Breaking News
Home / ರಾಷ್ಟ್ರೀಯ (page 530)

ರಾಷ್ಟ್ರೀಯ

ಒತ್ತುವರಿದಾರರಿಗೇ ಭೂಮಿ ಹಂಚಿಕೆಗೆ ಸರ್ಕಾರದ ನಿರ್ಧಾರ; ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ಪರಿಹಾರ

ಬೆಂಗಳೂರು: ಅರಣ್ಯ ಇಲಾಖೆ ವಶದಲ್ಲಿರುವ 6 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ. ಈ ಭೂಮಿಯಲ್ಲಿ ಅಗತ್ಯವಿರುವಷ್ಟು ಸರ್ಕಾರದ ಬಳಿ ಉಳಿಸಿಕೊಂಡು ಉಳಿದ ಭೂಮಿಯನ್ನು ಒತ್ತುವರಿದಾರರಿಗೆ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕಂದಾಯ ಇಲಾಖೆಗೆ ಸುಮಾರು 6 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಪ್ರದೇಶ ಹಸ್ತಾಂತರವಾಗುತ್ತದೆ. ಇದನ್ನು ಸಾರ್ವಜನಿಕ ಉದ್ದೇಶದ ಬಳಕೆಗೆ ಮೀಸಲಿಡಲು ಆದ್ಯತೆ …

Read More »

ಆಸ್ಪತ್ರೆ ಸಿಬ್ಬಂದಿಗಳ ನಿರ್ಲ್ಯಕ್ಷ: ನವಜಾತ ಶಿಶುವಿನ ಮೊಣಕಾಲು, ಕೈಕಾಲುಗಳನ್ನು ಕಚ್ಚಿ ಗಾಯಗೊಳಿಸಿದ ಇಲಿಗಳು.

ಜಾರ್ಖಂಡ್‌: ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಇಲಿಗಳು ನವಜಾತ ಶಿಶುವಿನ ಮೊಣಕಾಲು ಮತ್ತು ಕೈಕಾಲುಗಳನ್ನು ಕಚ್ಚಿರುವ ಘಟನೆ ಗಿರಿದಿಹ್‌ನಲ್ಲಿರುವ ಜಾರ್ಖಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ನಿರ್ಲಕ್ಷ್ಯದ ಆಘಾತಕಾರಿ ಪ್ರಕರಣದಲ್ಲಿ ಇಲಿಗಳು ನವಜಾತ ಶಿಶುವಿನ ಮೊಣಕಾಲು ಮತ್ತು ಕೈಕಾಲುಗಳನ್ನು ಕಚ್ಚಿದ ಘಟನೆ ಗಿರಿದಿಹ್‌ನಲ್ಲಿರುವ ಜಾರ್ಖಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಹೊರಗುತ್ತಿಗೆ ಕಾರ್ಮಿಕರ ಸೇವೆಯನ್ನು ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.   ಈ ಘಟನೆಯು ಮೇ 2 ರಂದು ಗಿರಿದಿಹ್ ಸದರ್ ಆಸ್ಪತ್ರೆಯಲ್ಲಿ …

Read More »

ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ

ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಅವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಲವೆಡೆಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಆರೋಗ್ಯ ಶಿಬಿರವನ್ನು ಮಂಗಳವಾರ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು.  ಆರೋಗ್ಯ ಶಿಬಿರ ಮುಗಿಸಿ ಸಾಗರಕ್ಕೆ ವಾಪಸ್ ಆಗುವಾಗ ರಾಜನಂದಿನಿ ಅವರ ಕಾರನ್ನು ಮಂಜು ಎಂಬಾತ ರಸ್ತೆ ಮಧ್ಯೆದಲ್ಲಿ ಅಡ್ಡ …

Read More »

ಮೋದಿ ಮಾಧ್ಯಮಗಳ ಮೈಕ್ ಕಂಡರೆ ಎಕೆ-47 ಗನ್ ಕಂಡಂತೆ ಹೆದರುತ್ತಾರೆ: ಕಾಂಗ್ರೆಸ್

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿಯವರು ಮಾಧ್ಯಮಗಳ ಮೈಕ್ ಕಂಡರೆ ಎಕೆ-47 ಗನ್‌ ಕಂಡಂತೆ ಹೆದರುತ್ತಾರೆ’ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಗಂಗಾ ನದಿಯಲ್ಲಿ ಕೋವಿಡ್ ಮೃತದೇಹಗಳು ತೇಲಿದಾಗ, ಚೀನಾ ನಮ್ಮ ದೇಶದ 20 ಮಂದಿ ಯೋಧರನ್ನು ಹತ್ಯೆ ಮಾಡಿದಾಗ, ಪುಲ್ವಾಮ ದಾಳಿಯಲ್ಲಿ 40 ಯೋಧರು ಮಡಿದಾಗ ಬಾರದ ‘ಓಹ್ ಮೈ ಗಾಡ್’ ಉದ್ಘಾರ ಮಾಧ್ಯಮಗಳ ಮೈಕ್ ಎದುರಾದಾಗ ಬರುತ್ತದೆ ಎಂದರೆ ಅದೆಷ್ಟು ಗಾಬರಿಯಾಗಿರಬಹುದು’ ಎಂದು …

Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ,ಓರ್ವ ಸಾವು, ಇನ್ನೊಬ್ಬನಿಗೆ ಗಾಯ

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಲದಲ್ಲಿಯೇ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಹುಕ್ಕೇರಿ ತಾಲೂಕಿನ ಸುತಗಟ್ಟಿ ಕ್ರಾಸ್ ಬಳಿ ನಡೆದಿದೆ. ಒರಿಸ್ಸಾ ಮೂಲದ ವ್ಯಕ್ತಿಗಳಿಬ್ಬರು ಬೈಕ್ ಮೇಲೆ ಬೆಳಗಾವಿ ಕಡೆಯಿಂದ ಮಹಾರಾಷ್ಟ್ರ ಕಡೆಗೆ ಹೋಗುತ್ತಿದ್ದ ವೇಳೆ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಓರಿಸ್ಸಾ ರಾಜ್ಯದ ಬದ್ರಕ ಜಿಲ್ಲೆಯ ದೊಳಾಪಡ ಗ್ರಾಮದ ಬೇನುದರ ನಾಯಕ …

Read More »

ಗೋವಾದಲ್ಲಿ ಯಶ್​: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ರಾಕಿಂಗ್​ ಸ್ಟಾರ್​?

ಬೆಂಗಳೂರು: ಕೆಜಿಎಫ್​-2 ಚಿತ್ರದ ಭರ್ಜರಿ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್​ ಯಶ್​ ಮತ್ತೆ ಸುದ್ದಿಯಲ್ಲಿದ್ದಾರೆ. ಹಲವಾರು ಹಿಟ್​ ಚಿತ್ರಗಳನ್ನು ನೀಡಿರುವ ಈ ನಟ, ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಯಶ್​ ದಂಪತಿ ಗೋವಾಕ್ಕೆ ಭೇಟಿ ಕೊಟ್ಟ ಬಳಿಕ ಆಗಿರುವ ಬೆಳವಣಿಗೆ ಹಾಗೂ ಈಚೆಗೆ ಜ್ಯೋತಿಷಿ ನುಡಿದಿರುವ ಭವಿಷ್ಯ!   ಯಶ್​ ಮತ್ತು ರಾಧಿಕಾ ಗೋವಾಕ್ಕೆ ಭೇಟಿ ಕೊಟ್ಟಾಗ ಅಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ …

Read More »

4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಮಾತನಾಡಿದ ಬೊಮ್ಮಾಯಿ,

ಬೆಂಗಳೂರು: ದೆಹಲಿಗೆ ತೆರಳಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ಅಲ್ಲಿ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಮಾತನಾಡಿದ ಬೊಮ್ಮಾಯಿ, ಇದು ಕೇವಲ ಮಾಧ್ಯಮಗಳಿಂದ ಬಂದ ವಿಚಾರ ಅಷ್ಟೇ. ಪಕ್ಷದಲ್ಲಿ ಈ ಬಗ್ಗೆ ಯಾವುದೇ‌ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Read More »

ಹಿರಿಯ ರಂಗ ಕಲಾವಿದೆ ಲಕ್ಷ್ಮೀ ಬಾಯಿ ಏಣಗಿ ನಿಧನ

ಧಾರವಾಡ: ಪ್ರಸಿದ್ದ ರಂಗ ಕಲಾವಿದೆ ಹಾಗೂ ದಿ. ಏಣಗಿ ಬಾಳಪ್ಪ ಅವರ ಧರ್ಮ ಪತ್ನಿ ಶ್ರೀಮತಿ ಲಕ್ಷ್ಮಿಬಾಯಿ ಬಾಳಪ ಏಣಗಿ (96) ಮಂಗಳವಾರ ಇಲ್ಲಿನ ರಜತಗಿರಿ ನಿವಾಸದಲ್ಲಿ ನಿಧನರಾದರು. ಅವರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 2:೦೦ ಗಂಟೆಗೆ ಹೋಸಯಲಾಪೂರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.   ಚಿತ್ರನಟ ದಿ. ನಟರಾಜ ಏಣಗಿ ಹಾಗೂ ಓರ್ವಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. 1940-50 ರ …

Read More »

ವಿಶ್ವದಾದ್ಯಂತ ಮರಳಿನ ಅಭಾವ ಆತಂಕಕ್ಕೆ ಕಾರಣ

ಅತಿಯಾದ ಮಾನವನ ಚಟುವಟಿಕೆ ಹಾಗೂ ಸುಸ್ಥಿರವಲ್ಲದ ಅಸಮತೋಲಿತ ಅಭಿವೃದ್ಧಿಯ ಪರಿಣಾಮ ನೈಸರ್ಗಿಕ ಸಂಪನ್ಮೂಲಗಳಿಗೆ ನಿರಂತರವಾಗಿ ಹಾನಿಯಾಗುತ್ತಿದೆ. ಗಾಳಿಯ ಗುಣಮಟ್ಟ ಕುಸಿದಿದೆ, ಹಲವೆಡೆ ನೀರಿಗೆ ಬರ ಎದುರಾಗಿದೆ. ಮಣ್ಣು ಲವತ್ತತೆ ಕಳೆದುಕೊಳ್ಳುತ್ತಿದೆ. ಈಗ ವಿಶ್ವದಾದ್ಯಂತ ಮರಳಿನ ಅಭಾವ ಆತಂಕಕ್ಕೆ ಕಾರಣವಾಗಿದೆ. ಜಾಗತಿಕವಾಗಿ ಅತಿ ಹೆಚ್ಚು ಗಣಿಗಾರಿಕೆ ಆಗುತ್ತಿರುವ ನೈಸರ್ಗಿಕ ಸಂಪನ್ಮೂಲಗಳಲ್ಲಿ ಮರಳು ಪ್ರಮುಖವಾದದ್ದು. ಅನಿಯಂತ್ರಿತ ಮರಳು ಎತ್ತುವಳಿ ಮತ್ತು ಅದರಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಬಗ್ಗೆ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ …

Read More »

ಅಶ್ವತ್ಥ ನಾರಾಯಣ್ ಸಹೋದರನ ಪಾತ್ರ ಎಷ್ಟಿದೆ ಅನ್ನೋದನ್ನ ತನಿಖೆ ಮಾಡ್ತಾರೆ: ಶಾಸಕ ಯತ್ನಾಳ್

ವಿಜಯಪುರ : ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಚಿವ ಸಿ.ಎನ್‌.ಅಶ್ವತ್ಥ ನಾರಾಯಣ್​ ಸಹೋದರನ ಹೆಸರು ಕೇಳಿಬಂದಿರುವುದರ ಕುರಿತು ತನಿಖೆಯಾಗಬೇಕು. ಇದರಲ್ಲಿ ಯಾರೇ ಇದ್ದರೂ ಮುಲಾಜಿಲ್ಲದೆ ತನಿಖೆಯಾಗಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಹೇಳಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರವೇ ಇದನ್ನು ತನಿಖೆ ಮಾಡಿದೆ. ನಮ್ಮ ಸರ್ಕಾರದಿಂದಲೇ ಈ ಪ್ರಕರಣ ಹೊರಗೆ ಬಂದಿದೆ. ಹಿಂದೆ ಕೂಡ ಇಂತಹ ಡೀಲ್ ನಡೆದಿವೆ, ಇದೆ ಮೊದಲೇನಲ್ಲ. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ …

Read More »