ಬೆಂಗಳೂರು, ಮಾರ್ಚ್ 03 : ರಾಜ್ಯ ಕಲಾವಿದರ ಸಂಘಕ್ಕೆ ನಾಯಕತ್ವದ ಕೊರತೆ ಇದೆ, ಹಿರಿಯ ನಟ ಜಗ್ಗೇಶ್ (Jaggesh) ಅವರನ್ನು ಹೇಳಿದ್ದು ಸರಿ ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಹೇಳಿದರು. ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಅವರು, ಚಿತ್ರರಂಗವಾಗಲೀ, ಕಲಾವಿದರ ಸಂಘವನ್ನಾಗಲೀ ಮುನ್ನಡೆಸುವವರು ಯಾರಾದರೂ ಇದ್ದಾರೆಯೇ? ಅದೊಂದು ಕಾಲವಿತ್ತು, ಡಾ ರಾಜ್ ಕುಮಾರ್ ಅವರು ಕರೆ ನೀಡಿದರೆ ಲಕ್ಷಾಂತರ ಜನ ಸೇರುತ್ತಿದ್ದರು, ಅಂಬರೀಶ್, ವಿಷ್ಣುವರ್ಧನ ಈಗ ನಮ್ಮೊಂದಿಗಿಲ್ಲ, ಅವರಂಥ ನಾಯಕತ್ವ ಯಾರು ನೀಡುತ್ತಾರೆ? …
Read More »ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಅತ್ಯಂತ ಗರಿಷ್ಠ ತಾಪಮಾನ
ಬೆಂಗಳೂರು, : ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಬೆಳಗಾವಿ ಏರ್ಪೋರ್ಟ್ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ತಾಪಮಾನ ಹೊನ್ನಾವರ, ಕಾರವಾರ, ಪಣಂಬೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬೆಂಗಳೂರಿನ ಎಚ್ಎಎಲ್ನಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು. ಗರಿಷ್ಠ ತಾಪಮಾನ ಕರಾವಳಿ ಕರ್ನಾಟಕದಲ್ಲಿ 36-38 ಡಿಗ್ರಿ ಸೆಲ್ಸಿಯಸ್ನಷ್ಟಿದೆ. …
Read More »ಡಬ್ಬಲ್ ಮರ್ಡರ್ ಮಾಡಿ ಜೈಲುಪಾಲಾಗಿದ್ದ ವಿಚಾರಣಾಧೀನ ಖೈದಿ ಜೈಲಿನಲ್ಲಿ ನೇಣಿಗೆ ಶರಣು
ಹಾವೇರಿ, : ವಿಚಾರಣಾಧೀನ ಕೈದಿ ಜೈಲಿನಲ್ಲಿ ನೇಣಿಗೆ ಶರಣಾಗಿರುವಂತಹ (death) ಘಟನೆ ಹಾವೇರಿಯ ಕೆರೆಮತ್ತಿಹಳ್ಳಿ ಬಳಿ ಇರುವ ಜಿಲ್ಲಾಕಾರಾ ಗೃಹದಲ್ಲಿ ನಡೆದಿದೆ. ಕೋಟೆಪ್ಪ ಅಂಬಿಗೇರ್ (42) ನೇಣಿಗೆ ಶರಣಾದ ಖೈದಿ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಕೋಟೆಪ್ಪ ಅಂಬಿಗೇರ್ ಸುಮಾರು ಆರುವರೆ ವರ್ಷಗಳ ಹಿಂದೆ ಡಬ್ಬಲ್ ಮರ್ಡರ್ ಮಾಡಿ ಜೈಲು ಪಾಲಾಗಿದ್ದರು. ಹೃದಯ ಸಂಬಂಧಿ ಕಾಯಿಲೆ ಇತ್ತು. ನ್ಯಾಯಾಲಯದಿಂದ ಬೆಲ್ …
Read More »135 ಸೀಟು ಕೊಟ್ಟಿರುವುದು ನಟ್ ಬೋಲ್ಟ್ ರಿಪೇರಿ ಮಾಡುವುದಕ್ಕಲ್ಲ:H.D.K.
ಬೆಂಗಳೂರು: ”ನಟ್ ಬೋಲ್ಟ್ ರಿಪೇರಿ ಮಾಡಲು ಬಹಳ ಜನ ಇದ್ದಾರೆ. ರಾಜ್ಯದ ಜನತೆ ಇವರಿಗೆ 135 ಸೀಟು ಕೊಟ್ಟಿರುವುದು ರಿಪೇರಿ ಮಾಡುವುದಕ್ಕಲ್ಲ, ರಾಜ್ಯದ ಜನರ ಸಮಸ್ಯೆ ಆಲಿಸುವುದಕ್ಕೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ”ಡಿ. ಕೆ. ಶಿವಕುಮಾರ್ ಬಹುಶಃ ಭೂಮಿ ಮೇಲಿಲ್ಲ ಅನಿಸುತ್ತದೆ. ಅಧಿಕಾರ ಹಾಗೆ ಮಾತನಾಡಿಸುತ್ತಿದೆ. ಅವರ ಬಗ್ಗೆ ಮಾತನಾಡುವುದಕ್ಕಿಂತ ಮೌನವಾಗಿರುವುದೇ ಒಳ್ಳೆಯದು” ಎಂದು …
Read More »ದಯಾಮರಣ ಕಾನೂನು ಹೋರಾಟಗಾರ್ತಿ ಎಚ್.ಬಿ.ಕರಿಬಸಮ್ಮ
ದಾವಣಗೆರೆ: ಎಚ್.ಬಿ. ಕರಿಬಸಮ್ಮ 85 ವರ್ಷದ ವೃದ್ಧೆ. 30 ವರ್ಷಗಳ ಕಾಲ ಶಾಲಾ ಮಕ್ಕಳಿಗೆ ಒಳ್ಳೆಯ ಗುರುವಾಗಿ ನೀತಿ ಪಾಠ ಮಾಡಿ ನಿವೃತ್ತಿ ಆಗಿರುವ ಶಿಕ್ಷಕಿ. 24 ವರ್ಷಗಳ ಹಿಂದೆ ತಾನು ಅನುಭವಿಸಿದ ನರಕಯಾತನೆಗೆ ಮುಕ್ತಿ ಬಯಸಿದ್ದ ಎಚ್.ಬಿ. ಕರಿಬಸಮ್ಮ ಅವರು ಕಾನೂನಿನಡಿ ಘನತೆಯಿಂದ ಮರಣ ಹೊಂದುವ ಹಕ್ಕು ಸಿಗಬೇಕೆಂದು ಹೋರಾಡಿದವರಲ್ಲಿ ಇವರೂ ಒಬ್ಬರು. ಕೇಂದ್ರ ಸರ್ಕಾರ ದಯಾಮರಣಕ್ಕೆ ಸಂಬಂಧಿಸಿದಂತೆ ಕಾನೂನಿನಡಿ ಮಾರ್ಗಸೂಚಿಗಳನ್ನು ತಯಾರು ಮಾಡುವಂತೆ ಆಯಾಯ ರಾಜ್ಯಗಳಿಗೆ ಸೂಚನೆ ನೀಡಿದೆ. …
Read More »ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಪತ್ನಿ ಹೆಸರಿನಲ್ಲಿ ₹ 9,99,999 ದೇಣಿಗೆ ನೀಡಿದ ಡಿಸಿಎಂ
ಉಡುಪಿ : ಡಿಸಿಎಂ ಡಿ. ಕೆ ಶಿವಕುಮಾರ್ ಅವರಿಂದು ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ತಮ್ಮ ಪತ್ನಿ ಹೆಸರಿನಲ್ಲಿ ದೇವಸ್ಥಾನಕ್ಕೆ 9,99,999 ರೂ. ದೇಣಿಗೆ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇವರು ವರ-ಶಾಪ ಕೊಡಲ್ಲ, ಅವಕಾಶ ಮಾತ್ರ ಕೊಡ್ತಾನೆ. ಮಾತೃಭೂಮಿ, ಭೂತಾಯಿ, ದೇವಿ ದರ್ಶನ ಮಾಡುವ ಅವಕಾಶ ಸಿಕ್ಕಿದೆ ಎಂದರು. ನಮ್ಮ ಧರ್ಮವನ್ನ ನಾವು ಕಾಪಾಡಬೇಕು. ಯಾರು ಯಾರಿಗೂ ತೊಂದರೆ …
Read More »ಜೈನ್ ವಿಶ್ವವಿದ್ಯಾಲಯದಲ್ಲಿ ಬಿಆರ್ ಅಂಬೇಡ್ಕರ್ರಿಗೆ ಅವಮಾನ: ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು, ಮಾರ್ಚ್ 01: ಡಾ. ಬಿಆರ್ ಅಂಬೇಡ್ಕರ್ (BR Ambedkar) ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ. ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ನ್ಯಾ.ಎಸ್.ಆರ್.ಕೃಷ್ಣಕುಮಾರ್ರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದ್ದು, ಹೀಗಾಗಿ ಕೇಸ್ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶನಿವಾರ ಆದೇಶ …
Read More »ಇಬ್ಬರು ಅಂತಾರಾಜ್ಯ ಕಳ್ಳರು ಸೆರೆ
ಬೆಂಗಳೂರು: ಉತ್ತರ ಪ್ರದೇಶದಿಂದ ರೈಲಿನ ಮುಖಾಂತರ ನಗರಕ್ಕೆ ಬಂದು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಜೀಂ ಆಲಿ ಹಾಗೂ ಸದ್ದಾಂ ಬಂಧಿತ ಆರೋಪಿಗಳು. ಇವರಿಂದ 186 ಗ್ರಾಂ ಚಿನ್ನಾಭರಣ, ಎರಡು ದ್ವಿಚಕ್ರವಾಹನ ಹಾಗೂ 15 ಸಾವಿರ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ಧಾರೆ. ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ದೂರುದಾರರ ಕುಟುಂಬ ಕಳೆದ …
Read More »ಕೊಪ್ಪಳದಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ನಮ್ಮ ವಿರೋಧವಿದೆ : ಸಚಿವ ಶಿವರಾಜ ತಂಗಡಗಿ
ಕೊಪ್ಪಳ : ಜಿಲ್ಲೆಯಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ಸಾವಿರ ಎಕರೆ ಜಮೀನು ಮೀಸಲಿರಿಸಿ ಖಾಸಗಿ ಕಂಪನಿ ಸ್ಥಾಪನೆಗೆ ಮುಂದಾಗಿರುವುದಕ್ಕೆ ಕೊಪ್ಪಳದ ಜನತೆ, ಗವಿಮಠದ ಗವಿಶ್ರೀಗಳು ವಿರೋಧಿಸಿದ್ದಾರೆ. ಅದಕ್ಕೆ ನಮ್ಮದು ವಿರೋಧವಿದೆ. ಈ ಕುರಿತು ಮಾ.4 ರಂದು ಸಿಎಂ ಜೊತೆ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸುವುದಾಗಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಆದರೆ ಅವರು ನಮ್ಮ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. …
Read More »ಶೂಟಿಂಗ್‌ಗೆ ಅವಕಾಶ ಕೊಡದಿದ್ರೆ, ನೀವು ಹೇಗೆ ಸಿನಿಮಾ ಮಾಡ್ತೀರಿ. ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಬೇಕೋ ಮಾಡುತ್ತೇವೆ: ಡಿಸಿಎಂ
ಬೆಂಗಳೂರು: ”ಸಿನಿಮಾ ಸಂಬಂಧಿತ ಕಾರ್ಯಕ್ರಮಗಳಲ್ಲಿ ಚಿತ್ರರಂಗ ಭಾಗವಹಿಸಬೇಕು. ನಾವು ನಿಮ್ಮ ಶೂಟಿಂಗ್‌ಗೆ ಅವಕಾಶ ಕೊಡದಿದ್ರೆ, ನೀವು ಹೇಗೆ ಸಿನಿಮಾ ಮಾಡ್ತೀರಿ?. ನಾವೂ ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ. ಇದು ನನ್ನ ವಾರ್ನಿಂಗ್ ಅಂತಲಾದ್ರೂ ತಿಳಿದುಕೊಳ್ಳಿ, ರಿಕ್ವೆಸ್ಟ್ ಅಂತಲಾದ್ರೂ ತಿಳಿದುಕೊಳ್ಳಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು. ವಿಧಾನಸೌಧದ ಮುಂಭಾಗದಲ್ಲಿ ಶನಿವಾರ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ”ಈ ಕಾರ್ಯಕ್ರಮ …
Read More »