Home / ರಾಷ್ಟ್ರೀಯ (page 496)

ರಾಷ್ಟ್ರೀಯ

ಗುಜರಾತ್​ನಲ್ಲಿ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿಗಳಿಗೆ ತಿಂಗಳಿಗೆ ₹3 ಸಾವಿರ: ಕೇಜ್ರಿವಾಲ್ ಆಫರ್‌

(ಗುಜರಾತ್​​): ಪಂಜಾಬ್ ರಾಜ್ಯ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಆಮ್​ ಆದ್ಮಿ ಪಕ್ಷ(ಎಎಪಿ) ಇದೀಗ ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್​ ಮೇಲೆ ಕಣ್ಣಿಟ್ಟಿದೆ. ಈ ವರ್ಷಾಂತ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈಗಿನಿಂದಲೇ ಆಪ್ ಮುಖ್ಯಸ್ಥ ಕೇಜ್ರಿವಾಲ್ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ವೆರಾವಲ್​ನಲ್ಲಿ ಆಯೋಜನೆಗೊಂಡಿದ್ದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ನಿರುದ್ಯೋಗಿ ಯುವಕನಿಗೂ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ …

Read More »

ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.

  *ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ …

Read More »

ಮಕ್ಕಳೇ ಮೊಬೈಲ್‌ ಬಿಡಿ, ಗಿಲ್ಲಿ ದಾಂಡು ಆಡಿ! ಶಾಲೆಗಳಲ್ಲೇ 75 ದೇಸಿ ಕ್ರೀಡೆಗಳ ಪರಿಚಯ

ಹೊಸದಿಲ್ಲಿ: ಇಂದಿನ ಮಕ್ಕಳಿಗೆ ಗ್ರಾಮೀಣ ಕ್ರೀಡೆಗಳು, ಆಟಗಳ ಪರಿಚಯವೇ ಇಲ್ಲ. ಸ್ವಲ್ಪ ಸಮಯ ಸಿಕ್ಕರೂ ಮೊಬೈಲ್‌, ಲ್ಯಾಪ್‌ಟಾಪ್‌ ಮುಂದೆ ಕುಳಿತುಕೊಂಡು ಬಿಡುತ್ತಾರೆ. ಇದು ಎಲ್ಲ ಹೆತ್ತವರ ಅಳಲು. ಇಂಥ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಶಾಲೆಯಲ್ಲೇ ಗ್ರಾಮೀಣ ಆಟಗಳನ್ನು ಕಲಿಸಿಕೊಟ್ಟರೆ ಹೇಗಿರುತ್ತದೆ?   ಹೌದು. ಕೇಂದ್ರ ಸರ‌ಕಾರ ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದೆ. ಕರ್ನಾಟಕ ಹಾಗೂ ಒಡಿಶಾದ ಗ್ರಾಮೀಣ ಕ್ರೀಡೆಗಳಲ್ಲಿ ಒಂದಾದ ಗಿಲ್ಲಿ ದಾಂಡು (ಚಿನ್ನಿ ದಾಂಡು) ಸೇರಿದಂತೆ ಒಟ್ಟು 75 “ಭಾರತೀಯ ಆಟ’ಗಳನ್ನು ಶಾಲೆಗಳಲ್ಲೇ …

Read More »

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕೆ? ಇನ್ಮುಂದೆ ವರ್ಷಕ್ಕೆ ಒಂದಲ್ಲ, ನಾಲ್ಕು ಅವಕಾಶ: ಡಿಟೇಲ್ಸ್​ ಇಲ್ಲಿದೆ ನೋಡಿ.

ನವದೆಹಲಿ : ಮುಂದಿನ ವರ್ಷ 18 ವಯಸ್ಸು ನಿಮಗೆ ಆಗುವುದಾದರೆ, ನೀವು ಈಗಲೇ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಅರ್ಜಿ ಸಲ್ಲಿಸಬಹುದು. ಹೀಗೊಂದು ಹೊಸ ಪ್ರಕಟಣೆಯನ್ನು ಇತ್ತೀಚೆಗೆ ಚುನಾವಣಾ ಆಯೋಗ ಹೊರಡಿಸಿತ್ತು. ಇದರ ಅರ್ಥ 17 ವರ್ಷಕ್ಕಿಂತ ಮೇಲ್ಪಟ್ಟರು ಈಗ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು ಎನ್ನುವುದಾಗಿದೆ.   ಅದರ ಮುಂದುವರೆದಿರುವ ಭಾಗವಾಗಿ ಇದೀಗ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ವರ್ಷಕ್ಕೆ ನಾಲ್ಕು ಅವಕಾಶಗಳನ್ನು ಚುನಾವಣಾ …

Read More »

ವಿಜಯ್ ದೇವರಕೊಂಡನ ಸಂಪೂರ್ಣ ಬೆತ್ತಲೆ ನೋಡ್ಬೇಕಂತೆ ಈ ನಟಿ

ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ನಟಿ ಅನನ್ಯ ಪಾಂಡೆ ನಡುವಿನ ಗಾಸಿಪ್ ಗಳು ಎರಡೂ ಸಿನಿಮಾ ರಂಗದಲ್ಲೂ ದಟ್ಟವಾಗಿದೆ. ರಶ್ಮಿಕಾ ಮಂದಣ್ಣ ಜೊತೆ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು ಎನ್ನುವುದನ್ನು ಇದೇ ಅನನ್ಯ ಪಾಂಡೆ ಹೇಳಿದ್ದರು. ಅಲ್ಲದೇ, ಸದ್ಯ ಅನನ್ಯ ಪಾಂಡೆ ಜೊತೆಯೇ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದಾರೆ ಎಂದೂ ಸುದ್ದಿ ಆಗಿತ್ತು. ಇವರಿಬ್ಬರೂ ಮಧ್ಯರಾತ್ರಿ ಓಡಾಡುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದ್ದವು. ಇದೀಗ …

Read More »

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ

  ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ …

Read More »

ಸತೀಶ ಜಾರಕಿಹೊಳಿ ಅಭಿಮಾನಿ ಯಮಕನಮರಡಿಯಿಂದ ಸಿದ್ದರಾಮಯ್ಯ ಹುಟ್ಟು ಹಬ್ಬಕ್ಕೆ ಬೈಕ್ ಮೂಲಕ ಪ್ರಯಾಣ

ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗಲು ಯಮಕನಮರಡಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮಾನಿ ಓರ್ವ ಬೈಕ್ ಮೂಲಕ ಪ್ರಯಾಣ ಆರಂಭಿಸಿದ್ದಾರೆ. ಹೌದು ಯಮಕನಮರಡಿಯ ಕಾಂಗ್ರೆಸ್ ಕಾರ್ಯಕರ್ತ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸತೀಶ ಜಾರಕಿಹೊಳಿ ಅವರ ಅಪ್ಪಟ ಅಭಿಮಾನಿ ಆಗಿರುವ ಅರುಣ ರಾವಳ ಯಮಕನಮರಡಿಯಿಂದ ಬೈಕ್ ಮೂಲಕ ದಾವಣಗೆರೆಗೆ ಪ್ರಯಾಣ ಬೆಳೆಸಿದ್ದಾನೆ. ಕಡೋಲಿ ಗ್ರಾ.ಪಂ. ಮುಂದೆ ಆಗಮಿಸಿದ …

Read More »

ದೇಶದಲ್ಲಿ ಸಂಪೂರ್ಣವಾಗಿ ಹಿಂದೂ ರಾಷ್ಟ್ರದ ವಿರುದ್ಧ ಇಸ್ಲಾಮೀಕರಣ ಮಾಡುವ ಹುನ್ನಾರ: ಲಕ್ಷ್ಮಣ ಸವದಿ

ದೇಶದಲ್ಲಿ ಸಂಪೂರ್ಣವಾಗಿ ಹಿಂದೂ ರಾಷ್ಟ್ರದ ವಿರುದ್ಧವಾಗಿ ಇಸ್ಲಾಮೀಕರಣ ಮಾಡುವ ಹುನ್ನಾರ ನಡೆಯುತ್ತಿದೆ ಹೀಗಾಗಿ ಸರಣಿ ಕೊಲೆಗಳು ನಡೆಯುತ್ತಿವೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗಂಭೀರ ಆರೋಪ ಮಾಡಿದ್ದಾರೆ. ಅಥಣಿ ತಾಲೂಕಿನ ರಡ್ಡೆರಹಟ್ಟಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಂಎಲ್‍ಸಿ ಲಕ್ಷ್ಮಣ ಸವದಿ ಬಿಜೆಪಿ ಕಾರ್ಯಕರ್ತರ ಕೊಲೆ ಖಂಡನೀಯವಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಯಾರೇ ಆಗಲಿ ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾದರೆ ಸರ್ಕಾರ ಸಹಿಸಲ್ಲ ಉಗ್ರ ಕಾನೂನು ತಂದು ಶಿಕ್ಷಿಸಲಾಗುವುದು …

Read More »

ಶ್ರಾವಣ ಮಾಸದಲ್ಲಿ ಜನರು ಏಕೆ ನಾನ್ ವೆಜ್ ತಿನ್ನೋದಿಲ್ಲ? ಇದರ ಹಿಂದಿನ ಕಾರಣಗಳೇನು?

ಹಿಂದೂಗಳು ಶ್ರಾವಣ ಮಾಸವನ್ನು (Shravan Masam) ತುಂಬಾ ಪವಿತ್ರವಾಗಿ ನೋಡುತ್ತಾರೆ. ಹಲವಾರು ವ್ರತ, ಉಪವಾಸ, ಕಟ್ಟು ನಿಟ್ಟಿನ ಪೂಜಾ ಕ್ರಮಗಳನ್ನು ಕೈಗೊಳ್ಳುತ್ತಾರೆ. ಶ್ರಾವಣ ಮಾಸದ ಈ ತಿಂಗಳಲ್ಲಿ ಭಕ್ತರು (Devotees) ಶಿವನನ್ನು ವಿಶೇಷವಾಗಿ ಪೂಜಿಸುತ್ತಾರೆ. ಈ ತಿಂಗಳಲ್ಲಿ ಬರುವ ಪ್ರತಿ ಸೋಮವಾರವನ್ನು ದೇವಾಲಯಗಳಲ್ಲಿ (Temples) ಶ್ರಾವಣ ಸೋಮವಾರ ಎಂದು ಭಕ್ತಿ-ಭಾವದಿಂದ ಆಚರಿಸಲಾಗುತ್ತದೆ. ಅಲ್ಲದೇ ಈ ಮಾಸದಿಂದ ಸಾಲು ಸಾಲು ಹಬ್ಬಗಳು (Festivals) ಸಹ ಶುರುವಾಗುತ್ತವೆ. ಕೃಷ್ಣ ಜನ್ಮಾಷ್ಟಮಿ, ರಕ್ಷಾ ಬಂಧನ, …

Read More »

ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್

ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.   ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು !   ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More »