೆಯ ಭಾಗವಾಗಿ ಇದೇ ವರ್ಷ ಜನವರಿ 2023 ರಿಂದ ಪ್ರಾರಂಭವಾದ ತರಬೇತಿಯಲ್ಲಿ ಆಗಸ್ಟ್ 5 ರ ವರೆಗೆ 85 ಅಗ್ನಿವೀರರು (ಎಂಟಿ) ಉತ್ತೀರ್ಣರಾಗಿ ಹೊರಹೊಮ್ಮಿದ್ದಾರೆ‌. ಬೆಂಗಳೂರಿನಲ್ಲಿರುವ ಆರ್ಮಿ ಸರ್ವಿಸ್ ಕಾರ್ಪ್ಸ್ …

Read More »

ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಚಂದ್ರಯಾನ -3 ಪ್ರವೇಶ – ಇಸ್ರೋ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ- 3 ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಸಂಜೆ ತಿಳಿಸಿದೆ.   ಇದು ಚಂದ್ರಯಾನ-3. ನಾನು ಚಂದ್ರನ ಗುರುತ್ವಾಕರ್ಷಣೆಯನ್ನು ಅನುಭವಿಸುತ್ತಿದ್ದೇನೆ. ಚಂದ್ರಯಾನ-3 ಅನ್ನು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರಿಸಲಾಗಿದೆ ಎಂದು ಇಸ್ರೋ ಟ್ವೀಟ್​ ಮಾಡಿದೆ. ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಕಡಿತ 2023ರ ಆಗಸ್ಟ್ 6ರ ರಾತ್ರಿ 11 ಗಂಟೆ ಸುಮಾರಿಗೆ ಗದಿಪಡಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ. …

Read More »

ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು‌ ನಾವು ಯಾರೂ ಅಲ್ಲ:

ಕಲಬುರಗಿ: ಐದು ಗ್ಯಾರಂಟಿ ಕೊಟ್ಟರೆ ಕರ್ನಾಟಕ ದಿವಾಳಿ ಆಗುತ್ತೆ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಆದರೆ ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು‌ ನಾವು ಯಾರೂ ಅಲ್ಲ. ಈಗಾಗಲೇ ಉಚಿತ‌ ಅಕ್ಕಿ, ಶಕ್ತಿ ಯೋಜನೆ, ಇಂದು ಗೃಹಜ್ಯೋತಿ ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿ ಕರ್ನಾಟಕ‌ದ ಸಮಗ್ರ ಅಭಿವೃದ್ಧಿ ಮಾಡಿ ಮಾದರಿಯಾಗುತ್ತೇವೆ.‌ ಬಿಜೆಪಿಯವರೇ ತಾಕತ್ತಿದ್ದರೆ ನಮ್ಮ ಗ್ಯಾರಂಟಿಗಳನ್ನು ದೇಶದ …

Read More »

ಭಯೋತ್ಪಾದಕ ನಂಟು ಇರುವ ಕಾರಣ ಎನ್​ಐಎ ಈ ಪ್ರಕರಣವನ್ನು ತನ್ನ ಸುಪರ್ದಿಗೆ ನೀಡುವಂತೆ ಕೇಳಿದೆ.

ನಾಗ್ಪುರ (ಮಹಾರಾಷ್ಟ್ರ): ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರಿಗೆ ಎರಡು ಬಾರಿ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ನಾಗ್ಪುರದಿಂದ ಮುಂಬೈಗೆ ವರ್ಗಾವಣೆ ಮಾಡುವಂತೆ ಕೋರಿ ಮುಂಬೈ ಹೈಕೋರ್ಟ್​ಗೆ ಎನ್​ಐಎ ಮನವಿ ಸಲ್ಲಿಸಿದೆ. ಈ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಮುಂಬೈ ಹೈಕೋರ್ಟ್​ನ ನಾಗ್ಪುರ ಪೀಠದಲ್ಲಿ ಎನ್​ಐಎ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯ ಸರ್ಕಾರ ಹಾಗೂ ಪ್ರಮುಖ ಆರೋಪಿ …

Read More »

ರಾಜ್ಯ ಪೊಲೀಸ್​ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್​ ಅಧಿಕಾರಿ ಅಲೋಕ್​ ಮೋಹನ್​ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಪ್ರವೀಣ್ ಸೂದ್​ರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ರಾಜ್ಯ ಸರ್ಕಾರ ಮೇ 21ರಂದು ನೇಮಕಗೊಳಿಸಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿಯಾಗಿದ್ದ ಅಲೋಕ್ ಮೋಹನ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ಹೊತ್ತಿದ್ದರು. …

Read More »

ಜೈನ ಮುನಿ ಹತ್ಯೆ ಪ್ರಕರಣ ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ

ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಸಿಐಡಿ ಡಿಜಿಪಿ ಡಾ ಎಂ ಎ ಸಲೀಂ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಇವತ್ತು ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ.ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವು ಕಾಲ ಸ್ಥಳಿಯರ ಜೊತೆ …

Read More »

ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಪ್ರತಿಭಟನೆ

ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾಲಯಗಳಿಗೆ ಸರ್ಕಾರ ಅನುದಾನ ಬಂದ್ ಮಾಡಿರುವುದರಿಂದ ವಿದ್ಯಾರ್ಥಿಗಳು ಜ್ವಲಂತ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಬೇಕಾಗುವ ಅನುದಾನ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಚಿವರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳಿಗೆ …

Read More »