Breaking News

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಕನ್ನಡದ ಬಸ್​ಗಳಿಗೆ ಮಸಿ: ಬೆಳಗಾವಿ-ಮಹಾರಾಷ್ಟ್ರ ಸಂಚಾರ ಸ್ಥಗಿತ

ಬೆಳಗಾವಿ, ಫೆಬ್ರವರಿ 23: ಕನ್ನಡ ಮಾತನಾಡು ಎಂದಿದ್ದಕ್ಕೆ ಕೆಎಸ್​​ಆರ್​ಟಿಸಿ (KSRTC) ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮತ್ತೊಬ್ಬನನ್ನು ಬಂಧಿಸಲಾಗಿದೆ. 2 ದಿನಗಳ ಹಿಂದೆ ಕಂಡಕ್ಟರ್ ಮಹದೇವಪ್ಪ ದೂರು ದಾಖಲಿಸಿದ್ದರು. ಹೀಗಾಗಿ ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ್ದ ಪೊಲೀಸರು, ಇಂದು ಮತ್ತೋರ್ವ ಆರೋಪಿ ಮೋಹನ್ ಹಂಚಿನಮನಿ(25) ಅರೆಸ್ಟ್​ ಮಾಡಿದ್ದಾರೆ. ಸದ್ಯ ಮಾರಿಹಾಳ ಠಾಣೆ ಪೊಲೀಸರಿಂದ ಒಟ್ಟು ಐವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದ ಇನ್ನೂ ಕೆಲವು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಇನ್ನೂ …

Read More »

ಕೆಎಸ್​​ಆರ್​​ಟಿಸಿ ಬಸ್‌ ನಿರ್ವಾಹಕ ಹಾಗೂ ಚಾಲಕರ ಮೇಲೆ ನಡೆದ ಹಲ್ಲೆ ಆರೋಪ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಬಸ್‌ಗಳ ಸಂಖ್ಯೆ ಕಡಿಮೆ

ಬೆಳಗಾವಿ : ಬೆಳಗಾವಿಯಲ್ಲಿ ಕೆಎಸ್​​ಆರ್​​ಟಿಸಿ ಬಸ್‌ ನಿರ್ವಾಹಕ ಹಾಗೂ ಚಾಲಕರ ಮೇಲೆ ನಡೆದ ಹಲ್ಲೆ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ (ಬೆಳಗಾವಿ) ಬರುವ ಬಸ್‌ಗಳ ಸಂಖ್ಯೆ ಶನಿವಾರ ಕಡಿಮೆಯಾಗಿತ್ತು. ಸದ್ಯಕ್ಕೆ ಗಡಿವರೆಗೆ ಮಾತ್ರ ಬಸ್​​ಗಳು ಓಡಾಡುತ್ತಿವೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಹುದ್ದಾರ ಮಾಹಿತಿ ನೀಡಿದ್ದಾರೆ. ಕೊಲ್ಹಾಪುರ ಮಾರ್ಗವಾಗಿ ಪ್ರತಿದಿನವೂ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯಿಂದ 30 ಬಸ್‌ ಬರುತ್ತಿದ್ದವು. ಆದರೆ, ಶನಿವಾರ 20 ಬಸ್ …

Read More »

ಪತ್ನಿ ಜೊತೆ ಅಕ್ರಮ ಸಂಬಂಧಪತ್ನಿಯೊಂದಿಗೆ ಸರಸವಾಡಿದ ಸ್ನೇಹಿತನ ಕೊಂದ ಪತಿ

ಬೆಂಗಳೂರು: ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದಿಂದ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಂದು ಹಾಕಿದ ಘಟನೆ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಶಿರಾದ ಕಿಶೋರ್‌ ಕುಮಾರ್​​ (34) ಕೊಲೆಯಾದವ. ಕೃತ್ಯ ಎಸಗಿದ ಆರೋಪಿ ಸತೀಶ್ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಪತ್ನಿಯೊಂದಿಗೆ ಕಿಶೋರ್​​ ಕುಮಾರ್​ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಸತೀಶ್ ರೆಡ್ಡಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಪೂರ್ಣ ವಿವರ: “ಕೆಜಿಎಫ್‌ನ​ ಸತೀಶ್ ರೆಡ್ಡಿ …

Read More »

ಸಿ ಐ ಟಿ ಯು ದಿಂದ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ

ಸಿ ಐ ಟಿ ಯು ದಿಂದ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ ಅಂಗನವಾಡಿ ಸೇರಿದಂತೆ ವಿವಿಧ ಸಂಘಟಿತ ಅಸಂಘಟಿತ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ ಹಮ್ಮಿಕೊಂಡಿದ್ದಾರೆ ಸಿಐಟಿಯು ರಾಜ್ಯ ಸಮಿತಿಯ ಕರೆಯ ಮೇರೆಗೆ ಹಮ್ಮಿಕೊಳ್ಳಲಾಗಿರುವ ಈ ಮುಷ್ಕರವು ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯಲಿದೆ ಎಂದು ಈ …

Read More »

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಶಾಲೆಯಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಶಾಲೆಯಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು ವಿದ್ಯಾರ್ಥಿ ಜೀವನದಲ್ಲಿ ಎಸ್‍ಎಸ್‍ಎಲ್‍ಸಿ ಒಂದು ಮಹತ್ವದ ಘಟ್ಟ. ಮಕ್ಕಳಲ್ಲಿ ಸಮರ್ಥವಾಗಿ ಮತ್ತು ಸಮರ್ಪಕವಾಗಿ ಎದುರಿಸುವ ಆತ್ಮವಿಶ್ವಾಸ ಮೂಡಿಸಬೇಕು. ಮತ್ತು ಶಾಲೆಯಲ್ಲಿ ಮಕ್ಕಳು ಪರೀಕ್ಷೆಯ ಬಗ್ಗೆ ಗೊಂದಲ, ಭಯ ಇಲ್ಲದೇ ಪರೀಕ್ಷೆಗಳನ್ನು ಬರೆಯುವ ಪರೀಕ್ಷಾಸ್ನೇಹಿ ಪರಿಸರ ನಿರ್ಮಾಣವಾಗಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು. ಕಳೆದ ಶುಕ್ರವಾರ ಸಂಜೆ ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ಆದರ್ಶ …

Read More »

ಕನ್ನಡ ಅಲ್ಲ, ಮರಾಠಿಯಲ್ಲಿ ಮಾತಾಡು ಎಂದು ಧಮ್ಕಿ ಹಾಕಿದ ಯುವಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ

ಬೆಳಗಾವಿ: ವಿಶ್ವ ಮಾತೃಭಾಷೆ ದಿನವಾದ ಇಂದು “ಮರಾಠಿ ಭಾಷೆಯಲ್ಲಿ ಮಾತನಾಡು” ಎಂದು ಧಮ್ಕಿ ಹಾಕಿ ‌ಕಿಡಿಗೇಡಿಗಳು ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಳಗಾವಿ-ಸುಳೇಬಾವಿ ಮಾರ್ಗಮಧ್ಯೆ ಸಂಚರಿಸುವ ಬಸ್‌ನಲ್ಲಿ ಗಲಾಟೆ ನಡೆದಿದೆ. ಬಸ್‌ ನಿರ್ವಾಹಕ ಮಹಾದೇವಪ್ಪ ಮಲ್ಲಪ್ಪ ಹುಕ್ಕೇರಿ (51) ಹಲ್ಲೆಗೊಳಗಾಗಿದ್ದಾರೆ. ಮಾಧ್ಯಮಗಳೆದುರು ಗಾಯಾಳು ನಿರ್ವಾಹಕ ಕಣ್ಣೀರು ಹಾಕಿ ಘಟನೆಯನ್ನು ವಿವರಿಸಿದರು. ಅದೇ ರೀತಿ, ಬಸ್ …

Read More »

9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ; ಬಿ.ವೈ. ವಿಜಯೇಂದ್ರ

9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ; ಬಿ.ವೈ. ವಿಜಯೇಂದ್ರ 9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ ಬೆಂಗಳೂರಿನ ಬಗ್ಗೆ ಡಿಕೆಶಿ ಹೇಳಿಕೆ ದುರದೃಷ್ಟಕರ ಬಿ.ವೈ. ವಿಜಯೇಂದ್ರ ಹೇಳಿಕೆ ಆರ್ಥಿಕ ಮುಗ್ಗಟ್ಟನ್ನು ಮುಂದೆ ಮಾಡಿ ಸರ್ಕಾರ 9 ವಿವಿ ಗಳನ್ನು ಮುಚ್ಚಲು ಕೈಗೊಂಡಿರುವುದು ಅವಿವೇಕತನದ ನಿರ್ಧಾರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …

Read More »

ಅತಿಥಿ ಶಿಕ್ಷಕರ ಪಾಲಿಗೆ ದೈವೀ ಸ್ವರೂಪಿಯಾದ ಶಾಸಕ ಬಾಲಚಂದ್ರ ಜಾರಕಿಹೊಳಿ

ಅತಿಥಿ ಶಿಕ್ಷಕರ ಪಾಲಿಗೆ ದೈವೀ ಸ್ವರೂಪಿಯಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಅತಿಥಿ ಶಿಕ್ಷಕರಿಗೆ ಸ್ವಂತ ಸುಮಾರು ೨೫.೧೫ ಲಕ್ಷ ರೂಪಾಯಿ ಗೌರವ ಸಂಭಾವನೆ ವಿತರಿಸಿದ ಬಾಲಚಂದ್ರ ಜಾರಕಿಹೊಳಿ ೧.೫೫ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಾಲಾ ಬ್ಯಾಗ್, ಸ್ವೆಟರ್, ಸಮವಸ್ತ್ರಗಳನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ; ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ …

Read More »

140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಅಮೃತ 2.0 ಯೋಜನೆಯಡಿ ಅರಭಾವಿ ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ – ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ …

Read More »

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ನಮ್ಮ ಹಠವಲ್ಲ, ರಿಕ್ವೆಸ್ಟ್ ಮಾತ್ರ: ಸಚಿವ ಸತೀಶ್ ಜಾರಕಿಹೊಳಿ

ಮಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ನಮ್ಮದೇನು‌ ಹಠ ಇಲ್ಲ. ಹೈಕಮಾಂಡ್​ಗೆ ರಿಕ್ವೆಸ್ಟ್ ಮಾತ್ರ ಮಾಡಿದ್ದೇನೆ. ಮುಂದಿನ ನಿರ್ಧಾರ ವರಿಷ್ಠರಿಗೆ ಬಿಟ್ಟದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಹೋಗಿ ಹೈಕಮಾಂಡ್‌ಗೆ ಪ್ರಾರ್ಥನೆ ಮಾಡುವುದು‌ ಮಾತ್ರ. ಹೈಕಮಾಂಡ್ ಬಳಿ ಹೇಳಲು ನಮ್ಮ ಪಕ್ಷದಲ್ಲಿ ಎಲ್ಲರೂ ಸ್ವತಂತ್ರರಿದ್ದಾರೆ. ಅಂತಿಮವಾಗಿ ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ …

Read More »