Breaking News

ರಾಷ್ಟ್ರೀಯ

ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು ದಾವಣಗೆರೆ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಅಸುನೀಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಶಿಕಾರಿಪುರ ರಸ್ತೆಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಶಿಕಾರಿಪುರ ನಗರದ ರುದ್ರಮ್ಮ(79) ಹಾಗೂ ಶಿವಮೊಗ್ಗದ ಅನ್ಸರ್ ಅಹ್ಮದ್ ಎಂಬ ಇಬ್ಬರು ಸಾವನ್ನಪ್ಪಿದ್ದಾರೆ.‌‌ ರುದ್ರಮ್ಮ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಿಕಾರಿಪುರಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅವರಿದ್ದ ಕಾರಿಗೆ ಎದುರಿನಿಂದ ಬಂದ ಕಾರು …

Read More »

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಹೆಬ್ಬಾಳಕರ್

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ‌‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ …

Read More »

ಪ್ರೀತಿಸಿ ಮದ್ವೆಯಾಗಿದ್ದವಳನ್ನ 10 ಬಾರಿ ಇರಿದು ಕೊಂದ ಪತಿ

ಚಿಕ್ಕಮಗಳೂರು, (ಮೇ 28): ಪ್ರೀತಿಸಿ (Love) ಮದುವೆಯಾಗಿದ್ದ ಪತ್ನಿಯನ್ನು (Wife) ಚಾಕು ಮನಸ್ಸೋ ಇಚ್ಛೆ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಇನ್ನು ಪತಿ ಅವಿನಾಶ್ (32) ಎನ್ನುವಾತ ಚಾಕುವಿನಿಂದ ಬರೋಬ್ಬರಿ ಹತ್ತು ಬಾರಿ ಚುಚ್ಚಿ ಕೊಂದು ಎಸ್ಕೇಪ್ ಆಗಿದ್ದಾನೆ. ಕೀರ್ತಿ ಪೋಷಕರ ವಿರೋಧದ ನಡುವೆಯೂ ಆಕೆಯನ್ನು ನಾಲ್ಕು ವರ್ಷದ ಹಿಂದೆಯೇ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಇಬ್ಬರು ನಡುವೆ ಶುರುವಾದ ಸಣ್ಣ …

Read More »

ಕಮಲ್ ಹಾಸನ್ ವಿರುದ್ಧ ಪ್ರತಿಭಟನೆ, ಕ್ಷಮೆ ಕೇಳುವಂತೆ ಆಗ್ರಹ

ಬೆಂಗಳೂರು: “ತಮಿಳು ಕನ್ನಡಕ್ಕೆ ಜನ್ಮ ನೀಡಿದೆ” ಎಂಬ ವಿವಾದಿತ ಹೇಳಿಕೆಯ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಹಿರಿಯ ನಟ ಕಮಲ್ ಹಾಸನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರಿಗೂ ದೂರು ನೀಡಲಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೂ ಮುನ್ನ ಕಮಲ್ ಹಾಸನ್‌ ಮೇಲೆ ನಿಷೇಧ ಹೇರುವ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿ ಚರ್ಚಿಸಲು ಮುಂದಾಗಿದೆ. ಕಮಲ್ ಹಾಸನ್ ಮೇಲೆ ಸಂಭಾವ್ಯ ನಿಷೇಧ …

Read More »

ಬಳ್ಳಾರಿ ಜೈಲಿನಲ್ಲಿ ಶಿವಮೊಗ್ಗ ಹರ್ಷ ಕೊಲೆ ಪ್ರಕರಣದ ಆರೋಪಿಗಳ ತಕರಾರು

ಬಳ್ಳಾರಿ: “ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಬ್ಬರೂ ಎರಡು ದಿನಗಳ ಹಿಂದೆ ಜೈಲಿನಲ್ಲಿ ತಕರಾರು ತೆಗೆದು ಗಲಾಟೆ ಮಾಡಿದ್ದಾರೆ. ಸದ್ಯ ಇಬ್ಬರಿಗೂ ಎಚ್ಚರಿಕೆ ನೀಡಿ ಪ್ರತ್ಯೇಕವಾಗಿ ಇರಿಸಲಾಗಿದೆ” ಎಂದು ಬಳ್ಳಾರಿ ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ ತಿಳಿಸಿದ್ದಾರೆ. ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ …

Read More »

ಸಚಿವ ಭೈರತಿ ಸುರೇಶ್ ಮಾತೋಶ್ರಿ ನಿಧನ ಹಿನ್ನೆಲೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ

ಸಚಿವ ಭೈರತಿ ಸುರೇಶ್ ಮಾತೋಶ್ರಿ ನಿಧನ ಹಿನ್ನೆಲೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾಂತ್ವನ ಹೇಳಿದರು. ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಸುರೇಶ್ ಅವರ ಬೈರತಿಯಲ್ಲಿರುವ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಭೇಟಿ ನೀಡಿ …

Read More »

ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್

ನವದೆಹಲಿ, ಮೇ 27: ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕನ್ನಡಿಗರು ಹಲವು ವರ್ಷಗಳಿಂದ ಒತ್ತಾಯಿಸುತ್ತಲೇ ಇದ್ದರು. ಆ ಬೇಡಿಕೆಗೆ ಕೇಂದ್ರ ಸರ್ಕಾರ ಈ ವರ್ಷ ಸ್ಪಂದಿಸಿದೆ. 2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ (Anant Nag) ಅವರ ಹೆಸರನ್ನು ಘೋಷಿಸಲಾಗಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ …

Read More »

ಮಳೆಯ ನೀರಿನಿಂದ ಜಲಾವೃತಗೊಂಡ ರಸ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅದರಲ್ಲೂ ಎರಡು ದಿನ ಸುರಿದ ಭಾರೀ ಮಳೆ ಬೆಂಗಳೂರಿಗರನ್ನು ನಲುಗಿಸಿದೆ. ಕಳೆದ ವಾರ ಸುರಿದ ಮಳೆಯ ಆರ್ಭಟಕ್ಕೆ ಸಂಭವಿಸಿದ ಮೂಲಸೌಕರ್ಯ ಹಾನಿ ವರದಿ ಇಲ್ಲಿದೆ. ಕಳೆದ ವಾರ ಸುರಿದ ಭಾರೀ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದು, ಮಳೆಯ ಅಬ್ಬರಕ್ಕೆ ನಗರದ ಬಹುತೇಕ ಸ್ಥಳಗಳು ಜಲಾವೃತಗೊಂಡಿದ್ದವು. ಮಹದೇವಪುರದ ಸಾಯಿ ಲೇಔಟ್, ಯಲಹಂಕದ ಕೆಂಪೇಗೌಡ ವಾರ್ಡ್, ಹೆಚ್ಎಸ್ಆರ್ ಲೇಔಟ್, ಆರ್.ಆರ್ ನಗರ …

Read More »

ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ

ಮಂಡ್ಯ, ಮೇ 26): ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅದರಲ್ಲೂ ಕೆಆರ್​ ಎಸ್​ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಬಾರಿಯ ಬಿರು ಬೇಸಿಗೆ ಬಿಸಿಲಿನ ತಾಪಕ್ಕೆ ಕೃಷ್ಣರಾಜ ಸಾಗರ ಜಲಾಶಯದ (KRS) ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು.ಆದ್ರೆ, ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯ ಜಲಾಶಯಕ್ಕೆ 8869 ಕ್ಯೂಸೆಕ್ ನೀರು …

Read More »

ಭಾರಿ ಮಳೆಗೆ ಕುಮಟಾ ಬಳಿ ಗುಡ್ಡ ಕುಸಿತ

ಕಾರವಾರ (ಉತ್ತರಕನ್ನಡ): ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದ್ದು, ಭಾನುವಾರ ರಾತ್ರಿ ಕುಮಟಾದ ಮುಸುಗುಪ್ಪ ಬಳಿ ಬೃಹತ್ ಬಂಡೆಗಳ ಸಹಿತ ಗುಡ್ಡ ಕುಸಿತವಾಗಿ ಮೂರೂರು-ಹರಕಡೆ ಸಂಪರ್ಕ ರಸ್ತೆಯಲ್ಲಿ ಸಂಪರ್ಕ ಕಡಿತಗೊಂಡಿತ್ತು. ಜಿಲ್ಲಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೇವಿಮನೆ ಘಟ್ಟ ಸೇರಿದಂತೆ ಹಲವೆಡೆ ಗುಡ್ಡ ಕುಸಿತಗೊಂಡ ಬೆನ್ನಲ್ಲೇ ಇದೀಗ ಮೂರೂರು ಭಾಗದಲ್ಲಿಯೂ ಕಟ್ಟಿಂಗ್ ಮಾಡಿದ್ದ ಧರೆಭಾಗ ಕುಸಿದು ಸಂಚಾರ ಸಂಪೂರ್ಣ ಬಂದ್​ ಆಗಿತ್ತು. “ಕುಮಟಾ ತಾಲೂಕಿನ ಮೂರೂರು-ಮುಸುಗುಪ್ಪ ರಸ್ತೆಯಲ್ಲಿ ಬಿದ್ದಂತಹ ಕಲ್ಲು ಬಂಡೆಯನ್ನು ತೆರವುಗೊಳಿಸಲು …

Read More »