Breaking News
Home / ರಾಷ್ಟ್ರೀಯ (page 51)

ರಾಷ್ಟ್ರೀಯ

3 ರಾಜ್ಯಗಳ 15 ಸ್ಥಾನಗಳಿಗೆ ಇಂದು ಚುನಾವಣೆ

ಹೊಸದಿಲ್ಲಿ: ರಾಜ್ಯಸಭೆಯ 56 ಸ್ಥಾನಗಳ ಪೈಕಿ 41 ನಾಯಕರು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದು, ಮಂಗಳವಾರ ಉಳಿದ 15 ಸ್ಥಾನಗಳಿಗಾಗಿ ಚುನಾವಣೆ ನಡೆಯಲಿದೆ. ಈ 15 ಸ್ಥಾನಗಳು ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ್ದಾಗಿವೆ. ಉತ್ತರಪ್ರದೇಶದಲ್ಲಿ 10 ಸ್ಥಾನಗಳಿದ್ದು, 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಸ್‌ಪಿ ತನ್ನ 3 ಅಭ್ಯರ್ಥಿಗಳನ್ನು (ಜಯಾ ಬಚ್ಚನ್‌, ರಾಮ್‌ಜಿಲಾಲ್‌ ಸುಮನ್‌, ಅಲೋಕ್‌ ರಂಜನ್‌) ಮರುನಾಮ ನಿರ್ದೇಶನ ಮಾಡಿದೆ. ಇನ್ನು, ಬಿಜೆಪಿ 7ರ ಬದಲಾಗಿ 8 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಒಂದು …

Read More »

“ಕಾಗದ ರಹಿತ ಪರೀಕ್ಷೆ’ಯತ್ತ ರಾಜೀವ್‌ಗಾಂಧಿ ಆರೋಗ್ಯ ವಿವಿ

ಬೆಂಗಳೂರು: “ಕಾಗದ ರಹಿತ ಪರೀಕ್ಷೆ’ ಯತ್ತ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಚಿತ್ತಹರಿಸಿದೆ. ಮಾರ್ಚ್‌ನಲ್ಲಿ ಈ ಸ್ವರೂಪದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದ್ದು, ಅದಕ್ಕಾಗಿಯೇ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ “ಡಿಜಿ ಟಲ್‌ ವ್ಯಾಲ್ಯೂವೇಷನ್‌’ ಮೂಲಕ ಚರಿತ್ರೆ ನಿರ್ಮಿಸಿರುವ ವಿವಿ ಈಗ ಕಾಗದ ರಹಿತ ಪರೀಕ್ಷೆ ಮೂಲಕ ದೇಶದ ವಿವಿಗಳ ಇತಿಹಾಸದಲ್ಲೇ ಭಿನ್ನ ರೀತಿಯ ಪ್ರಯೋಗಕ್ಕೆ ಹೆಜ್ಞೆ ಇರಿಸಿದೆ. ಫೆಲೋಶಿಫ್ ಮತ್ತು ಫಿಸಿಯೋಥೆರಪಿ ವಿಭಾಗದಲ್ಲಿ ಕಾಗದ …

Read More »

BJP-JDS ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯ ಹುದಲಿ ಗ್ರಾಮದಲ್ಲಿ ಸೋಮವಾರ ಗ್ರಾಮದೇವಿ ಜಾತ್ರಾ ಅಂಗವಾಗಿ ಚರಂಡಿ, ಸಿಸಿ ರಸ್ತೆ ಹಾಗೂ ರಸ್ತೆ ಡಾಂಬರೀಕರಣ ಹಾಗೂ ಸುಮಾರು 5 ಕೋಟಿ ರೂಪಾಯಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.   ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿ ರಾಜ್ಯಾದ್ಯಂತ ಆಗುತ್ತಿರುವ ಗ್ರಾಮಗಳ ಅಭಿವೃದ್ಧಿ ಕಾರ್ಯಗಳನ್ನು ನೋಡಿ …

Read More »

ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ

ವಿಜಯಪುರ, ಫೆ.26:ಲೋಕಸಭೆ ಚುನಾವಣೆಗೆ(Lok Sabha Election 2024) ಅಣಿಯಾಗುತ್ತಿರುವ ಬಿಜೆಪಿ (BJP) ಹೈಕಮಾಂಡ್ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ. ಅದರಂತೆ, ಈ ಬಾರಿ ಬಿಜೆಪಿ ವಿಜಯಪುರ (Vijayapur) ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಹಾಲಿ ಸಂಸದ ರಮೇಶ್ ಜಿಗಜಿಣಗಿ (Ramesh Jigajinagi) ವಿಜಯಪುರ ಲೋಕಸಭಾ ಕ್ಷೇತ್ರದ …

Read More »

ಬಿಜೆಪಿಯಿಂದ ಸಂವಿಧಾನಕ್ಕೆ ಧಕ್ಕೆ ಬಂದಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 25: ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಏನು ಆತಂಕ ಬಂದಿದೆ ಎಂಬುವುದನ್ನು ಜನರಿಗೆ ತಿಳಿಸುವ ಕೆಲಸ ಮಾಡಿದ್ದೇವೆ. ಬಿಜೆಪಿಯಿಂದ ಸಂವಿಧಾನಕ್ಕೆ ಧಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ(Siddaramaiah)ವಾಗ್ದಾಳಿ ಮಾಡಿದ್ದಾರೆ. ಸಂವಿಧಾನ ಜಾರಿಯಾಗಿ 75ನೇ ವರ್ಷ ಹಿನ್ನೆಲೆಯಲ್ಲಿ ಸಮಾಜಕಲ್ಯಾಣ ಇಲಾಖೆಯಿಂದ ನಗರದ ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಭಾಗಿ ಮಾತನಾಡಿದ ಅವರು, ಮೋದಿ ಸರ್ಕಾರದಿಂದ ಬಂದಿರುವ ಆತಂಕವನ್ನು ಜನರಿಗೆ ತಿಳಿಸಿದ್ದೇವೆ. ಡಾ.ಬಿ.ಅರ್.ಅಂಬೇಡ್ಕರ್​ ನಮ್ಮ ದೇಶಕ್ಕೆ ಸಂವಿಧಾನವನ್ನು ಕೊಟ್ಟಿದ್ದಾರೆ. …

Read More »

ನಾಲ್ಕನೇ ತರಗತಿ ಬಾಲಕಿಗೆ ಐರನ್​ ಬಾಕ್ಸ್​ನಿಂದ ಸುಟ್ಟು ಮಲತಾಯಿ

ಬೆಂಗಳೂರು, ಫೆ.25: ಬೆಂಗಳೂರು ಉತ್ತರ ತಾಲ್ಲೂಕಿನಅಂಚೆಪಾಳ್ಯ(Anchepalya) ಗ್ರಾಮದಲ್ಲಿ. ನಾಲ್ಕನೇ ತರಗತಿ ಓದುತ್ತಿರುವ ಪುಟ್ಟ ಬಾಲಕಿಗೆ ನಿತ್ಯ ಒಂದಲ್ಲ ಒಂದು ವಿಚಾರಕ್ಕೆ ಮಲತಾಯಿ(Stepmother) ಮಮತಾ ಎಂಬುವವರು ಕಿರುಕುಳ ನೀಡುತ್ತಿದ್ದಳಂತೆ. ಮಮತಾ ಗಂಡ ಶ್ರೀನಿವಾಸ್ ಕೆಲಸಕ್ಕೆ ಎಂದು ಮನೆಯಿಂದ ಹೊರಡುತ್ತಿದಂತೆ ಮೃಗಿಯ ವರ್ತನೆ ತೋರುತ್ತಿದ್ದ ಮಮತಾ, ಬಾಲಕಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸುತ್ತಿದ್ದಳಂತೆ. ಒಂದು ಸಣ್ಣ ಮಗು ಎಂಬುದನ್ನು ಸಹ ನೋಡದೆ ಐರನ್ ಬಾಕ್ಸ್​ನಿಂದ ಸುಟ್ಟಿರುವುದಲ್ಲದೆ, ಕಾದ ಕಬ್ಬಿಣದ ಸಲಾಕೆಯಿಂದ ಮಗುವಿನ …

Read More »

ಲೋಕಸಭಾ ಚುನಾವಣೆ: ಬಿಜೆಪಿ ಬಗ್ಗೆ ಅಚ್ಚರಿಯ ಕಾರ್ಣಿಕ ನುಡಿದ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ

ಚಿಕ್ಕಮಗಳೂರು, ಫೆಬ್ರವರಿ 26: ಲೋಕಸಭೆ ಚುನಾವಣೆಗೆ (Lok Sabha Elections 2024) ಇನ್ನೇನು ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗಲೇ, ಮತ್ತೆ ಕೇಂದ್ರದಲ್ಲಿ ಬಿಜೆಪಿಯೇ (BJP) ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬರ್ಥದಲ್ಲಿ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ (Jiganehalli Mailaralingeshwara Karanika) ನುಡಿದಿದ್ದಾರೆ. ಜತೆಗೆ, ಮಳೆ-ಬೆಳೆ ಚೆನ್ನಾಗಿ ಆಗಲಿದೆ ಎಂಬ ಆಶಾವಾದದ ನುಡಿಯನ್ನೂ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯಲ್ಲಿ ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ …

Read More »

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ,

ಕಾರವಾರ, ಫೆ.26: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ( Kyasanur Forest Disease- KFD) 2ನೇ ಬಲಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ (Death). 20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸಿದ್ದಾಪುರ ತಾಲೂಕಿನಲ್ಲಿ KFD ಪ್ರಕರಣಗಳ ಸಂಖ್ಯೆ 43ಕ್ಕೇರಿದೆ. 20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ …

Read More »

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ: ಕಾಂಗ್ರೆಸ್ ಶಾಸಕ

ಕಲಬುರಗಿ, ಫೆಬ್ರವರಿ 26: ಗ್ಯಾರಂಟಿ ಯೋಜನೆಗಳಿಂದ (Guarantee Schemes) ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ ಎಂದು ಕಲಬುರಗಿ (Kalaburagi) ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ (Congress MLA Allamprabhu Patil) ಹೇಳಿದ್ದಾರೆ. ರವಿವಾರ (ಫೆಬ್ರವರಿ 25) ರಂದು ಕಲಬುರಗಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ 65 ಸಾವಿರ ಕೋಟಿ ಹಣ ಖರ್ಚಾಗುತ್ತಿದೆ. ಎಲ್ಲ ಹೆಣ್ಣು ಮಕ್ಕಳು ಸರ್ಕಾರಿ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಉಚಿತ ಅಕ್ಕಿ, ತಲಾ ಎರಡು ಸಾವಿರ ಹಣ ಮಹಿಳೆಯರ ಖಾತೆ …

Read More »

ಚಿಕ್ಕೋಡಿಯಲ್ಲಿ ಜೀವ ಪಣಕ್ಕಿಟ್ಟು ಮೆಟ್ಟಿಲ್ಲಿಲ್ಲದ ಬಾವಿಗೆ ಇಳಿದು ನೀರು ತರುವ ಸ್ಥಿತಿ

ಚಿಕ್ಕೋಡಿ, ಫೆ.26: ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ (Drinking Water Crisis). ಕೃಷ್ಣಾ ನದಿ ಕೂಗಳತೆ ದೂರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೌಡೇನವಾಡಿ ವಸತಿ ತೋಟದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಜೀವ ಜಲಕ್ಕಾಗಿ ಜೀವ ಕೈಯಲ್ಲಿ ಹಿಡಿದು ನೀರು ತುಂಬಿಸೋ ಸ್ಥಿತಿ ಇಲ್ಲಿದೆ. ಇನ್ನೂರಕ್ಕೂ ಅಧಿಕ ಮನೆಗಳಿರುವ ಈ ತೋಟದಲ್ಲಿ ನೀರಿಲ್ಲದೇ …

Read More »