Breaking News

ರಾಷ್ಟ್ರೀಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ಮೂವರು ಸಾವು

ರಾಮನಗರ: ನೂತನ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಅಪಘಾತವಾಗಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ಓವರ್ ಟೇಕ್ ಮಾಡಲು ಲಾರಿಯ ಹಿಂಬದಿಗೆ ಗುದ್ದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಒಂದೇ ಕುಟುಂಬದ 13 ವರ್ಷದ ಮಗು, 20 ವರ್ಷದ ಯುವತಿ ಹಾಗು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಚಾಲಕ …

Read More »

ಅನ್ನಭಾಗ್ಯ ಆರಂಭವಾಗುವುದು ಅನುಮಾನ, ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜು.1 ರಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನ್ನಭಾಗ್ಯ ಆರಂಭವಾಗುವುದು ಅನುಮಾನ ಎಂಬ ಅಭಿಪ್ರಾಯವನ್ನು ಸಿಎಂ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಶಕ್ತಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 5 ಗ್ಯಾರಂಟಿಗಳ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಸೇರಿದೆ. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ ಎಂದು ತಿಳಿಸಿದರು. ಬಿಪಿಎಲ್, ಅಂತ್ಯೋದಯ ಕಾರ್ಡ್​ನವರಿಗೆ 10 …

Read More »

GST ಕೌನ್ಸಿಲ್‌ ಸದಸ್ಯರಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇಮಕ

ಬೆಂಗಳೂರು : ಜಿಎಸ್‌ಟಿ ಕೌನ್ಸಿಲ್​ಗೆ ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 2013 ರಿಂದ 2018ರವರೆಗೂ ಕೃಷ್ಣಭೈರೇಗೌಡ ಕೌನ್ಸಿಲ್‌ನ ಸದಸ್ಯರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲೂ ಸದಸ್ಯರಾಗಿದ್ದರು. ಇದೇ ಅನುಭವದ ಆಧಾರದ ಮೇಲೆ ಮತ್ತೊಮ್ಮೆ ಕೃಷ್ಣಭೈರೇಗೌಡರನ್ನೇ ಜಿಎಸ್‌ಟಿ ಕೌನ್ಸಿಲ್‌ಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಸದಸ್ಯರಾಗಿದ್ದರು. …

Read More »

ಕಾಂಗ್ರೆಸ್ ಬಿಜೆಪಿ ನಡುವೆ ಅನ್ನಭಾಗ್ಯ ಅಕ್ಕಿ ವಾರ್: ಸಿದ್ದು ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿ ವಿಚಾರದಲ್ಲಿ ಆರೋಪ ಪ್ರತ್ಯಾರೋಪ ನಡೆದಿದೆ. ಸಿದ್ದರಾಮಯ್ಯ ಆರೋಪಕ್ಕೆ ರಾಜ್ಯ ಬಿಜೆಪಿ ನಾಯಕರು ಸರಣಿ ಟ್ವೀಟ್​ಗಳನ್ನು ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಆರ್. ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಬೆನ್ನಲ್ಲೇ ಮಾಜಿ ಸಚಿವ ಸುನೀಲ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಹ ಸಿದ್ದರಾಮಯ್ಯ ವಿರುದ್ಧ …

Read More »

ಸಂಸದ ಪ್ರತಾಪ್ ಸಿಂಹ ಎಳಸು,: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯ ಕೆಲವು ಹಿರಿಯ ನಾಯಕರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಜೊತೆಹೊಂದಾಣಿಕೆ ರಾಜಕಾರಣಮಾಡುತ್ತಿದ್ದಾರೆ ಎಂದು ಹೇಳಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಸಹಕಾರ ಇಲಾಖೆಯ ವತಿಯಿಂದ ಅಲಿ ಆಸ್ಕರ್ ರಸ್ತೆಯ ಸಹಕಾರ ಸಂಘಗಳ ನಿಬಂಧಕರ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸಹಕಾರ ಸಮೃದ್ಧಿ ಸೌಧ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. “ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ. ಇನ್ನೂ ಎಳಸು. …

Read More »

ಗೋಧಿ ವ್ಯಾಪಾರಿಗಳಿಂದ ದಾಸ್ತಾನು ಮಾಹಿತಿ ಪಡೆಯುವಂತೆ ರಾಜ್ಯಗಳಿಗೆ ಕೇಂದ್ರದ ಸೂಚನೆ

ನವದೆಹಲಿ : ಸಗಟು ವ್ಯಾಪಾರಿಗಳು ಮತ್ತು ಇತರ ವ್ಯಾಪಾರಿಗಳು ಹೊಂದಿರುವ ಗೋಧಿ ದಾಸ್ತಾನು ಮಾಹಿತಿಯನ್ನು ಪಡೆದುಕೊಳ್ಳುವಂತೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಕಾರ್ಯದರ್ಶಿ ಸಂಜೀವ್ ಚೋಪ್ರಾ ಆಯಾ ರಾಜ್ಯಗಳಿಗೆ ಸೂಚಿಸಿದ್ದಾರೆ. ಗೋಧಿ ಬೆಲೆ ತಗ್ಗಿಸಲು ಮತ್ತು ಸಂಗ್ರಹಣೆಯನ್ನು ತಡೆಯಲು ಸರ್ಕಾರವು ಮಾರ್ಚ್ 31, 2024 ರವರೆಗೆ ಗೋಧಿ ಮೇಲೆ ದಾಸ್ತಾನು ಮಿತಿಯನ್ನು ವಿಧಿಸಿದ ಒಂದು ದಿನದ ನಂತರ ಕೇಂದ್ರದ ಈ ಸೂಚನೆ ಬಂದಿದೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆದ ಸಭೆಯಲ್ಲಿ ಎಲ್ಲ …

Read More »

ಉತ್ತರ ಕನ್ನಡದಲ್ಲಿ ಪ್ರತ್ಯೇಕ ಪ್ರಕರಣ: ಅಕ್ರಮ ನಾಟಾ ಸಾಗಣೆ ಪ್ರಕರಣದಲ್ಲಿ ಐವರು ಡಿಆರ್ ಎಫ್‌ಓಗಳು ಅಮಾನತು: ಸಂಬಂಧಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಕಾರವಾರ (ಉತ್ತರ ಕನ್ನಡ): ಮುಂಡಗೋಡದಿಂದ ಶಿರಸಿಗೆ ಅಕ್ರಮ ನಾಟ ಸಾಗಣೆ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಭಾಗಿಯಾದ ಹಿನ್ನೆಲೆಯಲ್ಲಿ ಐದು ಮಂದಿ ಡಿಆರ್​ಎಫ್​ಒಗಳನ್ನು ಜಿಲ್ಲಾ ಅರಣ್ಯ ಮುಖ್ಯಾಧಿಕಾರಿ ವಸಂತ್‌ ರೆಡ್ಡಿ (CCF) ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಶಿರಸಿಯ ಸುರೇಶ್ ವಡ್ಡರ್, ಮಾರುತಿ ಸೋರಗಾವಿ, ಮಹೇಶ್ ಬೋರ್ಕರ್, ಹನುಮಂತ ಬಂಡಿವಡ್ಡರ್, ಗುರುಚಂದ್ರ ಎಮ್. ಬ್ಯಾಳಿ ಅಮಾನತುಗೊಂಡ ಡಿ.ಆರ್.ಎಫ್.ಒ ಗಳು. ವಲಯ ಅರಣ್ಯ ಅಧಿಕಾರಿ ಜಿ.ಟಿ ರೇವಣಕರ್ ವಿರುದ್ಧ ಕ್ರಮಕ್ಕೆ ರಾಜ್ಯ ಅರಣ್ಯ ಮುಖ್ಯಸ್ಥರಿಗೆ ಶಿಫಾರಸು …

Read More »

ರಸ್ತೆ ಅಪಘಾತದಲ್ಲಿ ನವವಿವಾಹಿತರ ಸಾವು

ವಿಧಿಯಾಟ ಬಲ್ಲವರಾರು… ಈ ವರದಿ ನೋಡಿದ್ರೆ ಹೇ ವಿಧಿಯೇ ನಿನೇಷ್ಟೂ ಕ್ರೂರಿ ಅನ್ನಿಸದಿರದು. ರಸ್ತೆ ಅಪಘಾತವೊಂದು ನವ ವಿವಾಹಿತರನ್ನು ಬಲಿ ತೆಗೆದು ಕೊಂಡಿದೆ. ಮದುವೆಯಾಗಿ ಒಂದು ತಿಂಗಳಾಗುವ ಮುನ್ನ ಇಬ್ಬರೂ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವಿಜಯಪುರ ನಗರದ ಹೊರವಲಯದ ಸೋಲಾಪುರ ಬೈಪಾಸ್ ಬಳಿ ತಡರಾತ್ರಿ ಬೈಕ್‌ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಹೊನಮಲ್ಲ ತೆರದಾಳ (31) ಹಾಗೂ ಪತ್ನಿ ಗಾಯತ್ರಿ (24) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಸೇವೆ …

Read More »

ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ರಸ್ತೆಗೆ ಸಂಬಂಧಿಸಿದಂತೆ ಸಭೆ

ಬೆಳಗಾವಿ ಜನರ ಬಹುದಿನಗಳಿಂದ ಬೇಡಿಕೆಯಾಗಿದ್ದ ಸ್ಮಾರ್ಟ್ ಸಿಟಿ ಯೋಜನೆಯ ಫ್ಲೇಓವರ್ ನಿರ್ಮಾಣದ ಕನಸನ್ನು ನನಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಬೆಳಗಾವಿಗೆ ಕಳೆದ ಹಲವುವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು ಈಗ ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾದ ಮೇಲೆ ಮತ್ತೆ ಸ್ಮಾರ್ಟ್ ಸಿಟಿ ಯೋಜನೆಯನ್ನು ಕೈಗೆತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಬೆಳಗಾವಿ ನಗರ ಪ್ರವೇಶಿಸುವ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ಹಾಗೂ ಸರ್ವಿಸ್ ರಸ್ತೆಗೆ ಸಂಬಂಧಿಸಿದಂತೆ ಮಂಗಳವಾರ …

Read More »

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಹತ್ಯೆ ಮಾಡಿದ ಸೊಸೆ.!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಕ್ಷುಲ್ಲಕ ವಿಷಯಕ್ಕೆ ತವರು ಮನೆಯವರನ್ನು ಕರೆಯಿಸಿ ಅತ್ತೆ, ಗಂಡನ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾದ ಅತ್ತೆ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಮಹಾಬೂಬಿ ಯಾಕೂಶಿ (53) ಎಂಬುವವರೆ ಸಾವನ್ನಪ್ಪಿದ್ದ ದುರ್ದೈವಿ ಅತ್ತೆ. ಕಳೆದ ಮೇ. 22ರಂದು ಸೊಸೆ ಮೇಹರೂಣಿ ಯಾಕೂಶಿ, ತನ್ನ ಇಬ್ಬರು ಸಹೋದರರ ಜೊತೆ ಸೇರಿ ಹಲ್ಲೆ ಮಾಡಿದ್ದಳು. ಈ ವೇಳೆ ರಾಡ್‌ನಿಂದ ಗಂಡ ಸುಬಾನ್ ಮತ್ತು ಅತ್ತೆ …

Read More »