Home / ರಾಷ್ಟ್ರೀಯ (page 498)

ರಾಷ್ಟ್ರೀಯ

BJPಯಲ್ಲಿಯೂ ಆರಂಭವಾದ ದಲಿತ ಸಿಎಂ ವಿಚಾರ; ಕಾರಜೋಳ ಅವರನ್ನು C.M.ಮಾಡ್ತೀವಿ: ಚೆಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಆರಂಭವಾಗಿದ್ದ ದಲಿತ ಮುಖ್ಯಮಂತ್ರಿ ವಿಚಾರ ಇದೀಗ ಬಿಜೆಪಿ ಪಾಳಯದಲ್ಲಿಯೂ ಆರಂಭವಾಗಿದ್ದು, ರಾಜ್ಯದಲ್ಲಿ ದಲಿತ ಸಿಎಂ ಆಗುವುದು ಬಿಜೆಪಿಯಲ್ಲಿ ಮಾತ್ರ ಎಂದು ಪರಿಷತ್ ಸದಸ್ಯ ಚೆಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.   ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಒಗ್ಗಟ್ಟಿಲ್ಲ, ಸ್ಥಾನಮಾನಕ್ಕಾಗಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನವರು ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ದಲಿತ ಸಿಎಂ ಎಂಬುದು ಆ ಪಕ್ಷದಲ್ಲಿ ಕೇವಲ ಹೇಳಿಕೆಗಷ್ಟೇ ಸೀಮಿತ ಎಂದರು. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗುವುದು …

Read More »

ದೇಹಲಿ ಭೇಟಿ ಬಳಿಕ ನಿಗಮ, ಮಂಡಳಿ ನೇಮಕ: ಸಿ.ಎಂ

ಮಂಡ್ಯ: ‘ದೆಹಲಿಗೆ ಭೇಟಿ ನೀಡಿದ ನಂತರ ನಿಗಮ, ಮಂಡಳಿ ನೇಮಕಾತಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಮಂತ್ರಿಮಂಡಲಕ್ಕೆ ಸೇರ್ಪಡೆ ವಿಚಾರವನ್ನೂ ಪಕ್ಷದ ವರಿಷ್ಠರ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದರು.   ಕೆ.ಆರ್‌.ಪೇಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡಲಿದ್ದು ನೇಮಕಾತಿ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ನಿಗಮ, ಮಂಡಳಿಗೆ ನೇಮಕಾತಿ ಕುರಿತಂತೆ ಇಲ್ಲಿಯವರೆಗೂ ಯಾವುದೇ ಚರ್ಚೆ ನಡೆಸಿಲ್ಲ’ ಎಂದರು. ಕೆ.ಎಸ್‌.ಈಶ್ವರಪ್ಪ ಅವರು …

Read More »

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದ B.S.Y.

ಬೆಂಗಳೂರು: ತಮ್ಮನ್ನು ಪಕ್ಷವು ಮೂಲೆಗುಂಪು ಮಾಡುತ್ತಿದೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದ ರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ ಯಡಿಯೂರಪ್ಪ, “ಕಾಂಗ್ರೆಸ್ ನಾಯಕರು ಆತುರಾತುರವಾಗಿ ಮತ್ತು ಮುಖ್ಯಮಂತ್ರಿಯಾಗಲು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ. ನಾವು ಹಾಗೆ ಆಗಲು ಬಿಡುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ” …

Read More »

ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಶ್ಯಾಮಚರಣ ಮುರ್ಮು ಆಯ್ಕೆ

ಹೊಸದಿಲ್ಲಿ: ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಶ್ಯಾಮಚರಣ ಮುರ್ಮು ಆಯ್ಕೆಯಾಗಿದ್ದು ಅಧಿಕೃತ ಘೋಷಣೆ ಬಾಕಿಯಿದೆ. ಈ ಮೂಲಕ ಅವರು ಪ್ರತಿಭಾ ಪಾಟೀಲ್ ಅವರ ನಂತರ ದೇಶದ ಎರಡನೇ ಹಾಗೂ ಬುಡಕಟ್ಟು ಸಮುದಾಯದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೂತನ ರಾಷ್ಟ್ರಪತಿಯಾಗಿ ಅವರು ಜು.25ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಗುರುವಾರ ಸಂಸತ್ ಭವನದಲ್ಲಿ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ದ್ರೌಪದಿ ಮುರ್ಮು ಅವರು 3.78 ಲಕ್ಷ …

Read More »

ಜನರು ತುಂಬಿದ್ದ ನೀರಿನ ಬಿಲ್ ಗುಳುಂ ಮಾಡಿತಾ ದಂಡು ಮಂಡಳಿ..?

ನೀರಿನ ಬಿಲ್‍ನ್ನು ಇಲ್ಲಿನ ಜನರು ತುಂಬಿದರೂ ಕೂಡ ಅಧಿಕಾರಿಗಳು ಮಾಡಿದ ಯಡವಟ್ಟಿನಿಂದಾಗಿ ಇಲ್ಲಿನ ಮನೆಗಳಿಗೆ ಕಳೆದ 20 ದಿನಗಳಿಂದ ನೀರನ್ನು ಬಿಟ್ಟಿಲ್ಲ. ಇದರಿಂದ ರೋಸಿ ಹೋದ ಇಲ್ಲಿನ ಮಹಿಳೆಯರು ಸಂಬಂಧಿಸಿದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಹೀಗೆ ಚಿಕ್ಕ ಮಕ್ಕಳನ್ನು ಹಿಡಿದುಕೊಂಡು ನಿಂತಿರುವ ಈ ನೂರಾರು ಮಹಿಳೆಯರು ಬೆಳಗಾವಿಯ ಕ್ಯಾಂಪ್ ಪ್ರದೇಶದವರು. ಕಳೆದ 20 ದಿನಗಳಿಂದ ಇವರ ಮನೆಗಳಿಗೆ ನೀರನ್ನು ಬಿಟ್ಟಿಲ್ಲ. ಇದರಿಂದ ಆಕ್ರೋಶಗೊಂಡಿರುವ …

Read More »

ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ

ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.   ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ.       “ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು …

Read More »

ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ

ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.   ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.       ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ

Read More »

ಮರಾಠ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ಅನುದಾನ ಏನೆಲ್ಲಾ ಯೋಜನೆಗಳು ಸಿಗಲಿದೆ?

ಬೆಂಗಳೂರು: ರಾಜ್ಯ ಸರ್ಕಾರದ ಎದುರು ಕರ್ನಾಟಕದ ಮರಾಠ ಸಮುದಾಯ (Maratha community) ಹಲವು ಬೇಡಿಕೆಗಳನ್ನು ಇಟ್ಟಿದೆ. ಮರಾಠ ಸಮುದಾಯದವರ ಮೀಸಲಾತಿ ಬೇಡಿಕೆಗೆ ರಾಜ್ಯ ಹಿಂದುಳಿದ ವರ್ಗದ ವರದಿ ಬಂದ ನಂತರ ಸಂವಿಧಾನದ ಚೌಕಟ್ಟಿನೊಳಗೆ ನ್ಯಾಯ ಒದಗಿಸಲು ಕ್ರಮ‌ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು. ಅವರು ಇಂದು ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ ಹಾಗೂ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರ ಮವನ್ನು ಉದ್ಘಾಟಿಸಿ ಮಾತನಾಡಿದದ್ದರು. ಮರಾಠ …

Read More »

ಬೆಂಗಳೂರು: ಹೆಂಡ್ತಿ ಕೊಲ್ಲಲು ಬಂದು ನಶೆಯಲ್ಲಿ ಅತ್ತೆಗೆ ಹೊಡೆದು ಕೊಂದ!

ಬೆಂಗಳೂರು: ಗಂಡ-ಹೆಂಡತಿ ಜಗಳದಲ್ಲಿ ಅತ್ತೆ ಬಲಿಯಾಗಿದ್ದಾರೆ. ಕುಡಿದ ಅಮಲಿನಲ್ಲಿ ಅಳಿಯನೋರ್ವ ಹೆಣ್ಣು ಕೊಟ್ಟ ಅತ್ತೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಆರೋಪಿ ನಾಗರಾಜ್​ನನ್ನು ಹೆಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ಮಾರತ್ ಹಳ್ಳಿಯ ಸಂಜಯನಗರ ನಿವಾಸಿ ಸೌಭಾಗ್ಯ ಕೊಲೆಯಾದವರು. ಕಳೆದ‌ 6 ವರ್ಷದ ಹಿಂದೆ ನಾಗರಾಜ(35) ಮತ್ತು ಭವ್ಯಶ್ರೀ ಮದುವೆಯಾಗಿತ್ತು.‌ ಇವರ ದಾಂಪತ್ಯಕ್ಕೆ ಸಾಕ್ಷಿಯಾಗಿ 5 ವರ್ಷದ ಮಗುವಿದೆ. ವೃತ್ತಿಯಲ್ಲಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ ಕುಡಿತದ ಚಟಕ್ಕೆ ಬಿದ್ದಿದ್ದ. ಹಾಗಾಗಿ ಆಗಾಗ ಮನೆಯಲ್ಲಿ …

Read More »

ಡಾಲರ್ ಎದುರು ಕುಸಿಯುತ್ತಿರುವ ರೂಪಾಯಿ ಮೌಲ್ಯ: ಇದೇ ಮೊದಲ ಬಾರಿಗೆ 80 ರೂ. ಗಡಿ ದಾಟಿದ ದೇಶಿಯ ಕರೆನ್ಸಿ

ನವದೆಹಲಿ: ಡಾಲರ್ ಎದುರು ದುರ್ಬಲಗೊಳ್ಳುತ್ತಿರುವ ರೂಪಾಯಿ ಮೌಲ್ಯ ಇದೇ ಮೊದಲ ಬಾರಿಗೆ 80 ರೂ. ಮುಟ್ಟಿದೆ. ಸೋಮವಾರ ವಿದೇಶಿ ವಿನಿಮಯ ಮಾರುಕಟ್ಟೆಯು 79.76 ರೂಪಾಯಿ ಮೂಲಕ ವಹಿವಾಟು ಆರಂಭಿಸಿ, ಮಧ್ಯಂತರದಲ್ಲಿ 80 ರೂ. ಗಡಿ ದಾಟಿತು. ಕಡೆಗೆ ಕೊಂಚ ಚೇತರಿಸಿಕೊಂಡು 16 ಪೈಸೆ ಇಳಿಕೆ ಆಗಿ ದಿನ ಅಂತ್ಯಕ್ಕೆ 79.98 ರೂ.ಗೆ ವಿನಿಮಯ ದರ ಸ್ಥಿರಗೊಂಡಿತು. ಇದೀಗ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಶೇ.0.03 ಕುಸಿತದೊಂದಿಗೆ ಮತ್ತೆ 80.02 ರೂ. ಗಡಿ ದಾಟಿದೆ. …

Read More »