Breaking News
Home / ರಾಷ್ಟ್ರೀಯ (page 472)

ರಾಷ್ಟ್ರೀಯ

ಕೆಂಪೇಗೌಡರ 108 ಅಡಿ ಭವ್ಯ ಪ್ರತಿಮೆ ಕನ್ನಡಿಗರ ಸ್ವಾಭಿಮಾನ ಪ್ರಗತಿಯ ಪ್ರತೀಕ: C.M ಬೊಮ್ಮಾಯಿ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಭವ್ಯ ಪ್ರತಿಮೆ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಲಿದೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳು ಬಳಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ–Sಣಚಿಣue oಜಿ Pಡಿosಠಿeಡಿiಣಥಿ ಅನಾವರಣದ ಪ್ರಯುಕ್ತ ನಾಡಿನಾದ್ಯಂತ ಪವಿತ್ರ ಮೃತ್ತಿಕೆ …

Read More »

ಮೈಸೂರು ಭಾಗದ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ‌ ಪಟ್ಟಿ ಘೋಷಣೆ

ಮೈಸೂರು: ವಿಧಾನಸಭಾ ಚುವಾಣೆಗೆ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯುತ್ತಿದ್ದರೆ. ಇತ್ತ ಕಾಂಗ್ರೆಸ್‌ ಕೂಡ ಭಾರತ್‌ ಜೋಡೋ ಯಾತ್ರೆ ಮೂಲಕ ಸಂಚಲನ ಮೂಡಿಸುತ್ತಿದೆ.   ಇದೀಗ ಜೆಡಿಎಸ್‌ ಪಂಚರತ್ನ ಯಾತ್ರೆಗೆ ಸಿದ್ಧತೆ ನಡೆಸಲಾಗಿದೆ. ಹೀಗಾಗಿ ಕೆಲ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ.ಜೆಡಿಎಸ್‌ ತೊರೆಯಲು ಮುಂದಾಗಿದ್ದ ಹಿರಿಯ ಶಾಸಕ ಜಿ.ಟಿ ದೇವೇಗೌಡರನ್ನು ಮನವೊಲಿಕೆ ಮಾಡುವಲ್ಲಿ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಯಶಸ್ವಿಯಾಗಿದ್ದು, ಈ ಮೂಲಕ ಹಳೆ ಮೈಸೂರು …

Read More »

ನ. 1ರಂದು ಪುನೀತ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರದಾನ:C.M. ಬೊಮ್ಮಾಯಿ

ಬೆಂಗಳೂರು: ‘ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ನ. 1ರಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಬಗ್ಗೆ ಪುನೀತ್ ರಾಜ್‌ಕುಮಾರ್ ಕುಟುಂಬದ ಸದಸ್ಯರು ಮತ್ತು ಸಂಪುಟ ಸಹೋದ್ಯೋಗಿಗಳ ಜೊತೆ ಗುರುವಾರ ಚರ್ಚಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಂದು ಸಂಜೆ 4 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ’ ಎಂದರು.   ‘ಈವರೆಗೆ ಎಂಟು ಜನರಿಗೆ …

Read More »

ಜಲ ಸಂಪನ್ಮೂಲ ಇಲಾಖೆಯ 155 ಎಸ್​ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನ

ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ (Water Resources Department) 155 ಬ್ಯಾಕ್​ಲಾಗ್​ ದ್ವಿತೀಯ ದರ್ಜೆ ಸಹಾಯಕ (Backlog Second Division Clerk) ಹುದ್ದೆ ನೇಮಕಾತಿಗೆ ನೀಡಿದ್ದ ತಡೆಯನ್ನು ರದ್ದು ಪಡಿಸಿ ಸರ್ಕಾರ ಮತ್ತೆ ಹೊಸದಾಗಿ ಅಧಿಸೂಚನೆ ಹೊರಡಿಸಿದೆ. ಗ್ರೂಪ್​ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಆಸಕ್ತ …

Read More »

ಬೆಳಗಾವಿ ನಗರ ಸಿಸಿಬಿ ಪೊಲೀಸರ ದಾಳಿ; ಅಫೀಮ ಮಾರಾಟ ಮಾಡುತ್ತಿದ್ದ ರಾಜಸ್ಥಾನಿ ವ್ಯಕ್ತಿಗಳಿಬ್ಬರ ಬಂಧನ

ದಿನಾಂಕ 20.10.2022 ರಂದು ಖಚಿತ ಮಾಹಿತಿ ಆದರಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಇನ್ಸಪೆಕ್ಟರ್ ಶ್ರೀ ನಿಂಗನಗೌಡ ಪಾಟೀಲ್ ರವರ ನೇತೃತ್ವದ ತಂಡ ಬೆಳಗಾವಿ ನಗರದ ಆಟೋ ನಗರದಲ್ಲಿ ನಿಷೇಧಿತ ಅಫೀಮ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳಾದ 1) ರೋಹಿತಾಶ್ವ ಭಗವಾನರಾಮ ಬಿಷ್ನೋಯಿ (24 ) ಸಾ: ಜೋಧಪುರ, ರಾಜಸ್ಥಾನ ಹಾಲಿ ಎಮ್.ಕೆ ಹುಬ್ಬಳ್ಳಿ, ಬೆಳಗಾವಿ 2) ರಾಜಕುಮಾರ್ ಜುಗತಾರಾಮ್ ಬಿಶ್ನೊಯಿ(22) ವರ್ಷ, ಸಾ: ಜೋಧಪುರ, ರಾಜಸ್ಥಾನ ಹಾಲಿ ರುಕ್ಮಿಣಿ …

Read More »

ಕಿತ್ತೂರು ಉತ್ಸವ; ಪೂರ್ವಸಿದ್ಧತೆ ಪರಿಶೀಲನೆ ಮಾಡಿದ:ನಿತೇಶ್ ಪಾಟೀಲ

ಇದೇ ಮೊದಲ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲಾಗುತ್ತಿರುವುದರಿಂದ ಪ್ರತಿ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಲು ಅನುಕೂಲವಾಗುವಂತೆ ಒಟ್ಟು 15 ಉಪ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರು ಮಾತ್ರವಲ್ಲದೆ ಎಲ್ಲ ತಾಲ್ಲೂಕುಗಳ ತಹಶೀಲ್ದಾರರನ್ನು ಕೂಡ ಉತ್ಸವದ ಕೆಲಸಕ್ಕೆ ನಿಯೋಜಿಸಲಾಗಿದೆ. ಎಲ್ಲ ಉಪ ಸಮಿತಿಯ ಅಧ್ಯಕ್ಷರು ಮುಂದಿನ ಐದು ದಿನಗಳ ಕಾಲ ಕಿತ್ತೂರಿನಲ್ಲಿಯೇ ಉಪಸ್ಥಿತರಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನ‌ಲ್ಲಿ …

Read More »

ಗೋಕಾಕ: ರಮೇಶ ಜಾರಕಿಹೊಳಿ, ಹೇಳಿಕೆ

ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ನೀಡಬೇಕೆನ್ನುವ ಅವರ ಹೋರಾಟ …

Read More »

487 ಹುದ್ದೆಗಳ ನೇಮಕಾತಿಗೆ ಮುಂದಾದ ಕೆಎಂಎಫ್​​

ಕರ್ನಾಟಕ ಹಾಲು ಒಕ್ಕೂಟದಲ್ಲಿ (Karnataka Milk Federation) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 487 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 19 ಆಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, …

Read More »

ತೋಟದ ರಸ್ತೆಯಲ್ಲಿ ಯಮಸ್ವರೂಪಿ‌ ತಗ್ಗಗುಂಡಿಗಳು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಶಿಂಧೆ ತೋಟದ ರಸ್ತೆಗಳು ಹದಗೆಟ್ಟು ಹೋಗಿವೆ.ರಸ್ತೆಗಳು ಹದಗೆಟ್ಟ ಪರಿಣಾಮ ಗ್ರಾಮದ ಶಿಂಧೆ ತೋಟದ ಸುಮಾರು 30 ಮನೆಗಳು ಸಂಪರ್ಕ ಕಡಿತವಾಗಿವೆ. ಮಳೆಗಾಲ ಪ್ರಾರಂಭವಾದರೆ ಸಾಕು ಶಿಂಧೆ ತೋಟದ ಜನರ ಪರಿಸ್ಥಿತಿ ಹೇಳತೀರದಾಗಿದೆ. 2 ಅಡಿಯಷ್ಟು ದೊಡ್ದ ದೊಡ್ಡ ಗುಂಡಿಗಳು,ಆ ಗುಂಡಿಗಳಲ್ಲಿ ನೀರು ಸಂಗ್ರಹ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಇದರಿಂದಾಗಿ ದಿನಪ್ರತಿ ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ ಜಾರಿ …

Read More »

ವಿರೋಧ ಮಧ್ಯೆಯೂ ಬೆಳಗಾವಿಯಲ್ಲಿ ಗಣೇಶ ಮಂದಿರ ಮುಂಭಾಗದ ಶೆಡ್ ತೆರವು

ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು. ಒತ್ತುವಾರಿಯಾಗಿದ್ದ ಗಣೇಶ ಮಂದಿರ ಮುಂಭಾಗದ ತಗಡಿನ ಶೆಡ್ ತೆರವಿಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್‍ರ ಮನವಲಿಕೆ ಹಿನ್ನೆಲೆ ದೇವಸ್ಥಾನ ಮಂಡಳಿಯವರು ಒಪ್ಪಿಗೆ ಸೂಚಿಸಿದರು. : ಹೌದು ಬೆಳಗಾವಿಯ ಬಸವೇಶ್ವರ ವೃತ್ತದ ಬಳಿಯ ಗಣೇಶ ದೇವಸ್ಥಾನ ಎದುರು ಹಾಕಲಾಗಿದ್ದ ತಗಡಿನ ಶೆಡ್‍ನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ರಾತ್ರಿ ತೆರವು ಮಾಡಿದ್ದಾರೆ. ದೇವಸ್ಥಾನ ಆಡಳಿತ ಮಂಡಳಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. …

Read More »