Breaking News

ರಾಷ್ಟ್ರೀಯ

ಬಿಜೆಪಿಯಿಂದ ನನಗೆ ಆಹ್ವಾನ ಬಂದಿತ್ತು:ರಮ್ಯಾ

ಬೆಂಗಳೂರು: ವಿಧಾನಸಭಾ ಚುನಾವಣೆ ಅಖಾಡ ದಿನ ದಿನವೂ ರಂಗೇರುತ್ತಿದೆ. ಕಾಂಗ್ರೆಸ್ ಸ್ಟಾರ್ ಪ್ರಚಾರಕಿ, ಮಾಜಿ ಸಂಸದೆ ನಟಿ ರಮ್ಯಾ, ತಮಗೆ ಬಿಜೆಪಿಯಿಂದ ಆಹ್ವಾನ ಬಂದಿತ್ತು ಎಂದು ಹೇಳಿದ್ದಾರೆ. ಇಂಗ್ಲೀಷ್ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ನಟಿ ರಮ್ಯಾ, ತಮಗೆ ಬಿಜೆಪಿಯ ಉನ್ನತ ನಾಯಕರೊಬ್ಬರು ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದರು. ಅಲ್ಲದೇ ಸಚಿವರನ್ನಾಗಿ ಮಾಡುತ್ತೇವೆ ಎಂದೂ ಆಫರ್ ನೀಡಿದ್ದರು ಎಂದಿದ್ದಾರೆ. ನಾನು ಕೆಲವು ಬಾರಿ ಕಾಂಗ್ರೆಸ್ ವಿರುದ್ಧ ಮಾತನಾಡಿದಾಗ ಬಿಜೆಪಿಯಿಂದ ಆಫರ್ ಬಂದಿತ್ತು. ಆದರೆ ನಾನು …

Read More »

ಕೂಡಲಸಂಗಮಕ್ಕೆ ಆಗಮಿಸಿದ ರಾಹುಲ್ ಗಾಂಧಿ; ಕಾಂಗ್ರೆಸ್ ನಾಯಕನ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು

ಬಾಗಲಕೋಟೆ: ಬಾಗಲಕೊಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಕಾಂಗೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಬಸವ ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಆಗಮಿಸಿದ್ದು, ಬಸವಣ್ಣನವರ ಐಕ್ಯ ಸ್ಥಳ, ಸಂಗಮೇಶ್ವರ ದೇವಾಲಯಗಳಿಗೆ ಭೇಟಿ ನೀಡಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ ಹುಬ್ಬಳ್ಳಿಯಿಂದ ಹುನಗುಂದ ಹೆಲಿಪ್ಯಾಡ್ ಗೆ ಬಂದಿಳಿಯುತ್ತಿದ್ದಂತೆ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ನ್ನು ತಪಾಸಣೆ ನಡೆಸಿ ಪರಿಶೀಲನೆ ನಡೆಸಿದರು.

Read More »

ಮಾಧ್ಯಮ ಕಣ್ಗಾವಲು ಘಟಕಕ್ಕೆ ಚುನಾವಣಾ ವೀಕ್ಷಕರ ಭೇಟಿ ಜಾಹೀರಾತು, ಪೇಡ್ ನ್ಯೂಸ್ ಮೇಲೆ ನಿಗಾ ವಹಿಸಲು ಸೂಚನೆ

ಬೆಳಗಾವಿ : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಗೋಕಾಕ ಹಾಗೂ ಯಮಕನಮರಡಿ ವಿಧಾನಸಭಾ ಮತಕ್ಷೇತ್ರಗಳ ಸಾಮಾನ್ಯ ವೀಕ್ಷಕರಾದ ಹಿರಿಯ ಐ.ಎ.ಎಸ್. ಅಧಿಕಾರಿ ಎಸ್.ಮಾಲಾರವಿಙ್ಞ ಅವರು ಭೇಟಿ ಪರಿಶೀಲಿಸಿದರು. ಎಲೆಕ್ಟ್ರಾನಿಕ್ ಹಾಗೂ ಮುದ್ರಣ‌ ಮಾಧ್ಯಮ ಗಳ ಪ್ರಸಾರವಾಗುವ ಸುದ್ದಿಗಳ ಮೇಲೆ‌ ನಿಗಾ ವಹಿಸಬೇಕು. ಪೇಡ್ ನ್ಯೂಸ್ ಅಥವಾ ಜಾಹೀರಾತು ಕಂಡುಬಂದರೆ ಅದಕ್ಕೆ ಸಂಬಂಧಿಸಿದ ವೆಚ್ಚವನ್ನು ಅಭ್ಯರ್ಥಿಗಳ ಚುನಾವಣಾ ವೆಚ್ಚಕ್ಕೆ ಸೇರಿಸಬೇಕು ಎಂದು ನಿರ್ದೇಶನ ನೀಡಿದರು. ಇದಲ್ಲದೇ ನೀತಿಸಂಹಿತೆ ಉಲ್ಲಂಘನೆಗೆ …

Read More »

ಬೊಮ್ಮಾಯಿಗೂ ತಟ್ಟಿದ ನೀತಿ ಸಂಹಿತೆ ಬಿಸಿ : ದೊಡ್ಡಬಳ್ಳಾಪುರದಲ್ಲಿ ಸಿಎಂ ಕಾರು ತಡೆದು ತಪಾಸಣೆ

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ಇದೀಗ ಸಿಎಂ ಬೊಮ್ಮಾಯಿಗೂ ಚುನಾವಣಾ ನೀತಿ ಸಂಹಿತೆ ಬಿಸಿ ತಟ್ಟಿದ್ದು, ದೊಡ್ಡಬಳ್ಳಾಪುರದ ಚೆಕ್ ಪೋಸ್ಟ್ ನಲ್ಲಿ ಸಿಎಂ ಕಾರು ತಪಾಸಣೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸಿಎಂ ಕಾರು ತಡೆದು ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.ಸಿಎಂ ಬೊಮ್ಮಾಯಿ ಬಾಶೆಟ್ಟರಹಳ್ಳಿಗೆ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಪ್ರಚಾರ ನಡೆಸಲಿದ್ದಾರೆ. ರಾಹುಲ್ ಗಾಂಧಿಗೆ …

Read More »

ನಾನು ಸಿಎಂ ಆದ್ರೆ ಮುಸ್ಲಿಮರಿಗೆ ಮೀಸಲಾತಿ, ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಕಡಿವಾಣ : ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ನಾನು ಸಿಎಂ ಆದರೆ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡುತ್ತೇನೆ, ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ಮುಸ್ಲಿರ ಮೀಸಲಾತಿಯನ್ನು ರದ್ದುಗೊಳಿಸಿ ಅದನ್ನು ಒಕ್ಕಲಿಗರು ಹಾಗೂ ಲಿಂಗಾಯತರಿಗೆ ನೀಡಿದೆ. ರಾಜ್ಯದಲ್ಲಿ ಮತ್ತೆ ನಾನು ಸಿಎಂ ಆದರೆ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡುತ್ತೇನೆ, ರಾಜ್ಯದಲ್ಲಿ ಅಮುಲ್ …

Read More »

ಐಪಿಎಲ್​ನ ದೆಹಲಿ ಕ್ಯಾಪಿಟಲ್ ತಂಡದ ಕಳುವಾಗಿದ್ದ ಕ್ರಿಕೆಟ್ ಕಿಟ್ ಅಲ್ಲದೇ ಆರೋಪಿಗಳನ್ನು ಬೆಂಗಳೂರು ಪೊಲೀಸರು ಸೆರೆ ಹಿಡಿದಿದ್ದಾರೆ.

ಬೆಂಗಳೂರು: ಇಂಡಿಯನ್​ ಪ್ರೀಮಿಯರ್​ ಲೀಗ್ (ಐಪಿಎಲ್‌)​ ಯಶಸ್ವಿಯಾಗಿ ನಡೆಯುತ್ತಿದೆ. ಇದೇ ಐಪಿಎಲ್​ ಪಂದ್ಯದ ವೇಳೆ ಕೆಲ ಕಿಡಿಗೇಡಿಗಳು ಕ್ರಿಕೆಟ್​ ಕಿಟ್​ ಅನ್ನು ಕದ್ದಿದ್ದರು. ಇದೀಗ ಬೆಂಗಳೂರು ಪೊಲೀಸರು ಕ್ರಿಕೆಟ್​ ಕಿಟ್​ ಸಮೇತ ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಹೌದು, ಕಳೆದ 10 ದಿನಗಳ ಹಿಂದೆ ದೆಹಲಿ ಹಾಗೂ ಆರ್ ಸಿಬಿ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳುವಾಗಿತ್ತು. ಈ ಬಗ್ಗೆ ದೆಹಲಿ ಪೊಲೀಸರಿಗೆ ದೆಹಲಿ ತಂಡದ ಮ್ಯಾನೇಜ್ಮೆಂಟ್ …

Read More »

ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿರುವುದರಿಂದ ಪಕ್ಷಕ್ಕೆ ಯಾವುದೇ ಧಕ್ಕೆ ಇಲ್ಲ:ಶಂಕರಪಾಟೀಲ ಮುನೇನಕೊಪ್ಪ

ಕರ್ನಾಟಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷ ಬರಲಿದೆ. ರಾಜ್ಯದ ಜನರು ಮತ್ತೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿ ಗೆಲ್ಲಿಸಲಿದ್ದಾರೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದ್ದಾರೆ. ಶಂಕರ ಪಾಟೀಲ ಮುನೇನಕೊಪ್ಪಹುಬ್ಬಳ್ಳಿ: ಬಿಜೆಪಿಯಿಂದ ಈ ಬಾರಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವಂತೆ ಕೇಂದ್ರ ಹಾಗೂ ರಾಜ್ಯದ ವರಿಷ್ಠರ ಮೇಲೆ ಒತ್ತಡ ಹೇರುತ್ತೇವೆ. ಹೀಗಾಗಿ ಮತದಾರರು ಲಿಂಗಾಯತ ನಾಯಕರನ್ನು ಹಚ್ಚೆಚ್ಚು ಆಯ್ಕೆ ಮಾಡಬೇಕು ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಠಿ ಉದ್ದೇಶಿಸಿ …

Read More »

ಬೇರೆ ಯುವಕನ ಜೊತೆ ರೀಲ್ಸ್ ಮಾಡಿದ್ದಕ್ಕೆ ಪ್ರಿಯತಮನೇ ತನ್ನ ಪ್ರೇಯಸಿಯನ್ನು ಕೊಂದು ಸುಟ್ಟುಹಾಕಿದ

ಯಾದಗಿರಿ : ತಾಲೂಕಿನ ಅರಕೇರಾದ ಪಂಚಶೀಲ ನಗರದ ಜಮೀನೊಂದರಲ್ಲಿ ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕೊಲೆಗೈದು, ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ (ಏ.3 ರಂದು) ನಡೆದಿತ್ತು. ಈ ಘಟನೆ ಯಾದಗಿರಿ ಜಿಲ್ಲೆಯನ್ನೇ ಬೆಚ್ಚಿಬೀಳಿಸಿತ್ತು. ಮೃತ ಯುವತಿ ಅಂತಿಮಾ ವರ್ಮಾ (25) ಎಂದು ಗುರುತಿಸಲಾಗಿದ್ದು, ಬೇರೆ ಯುವಕನೊಂದಿಗೆ ರೀಲ್ಸ್ ಮಾಡಿದ್ದಾಳೆ ಎನ್ನುವ ಕಾರಣಕ್ಕೆ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ಮಾರುತಿಯನ್ನು ಬಂಧಿಸಿ ನ್ಯಾಯಂಗ …

Read More »

”ಸಿದ್ದರಾಮಯ್ಯ ಹೆದರಿಕೊಳ್ಳಲು ನಾನು ಭೂತನೂ ಅಲ್ಲಾ, ಪಿಶಾಚಿಯೂ ಅಲ್ಲ”: ವಿ. ಸೋಮಣ್ಣ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ. ಸೋಮಣ್ಣ ಲೇವಡಿ ಮಾಡಿದರು. ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ವಿರುದ್ಧ ಕಿಡಿಕಾರಿದರು. ಸಚಿವ ವಿ.ಸೋಮಣ್ಣ ಮಾತನಾಡಿದರುಚಾಮರಾಜನಗರ: ”ಸಿದ್ದರಾಮಯ್ಯ ಹೆದರಿಕೊಳ್ಳಲು ನಾನು ಭೂತನೂ ಅಲ್ಲಾ, ಪಿಶಾಚಿಯೂ ಅಲ್ಲ” ಎಂದು ಸಚಿವ ವಿ. ಸೋಮಣ್ಣ ಹೇಳಿದರು.   ವರುಣಾದಲ್ಲಿ ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಹೆಚ್ಚು ಪ್ರಚಾರ ಮಾಡುತ್ತಿರುವ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ನಾನು ಭೂತನೂ ಅಲ್ಲ, …

Read More »

ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲ

ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ಧಾರೆ. ರಾಮನಗರ/ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಶ್ರಾಂತಿ ಇಲ್ಲದೆ ನಿರಂತರ ಪ್ರವಾಸದಿಂದ ಮಾಜಿ ಸಿಎಂ ಜ್ವರದಿಂದ ಬಳಲುತ್ತಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು …

Read More »