ಸೇಲಂ (ತಮಿಳುನಾಡು): ಮಕ್ಕಳಿಗಾಗಿ ಹೆತ್ತವರು ಎಂತಹ ತ್ಯಾಗಕ್ಕೂ ಸಿದ್ಧರಾಗಿರುತ್ತಾರೆ. ತಮ್ಮ ಆಸೆ, ನಿರೀಕ್ಷೆಗಳನ್ನೆಲ್ಲ ಬಚ್ಚಿಟ್ಟುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಮಹಾ ತಾಯಿ ಮಗನ ಕಾಲೇಜು ಶುಲ್ಕ ಕಟ್ಟುವ ಹಣ ಹೊಂದಿಸಲು ಪರಿಹಾರ ಸಿಗುತ್ತದೆ ಎಂದು ಚಲಿಸುತ್ತಿರುವ ಬಸ್ ಎದುರು ಬಂದು ಪ್ರಾಣ ತ್ಯಾಗ ಮಾಡಿದ್ದಾರೆ.ತನ್ನ ಮಗನ ಭವಿಷ್ಯ ಉಜ್ವಲಗೊಳಿಸುವ ಆಸೆಯಿಂದ ತಾಯಿ ತನ್ನ ಪ್ರಾಣವನ್ನೇ ಬಲಿ ಕೊಟ್ಟ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.ಪಾಪತಿ (46) ಮೃತ ಮಹಿಳೆ. ಕಳೆದ ಜೂ.28ರಂದು ಬೆಳಗ್ಗೆ …
Read More »ನಕಲಿ ಜಾತಿ ಪ್ರಮಾಣಪತ್ರಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಎಸ್ಸಿ/ಎಸ್ಟಿ ಯುವಕರಿಂದ ನಗ್ನ ಪ್ರತಿಭಟನಾ ಮೆರವಣಿಗೆ
ರಾಯಪುರ (ಚತ್ತೀಸ್ಗಢ): ನಕಲಿ ಜಾತಿ ಪ್ರಮಾಣಪತ್ರಗಳ ಮೇಲೆ ಸರ್ಕಾರಿ ಉದ್ಯೋಗ ಪಡೆದು ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್ಸಿ-ಎಸ್ಟಿ)ದ ಸುಮಾರು 50 ಯುವಕರು ನಗ್ನ ಪ್ರತಿಭಟನಾ ಮೆರವಣಿಗೆ ನಡೆಸಿರುವ ಘಟನೆ ಛತ್ತೀಸ್ಗಢದ ರಾಜಧಾನಿ ರಾಯಪುರದಲ್ಲಿ ಮಂಗಳವಾರ ನಡೆದಿದೆ. ಸಂಪೂರ್ಣ ಬೆತ್ತಲಾಗಿ ರಸ್ತೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ಯುವಕರು ಹೊರ ಹಾಕಿದ್ದಾರೆ. ಜಾತಿ ಪ್ರಮಾಣ ಪತ್ರ ನೀಡಿಕೆ ಕುರಿತು ಘೋಷಣಾ ಫಲಕಗಳನ್ನು ಹಿಡಿದುಕೊಂಡು ಯುವಕರು ಮುಖ್ಯ …
Read More »ಎಪಿಎಂಸಿ ತಿದ್ದುಪಡಿ ವಿಧೇಯಕ ಸೆಲೆಕ್ಟ್ ಕಮಿಟಿಗೆ ವಹಿಸುವ ನಿರ್ಣಯ ಅಂಗೀಕರಿಸಿದ ಪರಿಷತ್: ಸರ್ಕಾರಕ್ಕೆ ಹಿನ್ನಡೆ..!
ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ಮತದಾನದ ಮೂಲಕ ಸೆಲೆಕ್ಟ್ ಕಮಿಟಿಗೆ ವಹಿಸುವ ಪ್ರಸ್ತಾವವನ್ನು ವಿಧಾನ ಪರಿಷತ್ ಅಂಗೀಕರಿಸಿದ್ದು, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ ವಿಧೇಯಕ ಮಂಡಿಸಿ ಮಾತನಾಡಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ”ಎಪಿಎಂಸಿ ಕಾಯ್ದೆ ಕೇಂದ್ರ ವಾಪಸ್ ಪಡೆದರೂ ಕರ್ನಾಟಕ ವಾಪಸ್ ಪಡೆದಿಲ್ಲ. ಹಿಂದೆ ಕಾಯ್ದೆ ತಿದ್ದುಪಡಿ …
Read More »ದೇಶದ ಎಲ್ಲ ಪ್ರತಿಪಕ್ಷಗಳ ನಾಯಕರು ಭಾರತವನ್ನು ರಕ್ಷಣೆ ಮಾಡುವ ತೀರ್ಮಾನ ಮಾಡಿದ್ದಾರೆ ಎಂದ ಡಿ.ಸಿ.ಎಂ .ಡಿ.ಕೆ. ಶಿ.:
ಬೆಂಗಳೂರು: ದೇಶ ನಿರೀಕ್ಷೆ ಮಾಡಿದಂತೆ ಇಂದಿನ ಪ್ರತಿ ಪಕ್ಷಗಳ ಸಭೆ ಯಶಸ್ವಿಯಾಗಿ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಈ ಸಭೆ ಭಾರತದ ಧ್ವನಿಯಾಗಿತ್ತು. ದೇಶದ ಎಲ್ಲ ಪ್ರತಿಪಕ್ಷಗಳ ನಾಯಕರು ಭಾರತವನ್ನು ರಕ್ಷಣೆ ಮಾಡುವ ತೀರ್ಮಾನ ಮಾಡಿದ್ದಾರೆ ಎಂದಿದ್ದಾರೆ. ಮೈತ್ರಿಕೂಟದ ನಾಯಕರ ಜೊತೆ ಡಿಕೆ ಶಿವಕುಮಾರ್ಇದಕ್ಕೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, “ಇಂದಿನ ಸಭೆಯು ಭಾರತದ ಧ್ವನಿಯಾಗಿದೆ.. ಅದರಲ್ಲಿ ಸಾಕಷ್ಟು …
Read More »ಶಿಷ್ಟಾಚಾರದ ಪ್ರಕಾರವೇ ಗಣ್ಯರ ಸ್ವಾಗತಕ್ಕೆ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗಿತ್ತೇ ಹೊರತು ರಾಜಕೀಯ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ಬಳಸಿಕೊಂಡಿರಲಿಲ್ಲ ಎಂದ ಸಿಎಂ
ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎನ್ನುವ ಪ್ರತಿ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ಆಗಮಿಸಿದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ರಾಜ್ಯದ ಅತಿಥಿಗಳಾಗಿದ್ದರು. …
Read More »ಏಕಾಂಗಿಯಾಗಿ ಉಳಿದ J.D.S.ಕಾಂಗ್ರೆಸ್ ಕರೆಯಲಿಲ್ಲ.. ಬಿಜೆಪಿಯೂ ಬನ್ನಿ ಎನ್ನಲಿಲ್ಲ:H,D.K
ಬೆಂಗಳೂರು: ಎನ್ಡಿಎ ಕೂಟ ಹಾಗೂ ವಿಪಕ್ಷ ಒಕ್ಕೂಟದ ಮಧ್ಯೆ ಜೆಡಿಎಸ್ ಎಲ್ಲೂ ಸಲ್ಲದಂತಾಗಿದೆ. ಎರಡು ಒಕ್ಕೂಟಗಳಿಂದ ಆಹ್ವಾನ ಬಾರದೇ ಜೆಡಿಎಸ್ ಅತಂತ್ರವಾಗಿ ಉಳಿದಿದೆ. ಎರಡೂ ಮೈತ್ರಿ ಒಕ್ಕೂಟದಿಂದ ನಿರ್ಲಕ್ಷ್ಯಕ್ಕೊಳಗಾದ ಜೆಡಿಎಸ್ ಯಾರಿಗೂ ಬೇಡವಾಯಿತಾ ಎಂಬ ಅನುಮಾನ ಮೂಡುತ್ತಿದೆ. ಒಂದೆಡೆ ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಎನ್ಡಿಎ ಮೈತ್ರಿಕೂಟವನ್ನು ಬಲ ಪಡಿಸುತ್ತಿದ್ದರೆ. ಇನ್ನೊಂದೆಡೆ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷ ಕೂಟದ ಶಕ್ತಿ ವರ್ಧನೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎನ್ಡಿಎ ಮೈತ್ರಿ …
Read More »ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ
ಭೋಪಾಲ್ (ಮಧ್ಯಪ್ರದೇಶ): ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿದ್ದ ವಿಮಾನವು ಮಂಗಳವಾರ ಸಂಜೆ ಮಧ್ಯಪ್ರದೇಶದ ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಆದರೆ, ವಿಮಾನದ ತುರ್ತು ಭೂಸ್ಪರ್ಶಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಭೋಪಾಲ್ ಪೊಲೀಸ್ ಕಮಿಷನರ್ ಹರಿನಾರಾಯಣ ಚಾರಿ ಮಿಶ್ರಾ …
Read More »ಮೂರು ಪ್ರಮುಖ ವಿಧೇಯಕಗಳಿಗೆ ವಿಧಾನ ಪರಿಷತ್ ಅಂಗೀಕಾರ ನೀಡಿದೆ.
ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ)ವಿಧೇಯಕ 2023, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ 2023 ಮತ್ತು ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ)(ತಿದ್ದುಪಡಿ) ವಿಧೇಯಕ 2023 ಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿತು. ವಿಧಾನ ಪರಿಷತ್ ವಿತ್ತೀಯ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ …
Read More »ಬೆಂಗಳೂರಿನ ಸಭೆ ಇದು ಭ್ರಷ್ಟರ ಸಭೆ: ಮೋದಿ
ನವದೆಹಲಿ : ಬೆಂಗಳೂರಿನಲ್ಲಿ ಸಭೆ ನಡೆಸುತ್ತಿರುವ ವಿರೋಧ ಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ಭ್ರಷ್ಟರ ಸಭೆ ಎಂಬುದು ಜನರಿಗೆ ಗೊತ್ತಾಗುತ್ತಿದೆ ಮತ್ತು ತಮ್ಮ ಭ್ರಷ್ಟಾಚಾರ ಬಯಲಿಗೆ ಬಂದಾಗ ಈ ಪಕ್ಷಗಳು ಪರಸ್ಪರ ರಕ್ಷಣೆಗೆ ಮುಂದಾಗುತ್ತವೆ ಎಂದಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್‌ನಲ್ಲಿರುವ ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ ನಂತರ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. …
Read More »ವಿಪಕ್ಷಗಳ ಸಭೆಯಲ್ಲಿ ಮಹಾಮೈತ್ರಿ ನಾಮಕರಣಕ್ಕೆ ನಾಲ್ಕು ಹೆಸರುಗಳ ಪ್ರಸ್ತಾವನೆ
ಬೆಂಗಳೂರು : ಕಾಂಗ್ರೆಸ್ ಸಮ್ಮುಖದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ರಾಷ್ಟ್ರೀಯ ವಿಪಕ್ಷಗಳ ಎರಡನೇ ಮಹಾಘಟಬಂಧನ ಸಭೆ ನಡೆಯುತ್ತಿದೆ. 25 ಪಕ್ಷಗಳ 46ಕ್ಕೂ ಅಧಿಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಮಹಾಮೈತ್ರಿ ಸಭೆ ಆರಂಭವಾಗಿದೆ. ಆರು ಪ್ರಮುಖ ಅಂಶಗಳ ಮೇಲೆ ಸಭೆಯಲ್ಲಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಂಬಂಧ ಕಾರ್ಯತಂತ್ರ ರೂಪಿಸಲು ಸಭೆ ಮಹತ್ವದ್ದಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, …
Read More »
Laxmi News 24×7