Breaking News
Home / ರಾಷ್ಟ್ರೀಯ (page 468)

ರಾಷ್ಟ್ರೀಯ

ಹೋಳಿಗೆ ದಾಸೋಹಕ್ಕೆ ನಟ ಸಾಯಿ ಕುಮಾರ್ ಹಾಗೂ ಸಚಿವ ಗೋವಿಂದ ಕಾರಜೋಳ ಚಾಲನೆ

ಬೆಳಗಾವಿ :ಕುಂದಾನಗರಿ ಬೆಳಗಾವಿಯಲ್ಲಿ ಮೂರು ವರ್ಷಗಳ ಬಳಿಕ ಅದ್ಧೂರಿ ಕನ್ನಡ ರಾಜ್ಯೋತ್ಸವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬರುವವರಿಗೆಲ್ಲಾ ಹೋಳಿಗೆ ಊಟ ಹಾಕಿಸಲು ನಿರ್ಧರಿಸಲಾಗಿದೆ. ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹುಕ್ಕೇರಿ ಹಿರೇಮಠ ವತಿಯಿಂದ 1 ಲಕ್ಷ ಹೋಳಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಈ ಬಾರಿ ಅದ್ದೂರಿಯಾಗಿ ರಾಜ್ಯೋತ್ಸವ ನಡೆಸಲು ತೀರ್ಮಾನಿಸಿದ್ದೇವೆ, ಒಬ್ಬರಿಗೆ ಎರಡು ಹೋಳಿಗೆ ಪ್ರಕಾರ ಒಂದು ಲಕ್ಷ ಹೋಳಿಗೆ ಮಾಡಿಸಲು …

Read More »

ಬೆಳಗಾವಿಗೆ ಬರುತ್ತಿದ್ದ ಶಿವಸೇನೆ ಕಾರ್ಯಕರ್ತರನ್ನು ವಾಪಸ್‌ ಕಳುಹಿಸಿದ ಪೊಲೀಸರು

ಚೀಕ್ಕೋಡಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ.ಇತ್ತ ಗಡಿ ಪ್ರದೇಶದಲ್ಲಿ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ನಾಡವಿರೋಧಿ ಚಟುವಟಿಕೆ ಶುರು ಮಾಡಿದ್ದಾರೆ. ರಾಜ್ಯೋತ್ಸವಕ್ಕೆ ಬೆಳಗಾವಿ ಸಜ್ಜಾಗುತ್ತಿದ್ದರೆ, ನಾಡ ದ್ರೋಹಿ ಶಿವಸೇನೆ ತನ್ನ ಪುಂಡಾಟಿಕೆ ಮುಂದುವರಿಸಿ ರಸ್ತೆಯಲ್ಲಿ ಕುಳಿತು ಹೈಡ್ರಾಮಾ ನಡೆಸಿದೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಕುಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಾಳೆ ನಾಡಹಬ್ಬವನ್ನು ಜೋರಾಗಿ ಆಚರಣೆ ಮಾಡಬೇಕು ಎಂದು ಕನ್ನಡಿಗರು ತಯಾರಿ ನಡೆಸುತ್ತಿದ್ದಾರೆ. ಇತ್ತ ಶಿವಸೇನೆ …

Read More »

ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್ ತೆಂಡೋಲ್ಕರ್.

ಕ್ರಿಕೇಟ್​​ನ ದಿಗ್ಗಜ, ಕ್ರಿಕೇಟ್​ನ ದೇವರು ಎಂದೇ ಕ್ಯಾತಿಯಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡೂಲ್ಕರ್‌ ( Sachin Tendulkar ) ಇಂದು (ಅ.31) ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದಿದ್ದಾರೆ. ಸಚಿನ್‌ ತೆಂಡೂಲ್ಕರ್‌ ಮುಂಬೈಯಿಂದ ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದರು. ಈ ವೇಳೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿ 4 (ಎ) ಮೇಲಿರುವ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್​ನಲ್ಲಿ ಚಹಾ ಸವಿದಿದ್ದಾರೆ. …

Read More »

ಬೆಳಗಾವಿ: ಹೆಂಡತಿ ಚುಡಾಯಿಸುತ್ತಿರುವುದನ್ನು ಪ್ರಶ್ನೆ ಮಾಡಿದ ಗಂಡನ ಬರ್ಬರ ಹತ್ಯೆ

ಬೆಳಗಾವಿ: ಹೆಂಡತಿಯನ್ನ ಚುಡಾಯಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ವ್ಯಕ್ತಿಯನ್ನು ಕಟ್ಟಿಗೆಯಿಂದ ಹೊಡೆದು, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಖಾನಾಪೂರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದ ಬಾಹೇರ್ ಗಲ್ಲಿಯ ನಿವಾಸಿ ಮಾರುತಿ ಜಾಧವ್ (40) ಕೊಲೆಯಾದ ವ್ಯಕ್ತಿ. ಪಕ್ಕದ ಮನೆಯ ಪ್ರಶಾಂತ್ ನಾರ್ವೇಕರ್ (35) ಹತ್ಯೆ ಮಾಡಿದ ಆರೋಪಿ. ಕಳೆದ ಕೆಲ ದಿನಗಳಿಂದ ಆರೋಪಿ ಪ್ರಶಾಂತ್, ಮಾರುತಿ ಪತ್ನಿಯನ್ನ ಚುಡಾಯಿಸುತ್ತಿದ್ದನಂತೆ.‌ ಈ ಬಗ್ಗೆ ನಿನ್ನೆ ರಾತ್ರಿ ಮಾರುತಿ ಪ್ರಶ್ನೆ …

Read More »

ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ.

ಬೆಂಗಳೂರು: ಶಿಕ್ಷಣ ಇಲಾಖೆಯಿಂದ (Education Department) ಹೊಸ ಪಿಯು ಕಾಲೇಜು ಪ್ರಾರಂಭಿಸಲು ಆದೇಶ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ. ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಲಾದ ಸ್ಥಳಗಳ ಪಟ್ಟಿ ಈ ಕೆಳಗಿನಂತಿದೆ. 1.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವತ್ಕಲ್, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ. 2. ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಣಸಗಿ, ಸುರಪೂರ ತಾಲ್ಲೂಕು, ಯಾದಗಿರಿ …

Read More »

ನ.8ರಂದು ಖಗ್ರಾಸ ಚಂದ್ರಗ್ರಹಣ; ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರ

 ದೀಪಾವಳಿಯ ಸಮಯದಲ್ಲೇ ಪಾರ್ಶ್ವ ಸೂರ್ಯಗ್ರಹಣವನ್ನು ಕಂಡ ಜಗತ್ತು ಈಗ ಮತ್ತೊಂದು ಗ್ರಹಣಕ್ಕೆ ಸಜ್ಜಾಗುತ್ತಿದೆ. ನ.8ರಂದು ಖಗ್ರಾಸ ಚಂದ್ರಗ್ರಹಣ ಉಂಟಾಗಲಿದ್ದು, ಕೋಲ್ಕತ್ತಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರಿಸಲಿದೆ.   ಅಲ್ಲದೇ ಪಾಕಿಸ್ತಾನ, ಅಫ್ಘಾನಿಸ್ತಾನ, ರಷ್ಯಾ, ಅಮೆರಿಕ, ಆಸ್ಟ್ರೇಲಿಯಾ, ಉತ್ತರ ಅಟ್ಲಾಂಟಿಕ್‌ ಸಮುದ್ರ, ಪೆಸಿಫಿಕ್‌ ಸಮುದ್ರ ಪ್ರದೇಶದಿಂದಲೂ ಈ ಖಗೋಳ ವಿಸ್ಮಯವನ್ನು ವೀಕ್ಷಿಸಬಹುದು ಎಂದು ಖಗೋಳವಿಜ್ಞಾನಿಗಳು ತಿಳಿಸಿದ್ದಾರೆ. ನ.8ರಂದು ಮಧ್ಯಾಹ್ನ 2.39ಕ್ಕೆ ಭಾಗಶಃ ಚಂದ್ರಗ್ರಹಣ ಆರಂಭವಾಗಲಿದ್ದು, 3.46ರ ವೇಳೆಗೆ ಅದು …

Read More »

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ

ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.   ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ …

Read More »

ಎನ್‌ಇಪಿಯಿಂದ ಕಲಿಕಾ ಸಾಮರ್ಥ್ಯ ಹೆಚ್ಚಳ: ಸಿಎಂ ಬೊಮ್ಮಾಯಿ

ಬೆಂಗಳೂರು: ನೂತನ ಶಿಕ್ಷಣ ನೀತಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ “ಶಿಕ್ಷಣದಲ್ಲಿ ನಾಯಕತ್ವಕ್ಕಾಗಿ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಉನ್ನತ ಶಿಕ್ಷಣದಿಂದ ನೂತನ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಈ ವರ್ಷ ಮಾಂಟೆಸರಿಯಿಂದ ಪ್ರಾರಂಭಿಸಲಾಗುತ್ತಿದೆ. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಕರ್ನಾಟಕ. ರಾಜ್ಯದ ಮಕ್ಕಳು ಎಲ್ಲಾ ಪರಿಸ್ಥಿತಿಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಂಡು ಜ್ಞಾನವಂತರಾಗಬೇಕು …

Read More »

ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು: ಡಿಕೆ ಶಿವಕುಮಾರ್

ಶಿವಮೊಗ್ಗ: ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು ಕ್ರಮ ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಇದಕ್ಕೊಂದು ಕೊನೆ ಕಾಣಿಸಬೇಕು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳೇ ಸೋಮೋಟೊ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.   ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹುಟ್ಟಿರುವುದೇ ಭ್ರಷ್ಟಾಚಾರದಿಂದ, ಆಪರೇಷನ್ ಲೋಟಸ್ ನಿಂದ. ತೆಲಂಗಾಣದಲ್ಲಿ ಆಪರೇಷನ್ ಕಮಲ ನಡೆದಿದೆ, ರೆಡ್ ಹ್ಯಾಂಡ್ ಆಗಿ ಕೋಟಿ ಕೋಟಿ …

Read More »

ಮುದ್ದೇಬಿಹಾಳ: ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ರೈತರಿಂದ ದಾಂಧಲೆ, ಕಲ್ಲೆಸೆತ

ಮುದ್ದೇಬಿಹಾಳ: ಪ್ರತಿ ಟನ್ ಕಬ್ಬಿಗೆ ಎಫ್‌ಆರ್ಪಿ ದರ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮುದ್ದೇಬಿಹಾಳ, ತಾಳಿಕೋಟೆ, ಬಸವನ ಬಾಗೇವಾಡಿ ತಾಲೂಕುಗಳ ಸಾವಿರಾರು ರೈತರು ಯರಗಲ್ಲ-ಮದರಿ ಬಳಿ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ, ಕಲ್ಲೆಸೆದು, ದಾಂಧಲೆ ನಡೆಸಿದ್ದಾರೆ.   ಅಪಾರ ಸಂಖ್ಯೆಯಲ್ಲಿದ್ದ ರೊಚ್ಚಿಗೆದ್ದಿದ್ದ ಕಬ್ಬು ಬೆಳೆಗಾರ ರೈತರನ್ನು ತಡೆಯಲು ಬೆರಳೆಣಿಕೆಯಷ್ಟು ಸಂಖ್ಯೆಯಲ್ಲಿದ್ದ ಪೊಲೀಸರು ಹರಸಾಹಸ ಪಟ್ಟರೂ ಪ್ರಯೋಜನ ಆಗಲಿಲ್ಲ. ಪೊಲೀಸರ ಕೋಟೆ ಭೇದಿಸಿ ಕಾರ್ಖಾನೆ ಒಳಗೆ ನುಗ್ಗಿದ ರೈತರು …

Read More »