Home / ರಾಷ್ಟ್ರೀಯ (page 501)

ರಾಷ್ಟ್ರೀಯ

ಅಪ್ರಾಪ್ತ ಬಾಲಕಿ ವಿವಾಹಕ್ಕೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ ಭೂಪ; ವರ ಮಹಾಶಯ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಲು ವರ ಮಹಾಶಯನೊಬ್ಬ ಆಧಾರ್ ಕಾರ್ಡ್ ನ್ನೇ ನಕಲು ಮಾಡಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಮದುಮಗ ಮನು ಎಂದು ಗುರುತಿಸಲಾಗಿದೆ. ಕಾನೂನು ಪ್ರಕಾರ ಯುವತಿಗೆ ವಿವಾಹವಾಗಲು 18 ವರ್ಷ ಆಗಿರಬೇಕು. ಆದರೆ ಮನು ಎಂಬ ಯುವಕ ಅಪ್ರಾಪ್ತ ಯುವತಿ ವಿವಾಹವಾಗಲೆಂದು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ವಿವಾಹಕ್ಕೆ ಸಿದ್ಧತೆ ನಡೆಸಿದ್ದಾನೆ. ಯುವತಿಯ ಆಧಾರ್ ಕಾರ್ಡ್ ನಲ್ಲಿ ಆಕೆ ಹುಟ್ಟಿದ ದಿನಾಂಕ, ವರ್ಷವನ್ನೇ …

Read More »

ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕನ ಕೊಲೆ

ಯಮಕನಮರಡಿ: ಇಲ್ಲಿನ ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕರೊಬ್ಬರನ್ನು ಶನಿವಾರ ಬರ್ಬರವಾಗಿ ಕೊಲೆಗೈಯ್ಯಲಾಗಿದೆ.   ಹೊಸಪೇಟೆ ನಿವಾಸಿ ಪರಶುರಾಮ ಸಿದ್ದಲಿಂಗಯ್ಯ ಹಲಕರ್ಣಿ(32) ಕೊಲೆಯಾದವರು. ಬಸವರಾಜ ಭರಮಪ್ಪ ಗಲಾಟಿ (30) ಮಂಜುನಾಥ ಲಕ್ಷ್ಮಣ ಪುಟ್ಜಾನೆ (24), ಕೆಂಪಣ್ಣ ಅರ್ಜುನ್ ನೇಸರ್ಗಿ ಕೊಲೆಗೈದ ಆರೋಪಿಗಳು.   ಕೊಲೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿಗಳಾದ ಮಂಜುನಾಥ ಹಾಗೂ ಕೆಂಪಣ್ಣ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಇನ್ನೊಬ್ಬ ಾರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Read More »

ಸವದತ್ತಿ: ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರ ಸಾವು

ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.   ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು.   ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಅವಘಡ ಸಂಭವಿಸಿದೆ.   ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.

Read More »

ಗೋಕಾಕ ತಾಲೂಕಿನ ಶಿಂಗಳಾಪುರ ಸೇತುವೆ ಮುಳುಗಡೆ

ಗೋಕಾಕ: ಮಳೆಯ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಮಟ್ಟ ಮೀರಿ ಹರಿಯುತ್ತಿದೆ. ಈ ಮಧ್ಯೆ ಶಿಂಗಳಾಪುರ ಸೇತುವೆ ಶನಿವಾರ ಮುಳುಗಡೆಯಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೇತುವೆ ಮೇಲಿನಿಂದ ವ್ಯಾಪಕ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು ಜನ ಸಂಚರಿಸದಂತೆ ಎಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಗೋಕಾಕ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದು ಸುರಕ್ಷತೆ ಬಗ್ಗೆ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದ್ದಾರೆ.

Read More »

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ನವದೆಹಲಿ: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.   ವಿಕ್ರಾಂತ್ ರೋಣ ಚಿತ್ರದ ಪ್ರಚಾರದಲ್ಲಿ ಬಿಸಿಯಾಗಿರುವ ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಈ ನಡುವೆ ಇಂದು ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.   ಈ ವೇಳೆ ಕೇಂದ್ರ ಸಚಿವರ ಜತೆ ಉಪಹಾರವನ್ನು …

Read More »

ಪ್ರವಾಹ ಆತಂಕ; ಸರ್ಕಾರ, ಸಚಿವರು, ಜಿಲ್ಲಾಡಳಿತ ಜನತೆಗೆ ಶೀಘ್ರ ಸ್ಪಂದಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

    ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಆಗ್ರಹಿಸಿದರು.   ನಗರದ ಕಾಂಗ್ರೆಸ್‌ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ …

Read More »

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …

Read More »

200 ರೂದಲ್ಲಿ ಹಿಡಕಲ್ ಡ್ಯಾಂ,ಗೋಕಾಕ ಪಾಲ್ ಗೊಡಚಿನಮಲ್ಕಿ ದರ್ಶನ

ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಿಡಕಲ್ ಡ್ಯಾಂ,ಮತ್ತು ನ ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ.   ಕೇವಲ 200 ರೂ ದರದಲ್ಲಿ ಹಿಡಕಲ್ ಡ್ಯಾಂ, ಗೋಕಾಕ್ ಫಾಲ್ಸ್ ದರ್ಶನ ಮಾಡಿಸಲು, ಬೆಳಗಾವಿ ಬಸ್ ನಿಲ್ದಾಣದಿಂದ ಬೆಳಗ್ಗೆ 9:00 ಗಂಟೆಗೆ ಬಸ್ …

Read More »

ಎತ್ತಿನ ಕತ್ತಿನ ಭಾರಕ್ಕೆ ನೊಗವಾದ ‘ರೋಲಿಂಗ್ ಸಪೋರ್ಟ್

ಸಾಂಗ್ಲಿ: ಹಳ್ಳಿ ಕಡೆಗಳಲ್ಲಿಎತ್ತು ಯಾವಾಗಲೂ ಬಿಡುವಿಲ್ಲದ ಪ್ರಾಣಿ. ಕೃಷಿಯ ಜೊತೆಗೆ ಬಂಡಿಗಳನ್ನು ಎಳೆಯಲು ಎತ್ತನ್ನು ನಿರಂತರವಾಗಿ ಬಳಸಲಾಗುತ್ತದೆ. ಹೆಚ್ಚಿನ ಸಂದರ್ಭದಲ್ಲಿಎತ್ತಿನ ಗಾಡಿಗೆ ಅದರ ಸಾಮರ್ಥ್ಯ ಮೀರಿ ಹೊರೆ ಹಾಕಲಾಗುತ್ತದೆ. ಇದರ ನೇರ ಪರಿಣಾಮ ಎತ್ತಿನ ಕುತ್ತಿಗೆಯ ಮೇಲಾಗುತ್ತದೆ. ಇದರ ವಿರುದ್ಧ ಪ್ರಾಣಿ ಪ್ರಿಯರು ಆಗಾಗ್ಗೆ ಧ್ವನಿ ಎತ್ತಿದ್ದಾರೆ. ಆದರೆ, ಎತ್ತಿನ ಕತ್ತಿನ ಹೊರೆ ಮಾತ್ರ ಕಡಿಮೆಯಾಗಿಲ್ಲ. ಆದರೆ ಇದೀಗ ಎತ್ತಿನ ಭಾರ ಕಡಿಮೆ ಮಾಡುವ ಹೊಸ ಸಂಶೋಧನೆಯೊಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. …

Read More »

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ

ಮುಂಬಯಿ : ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅನುಕ್ರಮವಾಗಿ ಲೀಟರ್‌ಗೆ 5 ಮತ್ತು ಲೀಟರ್‌ಗೆ 3 ರೂಪಾಯಿ ಇಳಿಕೆ ಮಾಡುವುದಾಗಿ ಸಿಎಂ ಏಕನಾಥ್ ಶಿಂಧೆ ಗುರುವಾರ ಘೋಷಿಸಿದ್ದಾರೆ. ಹೊಸ ಸರ್ಕಾರದ ಎರಡನೇ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ 6,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂದು ಮಂತ್ರಾಲಯದಲ್ಲಿ ನಡೆದ ಸಂಪುಟ ಸಭೆಯ ನಂತರ ಶಿಂಧೆ ಸುದ್ದಿಗಾರರಿಗೆ ತಿಳಿಸಿದರು.   ಬೆಲೆ ಇಳಿಕೆಯ ನಂತರ, ಮುಂಬೈನಲ್ಲಿ …

Read More »