Home / ರಾಷ್ಟ್ರೀಯ (page 458)

ರಾಷ್ಟ್ರೀಯ

ಬೆಂಗಳೂರಿನ ವಿಮಾನ ನಿಲ್ದಾಣದ ಮೇಲೆ ಅದಾನಿ ಕಣ್ಣು!

ಬೆಂಗಳೂರು, ನ. 14: ಮಂಗಳೂರು, ಅಹಮದಾಬಾದ್, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗ ನಂತರ ಈಗ ಅದಾನಿ ಗ್ರೂಪ್ ಕಣ್ಣು ಬೆಂಗಳೂರು ವಿಮಾನ ನಿಲ್ದಾಣದ ಮೇಲೂ ಬಿದ್ದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉಸ್ತುವಾರಿ, ಕಾರ್ಯ ನಿರ್ವಹಣೆ ಮಾಡುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಬಿಐಎಎಲ್) ಪಾಲನ್ನು ತೆಗೆದುಕೊಳ್ಳುವ ಬಗ್ಗೆ ಅದಾನಿ ಗ್ರೂಪ್ ಚಿಂತಿಸುತ್ತಿದೆ ಎಂದು ಈ ಬಗ್ಗೆ ತಿಳಿದಿರುವ ಉನ್ನತ ಮೂಲಗಳು ಮಾಹಿತಿ ನೀಡಿವೆ.   ”ಅದಾನಿ …

Read More »

ಪ್ರವಾಸದ ಹೊತ್ತಲ್ಲೇ ಸಿಎಂ ಬೊಮ್ಮಾಯಿಗೆ ಮುಜುಗರ ತರಲು ರಾತ್ರೋರಾತ್ರಿ ಪೇಸಿಎಂ ಪೋಸ್ಟರ್ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರ್ಗಿ ಪ್ರವಾಸ ಹಿನ್ನೆಲೆಯಲ್ಲಿ ಮತ್ತೆ ಪೇಸಿಎಂ ಪೋಸ್ಟರ್ ಪ್ರತ್ಯಕ್ಷವಾಗಿವೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿರುದ್ಧ ಮತ್ತೆ ಕಾಂಗ್ರೆಸ್ ನಿಂದ ಪೇಸಿಎಂ ಅಸ್ತ್ರ ಪ್ರಯೋಗಿಸಲಾಗಿದೆ. ಕಲಬುರ್ಗಿ ನಗರದ ಹಲವು ಕಡೆ ಪೇಸಿಎಂ ಪೋಸ್ಟರ್ ಅಂಟಿಸಲಾಗಿದೆ. ರಾತ್ರೋರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರ್ಗಿ ನಗರದ ಹಲವಡೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಾರೆ. ಸಂಗಮೇಶ್ವರ ಕಾಲೋನಿ, ಟ್ಯಾಂಕ್ ಬಂಡ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಪೋಸ್ಟರ್ ಗಳನ್ನು ಹಚ್ಚಲಾಗಿದೆ. ಸಿಎಂಗೆ ಮುಜುಗರ ಉಂಟು …

Read More »

ಬಿಜೆಪಿ ಅಭಿವೃದ್ದಿ ಕಾರ್ಯಕ್ರಮಗಳಿಂದ ಜೆಡಿಎಸ್ ನಾಯಕರಿಗೆ ಹೊಟ್ಟೆಕಿಚ್ಚು; ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಬಿಜೆಪಿ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ‌ ಹಾಗೂ ಸಾ.ರಾ. ಮಹೇಶ ಅವರಿಗೆ ಹೊಟ್ಟೆಕಿಚ್ಚಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿಯವರ ಕುಟುಂಬ ಸರ್ಕಾರದ ಹಲವು ಉನ್ನತ ಹುದ್ದೆಯಲ್ಲಿದ್ದರೂ ಸಹ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿರಲಿಲ್ಲ. ಯಾವುದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಬಿಜೆಪಿ ಅವರ ಅಭಿವೃದ್ಧಿ ಕಾರ್ಯ ಮಾಡುತ್ತಿರುವುದು ಅವರಿಗೆ ಸಹಿಸಲಾಗುತ್ತಿಲ್ಲ ಎಂದರು. ಕೆಂಪೆಗೌಡರ …

Read More »

ರಾಘವೇಂದ್ರ ಹುಣಸೂರು ವಿರುದ್ಧ ಭಟ್ರು ಗರಂ!

ಕನ್ನಡ ಚಲನಚಿತ್ರರಂಗದ ಯಶಸ್ವಿ ನಿರ್ದೇಶಕರಲ್ಲಿ ಓರ್ವರಾದ ಯೋಗರಾಜ್ ಭಟ್ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದಂತಹ ಪಕ್ಕಾ ಕ್ಲಾಸ್ ಡೈರೆಕ್ಟರ್. ಚಿತ್ರದ್ದಾಗಲಿ ಅಥವಾ ವೈಯಕ್ತಿಕ ಜೀವನದಲ್ಲಾಗಲಿ ಯೋಗರಾಜ್ ಭಟ್ ವಿವಾದ ಮಾಡಿಕೊಂಡು ಎಡವಿದ ಉದಾಹರಣೆಗಳಿಲ್ಲ. ಪುನೀತ್ ರಾಜ್‌ಕುಮಾರ್, ಸುದೀಪ್ ಹಾಗೂ ಗಣೇಶ್ ರೀತಿಯ ಸ್ಟಾರ್ ನಟರಿಗೆ ಚಿತ್ರ ನಿರ್ದೇಶಿಸಿರುವ ಯೋಗರಾಜ್ ಭಟ್ ನಿರ್ದೇಶನದ ಜತೆಗೆ ಓರ್ವ ಉತ್ತಮ ಚಿತ್ರಸಾಹಿತಿಯೂ ಹೌದು ಹಾಗೂ ಕಿರುತೆರೆ ರಿಯಾಲಿಟಿ ಶೋಗಳ ಜಡ್ಜ್ ಕೂಡ ಹೌದು.   ಜೀ …

Read More »

ರಾಹುಲ್ ಗಾಂಧಿ ಸಹವಾಸದಿಂದ ಕೆಲವು ಬಾರಿ ರಾಹುಲ್ ಗಾಂಧಿ ತರಹ ಮಾತನಾಡುತ್ತಾರೆ ಸಿದ್ದರಾಮಯ್ಯ : ಜೋಶಿ

ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರ ನೆರಳಿನಲ್ಲಿದ್ದಾರೆ. ಹೀಗಾಗಿ ಅವರ ಸಹವಾಸದಿಂದ ಕೆಲವು ಬಾರಿ ರಾಹುಲ್ ಗಾಂಧಿ ತರಹ ಮಾತನಾಡುತ್ತಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಶುಕ್ರವಾರ ರಾಜ್ಯಕ್ಕೆ ಬಂದು ಅದ್ಭುತ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಅದರಲ್ಲಿ ಮುಖ್ಯವಾಗಿ ಒಂದೇ ಭಾರತಂ ಟ್ರೈನ್ ಗೆ ಚಾಲನೆ, ಕೆಂಪೇಗೌಡ ಮೂರ್ತಿ ಉದ್ಘಾಟನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಿದ್ದಾರೆ. ಇವೆಲ್ಲವೂ ನಮ್ಮ …

Read More »

ಭಾರತ್ ಜೋಡೋ: ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ ಆದಿತ್ಯ ಠಾಕ್ರೆ

ಹಿಂಗೋಲಿ: ನೆರೆಯ ನಾಂದೇಡ್ ಜಿಲ್ಲೆಯಿಂದ ಆಗಮಿಸಿದ ಕಾಂಗ್ರೆಸ್‌ನ ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ಶುಕ್ರವಾರ ಪಾಲ್ಗೊಂಡಿದ್ದಾರೆ. ಹಿಂಗೋಲಿಯ ಕಳಮ್ನೂರಿನಲ್ಲಿ ಯಾತ್ರೆಗೆ ಸೇರ್ಪಡೆಗೊಂಡ ಆದಿತ್ಯ ಅವರು ರಾಹುಲ್ ಗಾಂಧಿ ಅವರೊಂದಿಗೆ ಪಾದಯಾತ್ರೆ ನಡೆಸಿದರು. ಆದಿತ್ಯ ಠಾಕ್ರೆ ಅವರನ್ನು ಪಕ್ಷದ ಸಹೋದ್ಯೋಗಿಗಳಾದ ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಅಂಬಾದಾಸ್ ದಾನ್ವೆ ಮತ್ತು ಮಾಜಿ ಶಾಸಕ ಸಚಿನ್ …

Read More »

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಒಟ್ಟು 6ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿ ಆದೇಶ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಒಟ್ಟು ೬ ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಮೇ ೨೧, ೧೯೯೧ ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಅವರನ್ನು ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ವೇಳೆ ರಾಜ್ಯಪಾಲರು ದೀರ್ಘಕಾಲದಿಂದ ಕ್ರಮಕೈಗೊಳ್ಳದಿದ್ದರೆ ನಾವು ತೆಗೆದುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ. ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಪೆರಾರಿವಾಲನ್ ಬಿಡುಗಡೆ ಆದೇಶವು …

Read More »

ಕರ್ನಾಟಕವನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಬೆಂಗಳೂರು: ಕೆಂಪೇಗೌಡರು ಹೇಗೆ ಕಲ್ಪನೆ ಮಾಡಿದ್ದರೋ ಹಾಗೆ ಬೆಂಗಳೂರಿನ ಅಭಿವೃದ್ಧಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಕರ್ನಾಟಕವು ಡಬಲ್ ಇಂಜಿನ್ ಬಲದಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಂದೇ ಭಾರತ್ ರೈಲು, ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್ ಉದ್ಘಾಟನೆ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ”ಕರ್ನಾಟಕ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು.” ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು. …

Read More »

ಒಂದು ವೇಳೆ ಟಿಪ್ಪುಸುಲ್ತಾನ್ ಪುತ್ಥಳಿ ನಿರ್ಮಾಣ ಮಾಡಿದರೆ ಬಾಬರಿ ಮಸೀದಿ ರೀತಿಯಲ್ಲಿ ಒಡೆದು‌ ಹಾಕುತ್ತೇವೆ

ಮೈಸೂರಿನಲ್ಲಿ ಟಿಪ್ಪುಸುಲ್ತಾನ್ ಪುತ್ಥಳಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಒಂದು ವೇಳೆ ನಿರ್ಮಾಣ ಮಾಡಿದರೆ ಬಾಬರಿ ಮಸೀದಿ ರೀತಿಯಲ್ಲಿ ಒಡೆದು‌ ಹಾಕುತ್ತೇವೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಗುಡುಗಿದರು. ಇಲ್ಲಿನ ಈದ್ಗಾ ಮೈದಾನದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಶಾಸಕ ತನ್ವೀರ್ ಶೇಟ್ ಟಿಪ್ಪು ಪುತ್ಥಳಿ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ಅವಕಾಶ ನೀಡಬಾರದು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ …

Read More »

ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ

ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ ಜರುಗಿಸಿದ ಕಾಂಗ್ರೆಸ್ ಕಾರ್ಯಕರ್ತರು. ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರ ವಿರುದ್ದ ಘೋಷಣೆ ಕೂಗಿ ಶಾಸಕ ಸತೀಶ ಜಾರಕಿಹೋಳಿ ಯವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಮಾಜಿ ಜಿಲ್ಲಾ ಚಾಯತ ಸದಸ್ಯ ಮಂಜುನಾಥ ಪಾಟೀಲ ನಿಪ್ಪಾಣಿಯಲ್ಲಿ ಜರುಗಿದ ಬುದ್ದ …

Read More »