Breaking News
Home / ರಾಷ್ಟ್ರೀಯ (page 480)

ರಾಷ್ಟ್ರೀಯ

ಮಾಲ್‌ ನಲ್ಲಿ ಸಿನಿಮಾ ಪ್ರಚಾರ: ಜನಸಂದಣಿಯಲ್ಲಿ ಖ್ಯಾತ ನಟಿಯರಿಗೆ ದೈಹಿಕ ಕಿರುಕುಳ

ಕೇರಳ: ಪತ್ರಕರ್ತೆಯೊಬ್ಬರಿಗೆ ನಟನೊಬ್ಬ ಅಸಭ್ಯವಾಗಿ ನಿಂದಿಸಿದ ಪ್ರಕರಣ ಸುದ್ದಿಯಲ್ಲಿರುವಾಗಲೇ ಮಲಯಾಳಂ ಸಿನಿಮಾರಂಗದಲ್ಲಿ ಮತ್ತೊಂದು ಘಟನೆ ನಡೆದಿದೆ. ಸಿನಿತಾರೆಯರು ತಮ್ಮ ಚಿತ್ರದ ಪ್ರಮೋಷನ್‌ ಗಾಗಿ ಮಾಲ್‌, ಥಿಯೇಟರ್‌ ಗೆ ಹೋಗುವಾಗ, ಅಭಿಮಾನಿಗಳು, ಫೋಟೋ ತೆಗೆದುಕೊಳ್ಳಲು ಮುಗಿಬೀಳುತ್ತಾರೆ.‌ ಮಂಗಳವಾರ ಕೇರಳದ ಕೋಜಿಕೋಡ್‌ ಮಾಲ್ ವೊಂದರಲ್ಲಿ “ಸ್ಯಾಟರ್‌ ಡೇ ನೈಟ್”‌ ಎನ್ನುವ ಸಿನಿಮಾ ಪ್ರಚಾರದಲ್ಲಿ ಖ್ಯಾತ ನಟ, ನಟಿಯರು ಭಾಗಿಯಾಗಿದ್ದರು.   ಮೆಚ್ಚಿನ ಕಲಾವಿದರನ್ನು ನೋಡಲು ಅಭಿಮಾನಿಗಳು, ಪ್ರೇಕ್ಷಕರು ಮುಗಿಬಿದ್ದಿದ್ದು, ಅವರನ್ನು ನಿಯಂತ್ರಣ ಮಾಡಲು ಪೊಲೀಸರು …

Read More »

ಆಲಿಯಾ ಜೊತೆ ಹಾಸಿಗೆ ಹಂಚಿಕೊಳ್ಳುವುದು ಕಷ್ಟ: ರಣಬೀರ್‌ಗೆ ಇಂದೆಥಾ ಸಂಕಷ್ಟ..?

ನಟ ರಣಬೀರ್‌ ಕಪೂರ್‌ ಹಾಗೂ ಆಲಿಯಾ ಭಟ್‌ ಬಾಲಿವುಡ್‌ನ ಕ್ಯೂಟ್‌ ಕಪಲ್‌. 2022 ಏಪ್ರಿಲ್‌ 14ರಂದು ಮದುವೆಯಾಗಿರುವ ಈ ಜೋಡಿ ಸದ್ಯ ತಂದೆ-ತಾಯಿಯಾಗುವ ಖುಷಿಯಲ್ಲಿದ್ದಾರೆ. ಜೊತೆಗೆ ರಣಬೀರ್‌ ಕಪೂರ್‌ ಹಾಗೂ ಆಲಿಯಾ ಭಟ್‌ ತೆರೆ ಮೇಲೆ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡಿರುವ ‘ಬ್ರಹ್ಮಾಸ್ತ್ರ’ ಚಿತ್ರ ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದು, ಸದ್ಯ ಚಿತ್ರತಂಡ ಗೆಲುವಿನ ಖುಷಿಯಲ್ಲಿದೆ.   ರಣಬೀರ್‌ ಕಪೂರ್‌ ಅವರ ವಿವಾದಾತ್ಮಕ ಹೇಳಿಕೆಯೊಂದರಿಂದ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಬಾಯ್ಕಾಟ್‌ ಬಿಸಿ …

Read More »

PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ದೇಶದಲ್ಲಿ ಪಿಎಫ್‌ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದ ಬೆನ್ನಲ್ಲೇ ಹೊಸ ಬೇಡಿಕೆ ಇಡುವ ಮೂಲಕ ಕಾಂಗ್ರೆಸ್‌ಮುಂದಾಗಿದೆ. ಅದರರಲ್ಲೂಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಕಾನೂನಿನ ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಂಡರೆ ನಮ್ಮ ವಿರೋಧ ಇಲ್ಲ. ಆರ್‌ಎಸ್‌ಎಸ್‌ ನಿಷೇಧಕ್ಕೂ ಸರ್ಕಾರ ಮುಂದಾಗಲಿ ಸಮಾಜದಲ್ಲಿ ಅಶಾಂತಿ …

Read More »

ಮಂಗಳ ಗ್ರಹದಲ್ಲಿ ಈಗಲೇ 7118 ಕೆಜಿ ತ್ಯಾಜ್ಯ!

ಪ್ಯಾರಿಸ್, ಸೆ. 27: ಸುಮಾರು 50 ವರ್ಷಗಳ ಹಿಂದೆ ಮಂಗಳ ಗ್ರಹದ ಶೋಧ ಕಾರ್ಯಾಚರಣೆ ಆರಂಭಿಸಿರುವ ಮಾನವ ಕುಲವು, ಅಲ್ಲಿಗೆ ಹಲವು ಬಾಹ್ಯಾಕಾಶ ನೌಕೆಗಳನ್ನು ಈಗಾಗಲೇ ಕಳುಹಿಸಿದೆ. 2030ರ ದಶಕದ ವೇಳೆಗೆ ಅಲ್ಲಿಗೆ ಮೊದಲ ಬಾರಿಗೆ ಮಾನವನನ್ನು ಕಳುಹಿಸುವ ಯೋಜನೆಯನ್ನು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಹೊಂದಿದೆ.   ಮಂಗಳ ಗ್ರಹದ ಮೇಲೆ ಮಾನವ ಕಾಲಿಡಲು ಇನ್ನೂ ತುಂಬಾ ಸಮಯವಿದೆಯಾದರೂ, ಅಲ್ಲಿ ಕಸವನ್ನು ಹರಡುವುದರಿಂದ ಮಾನವರೇನೂ ಹಿಂದೆ ಬಿದ್ದಿಲ್ಲ. …

Read More »

ದೇಶಾದ್ಯಂತ 5 ವರ್ಷ PFI ನಿಷೇಧ, ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ.   ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ …

Read More »

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*

  ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …

Read More »

ಹುಕ್ಕೇರಿ ಬಳಿ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಯುವಕರ ಸಾವು

ಬೆಳಗಾವಿ ಜಿಲ್ಲೆ): ಹುಕ್ಕೇರಿ ಸಮೀಪದ ಹೊಳೆಮ್ಮನ ಗುಡಿ ಹಳ್ಳದ ಹತ್ತಿರ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಬೈಕ್‌ ಮೇಲೆ ಹೊರಟಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ (22) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತಪಟ್ಟವರು. ಭಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರು …

Read More »

ಕಂದಾಯ ಭವನದ ಮೇಲೆ ಉಪಲೋಕಾಯುಕ್ತರ ದಿಢೀರ್ ದಾಳಿ

ಬೆಂಗಳೂರು: ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಕಂದಾಯ ಭವನದ ಮೇಲೆ ಉಪಲೋಕಾಯುಕ್ತರು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ. ಉಪಲೋಕಾಯುಕ್ತ ನ್ಯಾ.ಫಣೀಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಕಂದಾಯ ಭವನದ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಕಂದಾಯ ಭವನದ ವಿರುದ್ಧ ಹಲವಾರು ದೂರುಗಳು ಬಂದಿದ್ದವು. ಈ ನಿಟ್ಟಿನಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ

Read More »

ಬಿಜೆಪಿಗೆ 2024ರವರೆಗೂ ಜೆ.ಪಿ.ನಡ್ಡಾ ಅಧ್ಯಕ್ಷ?

ನವದೆಹಲಿ: 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಜೆ.ಪಿ.ನಡ್ಡಾ ಅವರು ಇನ್ನೂ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ನಿಗದಿಯಂತೆ 2023ರ ಜ.20ರಂದು ನಡ್ಡಾ ಅವರ 3 ವರ್ಷಗಳ ಅಧಿಕಾರಾವಧಿ ಪೂರ್ಣಗೊಳ್ಳಲಿದೆ. ಆದರೆ, ಮುಂದಿನ ಲೋಕಸಭೆ ಚುನಾವಣೆಗೆ ಇನ್ನು ಎರಡೇ ವರ್ಷಗಳು ಬಾಕಿ ಇವೆ. ಅಲ್ಲದೇ, ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ನಡೆಯಲಿವೆ. ಹೀಗಾಗಿ, ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಲೋಕಸಭೆ ಚುನಾವಣೆಯವರೆಗೆ ವಿಸ್ತರಿಸಲು ಬಿಜೆಪಿ …

Read More »

ಗುಂಪು ಘರ್ಷಣೆ; ಬಾಲಕನಿಗೆ ಚೂರಿ ಇರಿತ

ಬೆಳಗಾವಿ: ಇಲ್ಲಿನ ಅನಂತಶಯನ ಗಲ್ಲಿಯಲ್ಲಿ ಸೋಮವಾರ ರಾತ್ರಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚೂರಿ ಇರಿತದಿಂದ ಒಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕ್ಯಾಂಪ್‌ ಪ್ರದೇಶದ ನಿವಾಸಿ ಫರಾನ್‌ ಧಾರವಾಡಕರ (15) ಚೂರಿ ಇರಿತಕ್ಕೆ ಒಳಗಾದವ. ಈತ ಇಸ್ಲಾಮಿಯಾ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಾನೆ. ‌ಗಾಯಗೊಂಡ ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಫರಾನ್‌ ಹಾಗೂ ಇಬ್ಬರು ಸ್ನೇಹಿತರು ಬೈಕ್‌ ಮೇಲೆ ಹೊರಟಿದ್ದರು. ನಗರದ ಅಂಬಾ ಭವಾನಿ ಮಂದಿರದ ಹತ್ತಿರ 10 ಯುವಕರ …

Read More »