ಶಿವಮೊಗ್ಗ: ‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಪಕ್ಷವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಈ ಬಾರಿ ಭಾರತೀಯ ಜನತಾ ಪಾರ್ಟಿ ಪೂರ್ಣ ಬಹುಮತದ ಸರ್ಕಾರವನ್ನು ರಚನೆ ಮಾಡಬೇಕು ಅನ್ನುವ ನಿಟ್ಟಿನಲ್ಲಿ ಕಾರ್ಯಗಳು ಪ್ರಾರಂಭವಾಗಿದೆ. ಕೇಂದ್ರದ ನಮ್ಮ ನಾಯಕರು ರಾಜ್ಯದ ಎಲ್ಲಾ ನಾಯಕರು ಕೂಡ ರಾಜ್ಯಾದ್ಯಂತ ಪ್ರವಾಸ …
Read More »ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿರಬಹುದು : ಡಾ. ಜಿ ಪರಮೇಶ್ವರ್
ತುಮಕೂರು : ಚುನಾವಣಾ ಪ್ರಚಾರದ ವೇಳೆ ತಮ್ಮ ಮೇಲೆ ಕಲ್ಲೆಸೆತ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ನನ್ನ ಮೇಲೆ ಬಿದ್ದ ಕಲ್ಲು ಹೂವಿನಲ್ಲಿ ಬಂತು ಎಂದು ಹೇಳಲಾಗುವುದಿಲ್ಲ. ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿರಬಹುದೆಂದು ಎಂದು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಬಿದ್ದ ಕಲ್ಲು ಹೂವಿನಲ್ಲಿ ಬಂತು ಎಂದು ಹೇಳಲು ಆಗುವುದಿಲ್ಲ. ಏಕೆಂದರೆ ಅದು ತುಂಬಾ ದಪ್ಪ ಇತ್ತು. ಯಾರೋ ದುಷ್ಕರ್ಮಿಗಳು ಕಲ್ಲೆಸೆದಿರಬಹುದು. …
Read More »ಚುನಾವಣಾ ಅಕ್ರಮದ ಅಬ್ಬರ: 300 ಕೋಟಿ ರೂ. ಗಡಿ ದಾಟಿದ ಒಟ್ಟು ಜಪ್ತಿ ಮೊತ್ತ
ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಚುನಾವಣಾ ಅಕ್ರಮಗಳು ಜೋರಾಗೆ ನಡೆಯುತ್ತಿವೆ. ಚುನಾವಣೆಗೆ ಇನ್ನು 12 ದಿನಗಳು ಬಾಕಿ ಇರುವಾಗಲೇ ಬರೋಬ್ಬರಿ 302 ಕೋಟಿ ರೂ. ಅಕ್ರಮ ನಗದು, ಮದ್ಯ, ಉಡುಗೊರೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಬಗ್ಗೆ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. ವಿಧಾನಸಭೆ ಚುನಾವಣೆ ಘೋಷಣೆಯಾದಾಗಿನಿಂದ ಈವರೆಗೆ ಚುನಾವಣಾ ಆಯೋಗ ಸುಮಾರು 302.78 ಕೋಟಿ ರೂ. ಮೌಲ್ಯದ ನಗದು, ಮದ್ಯ ಮತ್ತು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಇದೇ …
Read More »ಮುಧೋಳದಲ್ಲಿ ದಾಖಲೆ ಇಲ್ಲದ 5 ಕೋಟಿ ಹಣ ಜಪ್ತಿ
ಬಾಗಲಕೋಟೆ : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ತಡೆಗೆ ಚುನಾವಣೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದರೂ ಹಲವೆಡೆ ಇದುವರೆಗೂ ನೂರಾರು ಕೋಟಿ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಅಂತೆಯೇ ಜಿಲ್ಲೆಯ ಮುಧೋಳ ಮತಕ್ಷೇತ್ರದ ಲಕ್ಷಾನಟ್ಟಿ ಚೆಕ್ಪೋಸ್ಟ್ ಬಳಿ ಅಧಿಕಾರಿಗಳು ಶನಿವಾರ ವಾಹನದಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 5 ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿಯಿಂದ ಮುಧೋಳಕ್ಕೆ ತೆರಳುತ್ತಿದ್ದ ವಾಹನವನ್ನು ಎಸ್ಎಸ್ಟಿ ತಂಡ ಪರಿಶೀಲನೆ ನಡೆಸಿದಾಗ ವಾಹನದಲ್ಲಿದ್ದ ವ್ಯಕ್ತಿಯು ಹಣವು ಯುನಿಯನ್ …
Read More »ಮನೆಯ ಅಂಗಳದ ಮುಂದೆ ಆಟವಾಡುತ್ತಿದ್ದ ಮಗು ಚರಂಡಿಯಲ್ಲಿ ಮುಳುಗಿ ದಾರುಣ ಸಾವು
ನೆಲಮಂಗಲ(ಬೆ.ಗ್ರಾಮಾಂತರ) : ನಗರದಲ್ಲಿ ಬೆಳಗ್ಗೆ ದುರಂತವೊಂದು ಸಂಭವಿಸಿದೆ. ಮನೆಯ ಮುಂದೆ ಆಟವಾಡುತ್ತಿದ್ದ 11 ತಿಂಗಳ ಮಗು ಮನೆಯ ಮುಂಭಾಗದಲ್ಲಿದ್ದ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ರ್ದುಘಟನೆ ತಾಲೂಕಿನ ಸೋಂಪುರ ಹೋಬಳಿಯ ನಿಡವಂದ ಕಾಲೋನಿಯಲ್ಲಿ ನಡೆದಿದೆ. ಘಟನೆ ವಿವರ: ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಮನೆಯ ಅಂಗಳದಲ್ಲಿ ಮಗು ಆಟವಾಡಿ, ಮನೆಯ ಮುಂದೆ ನಿಂತಿದ್ದ ಕ್ಯಾಂಟರ್ ಕೆಳಗೆ ನುಸುಳಿ ಹೋಗಿದೆ. ಆದರೆ ಅಲ್ಲೇ ಸುಮಾರು 4 ಅಡಿಯ ಚರಂಡಿಯು ತೆರೆದಿತ್ತು, ಇದೇ ಚರಂಡಿಗೆ …
Read More »ಕಾಂಗ್ರೆಸ್ 50 ಜನರ ಮನೆಗಳ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ.ಮುಖಂಡರ ಮನೆಗಳ ಮೇಲೆ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ. ಸುಮಾರು 50 …
Read More »ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ.
ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ಚನ್ನಪಟ್ಟಣ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೈಸೂರಿಗೆ ತೆರಳಿ ಮೆಗಾ ರೋಡ್ ಶೋ ನಡೆಸಲಿದ್ದಾರೆ. ಕೋಲಾರ/ಮೈಸೂರು: ರಾಜ್ಯದಲ್ಲಿ ಚುನಾವಣೆಯ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳ ಪರ ಮತಯಾಚನೆ ಮಾಡಲು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಲಗ್ಗೆಯಿಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ. …
Read More »ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸೋಲುತ್ತೆ ಪರೋಕ್ಷವಾಗಿ ಒಪ್ಪಿಕೊಂಡ್ರಾ ಜಗ್ಗೇಶ್
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಮಯ ಹತ್ತಿರವಾದಂತೆ ರಾಜ್ಯ ಚುನಾವಣಾ ಕಣ ರಂಗೇರಿದೆ. ಸಿದ್ದರಾಮಯ್ಯರನ್ನು ವರುಣಾದಲ್ಲಿ ಸೋಲಿಸಲು ಬಿಜೆಪಿ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸಲು ಮುಂದಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪರವಾಗಿ ನಟ, ಬಿಜೆಪಿ ನಾಯಕ ಜಗ್ಗೇಶ್ ಮತಯಾಚನೆ ಮಾಡಲಿದ್ದಾರೆ.ವರುಣಾದಲ್ಲಿ ಬಿಜೆಪಿ ಪರವಾಗಿ ಮತಯಾಚನೆಗೆ ತೆರಳುವ ಸಂದರ್ಭದಲ್ಲಿ ಮಾತನಾಡಿದ ಜಗ್ಗೇಶ್ ವಿ ಸೋಮಣ್ಣ ಕಾರ್ಯವೈಖರಿಯನ್ನು ಹಾಡಿ ಹೊಗಳಿದರು. ಸೋಮಣ್ಣ ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, …
Read More »ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಂದು ಕಲಘಟಗಿ ಮತ್ತು ಅಳ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಂದು ಕಲಘಟಗಿ ಮತ್ತು ಅಳ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಭರ್ಜರಿ ರೋಡ್ ಶೋ ನಡೆಸಿ ಮತಯಾಚಿಸಿದರು. ಹುಬ್ಬಳ್ಳಿ: ರಾಜ್ಯ ಹಾಗೂ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರಗಳಿಂದ ಮಾತ್ರ ಕರ್ನಾಟಕದ ಅಭಿವೃದ್ಧಿ ಸಾಧ್ಯ. ಹೀಗಾಗಿ ಮತ್ತೊಮ್ಮೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರವನ್ನು ಡಬಲ್ ವೇಗದಿಂದ ಅಧಿಕಾರಕ್ಕೆ ತರಲು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ …
Read More »ಸಿದರಾಮಯ್ಯಗೆ ಸೋಮಣ್ಣ ಸವಾಲು ವರುಣಾದಲ್ಲಿ ಕ್ಷೇತ್ರದಲ್ಲಿ ನೀವು ಮಾಡಿರುವ ಅಭಿವೃದ್ಧಿಯನ್ನು ಇಬ್ಬರೂ ನೋಡೋಣ ಬನ್ನಿ
ಒಂದು ದಿನ ಅಲ್ಲ, ದಿನವೂ ಪ್ರಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಈ ರಾಜ್ಯದ ಮಾಜಿ ಸಿಎಂಗೆ ಮುಜುಗರವಾಗಬಾರದೆಂದು ಸಹಿಸಿಕೊಂಡಿದ್ದೇನೆ – ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ. ಚಾಮರಾಜನಗರ: ವರುಣಾದ ರಸ್ತೆಗಳು, ಕ್ಷೇತ್ರದಲ್ಲಿ ಅವ್ಯವಸ್ಥೆ ಹೇಗಿದೆ ಎಂದು ಸಿದ್ದರಾಮಯ್ಯ ಒಂದು ಬಾರಿ ಕ್ಷೇತ್ರದಲ್ಲಿ ಓಡಾಡಲಿ ಎಂದು ಸಿದ್ದು ಎದುರಾಳಿ, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು. ಚಾಮರಾಜನಗರದಲ್ಲಿ ಪ್ರಚಾರ ನಡೆಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಸಿದ್ದರಾಮಯ್ಯ ಒಂದು ಬಾರಿ ಕ್ಷೇತ್ರದಲ್ಲಿ ಓಡಾಡಲಿ. ಅದೆಷ್ಟು ಚೆನ್ನಾಗಿ …
Read More »
Laxmi News 24×7